Wednesday, September 30, 2026
Menu

ರಾಜ್ಯ ಸಂಪುಟದಲ್ಲಿ ಮಹಿಳೆಗಿಲ್ಲ ಅವಕಾಶ: ಬಿಜೆಪಿ ಶಾಸಕರ ಪ್ರತಿಭಟನೆ

ಡಿಕೆ ಶಿವಕುಮಾರ್‌ ನೇತೃತ್ವದ ಸಚಿವ ಸಂಪುಟದಲ್ಲಿ ಮಹಿಳಾ ಶಾಕರಿಗೆ ಸಚಿವ ಸ್ಥಾನ ನೀಡದಿರುವುದನ್ನು ಖಂಡಿಸಿ ವಿಧಾನಸೌಧ ಆವರಣದಲ್ಲಿ ಬಿಜೆಪಿ ಶಾಸಕರು ಪ್ರತಿಭಟನೆ ನಡೆಸಿದ್ದಾರೆ. ಆಡಳಿತಾರೂಢ ಕಾಂಗ್ರೆಸ್‌ ಸರ್ಕಾರ ಮಹಿಳಾ ವಿರೋಧಿ ಎಂದು ಟೀಕಿಸಿ ಫಲಕಗಳನ್ನು ಹಿಡಿದುಕೊಂಡು ಬಿಜೆಪಿ ಶಾಸಕರು ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.  ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಪ್ರತಿಭಟನೆಯ ನೇತೃತ್ವ ವಹಿಸಿದ್ದು, ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್ ಅಶೋಕ, ವಿಧಾನ ಪರಿಷತ್‌ ಪ್ರತಿಪಕ್ಷ ನಾಯಕ ಚಲವಾದಿ

ಪಾಕ್‌ ಜೊತೆ ಸಂಪರ್ಕ: ಬಂಧಿತ ಸಮೀರ್ ಫೋನ್ ನಲ್ಲಿ ಭಾರತದಿಂದ ಕಾಶ್ಮೀರ ಹೊರಗಿಟ್ಟ ವೀಡಿಯೊ

ಪಾಕ್ ಜೊತೆ ನಿರಂತರ ಸಂಪರ್ಕ ಹೊಂದಿದ್ದ ಕಾರಣಕ್ಕೆ ಕಲಬುರಗಿಯಲ್ಲಿ  ಭಯೋತ್ಪಾದನಾ ನಿಗ್ರಹ ದಳದಿಂದ ಬಂಧಿತನಾಗಿರುವ  ಸಮೀರ್  ಮೊಬೈಲ್ ಪರಿಶೀಲನೆ ನಡೆಸಿದಾಗ ಸಿಕ್ಕ ವೀಡಿಯೊದಲ್ಲಿರುವ ಭಾರತದ ನಕ್ಷೆಯಿಂದ ಕಾಶ್ಮೀರವನ್ನು ಹೊರಗಿಟ್ಟಿರುವುದು ಪತ್ತೆಯಾಗಿದೆ. ಸಮೀರ್ ಮೊಬೈಲ್ ನಲ್ಲಿ ಸಿಕ್ಕವೀಡಿಯೊದಲ್ಲಿ  ಭಾರತದ ನಕ್ಷೆ  ಚಿತ್ರೀಕರಣಗೊಂಡಿದೆ.  ಜಮ್ಮು

2028ರ ಚುನಾವಣೆ ಹೇಗೆ ಎದುರಿಸಬೇಕು ಅನ್ನೋದು ಗೊತ್ತಿದೆ: ಸಿಎಂ ಡಿಕೆ ಶಿವಕುಮಾರ್‌

2028ರ ಚುನಾವಣೆ ಹೇಗೆ ಎದುರಿಸಬೇಕು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು. ಜನರ ಸೇವೆ ಮಾಡುವಾಗ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು. ಜನರು ನಮ್ಮೆಲ್ಲರನ್ನು ಆಯ್ಕೆ ಮಾಡಿರುವುದು

ವಿಧಾನಸಭೆ ಸ್ಪೀಕರ್‌ ಆಗಿ ಜಿಎಸ್‌ ಪಾಟೀಲ್‌, ಪರಿಷತ್‌ ಸಭಾಪತಿಯಾಗಿ ಸಲೀಂ ಆಯ್ಕೆ

ಕರ್ನಾಟಕ ವಿಧಾನಸಭೆಯ ಅಧ್ಯಕ್ಷರಾಗಿ ರೋಣ ಶಾಸಕ ಗುರುಪಾದಗೌಡ ಸಂಗನಗೌಡ ಪಾಟೀಲ್ (ಜಿ.ಎಸ್. ಪಾಟೀಲ್) ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಸಲೀಂ ಅಹ್ಮದ್ ವಿಧಾನ ಪರಿಷತ್ ಸಭಾಪತಿಯಾಗಿ ಆಯ್ಕೆಯಾಗಿದ್ದಾರೆ. ವಿಧಾನ ಸಭಾಧ್ಯಕ್ಷರ ಚುನಾವಣೆಯಲ್ಲಿ ಜಿಎಸ್‌ ಪಾಟೀಲ್‌ ಏಕೈಕ ಅಭ್ಯರ್ಥಿಯಾಗಿದ್ದು, ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಮುಖ್ಯಮಂತ್ರಿ ಶಿವಕುಮಾರ್ ಅವರು

ಜನಗಣತಿಗೆ ಕೇಂದ್ರ ಅಧಿಸೂಚನೆ

ಜನಗಣತಿಗೆ ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ್ದು, ಗಣತಿ ಹಂತದಲ್ಲಿ ಸಾರ್ವಜನಿಕರನ್ನು ಕೇಳಲಾಗುವ 40 ಪ್ರಶ್ನೆಗಳ ಪಟ್ಟಿಯನ್ನು ಕೇಂದ್ರ ಸರ್ಕಾರ ಬಿಡುಗಡೆ ಮಾಡಿದೆ. ವ್ಯಕ್ತಿಯ ಜಾತಿ ಹಾಗೂ ಕೋವಿಡ್-19 ಲಸಿಕೆ ಪಡೆದ ಸ್ಥಳದ ವಿವರಗಳೂ ಇದರಲ್ಲಿ ಸೇರಿವೆ. ವ್ಯಕ್ತಿಯು ಪರಿಶಿಷ್ಟ ಜಾತಿ ಅಥವಾ

ನಿರ್ಮಾಣ ಹಂತದ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರ ಸಾವು

ಉತ್ತರಾಖಂಡದ ಚಮೋಲಿ ಜಿಲ್ಲೆಯ ಜಲವಿದ್ಯುತ್‌ ಯೋಜನಾ ಸ್ಥಳದಲ್ಲಿ ನಿರ್ಮಾಣ ಹಂತದಲ್ಲಿರುವ ಸುರಂಗಕ್ಕೆ ನೀರು ನುಗ್ಗಿ ಏಳು ಕಾರ್ಮಿಕರು ಅಸು ನೀಗಿದ್ದಾರೆ, ದುರಂತದಲ್ಲಿ 13 ಕಾರ್ಮಿಕರು ಗಾಯಗೊಂಡಿದ್ದಾರೆ. ಅಲಕನಂದಾ ನದಿ ಮೇಲೆ ನಿರ್ಮಾಣ ಹಂತದಲ್ಲಿರುವ ವಿಷ್ಣುಗಾಡ್-ಪಿಪಲ್ಕೋಟಿ ಜಲವಿದ್ಯುತ್ ಯೋಜನೆಯ ಟೇಲ್ ರೇಸ್ ಟನಲ್‌ನಲ್ಲಿ

ಕಾರಿಗೆ ಲಾರಿ ಡಿಕ್ಕಿ: ಇಬ್ಬರು ಸ್ಥಳದಲ್ಲೇ ಸಾವು

ಚಿತ್ರದುರ್ಗದ ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸರಣಿ ಅಪಘಾತ ಸಂಭವಿಸಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಅಪಘಾತದ ಬಳಿಕ ಲಾರಿ ಚಾಲಕ ಲಾರಿಯೊಂದಿಗೆ ಸ್ಥಳದಿಂದ ಪರಾರಿಯಾಗಿದ್ದಾನೆ. ದೊಡ್ಡಸಿದ್ದವ್ವನ ಹಳ್ಳಿ ಗ್ರಾಮದ ಬಳಿ ಸಂಚರಿಸುತ್ತಿದ್ದ ಕಾರಿಗೆ ಲಾರಿ ಡಿಕ್ಕಿ ಹೊಡೆದಿದ್ದು, ಬಳಿಕ ಮತ್ತೊಂದು

ಸ್ಥಿರಾಸ್ತಿ ಪ್ರಕರಣ ನಿರ್ಧರಿಸುವ ಅಧಿಕಾರ ಎಸ್​ಸಿ-ಎಸ್​​ಟಿ ಆಯೋಗಕ್ಕಿಲ್ಲ: ಹೈಕೋರ್ಟ್

ಸ್ಥಿರಾಸ್ತಿಗಳಿಗೆ ಸಂಬಂಧಿಸಿದ ವಿವಾದಗಳನ್ನು ಬಗೆಹರಿಸುವುದು, ಕಂದಾಯ ದಾಖಲೆಗಳನ್ನು ಬದಲಾಯಿಸುವುದು ಮತ್ತು ಅರಣ್ಯ ಭೂಮಿಯನ್ನು ಅರಣ್ಯೇತರ ಭೂಮಿ ಎಂದು ಘೋಷಿಸಲು ರಾಜ್ಯ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಆಯೋಗಕ್ಕೆ ಅಧಿಕಾರವಿಲ್ಲ ಎಂದು ಹೈಕೋರ್ಟ್ ಸ್ಪಷ್ಟಪಡಿಸಿದೆ. ರಾಜ್ಯ ಸರ್ಕಾರ(ಅರಣ್ಯ ಇಲಾಖೆ) ಸಲ್ಲಿಸಿದ್ದ ಅರ್ಜಿಯ

ಧಾರವಾಡದಲ್ಲಿ ಪ್ರೇಯಸಿ ಆತ್ಮಹತ್ಯೆ ಬಳಿಕ ಪ್ರಿಯಕರ ಸುಸೈಡ್‌

ಪ್ರೇಯಸಿ ಆತ್ಮಹತ್ಯೆ ಮಾಡಿಕೊಂಡ ವಿಚಾರ ತಿಳಿದ ಬಳಿಕ ಪ್ರಿಯಕರನೂ ಆತದ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ತಾಲೂಕಿನ ಕೋಟಬಾಗಿ ಗ್ರಾಮದಲ್ಲಿ ನಡೆದಿದೆ. ಪ್ರೇಯಸಿ ಮೇಘಾ ಗುಬ್ಬನ್ನವರ್(20) ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದರೆ, ಪ್ರಿಯಕರ ತರುಣ್ ಸಾಗರ್ ಕುರಕುರಿ(21) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉತ್ತರಾಖಂಡ ಮುಖ್ಯಮಂತ್ರಿ ರಾಜಿನಾಮೆ ನೀಡಲಿ: ಸಿಎಂ ಡಿಕೆ ಶಿವಕುಮಾರ್ 

ಉತ್ತರಾಖಂಡದ ಹಲ್ದ್ವಾನಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಬಹಿರಂಗ ಸಭೆ ನಡೆದ ಸ್ಥಳ ‘ಶುದ್ಧೀಕರಣ’ ಮಾಡಿರುವ ಘಟನೆ ನಾಚಿಕೆಗೇಡಿನ ವಿಚಾರ. ಆ ರಾಜ್ಯದ ಮುಖ್ಯಮಂತ್ರಿಗಳು ರಾಜಿನಾಮೆ ನೀಡಬೇಕು ಎಂದು ಸಿಎಂ ಡಿಕೆ ಶಿವಕುಮಾರ್ ಆಗ್ರಹಿಸಿದರು. ವಿಧಾನಸೌಧ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ