kannada news
ಮೀನು ಹಿಡಿಯಲು ನದಿಗಿಳಿದ ಮೂವರು ಯುವಕರು ನಾಪತ್ತೆ
ಮೀನು ಹಿಡಿಯಲೆಂದು ತುಂಗಭದ್ರಾ ನದಿಗೆ ಇಳಿದಿದ್ದ ಮೂವರು ಯುವಕರು ನಾಪತ್ತೆಯಾಗಿರುವ ಘಟನೆ ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ತಂಬ್ರಳ್ಳಿ ಗ್ರಾಮದ ಬಳಿ ಮಂಗಳವಾರ ನಡೆದಿದೆ. ರಾಜ (22), ಯಮನಪ್ಪ (20) ಹಾಗೂ ಅಜ್ಜಪ್ಪ (26) ನಾಪತ್ತೆಯಾಗಿರುವ ಯುವಕರು ಎಂದು ಗುರುತಿಸಲಾಗಿದೆ. ಇವರು ತುಂಗಭದ್ರಾ ನದಿಯ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿದ್ದು, ಸಂಜೆಯಾದರೂ ಮನೆಗೆ ಬಾರದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಹಾಗೂ ಸ್ಥಳೀಯರು ಸ್ಥಳಕ್ಕೆ ತೆರಳಿ ಶೋಧ
ಅಕ್ರಮ ಸಂಬಂಧಕ್ಕೆ ಅಡ್ಡಿಯೆಂದು ದಾವಣಗೆರೆಯಲ್ಲಿ ಗಂಡನ ಕೊಲೆಗೈದ ಪತ್ನಿ, ಪ್ರಿಯಕರ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ಮಹಿಳೆಯೊಬ್ಬಳು ಪ್ರಿಯಕನೊಂದಿಗೆ ಸೇರಿ ಗಂಡನನ್ನು ಕೊಲೆ ಮಾಡಿ ಮೃತದೇಹವನ್ನು ತುಂಗಭದ್ರಾ ನದಿಗೆ ಎಸೆದಿರುವ ಘಟನೆ ದಾವಣಗೆರೆಯ ಪಾಮೇನಹಳ್ಳಿ ಗ್ರಾಮದಲ್ಲಿ ನಡೆದಿದೆ. ಪಾಮೇನಹಳ್ಳಿ ಗ್ರಾಮದ ರಘು (36) ಕೊಲೆಯಾದ ವ್ಯಕ್ತಿ. ಆತನಪತ್ನಿ ಶೃತಿ ಹಾಗೂ ಆಕೆಯ ಪ್ರಿಯಕರ ಉಬೇದುಲ್ಲಾ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನಿಧನ
ಮಾಜಿ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ (೬೭) ಬೆಂಗಳೂರಿನಲ್ಲಿರುವ ಮಗಳ ಮನೆಯಲ್ಲಿ ಮಂಗಳವಾರ ನಿಧನರಾದರು. ಒಂದು ವರ್ಷದಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಅವರಿಗೆ ಎರಡು ಬಾರಿ ಶಸ್ತ್ರ ಚಿಕಿತ್ಸೆ ಆಗಿತ್ತು. ನಾಗೇಶ್ ಅವರ ಅಂತ್ಯಕ್ರಿಯೆ ತಿಪಟೂರಿನ ಸ್ವಗೃಹದಲ್ಲಿ ನಡೆಯಲಿದೆ. ಪಾರ್ಥಿವ ಶರೀರವನ್ನು ಮಲ್ಲೇಶ್ವರಂನ
ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನಕ್ಕೆ ಶಿವಶಂಕರಪ್ಪ ಮರು ನೇಮಕ: ಹೈಕೋರ್ಟ್ ಆದೇಶ
ಪಶುವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ನಡೆಸಿರುವ ಆರೋಪದಡಿ ಅಮಾನತುಗೊಂಡಿದ್ದ ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಅವರನ್ನು ಆ ಸ್ಥಾನಕ್ಕೆ ಮರುನೇಮಕಗೊಳಿಸಲು ಕರ್ನಾಟಕ ಹೈಕೋರ್ಟ್ ಆದೇಶಿಸಿದೆ. ಅವರನ್ನು ಅಮಾನತುಗೊಳಿಸಿ ರಾಜ್ಯಪಾಲರು ನೀಡಿದ್ದ ಆದೇಶವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಅರ್ಜಿ ವಿಚಾರಣೆ ನಡೆಸಿದ
ವಿದೇಶಿ ಆರೋಪಿಗಳಿಗೆ ಜಾಮೀನು: ಕಟ್ಟುನಿಟ್ಟಾದ ನಿರ್ದೇಶನ ನೀಡಿದ ಸುಪ್ರೀಂ
ಮಾದಕ ವಸ್ತುಗಳ ನಿಯಂತ್ರಣ ಕಾಯ್ದೆಯನ್ವಯ ದಾಖಲಾಗಿರುವ ಪ್ರಕರಣದಲ್ಲಿ ಆರೋಪಿಗಳಾಗಿರುವ ವಿದೇಶಿ ಪ್ರಜೆಗಳಿಗೆ ಜಾಮೀನು ನೀಡುವಾಗ ಇನ್ನಷ್ಟು ಕಟ್ಟುನಿಟ್ಟಾಗಿ ಪರಿಶೀಲಿಸಬೇಕು ಎಂದು ಹೇಳಿರುವ ಸುಪ್ರೀಂ ಕೋರ್ಟ್ ೧೨ ನಿರ್ದೇಶನಗಳನ್ನು ಪ್ರಕಟಿಸಿದೆ. ನ್ಯಾಯಮೂರ್ತಿಗಳಾದ ಸಂಜಯ್ ಕರೋಲ್ ಮತ್ತು ಅಗಸ್ಟಿನ್ ಜಾರ್ಜ್ ಮಸಿಹ್ ಅವರ ಪೀಠ
ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿ ರಾಜ್ಯದ 21 ಕಡೆ ಇಡಿ ದಾಳಿ
ಕೆಪಿಎಸ್ಸಿ ಮಾಜಿ ಅಧ್ಯಕ್ಷ ಶಿವಶಂಕರಪ್ಪ ಸಾಹುಕಾರ್ ಮನೆ ಸೇರಿದಂತೆ ರಾಜ್ಯದ 21 ಕಡೆಗಳಲ್ಲಿ ಜಾರಿ ನಿರ್ದೇಶನಾಲಯ (ಇಡಿ) ಅಧಿಕಾರಿಗಳು ದಾಳಿ ನಡೆಸಿದ್ರುದಾರೆ. ರಾಯಚೂರು ದೇವದುರ್ಗ ತಾಲೂಕಿನ ಶಾವಂತಗೇರಾ ಗ್ರಾಮದಲ್ಲೂ ಇಡಿ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಶಿವಶಂಕರಪ್ಪ ಸಾಹುಕಾರ್ ಅಧಿಕಾರದಲ್ಲಿ ಇರುವಾಗ ನೇಮಕವಾಗಿದ್ದ
ಮಹಿಳೆಯರಿಗೆ 33%rಮೀಸಲು ಕಲ್ಪಿಸಲು ಎಲ್ಲ ಪಕ್ಷಗಳು ಒಗ್ಗಟ್ಟಾಗಲಿ: ಪ್ರಧಾನಿ ಮೋದಿ
ಲೋಕಸಭೆ ಮತ್ತು ರಾಜ್ಯ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ ೩೩ ಮೀಸಲಾತಿ ಕಲ್ಪಿಸುವ ಮಸೂದೆ ಜಾರಿಗೊಳಿಸಲು ಎಲ್ಲ ರಾಜಕೀಯ ಪಕ್ಷಗಳು ಒಮ್ಮತದಿಂದ ಬೆಂಬಲ ನೀಡಬೇಕೆಂದು ಪ್ರಧಾನಿ ನರೇಂದ್ರ ಮೋದಿ ಮನವಿ ಮಾಡಿದ್ದಾರೆ. 80ನೇ ಸ್ವಾತಂತ್ರ‍್ಯೋತ್ಸವದ ಅಂಗವಾಗಿ ಕೆಂಪುಕೋಟೆಯ ಆವರಣದಿಂದ ದೇಶವನ್ನುದ್ದೇಶಿಸಿ ಮಾತನಾಡಿದ ಮೋದಿ,
ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ: ಮುಖ್ಯಮಂತ್ರಿ ಘೋಷಣೆ
ಮಾಣಿಕ್ ಷಾ ಮೈದಾನದಲ್ಲಿ ನಡೆದ 80ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಮಾತನಾಡಿದ ಮುಖ್ಯಮಂತ್ರಿ ಡಿಕೆ ಶಿವಕುಮಾರ್, ಬೆಂಗಳೂರಿನಲ್ಲಿ ಐದು ಹೊಸ ಕಮಿಷನರೇಟ್ ಸ್ಥಾಪನೆ ಮತ್ತು ಬೆಂಗಳೂರಿನಲ್ಲಿ ರೌಡಿ ನಿಗ್ರಹ ಪಡೆ ರಚನೆ ಮಾಡುವುದಾಗಿ ಘೋಷಿಸಿದ್ದಾರೆ. ರಾಜ್ಯದ ವಿವಿಧೆಡೆ ಎಐ ಹಬ್
ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳಿಲ್ಲ: ಆರ್ ಅಶೋಕ ಕಿಡಿ
ಬೇಸಿಗೆ ರಜೆ ಕಳೆದು ಕಾಲೇಜು ಆರಂಭವಾಗಿ ದಸರಾ ರಜೆ ಹತ್ತಿರವಾದರೂ ಪಿಯು ಮಕ್ಕಳಿಗೆ ಪಠ್ಯಪುಸ್ತಕಗಳು ತಲುಪಿಲ್ಲ. ಅವು ಗೋದಾಮಿನಲ್ಲೇ ಗೆದ್ದಲು ಹಿಡಿಯುತ್ತಿವೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಸರ್ಕಾರದ ಕಾರೈವೈಖರಿ ವಿರುದ್ಧ ಕಿಡಿ ಕಾರಿದ್ದಾರೆ. ರಾಜ್ಯದ ಶಿಕ್ಷಣ ಇಲಾಖೆಯ ನಿರ್ಲಕ್ಷ್ಯ
15 ಸಾವಿರ ಹೊಸ ಬಸ್ ಖರೀದಿಗೆ ಚಾಲನೆ: ಬೈರತಿ ಸುರೇಶ್
ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ಮೂಲಕ ಸುಮಾರು 15 ಸಾವಿರ ಹೊಸ ಬಸ್ ಗಳ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಲಾಗಿದೆ. ರಾಜ್ಯದ ಗ್ರಾಮಾಂತರ ಪ್ರದೇಶಗಳೂ ಸೇರಿ ಸಾರಿಗೆ ವ್ಯವಸ್ಥೆ ವಂಚಿತ ಪ್ರದೇಶಗಳಿಗೆ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಉದ್ದೇಶದಿಂದ ಈ ಕ್ರಮಕ್ಕೆ




