Menu

ಮಂಡ್ಯದಲ್ಲಿ ಕೆಮಿಕಲ್ ಟ್ಯಾಂಕ್ ಸ್ಫೋಟಕ್ಕೆ ಇಬ್ಬರು ಕಾರ್ಮಿಕರು ಬಲಿ

ಮಂಡ್ಯದಲ್ಲಿ ಕಾರ್ಖಾನೆ ಸ್ಥಳಾಂತರ ಮಾಡುವಾಗ ಕೆಮಿಕಲ್ ಟ್ಯಾಂಕ್ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, ಇಬ್ಬರು ಅಸ್ವಸ್ಥಗೊಂಡಿರುವ ಘಟನೆ ನಡೆದಿದೆ. ಕಾರೆಕಟ್ಟೆ ಬಳಿಯ ಕೀರ್ತಿ ಕೆಮಿಕಲ್ ಕಾರ್ಖಾನೆಯಲ್ಲಿ ಈ ದುರಂತ ಸಂಭವಿಸಿದೆ. ಬಸರಾಳು ಸಮೀಪದ ಕಾರೆಕಟ್ಟೆಯಿಂದ ಬೇರೆ ಕಡೆಗೆ ಕಾರ್ಖಾನೆ ಸ್ಥಳಾಂತರ ಮಾಡಲಾಗುತ್ತಿತ್ತು. ಬಿಹಾರ ಮೂಲದ ಕಾರ್ಮಿಕರು ಕಾರ್ಖಾನೆ ಸ್ಥಳಾಂತರ ಮಾಡುವಾಗ ಈ ಅವಘಡ ನಡೆದಿದೆ. ಒಂದು ತಿಂಗಳಿಂದ ಸ್ಥಳಾಂತರ ಕೆಲಸ ನಡೆಯುತ್ತಿತ್ತು. ರಾಸಾಯನಿಕ ಟ್ಯಾಂಕ್ ತೆರವು ಮಾಡುತ್ತಿದ್ದಾಗ ಸ್ಫೋಟಗೊಂಡು ಇಬ್ಬರು

ಗರ್ಭಿಣಿ ಫೋಟೊ ಶೂಟ್ ವೇಳೆ ಮೊದಲ ಮಗು ನೀರಿಗೆ ಬಿದ್ದು ಸಾವು

ನೆಲಮಂಗಲ ಮಾದನಾಯಕನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿ ಗಿಡ್ಡೆನಹಳ್ಳಿಯಲ್ಲಿ ಗರ್ಭಿಣಿ ಫೋಟೊ ಶೂಟ್ ವೇಳೆ ಆಟವಾಡುತ್ತಿದ್ದ ಮೂರು ವರ್ಷವಾಗಿದ್ದ ಮೊದಲ ಮಗು ನೀರಿನ ತೊಟ್ಟಿಗೆ ಬಿದ್ದು ಮೃತಪಟ್ಟಿದೆ. ಎಂಟು ತಿಂಗಳ ಗರ್ಭಿಣಿಯ ಫೋಟೋ ಶೂಟ್ ಮಾಡಿಸಲು ದಂಪತಿ ತೆರಳಿದ್ದರು. ಈ ವೇಳೆ ಆಟವಾಡುತ್ತಿದ್ದ ಮಗು

ಮದುವೆಗೆಂದು ಹೋಗಿ ನಾಪತ್ತೆಯಾಗಿದ್ದ ಮಹಿಳೆ ಪತಿಯ ಸ್ನೇಹಿತನೊಂದಿಗೆ ಪತ್ತೆ

ಮದುವೆಗೆಂದು ಬಂದಿದ್ದ ಮಹಿಳೆ ಕಾಣೆಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ತನಿಖೆ ಕೈಗೊಂಡು ಕುಣಿಗಲ್‌ನಲ್ಲಿ ಪುರುಷನೊಬ್ಬನ ಮನೆಯಲ್ಲಿ ಆಕೆಯನ್ನು ಪತ್ತೆ ಹಚ್ಚಿದ್ದಾರೆ. ಗುರುವಾರ ರಾತ್ರಿ ಕಾಣೆಯಾಗಿದ್ದ ಮಹಿಳೆ ಕುಣಿಗಲ್​ನಲ್ಲಿ ಪತಿಯ ಸ್ನೇಹಿತನ ಮನೆಯಲ್ಲಿ ಪತ್ತೆಯಾಗಿದ್ದು, ಅನೈತಿಕ ಸಂಬಂಧದ ಶಂಕೆ ವ್ಯಕ್ತವಾಗಿದೆ. ಸಿಸಿಟಿವಿ ದೃಶ್ಯಾವಳಿಆಧರಿಸಿ

ನೆಲಮಂಗಲದಲ್ಲಿ ಕಾರು ಬಸ್‌ ಡಿಕ್ಕಿ: ಐವರ ಸಾವು

ನೆಲಮಂಗಲ ಜಿಂದಾಲ್ ಬಳಿ ಕೆಎಸ್ಸಾರ್ಟಿಸಿ ಬಸ್​​ ಮತ್ತು ಕಾರು ಅಪಘಾತ ನಡೆದಿದ್ದು, ಕಾರಿನಲ್ಲಿದ್ದ ಐವರು ಮೃತಪಟ್ಟಿದ್ದಾರೆ. ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಸೇರಿ ಐವರು ದುರಂತದಲ್ಲಿ ಪ್ರಾಣ ಕಳೆದುಕೊಂಡಿದ್ದಾರೆ. ತುಮಕೂರು ಕಡೆಯಿಂದ ಬರುತ್ತಿದ್ದ ಕಾರು

ಕಂದಾಯ ಇಲಾಖೆಯಿಂದ ಈವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ: ಕೃಷ್ಣಬೈರೇಗೌಡರಿಗೆ ಸಿಎಂ ಮೆಚ್ಚುಗೆ

ಕಂದಾಯ ಇಲಾಖೆಯಿಂದ ಎರಡನೇ ಬಾರಿ ಲಕ್ಷ ಫಲಾನುಭವಿಗಳಿಗೆ ಹಕ್ಕು ಪತ್ರ ವಿತರಣೆ ಮಾಡುತ್ತಿದ್ದೇವೆ. ಇಲ್ಲಿಯವರೆಗೆ 2.20 ಲಕ್ಷ ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿ ದಾಖಲೆ ನಿರ್ಮಿಸಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಘೋಷಿಸಿ, ರಾಜ್ಯದ ಜಿಡಿಪಿ ದೇಶದಲ್ಲೇ ನಂಬರ್ ಒನ್ ಆಗಿಸಿದ್ದು ನಮ್ಮ

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು

ಯತ್ನಾಳ್‌ ವಿರುದ್ಧ ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್‌ನಲ್ಲೂ ವಜಾ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್

ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ

ಮದುವೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಮಹಿಳೆ ಕಣ್ಮರೆ, ರೇಪ್‌ ಅಂಡ್‌ ಮರ್ಡರ್‌ ಶಂಕೆ

ಹಾಸನದಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದ ಮಹಿಳೆ ಕಣ್ಮರೆಯಾಗಿರುವ ಪ್ರಕರಣ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿದೆ. ಸ್ಥಳದಲ್ಲಿ ಆಕೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿರುವುದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ಸೃಷ್ಟಿಸಿದೆ. ಈ ಪ್ರಕರಣದಲ್ಲಿ

ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಚಿನ್ನ ಎಗರಿಸುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್‌ ಅರೆಸ್ಟ್‌

ಆನ್ಲೈನ್ ಜೂಜಾಟಕ್ಕೆ ವ್ಯಸನಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಎಗರಿಸಿರುವ ಪ್ರಕರಣ ಬಹಿರಂಗಗೊಂಡಿದೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್