Wednesday, September 30, 2026
Menu

ಹನೂರಿನಲ್ಲಿ ಮೂವರು ಬೇಟೆಗಾರರ ಎನ್‌ಕೌಂಟರ್‌ಗೈದ ಅರಣ್ಯ ಸಿಬ್ಬಂದಿ, ಸ್ಥಳೀಯರ ಆಕ್ರೋಶ

ಚಾಮರಾಜನಗರದ ಹನೂರು ತಾಲೂಕಿನ ಶಾಗ್ಯ ಅರಣ್ಯ ಪ್ರದೇಶದಲ್ಲಿ ಮುಂಜಾನೆ ಅರಣ್ಯಾಧಿಕಾರಿಗಳ ಎನ್‌ಕೌಂಟರ್‌ನಲ್ಲಿ ಮೂವರು ಬೇಟೆಗಾರರು ಮೃತಪಟ್ಟಿದ್ದಾರೆ. ಈ ಘಟನೆಯು ಸ್ಥಳೀಯರಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ. ಸ್ಥಳೀಯರು ಅರಣ್ಯ ಇಲಾಖೆ ಪೀಠೋಪಕರಣಗಳನ್ನ ಧ್ವಂಸ ಮಾಡಿದ್ದಾರೆ. ಬೇಟೆಗಾರರನ್ನು ಸೆರೆಹಿಡಿದು ನಂತರ ಅವರನ್ನು ಕೊಂದಿದ್ದಾರೆಂಬ ಆರೋಪ ಕೇಳಿ ಬಂದಿದೆ. ಅರಣ್ಯ ಇಲಾಖೆ ವಿರುದ್ಧ ಇಲ್ಲಿನ ನಿವಾಸಿಗಳು ರೊಚ್ಚಿಗೆದ್ದಿದ್ದು, ಉಪವಲಯ ಅರಣ್ಯಾಧಿಕಾರಿಗಳ ಕಚೇರಿ ಮೇಲೆ ದಾಳಿ ನಡೆಸಿದ್ದಾರೆ. ವನ್ಯಜೀವಿಗಳ ಬೇಟೆಗೆ ಕಾಡಿಗೆ ನುಗ್ಗಿದ್ದ ಬೇಟೆಗಾರರು ಹಾಗೂ ಅರಣ್ಯ

ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆ: ಪತ್ನಿಯ ಕೊಲೆಗೈದು ಇಂಜಿನಿಯರ್‌ ಸುಸೈಡ್‌

ನಾಲ್ಕು ವರ್ಷದ ಹಿಂದೆ ಪ್ರೀತಿಸಿ ಮದುವೆಯಾಗಿದ್ದ ಜೋಡಿಯೊಂದು ದಾರುಣ ಅಂತ್ಯ ಕಂಡಿದೆ. ಯುವಕ ಪತ್ನಿಯನ್ನು ಕೊಲೆ ಮಾಡಿದ ಬಳಿ ತಾನು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಸುಮಂತ್​ ಜೈನ್(32)​ ಹಾಗೂ ಪದ್ಮಾವತಿ (29) ಮೃತಪಟ್ಟ ಜೋಡಿ. ಸುಮಂತ್ ಸಿವಿಲ್​ ಇಂಜಿನಿಯರ್​ ಆಗಿ ಕೆಲಸ ಮಾಡುತ್ತಿದ್ದರೆ,

ಇಂಡೋನೇಷ್ಯಾದಲ್ಲಿ ಭೂಕಂಪಕ್ಕೆ ಐವರು ಬಲಿ, ಸುನಾಮಿ ಎಚ್ಚರಿಕೆ

ಇಂಡೋನೇಷ್ಯಾದಲ್ಲಿ ಭೂಕಂಪ ಸಂಭವಿಸಿದ್ದು ಐವರು ಮೃತಪಟ್ಟಿದ್ದಾರೆ. ಭೂಕಂಪದ ಬಳಿಕ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿ, ಜನ ಸುರಕ್ಷಿತ ಸ್ಥಳಗಳಲ್ಲಿ ಆಶ್ರಯ ಪಡೆಯುವಂತೆ ತಿಳಿಸಿದ್ದಾರೆ.  ಇಂಡೋನೇಷ್ಯಾದಲ್ಲಿ 7.7 ತೀವ್ರತೆಯ ಪ್ರಬಲ ಭೂಕಂಪ ಸಂಭವಿಸಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಹಾಗೂ ಅಧಿಕಾರಿಗಳು ಸುನಾಮಿ ಎಚ್ಚರಿಕೆ ನೀಡಿದ್ದಾರೆ. ಬೆಳಿಗ್ಗೆ

2047ಕ್ಕೆ 320 ಲಕ್ಷ ಕೋಟಿ ರೂ. ಆರ್ಥಿಕತೆ, ಎಐ ಅಕ್ಷರ ಅಭಿಯಾನ, ಕೋಡಿಂಗ್ ಗುರುಕುಲ: ಸಿಎಂ ಡಿಕೆ ಶಿವಕುಮಾರ್‌

ರಾಜ್ಯದ ಅಭಿವೃದ್ಧಿಯ ತೇರನ್ನು ಎಳೆಯಲು ಕೇವಲ ಎರಡು ಕೈಗಳು ಸಾಲುವುದಿಲ್ಲ. ಕನ್ನಡ ಕುಲಕೋಟಿಯ ಕೈಗಳು ನನ್ನ ಜೊತೆ ಕೈಜೋಡಿಸಬೇಕು. ಬನ್ನಿ, ಅಭಿವೃದ್ಧಿಯ ತೇರನ್ನು ಒಟ್ಟಾಗಿ ಎಳೆಯೋಣ ಎಂದು ಸಿಎಂ ಡಿಕೆ ಶಿವಕುಮಾರ್ ರಾಜ್ಯದ ಜನತೆಗೆ ಕರೆ ನೀಡಿದರು. ಮಾಣಿಕ್ ಷಾ ಮೈದಾನದಲ್ಲಿ

ಭಾರತದಲ್ಲಿ ಒಂದೇ ಸಿಂಫೋನಿ ಆರ್ಕೆಸ್ಟ್ರಾ, ಅದು ಸಾಯಿ ಸಿಂಫೋನಿ ಆರ್ಕೆಸ್ಟ್ರಾ: ರಿಕಿ ಕೇಜ್

ಭಾರತದಲ್ಲಿಯೇ ತರಬೇತಿ ಪಡೆದ ಏಕೈಕ ಸಿಂಫೋನಿ ಆರ್ಕೆಸ್ಟ್ರಾ ಇದು. ಮುಂದಿನ ದಿನಗಳಲ್ಲಿ ಸದ್ಗುರುಗಳ ನೇತೃತ್ವದ ಸಾಯಿ ಸಿಂಫೋನಿ ಆರ್ಕೆಸ್ಟ್ರಾದೊಂದಿಗೆ ನಾನೂ ಸಹಯೋಗವಹಿಸುತ್ತೇನೆ. ಹೊಸದೇನಾದರೂ ಮಾಡುತ್ತೇನೆ ಎಂದು ಖ್ಯಾತ ಸಂಗೀತ ಕಲಾವಿದ ಹಾಗೂ ಹಲವು ಬಾರಿ ಗ್ರ್ಯಾಮಿ ಪ್ರಶಸ್ತಿ ಪಡೆದಿರುವ ರಿಕಿ ಕೇಜ್

ಸಾರಿಗೆ ನೌಕರರಿಗೆ ಬಾಕಿ ವೇತನದಲ್ಲಿ 170 ಕೋಟಿ ರೂ. ಬಿಡುಗಡೆ: ಸಚಿವ ಬೈರತಿ ಸುರೇಶ್‌

ರಾಜ್ಯ ಸರ್ಕಾರಿ ಸ್ವಾಮ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರಿಗೆ  ಬಾಕಿ ಇರುವ ವೇತನದ ಪೈಕಿ 170 ಕೋಟಿ ರೂಪಾಯಿಗಳನ್ನು ಶುಕ್ರವಾರವೇ ಬಿಡುಗಡೆ ಮಾಡಿರುವುದಾಗಿ  ಸಚಿವ ಬೈರತಿ ಸುರೇಶ್‌ ಹೇಳಿದ್ದಾರೆ. ಬೆಂಗಳೂರಿನ ಕೆ.ಎಸ್.ಆರ್.ಟಿ.ಸಿ ಕೇಂದ್ರ ಕಚೇರಿಯಲ್ಲಿ  15ಕ್ಕೂ ಹೆಚ್ಚು ಕಾರ್ಮಿಕ ಸಂಘಟನೆಗಳ ಪ್ರತಿನಿಧಿಗಳೊಂದಿಗೆ

ರಾಜ್ಯದ ಜನತೆಗೆ ಸ್ವಾತಂತ್ರ್ಯ ದಿನಾಚರಣೆ ಶುಭ ಕೋರಿದ ಸಿಎಂ

ರಾಜ್ಯದ ಮುಖ್ಯಮಂತ್ರಿ, ಜನರ ಸೇವಕನಾಗಿ ರಾಷ್ಟ್ರಧ್ವಜ ಹಾರಿಸುವ ಅವಕಾಶ ಸಿಕ್ಕಿದೆ. ಎಲ್ಲಾ ವರ್ಗದ ಜನರನ್ನು ಒಟ್ಟಿಗೆ ತೆಗೆದುಕೊಂಡು ಹೋಗಿ, ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ನೆಮ್ಮದಿ, ಶಾಂತಿ, ಸೌಹಾರ್ದತೆ ಕಾಪಾಡಲು ಪ್ರಯತ್ನಿಸುವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. 80 ನೇ ಸ್ವಾತಂತ್ರ್ಯ

ಬಿಡದಿ ಟೌನ್ ಶಿಪ್ ಕುಮಾರಸ್ವಾಮಿಯವರ ಉತ್ತಮ ಯೋಜನೆ, ಈಗ ರಾಜಕೀಯ ಮಾತಾಡ್ತಾರೆ: ಸಿಎಂ ಡಿಕೆಶಿ

ಬಿಡದಿ ಟೌನ್ ಶಿಪ್  ಕುಮಾರಸ್ವಾಮಿಯವರ ಉತ್ತಮ  ಯೋಜನೆ, ಈಗ ಕೆಲವು ಒತ್ತಡಗಳಿಂದ ಅವರು ರಾಜಕೀಯ ಮಾತನಾಡುತ್ತಿದ್ದಾರೆ. ಇದಕ್ಕೆಲ್ಲಾ ನಾನು ಬೇಸರಿಸಿಕೊಳ್ಳುವುದಿಲ್ಲ.  ಜಗದೀಶ್ ಶೆಟ್ಟರ್ ಅವರ ಕಾಲದಲ್ಲಿ ಆಗಿದ್ದ 1 ಸಾವಿರ ಎಕರೆ ಕೈಗಾರಿಕಾ ಪ್ರದೇಶ,  ದೇವೇಗೌಡರ ನೈಸ್ ರಸ್ತೆ ಯೋಜನೆ ಅತ್ಯುತ್ತಮ

ಹೆಗ್ಗೋಡಿನಲ್ಲಿ ಕಣಜ ಹುಳು ಕಡಿದು ಬಾಲಕ ಸಾವು

ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಹೆಗ್ಗೋಡು ಸಮೀಪ ಕಣಜ ಹುಳು ಕಡಿದು ಎಂಟು ವರ್ಷದ ಬಾಲಕ ಮೃತಪಟ್ಟಿದ್ದಾನೆ. ಎರಡನೇ ತರಗತಿ ಓದುತ್ತಿದ್ದ ನಿಶ್ಚಿತ್‌ ಮೃತಪಟ್ಟ ಬಾಲಕ. ಅತ್ತಿಸರದಲ್ಲಿ ಈ ದುರಂತ ನಡೆದಿದ್ದು, ಮನೆಯ ಹಿಂದಿನ ಬಾಳೆ ಗಿಡದಲ್ಲಿ ಕಣಜ ಹುಳುವಿನ ಗೂಡು

ಸಚಿವ ಜಮೀರ್ ವಿರುದ್ಧ ಸಿಎಂ ಕ್ರಮ ವಹಿಸಲಿ: ಆರ್‌ ಅಶೋಕ ಆಗ್ರಹ

ಸ್ವಾತಂತ್ರ್ಯ ದಿನಾಚರಣೆಯಲ್ಲಿ ಭಾಗವಹಿಸಲು ಆಗುತ್ತಿಲ್ಲ ಎಂದು ಹೇಳಿದ ಸಚಿವ ಜಮೀರ್‌ ಅಹ್ಮದ್‌ ಖಾನ್‌ ವಿರುದ್ಧ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕ್ರಮ ಕೈಗೊಳ್ಳಬೇಕು ಎಂದು ಪ್ರತಿಪಕ್ಷ ನಾಯಕ  ಆರ್‌ ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶನಿವಾರ ದೇಶಕ್ಕೆ ಪವಿತ್ರವಾದ ದಿನ. ಲಕ್ಷಾಂತರ ಹೋರಾಟಗಾರರು