Menu

ಸರ್ಕಾರಿ ಜಮೀನಿನಿಂದ ಮನೆ ತೆರವು: ತಹಸೀಲ್ದಾರ್‌ ಹೆಸರು ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ ಯತ್ನ

ಚಿಕ್ಕಬಳ್ಳಾಪುರದಲ್ಲಿ ನಿರ್ಮಾಣ ಹಂತದಲ್ಲಿದ್ದ ಮನೆ ತೆರವು ಮಾಡಲು ಮುಂದಾಗಿದ್ದಕ್ಕೆ ವ್ಯಕ್ತಿ ತಹಸೀಲ್ದಾರ್‌ ಹೆಸರು ಉಲ್ಲೇಖಿಸಿ ಡೆತ್ ನೋಟ್ ಬರೆದಿಟ್ಟು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ. ಚಿಕ್ಕಬಳ್ಳಾಪುರದ ಮಂಚೇನಹಳ್ಳಿ ತಾಲೂಕಿನ ಗಿಡಗಾನಹಳ್ಳಿ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, .ರಾಧಕೃಷ್ಣ ಜಿ ಎಂಬವರು ಮಾತ್ರೆಗಳನ್ನು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಆತ್ಮಹತ್ಯೆಗೆ ಯತ್ನಕ್ಕೂ ಮುನ್ನ ರಾಧಾಕೃಷ್ಣ ಅವರು ಡೆತ್ ನೋಟ್ ಬರೆದಿಟ್ಟು, ತನ್ನ ಸಾವಿಗೆ ಮಂಚೇನಹಳ್ಳಿ ತಹಶೀಲ್ದಾರ್ ಪೂರ್ಣಿಮಾ ಹಾಗೂ ಜಿಲ್ಲಾಡಳಿತ ಕಾರಣ ಎಂದಿದ್ದಾರೆ.

ಯತ್ನಾಳ್‌ ವಿರುದ್ಧ ಚುನಾವಣಾ ಅಕ್ರಮ ಆರೋಪ: ಸುಪ್ರೀಂ ಕೋರ್ಟ್‌ನಲ್ಲೂ ವಜಾ

ವಿಜಯಪುರ ನಗರ ವಿಧಾನಸಭಾ ಕ್ಷೇತ್ರದಲ್ಲಿ ನಡೆದಿದೆ ಎನ್ನಲಾದ ಚುನಾವಣಾ ಅಕ್ರಮ ಆರೋಪಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಈ ಮೂಲಕ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕಾನೂನು ಹೋರಾಟ ನಡೆಸಿದ್ದ ಕಾಂಗ್ರೆಸ್‌ನ ಪರಾಜಿತ ಅಭ್ಯರ್ಥಿ ಅಬ್ದುಲ್

ಕಾಂಗ್ರೆಸ್ ಸರ್ಕಾರದಲ್ಲಿ ನಿವೃತ್ತ ಅಧಿಕಾರಿಗೂ ಸಿಗ್ತು ಸರ್ವಿಸ್ ಬಡ್ತಿ

ರಾಜ್ಯ ಸರ್ಕಾರ ಇತ್ತೀಚೆಗೆ 20 ಕೆಎಎಸ್ (KAS) ಅಧಿಕಾರಿಗಳಿಗೆ ಬಡ್ತಿ ನೀಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಪಟ್ಟಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳಿಗೆ ಪದೋನ್ನತಿ ನೀಡಲಾಗಿದೆ. ಆದರೆ, ಅಚ್ಚರಿಯ ವಿಷಯವೆಂದರೆ ಈ ಪಟ್ಟಿಯಲ್ಲಿ ಈಗಾಗಲೇ ಸರ್ಕಾರಿ ಸೇವೆಯಿಂದ ಸ್ವಯಂ ನಿವೃತ್ತಿ ಪಡೆದಿರುವ

ಮದುವೆಗೆಂದು ಚಿಕ್ಕಮಗಳೂರಿಗೆ ಬಂದಿದ್ದ ಮಹಿಳೆ ಕಣ್ಮರೆ, ರೇಪ್‌ ಅಂಡ್‌ ಮರ್ಡರ್‌ ಶಂಕೆ

ಹಾಸನದಿಂದ ಚಿಕ್ಕಮಗಳೂರಿಗೆ ಮದುವೆ ಸಮಾರಂಭದಲ್ಲಿ ಪಾಲ್ಗೊಳ್ಳಲೆಂದು ಬಂದಿದ್ದ ಮಹಿಳೆ ಕಣ್ಮರೆಯಾಗಿರುವ ಪ್ರಕರಣ ಬೇಲೂರು ತಾಲೂಕಿನ ಕಲ್ಕೆರೆ ಬಳಿ ನಡೆದಿದೆ. ಸ್ಥಳದಲ್ಲಿ ಆಕೆಯ ಒಳ ಉಡುಪು, ಚಪ್ಪಲಿ ಹಾಗೂ ವ್ಯಾನಿಟಿ ಬ್ಯಾಗ್ ಪತ್ತೆಯಾಗಿರುವುದು ಅತ್ಯಾಚಾರವೆಸಗಿ ಕೊಲೆ ಮಾಡಿರುವ ಅನುಮಾನ ಸೃಷ್ಟಿಸಿದೆ. ಈ ಪ್ರಕರಣದಲ್ಲಿ

ಬ್ಯಾಂಕ್‌ನಲ್ಲಿ ಅಡವಿಟ್ಟಿದ್ದ ಚಿನ್ನ ಎಗರಿಸುತ್ತಿದ್ದ ಅಸಿಸ್ಟೆಂಟ್ ಮ್ಯಾನೇಜರ್‌ ಅರೆಸ್ಟ್‌

ಆನ್ಲೈನ್ ಜೂಜಾಟಕ್ಕೆ ವ್ಯಸನಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ ತಾನು ಕಾರ್ಯನಿರ್ವಹಿಸುತ್ತಿದ್ದ ಬ್ಯಾಂಕ್‌ನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಚಿನ್ನವನ್ನೇ ಎಗರಿಸಿರುವ ಪ್ರಕರಣ ಬಹಿರಂಗಗೊಂಡಿದೆ. ಬೆಂಗಳೂರು ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಘಟನೆ ನಡೆದಿದ್ದು, ಆರೋಪಿಯಾಗಿರುವ ಅಸಿಸ್ಟೆಂಟ್ ಮ್ಯಾನೇಜರ್‌ನನ್ನು ಪೊಲೀಸರು ಬಂಧಿಸಿದ್ದಾರೆ. ಗಿರಿನಗರದ ಇಂಡಿಯನ್ ಬ್ಯಾಂಕ್‌ನಲ್ಲಿ ಅಸಿಸ್ಟೆಂಟ್

ಪ್ರಾದೇಶಿಕ ತಾರತಮ್ಯ ನಿವಾರಣೆಗೆ ಬಜೆಟ್‌ನಲ್ಲಿ 15 ಸಾವಿರ ಕೋಟಿ ನೀಡಲಿ: ಆರ್‌ ಅಶೋಕ

ಮುಂದಿನ ಬಜೆಟ್‌ನಲ್ಲಿ ಪ್ರಾದೇಶಿಕ ಅಸಮತೋಲನ ನಿವಾರಿಸುವ ನಿಟ್ಟಿನಲ್ಲಿ ಪ್ರೊ. ಗೋವಿಂದರಾವ್‌ ಸಮಿತಿ ಶಿಫಾರಸ್ಸುಗಳ ಅನುಷ್ಟಾನಕ್ಕಾಗಿ ಕನಿಷ್ಟ 15 ಸಾವಿರ ಕೋಟಿ ರೂ. ಅನುದಾನ ಹಂಚಿಕೆ ಮಾಡಬೇಕು ಎಂದು ವಿಧಾನಸಭೆ ಪ್ರತಿಪಕ್ಷದ ನಾಯಕ ಆರ್ ಅಶೋಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಒತ್ತಾಯಿಸಿದ್ದಾರೆ. ರಾಜ್ಯದಲ್ಲಿ

ಬಿಕ್ಲು ಶಿವ ಕೊಲೆ ಕೇಸ್‌: ಬಂಧಿತ ಬೈರತಿ ಬಸವರಾಜ್‌ ಕಸ್ಟಡಿ ಬದಲು ಆಸ್ಪತ್ರೆಗೆ ದಾಖಲು

ರೌಡಿಶೀಟರ್ ಬಿಕ್ಲು ಶಿವ ಕೊಲೆ ಆರೋಪಿ, ಬಿಜೆಪಿ ಶಾಸಕ ಬೈರತಿ ಬಸವರಾಜ್‌ ಅವರನ್ನು ಸಿಐಡಿ ಬಂಧಿಸಿದ್ದರೂ ಅವರು ವಿಚಾರಣೆಗಾಗಿ ಕಸ್ಟಡಿಯಲ್ಲಿ ಇರುವ ಬದಲು ಜಯದೇವ ಆಸ್ಪತ್ರೆಯಲ್ಲಿ ಇದ್ದಾರೆ. ಆರೋಗ್ಯ ತಪಾಸಣೆ ವೇಳೆ ಇಸಿಜಿಯಲ್ಲಿ ವ್ಯತ್ಯಾಸ ಕಾಣಿಸಿಕೊಂಡಿದ್ದು, ಜಯದೇವ ಆಸ್ಪತ್ರೆಯಲ್ಲಿ ಆಂಜಿಯೋಗ್ರಾಂ ನಡೆಸಲು

ಬಾಂಗ್ಲಾ ಚುನಾವಣೆ: ತಾರಿಖ್‌ ನೇತೃತ್ವದ ಬಿಎನ್​ಪಿ ಭರ್ಜರಿ ಗೆಲುವು

ಬಾಂಗ್ಲಾದೇಶದ ಸಂಸತ್ ಚುನಾವಣೆಯಲ್ಲಿ ತಾರಿಖ್‌  ರೆಹಮಾನ್ ನಾಯಕತ್ವದ ಬಾಂಗ್ಲಾದೇಶ ರಾಷ್ಟ್ರೀಯತಾವಾದಿ ಪಕ್ಷ (ಬಿಎನ್​ಪಿ) ಭರ್ಜರಿ ಗೆಲುವು ಸಾಧಿಸಿದೆ. ಬಾಂಗ್ಲಾದೇಶದ 299 ಸ್ಥಾನಗಳಲ್ಲಿ ಬಿಎನ್‌ಪಿ ಮತ್ತು ಅದರ ಮಿತ್ರಪಕ್ಷಗಳು 212 ಸ್ಥಾನಗಳನ್ನು ಗೆದ್ದಿವೆ. ಬಿಎನ್‌ಪಿ ಸ್ವಂತವಾಗಿ 209 ಸ್ಥಾನಗಳನ್ನು ಗೆದ್ದಿದೆ, ಬಹುಮತದ ಸಂಖ್ಯೆ

ಪ್ರತಿ ವರ್ಷ ನವೆಂಬರ್ 3, 4, 5 ರಂದು ಹಂಪಿ ಉತ್ಸವ: ಸಿಎಂ

ಪ್ರತಿ ವರ್ಷದ ನವೆಂಬರ್ 3, 4, 5 ರಂದು ಹಂಪಿ ಉತ್ಸವದ ಆಯೋಜಿಸುವುದಾಗಿ  ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.  ವಿಜಯನಗರದಲ್ಲಿ  ಹಂಪಿ ಉತ್ಸವ 2026 ನ್ನು ಉದ್ಘಾಟಿಸಿ ಮಾತನಾಡಿದರು. ರಾಜ್ಯ ಸರ್ಕಾರ ಹಂಪಿ ಉತ್ಸವ 2026 ವನ್ನು ವಿಜೃಂಭಣೆಯಿಂದ ಆಚರಿಸುತ್ತಿದೆ. ಮಾಜಿ ಸಚಿವ

ನಾಳೆಯಿಂದ ಬೆಂಗಳೂರಿನಲ್ಲಿ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನ

“ನಮ್ಮ ಕರ್ನಾಟಕ ಸರ್ಕಾರ ಅಧಿಕಾರಕ್ಕೆ ಬಂದು ಸಾವಿರ ದಿನಗಳನ್ನು ಪೂರೈಸುತ್ತಿರುವ ಸಂದರ್ಭದಲ್ಲೇ ಬೆಂಗಳೂರಿನಲ್ಲಿ ಎರಡು ದಿನಗಳ ಅಂತರರಾಷ್ಟ್ರೀಯ ಅಣೆಕಟ್ಟು ಸುರಕ್ಷತಾ ಸಮ್ಮೇಳನವನ್ನು ಆಯೋಜಿಸಲಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ದೆಹಲಿಯ ಕರ್ನಾಟಕ ಭವನದಲ್ಲಿ ಜಲಸಂಪನ್ಮೂಲ ಸಚಿವರೂ ಆಗಿರುವ ಶಿವಕುಮಾರ್  ಮಾಧ್ಯಮಗೋಷ್ಠಿ