kannada news
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ: ಡಿಕೆ ಶಿವಕುಮಾರ್
ಉಪಾಹಾರ ಕೂಟ ನನಗೆ ಹಾಗೂ ಸಿಎಂಗೆ ಸಂಬಂಧಿಸಿದ ವಿಚಾರ, ನಾವಿಬ್ಬರು ಸಹೋದರರಂತೆ ಕೆಲಸ ಮಾಡಿಕೊಂಡು ಹೋಗುತ್ತಿದ್ದೇವೆ. ನೀವುಗಳು ಸದಾ ಗುಂಪು, ಗುಂಪು ಎಂದು ಬಿಂಬಿಸು ತ್ತಿದ್ದೀರಿ. ನಮ್ಮಲ್ಲಿ ಯಾವುದೇ ಗುಂಪಿಲ್ಲ. ನಮ್ಮ ಜೊತೆ 140 ಶಾಸಕರಿದ್ದಾರೆ. ನಾವು ಹುಟ್ಟುವಾಗಲೂ ಒಬ್ಬರೇ, ಸಾಯುವಾಗಲೂ ಒಬ್ಬರೇ, ಪಕ್ಷದ ವಿಚಾರ ಬಂದಾಗ ಎಲ್ಲರನ್ನು ಒಟ್ಟಾಗಿ ತೆಗೆದುಕೊಂಡು ಹೋಗುತ್ತೇವೆ. ಈ ಬಗ್ಗೆ ಚಿಂತೆ ಬೇಡ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ನಾಳೆ ಸಿಎಂ ಅವರನ್ನು
ಗ್ರಾಮ ಭಾರತ ಅಭಿವೃದ್ಧಿಯಾಗದೆ ದೇಶದ ಅಭಿವೃದ್ಧಿ ಸಾಧ್ಯವಿಲ್ಲ: ಸಿಎಂ ಸಿದ್ದರಾಮಯ್ಯ
ಗ್ರಾಮದಿಂದಲೇ ಅಧಿಕಾರ ಕೆಳಗಿನಿಂದ ಮೇಲಕ್ಕೆ ಹೋಗಬೇಕು ಎನ್ನುವ ವಿಕೇಂದ್ರೀಕರಣ ಗಾಂಧಿ, ನೆಹರೂ, ಲೋಹಿಯಾ ಅವರ ಕನಸಾಗಿತ್ತು. ನಮ್ಮದು ಹಳ್ಳಿಗಳ ದೇಶ. ಗ್ರಾಮ ಭಾರತ ಅಭಿವೃದ್ಧಿ ಆಗದೆ ದೇಶ ಅಭಿವೃದ್ಧಿ ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್
ಸರ್ಕಾರಿ ಹುದ್ದೆ ಭರ್ತಿಗೆ ಆಗ್ರಹಿಸಿ ಧಾರವಾಡ ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ
ರಾಜ್ಯ ಸರ್ಕಾರದ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ತಕ್ಷಣ ಭರ್ತಿ ಮಾಡುವಂತೆ ಆಗ್ರಹಿಸಿ ಧಾರವಾಡದಲ್ಲಿ ವಿದ್ಯಾರ್ಥಿಗಳು ಮತ್ತು ಉದ್ಯೋಗಾಕಾಂಕ್ಷಿಗಳು ಪ್ರತಿಭಟನೆ ನಡೆಸಿದರು. ಶ್ರೀನಗರ ಸರ್ಕಲ್‌ನಲ್ಲಿ ನಡೆದ ರ‍್ಯಾಲಿಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಜನ ಸಾಮಾನ್ಯರ ವೇದಿಕೆ ಎಂಬ ಸಂಘಟನೆಯ
ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಕುಸಿತ: ಐಟಿ-ಬಿಟಿ ಸಚಿವರ ಕಾರ್ಯವೈಖರಿ ಎಂದ ಆರ್ ಅಶೋಕ
ಸಚಿವ ಪ್ರಿಯಾಂಕ್ ಖರ್ಗೆ ಅವರ ನಿರಾಸಕ್ತಿ, ನಿಷ್ಕ್ರಿಯತೆ ಪರಿಣಾಮವಾಗಿ ಇಂದು ನಮ್ಮ ರಾಜ್ಯದಲ್ಲಿ ಸ್ಟಾರ್ಟ್ ಅಪ್ ಹೂಡಿಕೆ 40% ಭಾರಿ ಕುಸಿತ ಕಂಡಿದೆ. ನವೋದ್ಯಮಗಳ ರಾಜಧಾನಿ ಎಂದು ಖ್ಯಾತಿ ಪಡೆದಿದ್ದ ಕರ್ನಾಟಕ ಮತ್ತು ಬೆಂಗಳೂರು ಇಂದು ಅನ್ಯರಾಜ್ಯಗಳ ಮುಂದೆ ತಲೆತಗ್ಗಿಸುವಂತಾಗಿದೆ. ಇದು ನಮ್ಮ
ಅಣ್ಣ ಚೆನ್ನಾಗಿ ಓದು ಎಂದಿದ್ದೇ ತಪ್ಪಾಯ್ತಾ?: ಗದಗದಲ್ಲಿ ಕರೆಗೆ ಹಾರಿದ ತಂಗಿ
ಗದಗದಲ್ಲಿ ಅಣ್ಣೊಬ್ಬ ತಂಗಿಗೆ ಚೆನ್ನಾಗಿ ಓದು ಎಂದು ಬುದ್ದಿ ಹೇಳಿದ್ದೇ ತಪ್ಪಾಗಿ ಹೋಯ್ತಾ ಎಂಬಂತೆ ತಂಗಿ ಕೆರೆಗೆ ಹಾರಿ ಆತ್ಮಹತ್ಯ ಮಾಡಿಕೊಂಡಿದ್ದಾಳೆ. ಗದಗದ ಭೀಷ್ಮ ಕೆರೆಗೆ ಹಾರಿ ಚಂದ್ರಿಕಾ ನಡುವಿನಮನಿ (21) ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಬಾಗಲಕೋಟೆಯ ಶಿರೂರಿನ ಚಂದ್ರಿಕಾ ನಡುವಿನಮನಿ ಗದಗ
ಜಾತಿ ಪ್ರೀತಿಗೆ ಮಗಳ ಪ್ರಿಯಕರನ ಕೊಲೆಗೈದ ಪೋಷಕರು: ಶವವನ್ನೇ ಮದುವೆಯಾದ ಯುವತಿ
ಮಹಾರಾಷ್ಟ್ರದ ನಾಂದೇಡ್‌ನಲ್ಲಿ ಬೇರೆ ಜಾತಿ ಎಂಬ ಕಾರಣಕ್ಕೆ ಯುವತಿ ಪ್ರೀತಿಸುತ್ತಿದ್ದ ಹುಡುಗನನ್ನು ಆಕೆಯ ಮನೆಯವರು ಹೊಡೆದು ಕೊಂದರೆ ಸಾವಿನಿಂದ ಆಘಾತಗೊಂಡ ಯುವತಿ ಆತನ ಶವವನ್ನೇ ಮದುವೆಯಾಗಿ ಆತನ ಮನೆಯಲ್ಲೇ ಇರುವ ನಿರ್ಧಾರ ಮಾಡಿದ್ದಾಳೆ. 20 ವರ್ಷದ ಸಕ್ಷಮ್ ಟಾಟೆ ಕೊಲೆಯಾದ ಯುವಕ.
ಸಮುದಾಯವು ಶೈಕ್ಷಣಿಕ, ಆರ್ಥಿಕ ಶಕ್ತಿ ಪಡೆದುಕೊಂಡರೆ ರಾಜಕೀಯ ಶಕ್ತಿ ಬರುತ್ತದೆ: ಸಂತೋಷ್ ಲಾಡ್
ಸಮುದಾಯವು ಶೈಕ್ಷಣಿಕವಾಗಿ, ಆರ್ಥಿಕವಾಗಿ ಶಕ್ತಿಯುತವಾದಾಗ ರಾಜಕೀಯ ಶಕ್ತಿ ತನ್ನಿಂತಾನೆ ಬರುತ್ತೆ. ಈ ನಿಟ್ಟಿನಲ್ಲಿ ಸಮಾಜಕ್ಕಾಗಿ ಕೆಲಸ ಮಾಡುತ್ತೇನೆ ಎಂದು ನಾವು ಇಂದು ನಿರ್ಧಾರ ಮಾಡೋಣ, ಪ್ರಮಾಣ ಮಾಡೋಣ. ಆಗ ಮಾತ್ರ ನಮ್ಮ ಸಮಾಜ ಸಾಕಷ್ಟು ಅಭಿವೃದ್ಧಿ ಆಗಲಿದೆ ಎಂದು ಕಾರ್ಮಿಕ ಸಚಿವ
ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್: ಛಲವಾದಿ ನಾರಾಯಣಸ್ವಾಮಿ
ಸಂವಿಧಾನ ರಕ್ಷಕರೆಂದು ಹೇಳಿಕೊಳ್ಳುವ ಹಾಗೂ ಸಂವಿಧಾನವನ್ನು ಕೈಯಲ್ಲಿ ಹಿಡಿದುಕೊಂಡು ಓಡಾಡುವ ಕಾಂಗ್ರೆಸ್ ಪಕ್ಷದ ಪ್ರಧಾನಿ ಇಂದಿರಾ ಗಾಂಧಿಯವರು 1975ರಲ್ಲಿ ಮಾಡಿದ್ದೇನು? ತುರ್ತು ಪರಿಸ್ಥಿತಿ ಹೇರಿ ಎರಡರಿಂದ ಎರಡೂವರೆ ವರ್ಷ ಸಂವಿಧಾನಕ್ಕೆ ಮೂರು ಕಾಸಿನ ಬೆಲೆ ಇಲ್ಲದಂತೆ ಮಾಡಿದ್ದು ಕಾಂಗ್ರೆಸ್ ಪಕ್ಷದವರು ಎಂದು
ಹಿರಿಯ ನಟ ಉಮೇಶ್ ಅಂತಿಮ ದರ್ಶನ ಪಡೆದ ಸಿಎಂ, ಡಿಸಿಎಂ
ಸುಮಾರು 900 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ ಖ್ಯಾತ ಹಾಸ್ಯ ಕಲಾವಿದರಾಗಿ ಗುರುತಿಸಿಕೊಂಡಿದ್ದ ಉಮೇಶ್ ರವರ ನಿಧನ ದು:ಖ ತಂದಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ಸೂಚಿಸಿದರು. ಬೆಂಗಳೂರಿನ ರವೀಂದ್ರ ಕಲಾಕ್ಷೇತ್ರದಲ್ಲಿ ಉಮೇಶ್ ರವರ ಪಾರ್ಥೀವ ಶರೀರವನ್ನು ದರ್ಶನ ಮಾಡಿ ಕುಟುಂಬಕ್ಕೆ ಸಾಂತ್ವನ
ಬೆಂಗಳೂರಿನ ಪಿಜಿಯಲ್ಲಿ ಹಾಸನದ ವಿದ್ಯಾರ್ಥಿನಿ ಆತ್ಮಹತ್ಯೆ, ತಂದೆಗೆ ಎಂಟು ಪುಟಗಳ ಪತ್ರ
ಬೆಂಗಳೂರಿನ ಪ್ರತಿಷ್ಠಿತ ಕಾಲೇಜಿನಲ್ಲಿ ಬಿ ಫಾರ್ಮ್ ಫೈನಲ್ ಇಯರ್ ಓದುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಯಾರೂ ಇಲ್ಲದ ವೇಳೆ ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ತಂದೆಗೆ ಎಂಟು ಪುಟದ ಡೆತ್ನೋಟ್ ಬರೆದಿದ್ದಾಳೆ. ಹೆಸರುಘಟ್ಟ ರಸ್ತೆಯ ಸೋಲದೇವನಹಳ್ಳಿಯ ಆಚಾರ್ಯ ಕಾಲೇಜು ವಿದ್ಯಾರ್ಥಿನಿಯಾಗಿರುವ ಹಾಸನದ ವತ್ಸಲಾ (19) ಆತ್ಮಹತ್ಯೆ




