kannada news
ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯ ಸಾವು
ವೃದ್ಧ ದಂಪತಿಯಲ್ಲಿ ಪತ್ನಿ ಮೃತಪಟ್ಟ ಕೆಲವೇ ಗಂಟೆಗಳಲ್ಲಿ ಪತಿಯೂ ಅಸು ನೀಗಿರುವ ಘಟನೆ ದಾವಣಗೆರೆಯ ಹದಡಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ಸಿದ್ದಜ್ಜಿ ಹಾಗೂ ಪತಿ ಮಲ್ಲಜ್ಜ (75) ಮೃತಪಟ್ಟ ದಂಪತಿ. ಸಿದ್ದಜ್ಜಿ ಕಳೆದ ಕೆಲವು ದಿನಗಳಿಂದ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು, ಚಿಕಿತ್ಸೆ ಫಲಕಾರಿಯಾಗದೆ ಭಾನುವಾರ ರಾತ್ರಿ ಮೃತಪಟ್ಟಿದ್ದಾರೆ. ಬೆಳಗ್ಗೆ ಗ್ರಾಮದಲ್ಲಿ ಸಿದ್ದಜ್ಜಿ ಅಂತ್ಯಕ್ರಿಯೆಗೆ ಸಿದ್ಧತೆಗಳನ್ನು ಮಾಡಿಕೊಳ್ಳಲಾಗುತ್ತಿತ್ತು. , ಅಂತಿಮ ಯಾತ್ರೆ ಆರಂಭವಾಗಬೇಕು ಎನ್ನುವಷ್ಟರಲ್ಲಿ ಪತಿ ಮಲ್ಲಜ್ಜ (75) ಆರೋಗ್ಯ ಏರುಪೇರಾಗಿದೆ.
ಶಾಂತಲಾ ಡ್ರಾಪ್ ಸರ್ಚ್ ಮಾಡಿದ್ದ ಶಿವಗಂಗೆ ಬೆಟ್ಟದಲ್ಲಿ ನಾಪತ್ತೆಯಾಗಿರುವ ಟೆಕ್ಕಿ
ಶಿವಗಂಗೆ ಬೆಟ್ಟಕ್ಕೆ ಟ್ರಕ್ಕಿಂಗ್ ಹೋಗಿ ನಾಪತ್ತೆಯಾಗಿರುವ ಬೆಂಗಳೂರಿನ ಕಾಡುಗೋಡಿಯ ಟೆಕ್ಕಿ, ಮಧ್ಯಪ್ರದೇಶದ ಇಂದೋರ್‌ನ ಅದ್ವೈತ್ ಉಪಾಧ್ಯಾಯ ಆತ್ಮಹತ್ಯೆ ಮಾಡಿಕೊಂಡಿರುವ ಅನುಮಾನ ವ್ಯಕ್ತವಾಗಿದೆ. ನಾಪತ್ತೆಯಾದ ಮೂರನೇ ದಿನವೂ ಅದ್ವೈತ್ ಹುಡುಕಾಟ ನಡೆಸಲಾಗುತ್ತಿದೆ. ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರಿಗೆ ತನಿಖೆಯ ವೇಳೆ ಇದು ಪೂರ್ವನಿಯೋಜಿತ
ಬಿಡದಿ ಟೌನ್‌ಶಿಪ್ ಯೋಜನೆ ಜಾರಿಗೆ ಅವಕಾಶ ನೀಡಲ್ಲ: ಆರ್ ಅಶೋಕ
ಬಿಡದಿ ಟೌನ್‌ಶಿಪ್ ಯೋಜನೆ ಜಾರಿ ಮಾಡುತ್ತಿರುವ ಕಾಂಗ್ರೆಸ್ ಸರ್ಕಾರ ತಪ್ಪಿಗೆ ಪ್ರಾಯಶ್ಚಿತ್ತ ಮಾಡಿಕೊಳ್ಳಬೇಕಿದೆ. ಬಿಜೆಪಿ-ಜೆಡಿಎಸ್ ಒಂದಾಗಿ ಹೋರಾಟ ಮಾಡುವ ಮೂಲಕ ಯೋಜನೆಯನ್ನು ಸ್ಥಗಿತಗೊಳಿಸಲಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಹೇಳಿದರು. ಬಿಡದಿ ಟೌನ್‌ಶಿಪ್ ಯೋಜನೆ ವಿರುದ್ಧ ಜೆಡಿಎಸ್-ಬಿಜೆಪಿ ಬೃಹತ್ ಪಾದಯಾತ್ರೆಯಲ್ಲಿ
ಬಿಡದಿ ಟೌನ್ ಶಿಪ್: ಸತ್ಯ ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲವೆಂದ ಸಿಎಂ
ಬಿಡದಿ ಟೌನ್ ಶಿಪ್ ವಿಚಾರದಲ್ಲಿ ಸತ್ಯವನ್ನು ಮುಚ್ಚಿಡಲು ಯಾರಿಂದಲೂ ಸಾಧ್ಯವಿಲ್ಲ. ಅಧಿವೇಶನದಲ್ಲಿ ಬಂದು ಚರ್ಚೆ ಮಾಡಲಿ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಭಾರತ ಜೋಡೋ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಡದಿ ಟೌನ್ ಶಿಪ್ ವಿರೋಧಿಸಿ
ಜ್ಞಾನಭಾರತಿ ರಸ್ತೆ ಅಪಘಾತದಲ್ಲಿ ವಿದ್ಯಾರ್ಥಿನಿ ಸಾವು: ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ
ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಕ್ಯಾಂಪಸ್‌ನಲ್ಲಿ ರಸ್ತೆ ದಾಟುತ್ತಿದ್ದ ವೇಳೆ ಆಟೋರಿಕ್ಷಾ ಡಿಕ್ಕಿ ಹೊಡೆದು ಗಾಯಗೊಂಡು, ಕಳೆದ ಗುರುವಾರ (ಆ.6) ಮೃತಪಟ್ಟ ವಿದ್ಯಾರ್ಥಿನಿ ಮಾನಸ ಅವರ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ರೂ. ಪರಿಹಾರ ನೀಡಲಾಗಿದೆ. ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 3 ಲಕ್ಷ
ಪಾಕ್ ಮಹಿಳೆಯಿಂದ ಹನಿಟ್ರ್ಯಾಪ್: ರಕ್ಷಣಾ ಮಾಹಿತಿ ಕಳಿಸಿದ ಐಎಎಫ್ ವಿಂಗ್ ಕಮಾಂಡರ್
ಭಾರತೀಯ ವಾಯುಪಡೆಯ ಉನ್ನತ ಕಮಾಂಡರ್‌ವೊಬ್ಬರು ಪಾಕಿಸ್ತಾನದ ಮಹಿಳೆಯೊಬ್ಬರ ಹನಿಟ್ರ್ಯಾಪ್‌ಗೆ ಸಿಲುಕಿ ಸೂಕ್ಷ್ಮ ರಕ್ಷಣಾ ಮಾಹಿತಿಯನ್ನು ಸೋರಿಕೆ ಮಾಡಿರುವ ಪ್ರಕರಣ ಬಹಿರಂಗಗೊಂಡಿದೆ. ಆರೋಪಿ ಅಧಿಕಾರಿಯನ್ನು ಬಂಧಿಸಲಾಗಿದೆ. ಸಾಮಾಜಿಕ ಮಾಧ್ಯಮದ ಮೂಲಕ ಕುದಉರಿದ ಸ್ನೇಹ ಹನಿ ಟ್ರ್ಯಾಪ್ ಆಗಿ ಬದಲಾಗಿದೆ. ವಿಂಗ್ ಕಮಾಂಡರ್ ಅವರ
ರಷ್ಯಾದಿಂದ ತೈಲ ಖರೀದಿ: ಭಾರತ, ಚೀನಾಗಳಿಗೆ ಶೇ 100 ಸುಂಕ ವಿಧಿಸಲು ಅಮೆರಿಕ ಸಿದ್ಧತೆ
ರಷ್ಯಾದಿಂದ ಪೆಟ್ರೋಲಿಯಂ ಉತ್ಪನ್ನಗಳನ್ನು ಖರೀದಿಸುವ ಚೀನಾ ಮತ್ತು ಭಾರತ ಸೇರಿದಂತೆ ಕೆಲವು ದೇಶಗಳಿಂದ ಬರುವ ಸರಕುಗಳ ಮೇಲೆ ಶೇ.100 ಸುಂಕ ಸುಂಕ ವಿಧಿಸಲು ಅಮೆರಿಕ ಸೆನೆಟ್ ಬಹುಮತದ ಅನುಮೋದನೆ ನೀಡಿದೆ. ಈ ಮಾದರಿ ವ್ಯಾಪಾರವು ಉಕ್ರೇನ್ ಯುದ್ಧಕ್ಕೆ ಹಣಕಾಸು ಒದಗಿಸಲು ನೆರವಾಗುತ್ತಿದೆ
ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರುತ್ತಿದ್ದಾತ ಬೆಳಗಾವಿಯಲ್ಲಿ ಅರೆಸ್ಟ್
ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ಚಾಕ್ಲೆಟ್ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬೆಳಗಾವಿಯಲ್ಲಿ ಪೊಲೀಸರು ಬಂಧಿಸಿದ್ದಾರೆ. ಉದ್ಯಮಬಾಗ ಪೊಲೀಸ್ ಠಾಣಾ ವ್ಯಾಪ್ತಿಯ ಕಾಲೇಜೊಂದರ ಬಳಿ ಆರೋಪಿಯನ್ನು ಸೆರೆ ಹಿಡಿಯಲಾಗಿದೆ. ಭೋಲು ಪ್ರಜಾಪತಿ ಎಂಬಾತ ಸ್ನ್ಯಾಕ್ಸ್ ಪ್ಯಾಕೆಟ್‌ಗಳಲ್ಲಿ ಗಾಂಜಾ ತುಂಬಿಸಿ ಚಾಕ್ಲೆಟ್ ರೂಪದಲ್ಲಿ ಮಾರಾಟ ಮಾಡುತ್ತಿದ್ದ
ಸಮಾಜದಲ್ಲಿರುವ ಅಸಮಾನತೆ ನಿವಾರಣೆ ಜವಾಬ್ದಾರಿ ಪತ್ರಕರ್ತರಿಗೂ ಇದೆ: ಮಾಜಿ ಸಿಎಂ ಸಿದ್ದರಾಮಯ್ಯ
ಪತ್ರಿಕೆಗಳು ನಿಷ್ಪಕ್ಷಪಾತವಾಗಿ ನೈಜ ವಿಷಯಗಳನ್ನು ಜನರ ಎದುರು ಇಡಬೇಕು. ಅಸಮಾನತೆ ಹೋಗಲಾಡಿಸುವುದು ನಮ್ಮಂತಹ ರಾಜಕಾರಣಿಗಳ ಹಾಗೂ ಪತ್ರಕರ್ತರ ಜವಾಬ್ದಾರಿಯಾಗಿದೆ. ಅಸಮಾನತೆ ಮುಂದುವರಿದರೆ ಸಮಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಸಂವಿಧಾನ ಬಂದು ಈಗಾಗಲೇ 76 ವರ್ಷಗಳೇ ಆಗಿದೆ.ಸಮಾಜದಲ್ಲಿ ಪ್ರಭಾವಿಗಳು, ಪ್ರಭಾವ ಉಳ್ಳದವರು, ಧ್ವನಿಯಿರುವವರು, ಧ್ವನಿ
ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಮುಖ್ಯಮಂತ್ರಿ ಭರವಸೆ
ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ




