kannada news
ಸರ್ಕಾರಿ ಆಸ್ಪತ್ರೆ ಬದಲು ಖಾಸಗಿ ಆಸ್ಪತ್ರೆಗೆ ದಾಖಲಿಸಿದ ಆ್ಯಂಬುಲೆನ್ಸ್ ಚಾಲಕ: ಬಡ ರೋಗಿ ಕುಟುಂಬದ ರೋಧನ
ನೆಲಮಂಗಲದಲ್ಲಿ 108 ಆ್ಯಂಬುಲೆನ್ಸ್ ದುರ್ಬಳಕೆ ಮಾಡಿಕೊಂಡಿರುವ ಚಾಲಕ ಹಣದಾಸೆಗಾಗಿ ಬಡ ರೋಗಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಪರಾರಿಯಾಗಿದ್ದಾನೆ. ಪಾಯಿಸನ್ ಕೇಸ್ ಸಂಬಂಧ ಸರ್ಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕೃಷ್ಣಮೂರ್ತಿ (30)ಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲು ವೈದ್ಯರು ಸೂಚನೆ ನೀಡಿದ್ದರು. ವಿಕ್ಟೋರಿಯಾ ಆಸ್ಪತ್ರೆಯ ಬದಲು ಹಣದಾಸೆಗೆ ಆ್ಯಂಬುಲೆನ್ಸ್ ಚಾಲಕ ಖಾಸಗಿ ಆಸ್ಪತ್ರೆಗೆ ರೋಗಿಯನ್ನು ದಾಖಲಿಸಿ ಎಸ್ಕೇಪ್ ಆಗಿದ್ದಾನೆ. ಆಸ್ಪತ್ರೆಯ ವೆಚ್ಚ ಭರಿಸಲಾಗದೆ ಕುಟುಂಬಸ್ಥರು ರೋಧಿಸುವಂತಾಗಿದೆ.
ನಾಯಕನಹಟ್ಟಿ ಆಸ್ಪತ್ರೆಯಲ್ಲಿ ವೈದ್ಯರಿಲ್ಲ: ಚಿಕಿತ್ಸೆಗೆ ಬಂದ ರೋಗಿ ಸಾವು
ಚಿತ್ರದುರ್ಗ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪಟ್ಟಣದಲ್ಲಿರುವ ಸಮುದಾಯ ಆರೋಗ್ಯ ಕೇಂದ್ರದಲ್ಲಿ ವೈದ್ಯರಿಲ್ಲದ ಕಾರಣ ಚಿಕಿತ್ಸೆಗೆ ಬಂದ ರೋಗಿ ಮೃತಪಟ್ಟಿರುವ ಘಟನೆ ನಡೆದಿದೆ. ಆಸ್ಪತ್ರೆ ವೈಧ್ಯಾಧಿಕಾರಿಗಳ ವಿರುದ್ಧ ಮೃತನ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನಾಗರಾಜಪ್ಪ (50) ಮೃತಪಟ್ಟವರು. ನಾಯಕನಹಟ್ಟಿ ಪಟ್ಟಣದ ಅಂಬೇಡ್ಕರ್ ಕಾಲೊನಿ
ಮಂಡ್ಯದಲ್ಲಿ ರೌಡಿ ಶೀಟರ್ ಹತ್ಯೆ
ಮಂಡ್ಯದ ಪಾಂಡವಪುರ ತಾಲೂಕಿನ ಅಮೃತಿ ಗ್ರಾಮದ ಬಳಿ ತಡರಾತ್ರಿ ರೌಡಿ ಈಟರ್‌ವೊಬ್ಬನ ಬರ್ಬರ ಹತ್ಯೆಯಾಗಿದೆ. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ಲಕ್ಷ್ಮೀ ಸಾಗರ ಗ್ರಾಮದ ಮಹೇಶ್(26) ಕೊಲೆಯಾದ ರೌಡಿ ಶೀಟರ್. ತಡರಾತ್ರಿ ಜಕ್ಕನಹಳ್ಳಿ ಬಾರ್ ಬಳಿ ಯುವಕರ
ವಿಶೇಷಚೇತನರಿಗೆ ಪ್ರತ್ಯೇಕ ನಿಗಮ/ಮಂಡಳಿ ರಚನೆ: ಮುಖ್ಯಮಂತ್ರಿಗೆ ಸಚಿವ ಸಂತೋಷ್ ಲಾಡ್ ಪತ್ರ
ಸರ್ಕಾರದ ಸವಲತ್ತುಗಳನ್ನು ತ್ವರಿತವಾಗಿ ಮತ್ತು ನೇರವಾಗಿ ತಲುಪಿಸಲು ಸಾಧ್ಯವಾಗುವಂತೆ ವಿಶೇಷಚೇತನರಿಗಾಗಿಯೇ ಒಂದು ಪ್ರತ್ಯೇಕ ನಿಗಮ ಅಥವಾ ಮಂಡಳಿಯ ಸ್ಥಾಪನೆಯ ಅಗತ್ಯವಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದ್ದಾರೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿಗಳಿಗೆ ಪತ್ರದ ಮೂಲಕ ಮನವಿ ಮಾಡಿರುವ ಸಚಿವರು,
ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆಗೆ 20 ದಿನ ಅಧಿವೇಶನ ನಡೆಸಿ: ಆರ್ ಅಶೋಕ ಒತ್ತಾಯ
ಈ ಬಾರಿಯ ಅಧಿವೇಶನವನ್ನು 8 ದಿನಗಳ ಬದಲು 20 ದಿನ ನಡೆಸಬೇಕು ಹಾಗೂ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಹೆಚ್ಚು ಚರ್ಚೆ ಮಾಡಬೇಕೆಂದು ಸರ್ಕಾರಕ್ಕೆ ಒತ್ತಾಯಿಸಲಾಗುವುದು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಅಧಿವೇಶನ ಸಂಬಂಧ ನಡೆದ ಬಿಜೆಪಿ-ಜೆಡಿಎಸ್ ಸಮನ್ವಯ
ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನದ ಆಮಿಷ: 20 ಲಕ್ಷ ರೂ. ವಂಚನೆ
ಕರ್ನಾಟಕ ಪ್ರೆಸ್ ಕ್ಲಬ್ ಕೌನ್ಸಿಲ್ನ ಮಹಿಳಾ ರಾಜ್ಯಾಧ್ಯಕ್ಷೆ ಸ್ಥಾನ ಮತ್ತು ವಿಶ್ವ ಕನ್ನಡ ಹಬ್ಬದ ನಿರ್ದೇಶಕಿ ಸ್ಥಾನ ಕೊಡಿಸುವುದಾಗಿ ನಂಬಿಸಿ ಮಹಿಳೆಯೊಬ್ಬರಿಗೆ ಲಕ್ಷಾಂತರ ರೂ.. ವಂಚಿಸಿದ್ದ ಆರೋಪಿಯನ್ನು ಗೋವಿಂದರಾಜ ನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ವಿಜಯನಗರದ ಅಮರಜ್ಯೋತಿನಗರದ ನಿವಾಸಿಯಾಗಿರುವ ಕಣ್ಣು
ಎಲ್ಲ ಧರ್ಮದವರು ಭೂ ವರಾಹಸ್ವಾಮಿಗೆ ಪ್ರಾರ್ಥನೆ ಸಲ್ಲಿಸುವುದು ಖುಷಿ ವಿಚಾರ: ಡಿಕೆ ಶಿವಕುಮಾರ್
ಮಂಡ್ಯ ಜಿಲ್ಲೆಯ ಅದ್ಭುತ, ಐತಿಹಾಸಿಕ ದೇವಾಲಯವಾಗಿ ಭೂ ವರಾಹ ಸ್ವಾಮಿ ಸನ್ನಿಧಿ ಪ್ರಸಿದ್ಧವಾಗಿದೆ.. ಎಲ್ಲಾ ಧರ್ಮದ ಜನ ಈ ದೇವಾಲಯಕ್ಕೆ ಬಂದು ಪ್ರಾರ್ಥನೆ ಸಲ್ಲಿಸುತ್ತಾರೆ. ಅದನ್ನು ನೋಡಿ ಖುಷಿ ಎನಿಸಿತು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಭೂವರಾಹಸ್ವಾಮಿ ದೇವಾಲಯದ ಬಳಿ
ಸಿದ್ದರಾಮಯ್ಯ ಮಾತು ತಪ್ಪಿದ ಮಗ ಆಗ್ತಾರಾ: ಶ್ರೀ ರಾಮುಲು
ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಶಿವಕುಮಾರ ಅವರು ಬ್ರೇಕ್ ಫಾಸ್ಟ್, ಲಂಚ್, ಡಿನ್ನರ್ ಮೀಟಿಂಗ್ ಮಾಡಿಕೊಂಡು ಓಡಾಡುತ್ತಿದ್ದಾರೆ. ಜೊತೆಗೆ ಹೈಕಮಾಂಡ್ ತೀರ್ಮಾನಕ್ಕೆ ಬದ್ದ ಅಂತ ಹೇಳ್ತಾಯಿದ್ದಾರೆ. ಇದೆಲ್ಲ ರಾಜ್ಯದ ಜನರಿಗೆ ಬೇಕಾಗಿಲ್ಲ. ಅಭಿವೃದ್ಧಿ ಒಂದೇ ಬೇಕಾಗಿದೆ. ಸಿಎಂ ಸಿದ್ದರಾಮಯ್ಯ “ತಮ್ಮ ಸ್ಥಾನ
ರಷ್ಯಾದ ನೌಕಾಪಡೆಯ `ವಿರಾಟ್’ ಮೇಲೆ ದಾಳಿ!
ಇಸ್ತಾನ್‌ಬುಲ್: ರಷ್ಯಾದ ನೌಕಾಪಡೆಯ ನೆರಳಿನಂತೆ ಕಾರ್ಯ ನಿರ್ವಹಿಸುವ ಹಡಗಿನ ಮೇಲೆ ಅಪರಿಚಿತರು ಮಾನವ ರಹಿತ ದೋಣಿ ಬಳಸಿ ಸ್ಫೋಟಗೊಳಿಸಿದ ಘಟನೆ ಟರ್ಕಿಯ ಕಪ್ಪು ಸಮುದ್ರದ ಕರಾವಳಿಯಲ್ಲಿ ನಡೆದಿದೆ. ಶುಕ್ರವಾರ ಮುಂಜಾನೆ ತಡರಾತ್ರಿ ಟರ್ಕಿಯ ಕಪ್ಪು ಸಮುದ್ರ ಕರಾವಳಿಯಲ್ಲಿ ರಷ್ಯಾದ ಹಡಗು ವಿರಾಟ್
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಂದ ಪತ್ನಿ!
ಬೆಂಗಳೂರು: ಅಕ್ರಮ ಸಂಬಂಧಕ್ಕೆ ಅಡ್ಡಿ ಎಂಬ ಕಾರಣಕ್ಕೆ ಪತಿಯನ್ನೇ ಪತ್ನಿ ಕೊಲೆ ಮಾಡಿಸಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದ್ದು, ಪತ್ನಿ ಸೇರಿದಂತೆ ಮೂವರನ್ನು ಬಂಧಿಸಲಾಗಿದೆ. ನೆಲಮಂಗಲದ ಗಂಗೊಂಡನಹಳ್ಳಿ ಬಳಿಯ ನಿರ್ಜನ ಪ್ರದೇಶದಲ್ಲಿ ಭಾನುವಾರ ವ್ಯಕ್ತಿಯೊಬ್ಬರ ಸುಟ್ಟ ಶವ ಪತ್ತೆಯಾದ ಪ್ರಕರಣಕ್ಕೆ ಸಂಬಂಧಿಸಿ ತನಿಖೆ




