kannada news
ಎಸ್ಟಿಗಳಿಗೆ ಹಕ್ಕು ಪತ್ರ ವಿತರಣೆಗೆ ತೊಡಕು: ಸಚಿವ ಸಂತೋಷ್ ಲಾಡ್ ಚರ್ಚೆ
ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ ಅಳ್ನಾವರ ಹಾಗೂ ಕಲಘಟಗಿ ಕಂದಾಯ ಉಪ ಗ್ರಾಮಗಳಲ್ಲಿನ ಪರಿಶಿಷ್ಟ ಪಂಗಡದವರಿಗೆ ಹಕ್ಕು ಪತ್ರಗಳ ವಿತರಣೆಗೆ ಉಂಟಾಗಿರುವ ತೊಂದರೆಗಳ ಬಗ್ಗೆ ಕಾರ್ಮಿಕ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್ ಎಸ್ ಲಾಡ್ ಅವರು ಬೆಂಗಳೂರು ವಿಕಾಸಸೌಧದಲ್ಲಿ ಸಭೆ ನಡೆಸಿ ಚರ್ಚಿಸಿದರು. ಹಕ್ಕು ಪತ್ರಕ್ಕಾಗಿ ಅರ್ಜಿ ಸಲ್ಲಿಸಿದವರಿಗೆ ಹಕ್ಕುಪತ್ರಗಳ ವಿತರಣೆಯಾಗಿಲ್ಲ. ಇದಕ್ಕಿರುವ ತೊಂದರೆಗಳನ್ನು ನಿವಾರಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು. ಈ ಸಭೆಯಲ್ಲಿ
‘ಬೃಹತ್ ಮೈಸೂರು ಮಹಾನಗರ ಪಾಲಿಕೆ’ ಘೋಷಣೆಗೆ ಸಚಿವ ಸಂಪುಟ ನಿರ್ಣಯ
ಕರ್ನಾಟಕ ಮಹಾನಗರ ಪಾಲಿಕೆಗಳ ಅಧಿನಿಯಮ 1976ರ ಸೆಕ್ಷನ್-3, 4, 500 ಮತ್ತು 501ರನ್ವಯ ಶೆಡ್ಯೂಲ್-ಎ”ನಲ್ಲಿ ಒಳಗೊಂಡ ಪ್ರದೇಶಗಳನ್ನು ಶೆಡ್ಯೂಲ್-ಬಿ ಯಲ್ಲಿ ಆ ಪ್ರದೇಶದ ಗಡಿರೇಖೆ ಗುರುತಿಸಲಾಗಿರುವಂತೆ ಹಾಲಿ ಮೈಸೂರು ಮಹಾನಗರ ಪಾಲಿಕೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಲು ಹಾಗೂ ಒಟ್ಟಾರೆ ಪ್ರದೇಶವನ್ನು ‘ಬೃಹತ್ ಮೈಸೂರು
ಸ್ಪೀಕರ್ ಯುಟಿ ಖಾದರ್‌ಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಬೆಂಗಳೂರು ವಿಶ್ವವಿದ್ಯಾಲಯದ ಕುಲಾಧಿಪತಿಗಳಾದ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಬೆಂಗಳೂರು ವಿಶ್ವವಿದ್ಯಾಲಯ ವತಿಯಿಂದ ವಿಧಾನಸಭೆಯ ಸಭಾಧ್ಯಕ್ಷರಾದ ಯು.ಟಿ.ಖಾದರ್ ಫರೀದ್‌ರವರಿಗೆ ಗೌರವಾನ್ವಿತ ಡಾಕ್ಟರೇಟ್ ಪದವಿ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಗೌರವ ಪದವಿ ಪ್ರದಾನ ಮಾಡಲಾಯಿತು. ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿ
ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ: ಡಿಕೆ ಶಿವಕುಮಾರ್
ಹೈಕಮಾಂಡ್ ನಾಯಕರು ದಿಲ್ಲಿಗೆ ಕರೆದರೆ ಹೋಗುತ್ತೇನೆ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಅವರು ವಿಧಾನಸೌಧದ ಬಳಿ ಕೇಳಿದಾಗ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದರು. ಸಿಎಂ ಹಾಗೂ ಡಿಸಿಎಂ ಇಬ್ಬರನ್ನೂ ದಿಲ್ಲಿಗೆ ಕರೆದು ಚರ್ಚೆ ಮಾಡುತ್ತೇವೆ ಎಂಬ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ
ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ರಾಜ್ಯದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ತಲಾ 5 ಲಕ್ಷ ರೂ. ಘೋಷಣೆ
ಬೆಂಗಳೂರು: ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಿಂಚಿದ ಕರ್ನಾಟಕದ ಇಬ್ಬರು ಮಹಿಳಾ ಕ್ರೀಡಾಪಟುಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ 5 ಲಕ್ಷ ರೂ. ಘೋಷಿಸಿದ್ದಾರೆ. ಢಾಕಾದಲ್ಲಿ ನಡೆದ ಮಹಿಳಾ ಕಬಡ್ಡಿ ವಿಶ್ವಕಪ್ ಪಂದ್ಯಾವಳಿಯಲ್ಲಿ ಚಿನ್ನ ಗೆದ್ದ ಭಾರತ ತಂಡದ ರಾಜ್ಯದ ಆಟಗಾರ್ತಿ ಧನಲಕ್ಷ್ಮಿ ಹಾಗೂ ಚೈನಾದಲ್ಲಿ
ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಹೆಚ್ಚುವರಿ ರೂ.1033.60 ಕೋಟಿ ಸಬ್ಸಿಡಿ ಬಿಡುಗಡೆ ಮಾಡಿದ ಸಿಎಂ
ರಾಜ್ಯದಲ್ಲಿ ಮಾನ್ಸೂನ್ ಅವಧಿಯಲ್ಲಿ ಅತಿವೃಷ್ಟಿಯಿಂದ ಆದ ಬೆಳೆ ಹಾನಿಯಿಂದ ಆದ ರೈತರ ಸಂಕಷ್ಟಕ್ಕೆ ಸರ್ಕಾರ ಸ್ಪಂದಿಸಿದೆ. ಒಂದೇ ದಿನ ರೈತರಿಗೆ ಹೆಚ್ಚುವರಿಯಾಗಿ ರೂ.1033.60 ಕೋಟಿ ಇನ್ಪುಟ್ ಸಬ್ಸಿಡಿ ವಿತರಣೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹಕಚೇರಿ ಕೃಷ್ಣಾದಲ್ಲಿ ಚಾಲನೆ ನೀಡಿದರು. ರೈತರ ಖಾತೆಗಳಿಗೆ ಇನ್
ಸಿಎಂ, ಡಿಸಿಎಂ ಜೊತೆ ದೆಹಲಿಯಲ್ಲಿ ತೀರ್ಮಾನ: ಮಲ್ಲಿಕಾರ್ಜುನ ಖರ್ಗೆ
ಬೆಂಗಳೂರು: ದೆಹಲಿಗೆ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರನ್ನು ಕರೆಸಿ, ಹೇಗೆ ಮುಂದುವರೆಯಬೇಕು ಎಂದು ತೀರ್ಮಾನ ಮಾಡುತ್ತೇವೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ದೆಹಲಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ”ನಾನು
ಕುಕ್ಕೆ ಸುಬ್ರಹ್ಮಣ್ಯದಲ್ಲಿ ಚಂಪಾಷಷ್ಠಿ ಮಹಾರಥೋತ್ಸವ
ದಕ್ಷಿಣ ಕನ್ನಡ: ಮಹತೋಭಾರ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಳದ ಚಂಪಾಷಷ್ಠಿ ಮಹೋತ್ಸವದ ಮಹಾರಥೋತ್ಸವವು ಸಹಸ್ರಾರು ಭಕ್ತರ ಸಮ್ಮುಖದಲ್ಲಿ ಬುಧವಾರ ಮುಂಜಾನೆ 7:29ರ ಶುಭ ಮುಹೂರ್ತದಲ್ಲಿ ವೈಭವದಿಂದ ನಡೆಯಿತು. ಕಾರ್ತಿಕ ಶುದ್ಧ ಷಷ್ಠಿ ದಿನದ ಪ್ರಯುಕ್ತ ನಡೆಯುವ ವಾರ್ಷಿಕ ರಥೋತ್ಸವದಲ್ಲಿ ಅಪಾರ ಭಕ್ತಿಭಾವ,
ಕೆಂಪುಕೋಟೆ ಬಳಿ ಕಾರು ಸ್ಫೋಟ ಮತ್ತೊಬ್ಬನ ಬಂಧನ
ನವದೆಹಲಿ: ಕೆಂಪುಕೋಟೆ ಬಳಿ ಸಂಭವಿಸಿದ್ದ ಕಾರು ಬಾಂಬ್ ಸ್ಫೋಟ ಪ್ರಕರಣದ ತನಿಖೆಯನ್ನು ತೀವ್ರಗೊಳಿಸಿರುವ ರಾಷ್ಟ್ರೀಯ ತನಿಖಾ ದಳ(ಎನ್‌ಐಎ) ಅಧಿಕಾರಿಗಳು ಮತ್ತೊಬ್ಬ ಆರೋಪಿಯನ್ನು ಬಂಧಿಸಿದ್ದು,ಈ ಮೂಲಕ ಬಂಧಿತ ಆರೋಪಿಗಳ ಸಂಖ್ಯೆ ಏಳಕ್ಕೆ ಏರಿಕೆ ಆಗಿದೆ. ಕಾರು ಸ್ಪೋಟ ಸಂಭವಿಸುವ ಮುನ್ನ ಉಮರ್ ನಬಿಗೆ
ಅಧಿಕಾರ ಹಂಚಿಕೆ ಗೊಂದಲ ಬಗ್ಗೆ ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ: ಪ್ರಿಯಾಂಕ್ ಖರ್ಗೆ
ಇನ್ನೆರಡು ದಿನದಲ್ಲಿ ಹೈಕಮಾಂಡ್ ಸಭೆ ನಡೆಯಲಿದ್ದು, ಆಗ ರಾಜ್ಯ ಸರ್ಕಾರದಲ್ಲಿನ ಅಧಿಕಾರ ಹಂಚಿಕೆ ಗೊಂದಲದ ಬಗ್ಗೆ ಅಂತಿಮ ನಿರ್ಧಾರ ಮಾಡುತ್ತಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ದೆಹಲಿಗೆ ಭೇಟಿ ನೀಡಿ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲು ತೆರಳುವ ಮುನ್ನ




