kannada news
ರಾಜ್ಯದಲ್ಲಿ H1N1: 4,130ಕ್ಕೂ ಹೆಚ್ಚು ಪ್ರಕರಣ ಪತ್ತೆ
ರಾಜ್ಯದಲ್ಲಿ H1N1 ಸೋಂಕು ಆತಂಕಾರಿ ಪ್ರಮಾಣದಲ್ಲಿ ಹೆಚ್ಚುತ್ತಿದ್ದು, 4,130ಕ್ಕೂ ಹೆಚ್ಚು ಪ್ರಕರಣ ದೃಢಪಟ್ಟಿದ್ದು ಆರೋಗ್ಯ ಇಲಾಖೆ ಅಗತ್ಯ ಎಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ. ಬೆಂಗಳೂರಿನಲ್ಲಿ ಮೂರು ಸಾವಿರಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿವೆ. ಕಳೆದ ವರ್ಷ ರಾಜ್ಯದಲ್ಲಿ 4,583 ಪ್ರಕರಣ ದಾಖಲಾಗಿದ್ದವು. 2026ರಲ್ಲಿ ಈಗಾಗಲೇ 4,130ಕ್ಕೂ ಹೆಚ್ಚು ಪ್ರಕರಣಗಳು ವರದಿಯಾಗಿದ್ದು, ಸೋಂಕು ಪ್ರಮಾಣ ಹೆಚ್ಚುವ ಸಾಧ್ಯತೆ ಇದೆ. ಜಿಲ್ಲಾವಾರು ಮಾಹಿತಿಯ ಪ್ರಕಾರ ಬೆಂಗಳೂರು ಜಿಬಿಎ ವ್ಯಾಪ್ತಿಯಲ್ಲಿ 2,033 ಪ್ರಕರಣಗಳು, ಬೆಂಗಳೂರು ನಗರದಲ್ಲಿ 982
ಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಯತ್ನ
ಸಚಿವ ಬಿ. ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ಯತ್ನಿಸಿದೆ, ಮುತ್ತಿಗೆ ಹಾಕಲು ಮುಂದಾದ ಬಿಜೆಪಿ ನಾಯಕರು ಮತ್ತು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು. ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಬಹುಕೋಟಿ ಹಗರಣಕ್ಕೆ ಸಂಬಂಧಿಸಿದಂತೆ ಸರ್ಕಾರದ
ಕ್ಷುಲ್ಲಕ ಜಗಳ: ಬ್ರಹ್ಮಾವರದಲ್ಲಿ ತಂದೆ,ತಾಯಿಯ ಹತ್ಯೆಗೈದ ಮಗ
ಕ್ಷುಲ್ಲಕ ಕಾರಣಕ್ಕೆ ಜಗಳವಾಡಿದ ಮಗನೊಬ್ಬ ತಂದೆ–ತಾಯಿಯನ್ನು ಸುತ್ತಿಗೆಯಿಂದ ಹೊಡೆದು ಹತ್ಯೆ ಮಾಡಿದ ಘಟನೆ ಉಡುಪಿಯ ಬ್ರಹ್ಮಾವರದ ಗಾಂಧಿನಗರದಲ್ಲಿ ನಡೆದಿದೆ. ಗಾಂಧಿನಗರ ನಿವಾಸಿಗಳಾದ ಮೆಹಬೂಬ್ ಅಲಿ ಹಾಗೂ ಅವರ ಪತ್ನಿ ಶಂಶಾದ್ ಬೇಗಂ ಹತ್ಯೆಗೀಡಾದವರು. ಮಗ ಶಾಹಿದ್ ಅಲಿ (31) ಕೊಲೆ ಆರೋಪಿಯಾಗಿದ್ದು,
ತಮಿಳುನಾಡಿಗೆ ಕಾವೇರಿ: ಸುಪ್ರೀಂನಿಂದ ಅರ್ಜಿ ವಿಚಾರಣೆ ಮುಂದೂಡಿಕೆ
ತಮಿಳುನಾಡಿಗೆ ಕಾವೇರಿ ನೀರು ಹರಿಸಲು ನಿರ್ದೇಶನ ನೀಡಲು ಕೋರಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸುಪ್ರೀಂಕೋರ್ಟ್ ಸೋಮವಾರಕ್ಕೆ ಮುಂದೂಡಿದೆ. ನ್ಯಾಯಮೂರ್ತಿ ವಿಕ್ರಮ್ ನಾಥ್ ನೇತೃತ್ವದ ದ್ವಿಸದಸ್ಯ ಪೀಠ ಅರ್ಜಿಯ ವಿಚಾರಣೆ ನಡೆಸಿದ್ದು, ತಮಿಳುನಾಡು ಪರ ವಕೀಲ ಸಿ.ಎಸ್. ವೈದ್ಯನಾಥನ್ ವಾದ ಮಂಡಿಸಿದರು. ಕಾವೇರಿ
ಮಹಾರಾಷ್ಟ್ರದ ಸರ್ಕಾರಿ ಆಸ್ಪತ್ರೆ ವೆಂಟಿಲೇಟರ್ ಸ್ಫೋಟ: ಬೆಂಕಿಗೆ ಮೂರು ಶಿಶುಗಳು ಬಲಿ
ಮಹಾರಾಷ್ಟ್ರದ ಅಮರಾವತಿಯಲ್ಲಿರುವ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾ ರಬೆಳಗಿನ ಜಾವ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದ್ದು, ಮೂರು ನವಜಾತ ಶಿಶುಗಳು ಮೃತಪಟ್ಟಿವೆ. ಚಿಕಿತ್ಸೆ ಪಡೆಯುತ್ತಿದ್ದ ಹಲವು ಶಿಶುಗಳನ್ನು ಸ್ಥಳಾಂತರಿಸಲಾಗಿದೆ. ಬೆಳಗಿನ ಜಾವ ಆಸ್ಪತ್ರೆಯ ಮೂರನೇ ಮಹಡಿಯಲ್ಲಿ ವೆಂಟಿಲೇಟರ್ ಸ್ಫೋಟಗೊಂಡು ಬೆಂಕಿ ಕಾಣಿಸಿಕೊಂಡಿದೆ. 39
ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ: ಏಳು ಆರೋಪಿಗಳು ಅರೆಸ್ಟ್
ಕೊಲ್ಲಾಪುರದ ಚಂದಗಡ ತಾಲೂಕಿನಲ್ಲಿ ಕೋಳಿ ಫಾರ್ಮ್ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದ ಜಾಲವನ್ನು ಬಯಲಿಗೆಳೆದ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ಬೆಳಗಾವಿ ಜಿಲ್ಲೆಯಿಂದ ಇಪ್ಪತ್ತು ಕಿ.ಮೀ ದೂರದ ಚಂದಗಡದ ರಾಜಗೋಳಿ ಗ್ರಾಮದಲ್ಲಿ ಆರೋಪಿಗಳು ಕೋಳಿ ಫಾರಂ ಹೆಸರಿನಲ್ಲಿ ಡ್ರಗ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು.
ಹಣಿಗೇರಿ ವನ್ಯಜೀವಿ ವಲಯದಲ್ಲಿ ಬೇಟೆಗಾರರ ಬಂಧನ
ಶಿವಮೊಗ್ಗ ತಾಲೂಕಿನ ಹಣಿಗೇರಿ ವನ್ಯಜೀವಿ ವಲಯದ ಸಿರಿಗೇರಿ ಗ್ರಾಮದ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೇಟೆಯಾಡಲು ಸಂಚು ರೂಪಿಸುತ್ತಿದ್ದ ನಾಲ್ವರು ಆರೋಪಿಗಳನ್ನು ಅರಣ್ಯಾಧಿಕಾರಿಗಳು ಬಂಧಿಸಿದ್ದಾರೆ. ಚೋರಡಿ ವಡೆಯರಕೊಪ್ಪ ಗ್ರಾಮದ ಲೋಕೇಶ್ ಎಸ್‌ಡಿ, ಸಚಿನ್ ಎಂ, ಅರುಣ್ ಕುಮಾರ್ ಹಾಗೂ ಸುಬ್ಬರಾಯ ಬಂಧಿತ ಆರೋಪಿಗಳು.
ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಹೇಳಿ: ಪ್ರತಿಪಕ್ಷಗಳಿಗೆ ಸಿಎಂ ಸವಾಲು
ದೇಶದಲ್ಲಿ ಎಷ್ಟು ಸಚಿವರ ವಿರುದ್ಧ ಮೊಕದ್ದಮೆಗಳಿವೆ ಎಂಬುದನ್ನು ಪ್ರತಿಪಕ್ಷಗಳು ಹೇಳಲಿ, ಪ್ರತಿಪಕ್ಷಗಳಿಗೆ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಎದುರಿಸಲು ಶಕ್ತಿಯಿಲ್ಲದ ಕಾರಣ, ಅಧಿವೇಶನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸ್ವಾತಂತ್ರ್ಯ ಉದ್ಯಾನದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು, ಸಚಿವ ನಾಗೇಂದ್ರ
ಗೋಣಿಕೊಪ್ಪದಲ್ಲಿ ಕಾಡಾನೆ ದಾಳಿಗೆ ಪ್ರವಾಸಿ ಬಲಿ
ಕಾಡನೆ ದಾಳಿಗೆ ಪ್ರವಾಸಿಗರೊಬ್ಬರು ಮೃತಪಟ್ಟಿರುವ ಘಟನೆ ಪೊನ್ನಂಪೇಟೆ ತಾಲೂಕಿನ ಗೋಣಿಕೊಪ್ಪದ ತೆರಲು ಗ್ರಾಮದಲ್ಲಿ ನಡೆದಿದೆ. ಬೆಂಗಳೂರು ಆರ್ ಆರ್ ನಗರದ ಮುರಳಿಕೃಷ್ಣ (40) ಎಂದು ಆನೆ ದಾಳಿಗೆ ಬಲಿಯಾದವರು ಗುರುತಿಸಲಾಗಿದೆ. ಅವರು ಸ್ಥಳೀಯ ಹೋಂಸ್ಟೇಯೊಂದರಲ್ಲಿ ತಂಗಿದ್ದು, ವಿಹಾರಕ್ಕಾಗಿ ತೆರಳಿದ್ದ ವೇಳೆ ಈ
2028ರಲ್ಲಿ ಮತ್ತೆ ನಾನು ಸಿಎಂ ಆಗುವಂತೆ ಬೆಂಬಲ ನೀಡಿ: ವಾಸವಿ ಸಮುದಾಯಕ್ಕೆ ಡಿಕೆ ಶಿವಕುಮಾರ್ ಮನವಿ
ನಾನು ನಿಮ್ಮೊಂದಿಗಿದ್ದೇನೆ , ನೀವೂ ನನ್ನೊಂದಿಗಿರಬೇಕು. 2028 ರಲ್ಲಿ ಪುನ: ನಾನು ರಾಜ್ಯದ ಮುಖ್ಯಮಂತ್ರಿಯಾಗುವಂತೆ ಬೆಂಬಲ ನೀಡಬೇಕು. ನಿಮ್ಮ ಸಮಸ್ಯೆಗಳಿಂದ ನಿಮಗೆ ಬಿಡುಗಡೆ ನೀಡಲು ನಾನು ಬದ್ಧನಾಗಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ವಾಸವಿ ಸಮುದಾಯವನ್ನು ಉದ್ದೇಶಿಸಿ ಹೇಳಿದರು. ಬೆಂಗಳೂರಿನ ಸ್ವಾತಂತ್ರ್ಯ




