Menu

ಗಂಡ, ಮಕ್ಕಳ ತೊರೆದಿದ್ದ ಮಹಿಳೆ ಜೊತೆ ಲಿವ್-ಇನ್ ರಿಲೇಷನ್‌ಶಿಪ್‌: ನೇಣುಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆ

ಬೆಂಗಳೂರಿನ ಶ್ರೀಗಂಧನಗರದಲ್ಲಿ ಲಿವ್-ಇನ್ ಸಂಬಂಧದಲ್ಲಿದ್ದ ಯುವಕನ ಶವ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಚಿತ್ರದುರ್ಗದ ತಿಪ್ಪೇಸ್ವಾಮಿ (28) ಮೃತ ವ್ಯಕ್ತಿಯಾಗಿದ್ದು, ಬೆಂಗಳೂರಿನ ಗಾರ್ಮೆಂಟ್ಸ್ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ. ದಾವಣಗೆರೆಯ ಮಹಿಳೆ ಇನ್ಸ್ಟಾಗ್ರಾಮ್ ಮೂಲಕ ಪರಿಚಯವಾಗಿ ಇಬ್ಬರೂ ಒಂದೇ ಗಾರ್ಮೆಂಟ್ಸ್‌ನಲ್ಲಿ ಕೆಲಸ ಮಾಡುತ್ತ ಕಳೆದ ಎರಡು ತಿಂಗಳಿನಿಂದ ಲಿವ್-ಇನ್ ಸಂಬಂಧದಲ್ಲಿದ್ದು, ಶ್ರೀಗಂಧನಗರದಲ್ಲಿ ಬಾಡಿಗೆ ಮನೆಯಲ್ಲಿ ವಾಸ ಮಾಡುತ್ತಿದ್ದರು. ಮಹಿಳೆ

ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ

ಹರ್ಮುಜ್ ಜಲಸಂಧಿಯಲ್ಲಿ ಇರಾನ್‌ಗೆ ಸೇರಿದ ತೈಲ ಟ್ಯಾಂಕರ್‌ಗಳ ಮೇಲೆ ಅಮೆರಿಕ ದಾಳಿ ನಡೆಸಿದೆ. ಟ್ಯಾಂಕರ್‌ಗಳು ಅಮೆರಿಕದ ನಿರ್ಬಂಧಗಳನ್ನು ಉಲ್ಲಂಘಿಸಿ ಇರಾನ್ ಬಂದರುಗಳಿಗೆ ಸಂಪರ್ಕ ಸಾಧಿಸಲು ಯತ್ನಿಸುತ್ತಿದ್ದವು ಎಂದು ಅಮೆರಿಕದ ಸೇನೆ ಹೇಳಿದ್ದು, ದಾಳಿಯ ನಡೆಸಿದ ವೀಡಿಯೊಗಳನ್ನೂ ಬಿಡುಗಡೆ ಮಾಡಿದೆ. ಎರಡು ದಿನಗಳ

ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ: ಡಿಕೆ ಶಿವಕುಮಾರ್‌

“ತಮಿಳುನಾಡಿನ ಕಾಂಗ್ರೆಸ್ ಶಾಸಕರು ಬೆಂಗಳೂರಿಗೆ ಬಂದಿದ್ದಾರೆ ಎಂಬುದು ಸುಳ್ಳು. ನಾನು ಪಕ್ಷ ಹೇಳಿದಂತೆ ಕೇಳುವೆ, ತಮಿಳುನಾಡು ವಿಚಾರ ನನಗೆ ಗೊತ್ತಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸದಾಶಿವನಗರ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದರು.  ತಮಿಳುನಾಡಿನ ಶಾಸಕರು ಈಗಲ್ ಟನ್

ಲಂಚ ಸ್ವೀಕರಿಸುತ್ತಿದ್ದ ಇನ್ಸ್‌ಪೆಕ್ಟರ್ ಲೋಕಾಯುಕ್ತ ಬಲೆಗೆ

ಯಾದಗಿರಿ ಜಿಲ್ಲೆಯ ಗುರುಮಠಕಲ್ ಪೊಲೀಸ್ ಠಾಣೆಯ ಇನ್ಸ್‌ಪೆಕ್ಟರ್ ವೀರಣ್ಣ ದೊಡ್ಡಮನಿ ಒಂದು ಲಕ್ಷ ರೂ. ಲಂಚ ಪಡೆಯುವಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಕ್ರಿಮಿನಲ್ ಪ್ರಕರಣದ ಆರೋಪಿಗಳನ್ನು ಬಂಧಿಸದಿರಲು ಮತ್ತು ಪ್ರಕರಣದಿಂದ ಕೈಬಿಡಲು ಹಣಕ್ಕೆ ಬೇಡಿಕೆಯಿಟ್ಟಿದ್ದು, ಅದನ್ನು ಪಡೆಯುವಾಗ ಲೋಕಾಯುಕ್ತ ತಂಡ ದಾಳಿ ನಡೆಸಿದೆ.

ಮಧ್ಯರಾತ್ರಿ ಹೋಟೆಲ್‌ನಲ್ಲಿ ಆಕಸ್ಮಿಕ ಬೆಂಕಿ: ವ್ಯಕ್ತಿ ಸಾವು, ನಾಲ್ವರ ಸ್ಥಿತಿ ಗಂಭೀರ

ಬೆಂಗಳೂರಿನ ನಾಗರಬಾವಿಯ ಹೋಟೆಲ್‌ವೊಂದರಲ್ಲಿ ತಡರಾತ್ರಿ ಅಗ್ನಿ ಆಕಸ್ಮಿಕ ನಡೆದಿದ್ದು, ಒಬ್ಬ ವ್ಯಕ್ತಿ ಮೃತಪಟ್ಟಿದ್ದಾರೆ. ನಾಲ್ವರು ತೀವ್ರವಾಗಿ ಗಾಯಗೊಂಡಿದ್ದಾರೆ. ಬೆಂಕಿಯಿಂದಾಗಿ ಹೋಟೆಲ್‌ನಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಉಸಿರುಗಟ್ಟಿ ಈ ಸಾವು ಸಂಭವಿಸಿದೆ. ಬೆಂಕಿ ಕಾಣಿಸಿಕೊಂಡಾಗ ಒಟ್ಟು ಐವರು ಕಟ್ಟಡದೊಳಗೆ ಸಿಲುಕಿಕೊಂಡಿದ್ದರು. ಸ್ಥಳಕ್ಕೆ ಆಗಮಿಸಿದ

ಸಹಕಾರ ಕ್ಷೇತ್ರದಲ್ಲಿ ಕೂತವನದ್ದೇ ಕುರ್ಚಿ, ಒದ್ದವನದ್ದೇ ಚೆಂಡು: ಡಿಕೆ ಶಿವಕುಮಾರ್‌

ಸಹಕಾರ ಕ್ಷೇತ್ರ ಎಂದರೆ ಕೂತವನದ್ದೇ ಖುರ್ಚಿ, ಒದ್ದವನದ್ದೇ ಚೆಂಡು. ಅಂದರೆ ಯಾರನ್ನೂ ಬಿಡಿಸಲು ಆಗುವುದಿಲ್ಲ. ನಾನು ರಾಜಕೀಯದವರ ಕಥೆ ಹೇಳುತ್ತಿದ್ದೇನೆ. ಮಾಧ್ಯಮದವರು ನೀವು ಇರುತ್ತೀರಿ ಕೆಲಸ ಮಾಡಿಕೊಂಡು ಹೋಗುತ್ತೀರಿ ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಬೆಂಗಳೂರಿನಲ್ಲಿ ಸಹಕಾರ ಸಂಘಗಳ ನಿಬಂಧಕರ ನೂತನ

ಕನಕಪುರದಲ್ಲಿ ವೈದ್ಯನ ಬಳಿಕ ನರ್ಸ್‌ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕನಕಪುರ ನಗರದ ಮಹದೇಶ್ವರ ಬಡಾವಣೆಯಲ್ಲಿ ಎರಡು ದಿನಗಳ ಹಿಂದೆ ವೈದ್ಯರೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಎರಡು ದಿನಗಳ ಬಳಿಕ ಅವರ ಆಸ್ಪತ್ರೆಯಲ್ಲಿ ನರ್ಸ್‌ ಆಗಿದ್ದ ಮಹಿಳೆ ಕೂಡ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನವೋದಯ ಆಸ್ಪತ್ರೆಯ ನರ್ಸ್ ಸರಸ್ವತಿ (45)

ತಮಿಳುನಾಡಲ್ಲಿ ವಿಜಯ್ ಅವರನ್ನು ದೇವರೇ ಕಾಪಾಡಬೇಕು: ಹೆಚ್‌ಡಿಕೆ

ತಮಿಳುನಾಡಿನಲ್ಲಿ ವಿಜಯ್‌ ಅವರನ್ನು ದೇವರೇ ಕಾಪಾಡಬೇಕು. ತಮಿಳುನಾಡು ರಾಜ್ಯದ ಬಜೆಟ್ ಗಾತ್ರ 3.5 ಲಕ್ಷ ಕೋಟಿ ರೂಪಾಯಿ. ಆದರೆ ಇವರು ಭರವಸೆಗಳನ್ನು ನೀಡಿರುವ ಫ್ರೀ ಬೀಸ್ ಗಳಿಗೆ ಕಡಿಮೆ ಎಂದರೂ 6 ಲಕ್ಷ ಕೋಟಿ ರೂಪಾಯಿ ಬೇಕು. ಅಷ್ಟು ಹಣವನ್ನು ಎಲ್ಲಿಂದ

ಸಿಎಂ ಕುರ್ಚಿ ಗುಂಗಿನಲ್ಲಿ ಡಿಸಿಎಂ: ರಸ್ತೆಯಲ್ಲಿ ಬಿದ್ದಿರುವ ಮರಗಳು, ಪಾದಚಾರಿ ಮಾರ್ಗ ಬಂದ್‌ ಎಂದು ಆರ್‌ ಅಶೋಕ ಕಿಡಿ

ಏಪ್ರಿಲ್ 29ರ ಮಳೆಗೆ 500ಕ್ಕೂ ಹೆಚ್ಚು ಮರಗಳು ನೆಲಕ್ಕುರುಳಿವೆ. ವಾರ ಕಳೆದರೂ 1,305ಕ್ಕೂ ಹೆಚ್ಚು ಮರ-ಕೊಂಬೆಗಳು ಇನ್ನೂ ರಸ್ತೆ ಬದಿಯಲ್ಲೇ ಕೊಳೆಯುತ್ತಿವೆ. ಪಾದಚಾರಿ ಮಾರ್ಗಗಳು ಬಂದ್ ಆಗಿವೆ. ಜನ ಜೀವ ಕೈಯಲ್ಲಿ ಹಿಡಿದು ರಸ್ತೆಗಳಲ್ಲಿ ನಡೆಯುವ ಪರಿಸ್ಥಿತಿ. ಆದರೆ ಡಿಸಿಎಂ @DKShivakumar ಅವರು

ಜಿಬಿಎ ಚುನಾವಣೆ: ಜೂನ್‌ 24ರ ಒಳಗೆ ದಿನಾಂಕ ಘೋಷಣೆಗೆ ಇಸಿ ಸೂಚನೆ

ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆಗೆ ಜೂನ್‌ 14 ರಿಂದ 24ರ ಒಳಗೆ ದಿನಾಂಕ ಘೋಷಣೆ ಮಾಡುವಂತೆ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಜಿ.ಎ ಸಂಗ್ರೇಶಿ ಸೂಚನೆ ನೀಡಿದ್ದಾರೆ. ಜಿಬಿಎ ವ್ಯಾಪ್ತಿಯ ಐದು ನಗರ ಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಚುನಾವಣಾ ಆಯುಕ್ತ