kannada news
ಸಾರಿಗೆ ನಿಗಮಗಳಿಗೆ 8 ಸಾವಿರ ಕೋಟಿ ನಷ್ಟ: ಸಚಿವ ಬೈರತಿ ಸುರೇಶ್ ಕಳವಳ
ಕೇಂದ್ರ ಸರ್ಕಾರ ನಾಲ್ಕು ಬಾರಿ ಡೀಸೆಲ್ ಮತ್ತು ಇತರ ತೈಲೋತ್ಪನ್ನಗಳ ಬೆಲೆ ಹೆಚ್ಚಳ ಮಾಡಿದ್ದರಿಂದಾಗಿ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳಿಗೆ ವಾರ್ಷಿಕ 8 ಸಾವಿರ ಕೋಟಿ ರೂಪಾಯಿ ನಷ್ಟವಾಗುತ್ತಿದೆ ಎಂದು ಸಾರಿಗೆ ಸಚಿವ ಬೈರತಿ ಸುರೇಶ್ ಕಳವಳ ವ್ಯಕ್ತಪಡಿಸಿದ್ದಾರೆ. ವಿಧಾನಪರಿಷತ್ತಿನಲ್ಲಿ ಬರ ಪರಿಸ್ಥಿತಿ ಬಗ್ಗೆ ನಡೆದ ಚರ್ಚೆಯ ವೇಳೆ ಹೇಳಿಕೆ ನೀಡಿದ ಅವರು, ಡೀಸೆಲ್ ಬೆಲೆ ಹೆಚ್ಚಳವಾಗಿದ್ದರೂ ಬಸ್ ಪ್ರಯಾಣ ದರವನ್ನು ಹೆಚ್ಚಳ ಮಾಡಿಲ್ಲ. ಇದರಿಂದ ಕೆಎಸ್ಸಾರ್ಟಿಸಿ, ಬಿಎಂಟಿಸಿ,
ಗವಿಸಿದ್ದೇಶ್ವರ ಶ್ರೀಗಳಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಘೋಷಣೆ
ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮೀಜಿಗಳು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಘೋಷಿಸಿದರು. ವಿಧಾನಸಭೆಯಲ್ಲಿ ನಡೆದ ಬರಗಾಲದ ಚರ್ಚೆಗೆ ಉತ್ತರಿಸಿದ ಸಂದರ್ಭದಲ್ಲಿ ಶಿವಕುಮಾರ್ ಈ ವಿಚಾರ ತಿಳಿಸಿದರು. ಸದನದ ಎಲ್ಲಾ ಸದಸ್ಯರನ್ನು ದಸರಾ ಉತ್ಸವಕ್ಕೆ ಆಹ್ವಾನಿಸಿದರು. ಈ ಬಾರಿ ಕೊಪ್ಪಳದ ಪರಮಪೂಜ್ಯ ಶ್ರೀ
ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಸಾವು
ಬಾಗಲಕೋಟೆ ಜಿಲ್ಲೆಯಲ್ಲಿ ಹುನಗುಂದ ತಾಲೂಕಿನ ಐಹೊಳೆ ಗ್ರಾಮದಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದಾರೆ. ಗಾಯಗೊಂಡ ಇಬ್ಬರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬಾಗಲಕೋಟೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಇನ್ನಿಬ್ಬರು ಐಹೊಳೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾಟಾಪೂರ ಗ್ರಾಮದ ಭರಮಪ್ಪ ಮಲ್ಲಪ್ಪ ಕಂಡೇಕರ
15 ದಿನ ನಿತ್ಯವೂ 4 ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಬಿಡಿ: CWMA
ಕಾವೇರಿ ನಿರ್ವಹಣಾ ಪ್ರಾಧಿಕಾರದ ಆದೇಶದಂತೆ ತಮಿಳುನಾಡಿಗೆ ನೀರು ಬಿಡಬೇಕೆಂದು ಕರ್ನಾಟಕಕ್ಕೆ ಸುಪ್ರೀಂಕೋರ್ಟ್ ಗುರುವಾರ ತಾಕೀತು ಮಾಡಿದ್ದು, ದೆಹಲಿಯಲ್ಲಿ ಪ್ರಾಧಿಕಾರದ ಅಧ್ಯಕ್ಷ ಎಸ್‌ಕೆ ಹವಲ್ದಾರ್ ನೇತೃತ್ವದಲ್ಲಿ ನಡೆದ ಸಭೆಯಲ್ಲಿ CWMA ಹದಿನೈದು ದಿನ ನಿತ್ಯವೂ ನಾಲ್ಕು ಸಾವಿರ ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸಬೇಕೆಂಬ
ಶಬರಿಮಲೆ ಅಯ್ಯಪ್ಪ ಸನ್ನಿಧಿಯಲ್ಲಿ 446 ಗ್ರಾಂ ಚಿನ್ನದ ಕಿರೀಟ ನಾಪತ್ತೆ
ಶಬರಿಮಲೆ ಅಯ್ಯಪ್ಪ ಸನ್ನಿಧಾನದ ಸ್ಟ್ರಾಂಗ್ ರೂಂನಲ್ಲಿ ಇರಿಸಿದ್ದ 446 ಗ್ರಾಂ ತೂಕದ ಚಿನ್ನದ ಕಿರೀಟ ನಾಪತ್ತೆಯಾಗಿದೆ. ಚಿನ್ನದ ಕಿರೀಟದ ಬದಲಿಗೆ ನಕಲಿ ಕಿರೀಟವನ್ನು ಆ ಜಾಗದಲ್ಲಿ ಇರಿಸಲಾಗಿತ್ತು ಎಂಬ ಆಘಾತಕಾರಿ ವಿಷಯ ಬಹಿರಂಗಗೊಂಡಿದೆ. ಈ ಕಿರೀಟ ನಾಪತ್ತೆ ವಿಚಾರ ದೇವಾಲಯದ ಆಭರಣಗಳ
ತಮಿಳುನಾಡಿಗೆ ಕಾವೇರಿ ನೀರು: ರಾಜ್ಯದಿಂದ ನ್ಯಾಯಾಲಯಕ್ಕೆ ಮೇಲ್ಮನವಿ ಎಂದ ಸಿಎಂ
ತಮಿಳುನಾಡಿಗೆ ಕಾವೇರಿ ನೀರು ಬಿಡುವ ವಿಚಾರವಾಗಿ ರಾಜ್ಯ ಸರ್ಕಾರ ನ್ಯಾಯಾಲಯದಲ್ಲಿ ಮೇಲ್ಮನವಿ ಸಲ್ಲಿಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಚಿತ್ರದುರ್ಗದ ಸಿರಿಗೆರೆ ಮಠದ ಹೆಲಿಪ್ಯಾಡ್ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ನೀರಿದ್ದರೆ ಬಿಡುತ್ತೇವೆ. ಆದರೆ ನಮಗೂ ಒಳಹರಿವು ನಿಂತುಹೋಗಿದೆ. ಮಳೆ ಕೂಡ ನಿಂತಿದೆ.
ಬಂಗಾರಪೇಟೆಯಲ್ಲಿ ಕಾರು ಡಿವೈಡರ್‌ಗೆ ಡಿಕ್ಕಿ: ಮೂವರ ಸಾವು
ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ವೇನಲ್ಲಿ ಡಿವೈಡರ್‌ಗೆ ಕಾರು ಡಿಕ್ಕಿಯಾಗಿ ಮೂವರು ಮೃತಪಟ್ಟಿರುವ ಘಟನೆ ಬಂಗಾರಪೇಟೆ ತಾಲೂಕಿನ ಮಗರಲ್ ಬಳಿ ನಡೆದಿದೆ. ಗಾಯಗೊಂಡಿರುವ ಇಬ್ಬರ ಸ್ಥಿತಿ ಗಂಭೀರವಾಗಿದೆ. ಗಾಯಾಳುಗಳನ್ನು ಬಂಗಾರಪೇಟೆ ಮತ್ತು ಕೋಲಾರ ಆಸ್ಪತ್ರೆಗೆ ದಾಖಲಿಸಲಾಗಿದೆ. ಮೃತಪಟ್ಟವರ ಗುರುತು ಪತ್ತೆಯಾಗಿಲ್ಲ, ಮೃತರು ಹಾಗೂ ಗಾಯಾಳುಗಳು ಪುಣೆ
ಕರ್ನಾಟಕಕ್ಕೆ ನೆರವು ಪ್ರಧಾನಿ ಕರ್ತವ್ಯ, ಯಡಿಯೂರಪ್ಪ- ಬೊಮ್ಮಾಯಿ ಸರ್ಕಾರಕ್ಕೂ ಆರ್ಥಿಕ ಇಲಾಖೆ ಎಚ್ಚರಿಕೆ ಕೊಟ್ಟಿತ್ತು: ಮುಖ್ಯಮಂತ್ರಿ
ಕರ್ನಾಟಕದಲ್ಲಿ 200ಕ್ಕೂ ಹೆಚ್ಚು ತಾಲೂಕುಗಳು ಬರಕ್ಕೆ ತತ್ತರಿಸಿದ್ದು, ರೈತರ ಬೆಳೆಗಳು ನಾಶವಾಗಿವೆ. ವಿದ್ಯುತ್ ಉತ್ಪಾದನೆ ಕುಸಿದಿದೆ. ನೀರಿನ ಅಭಾವ ಹೆಚ್ಚಾಗಿದೆ. ಹೀಗಾಗಿ ಕರ್ನಾಟಕಕ್ಕೆ ನೆರವು ನೀಡುವುದು ಪ್ರಧಾನಮಂತ್ರಿಗಳ ಕರ್ತವ್ಯ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ
CWMA ಆದೇಶದಂತೆ ತಮಿಳ್ನಾಡಿಗೆ ನೀರು ಬಿಡಿ: ಕರ್ನಾಟಕಕ್ಕೆ ಸುಪ್ರೀಂ ತಾಕೀತು
ತಮಿಳುನಾಡಿಗೆ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ (CW M A) ನೀಡಿರುವ ಆದೇಶ ಪಾಲನೆ ಮುಂದುವರಿಸಿ ಎಂದು ಸುಪ್ರೀಂಕೋರ್ಟ್ ಕರ್ನಾಟಕಕ್ಕೆ ಹೇಳಿದೆ. ತಮಿಳುನಾಡು ಸಲ್ಲಿಸಿರುವ ಆಕ್ಷೇಪಕ್ಕೆ ಒಂದು ವಾರದೊಳಗೆ ಪರಮಾಣಪತ್ರ ಸಲ್ಲಿಸುವಂತೆಯೂ ಹೇಳಿದ್ದು, ವಿಚಾರಣೆಯನ್ನು ಅಕ್ಟೋಬರ್ ೧೨ಕ್ಕೆ ಮುಂದೂಡಿದೆ.
ಸಿಇಸಿ ಜ್ಞಾನೇಶ್ ಕುಮಾರ್ ರಾಜೀನಾಮೆ, ಎಸ್‌ಐಆರ್ ರದ್ದು, ಹೊಸದಾಗಿ ಮತದಾರರ ಪಟ್ಟಿ ಪರಿಷ್ಕರಣೆಗೆ ಡಿಕೆ ಶಿವಕುಮಾರ್ ಆಗ್ರಹ
ಪ್ರಜಾಪ್ರಭುತ್ವ ಮತ್ತು ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ತಕ್ಷಣ ರಾಜೀನಾಮೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಪಡಿಸಿ, ಹೊಸದಾಗಿ




