Wednesday, September 30, 2026
Menu

ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಸ್ಥಾನ ಸಿಗಲಿದೆ: ಮುಖ್ಯಮಂತ್ರಿ ಭರವಸೆ

ನಮ್ಮ ಸಚಿವ ಸಂಪುಟದಲ್ಲಿ ಮಹಿಳೆಗೆ ಸ್ಥಾನ ಇದ್ದೇ ಇರುತ್ತದೆ. ನಾವು ಮಹಿಳೆಯರಿಗೆ ಹೆಚ್ಚು ಶಕ್ತಿ ನೀಡುತ್ತೇವೆ ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ. ವಿಧಾನಸೌಧ ಆವರಣದಲ್ಲಿ ಎಸ್ ನಿಜಲಿಂಗಪ್ಪ ಅವರ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ  ಮಹಿಳಾ ಮೀಸಲಾತಿ ಮಸೂದೆ ಬಗ್ಗೆ ಚರ್ಚೆ ಮಾಡಿದ್ದಕ್ಕೆ ಕಿರಣ್ ರಿಜಿಜು ಅವರು ಕರ್ನಾಟಕ ಸಚಿವ ಸಂಪುಟದಲ್ಲಿ ಮಹಿಳೆಯರಿಲ್ಲ ಎಂಬ ಹೇಳಿಕೆ

ಬೆಂಗಳೂರಿನ ಸ್ಟಾರ್‌ ಹೋಟೆಲ್‌ಗಳಲ್ಲಿ ಅವಧಿ ಮೀರಿದ ಮಾಂಸ, ಹಾಲು, ಕೊಳೆತ ತರಕಾರಿ, ಅನೈರ್ಮಲ್ಯ

ಬೆಂಗಳೂರಿನಲ್ಲಿ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ನಡೆಸಿದ ವಿಶೇಷ ತಪಾಸಣೆ ವೇಳೆ ಹಲವು ಆಹಾರ ಸುರಕ್ಷತಾ ನಿಯಮಗಳ ಉಲ್ಲಂಘನೆ ಪತ್ತೆಯಾಗಿದ್ದು, ಬೆಂಗಳೂರಿನ ಹಲವು ತ್ರಿ-ಸ್ಟಾರ್ ಮತ್ತು ಫೈವ್‌ ಸ್ಟಾರ್ ಹೋಟೆಲ್‌ಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ.

ಬೇಡಿಕೆ ಈಡೇರಿಸಲು ಸಚಿವ ಅಜಯ್‌ ಸಿಂಗ್‌ಗೆ ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಮನವಿ

ಕರ್ನಾಟಕ ಸರ್ಕಾರದ ಸಚಿವರು ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಅಜಯ್ ಧರ್ಮಸಿಂಗ್‌   ಹಟ್ಟಿ ಚಿನ್ನದ ಗಣಿ ಕಂಪನಿಗೆ ಭೇಟಿ ನೀಡಿದ್ದು,  ಹಟ್ಟಿ ಚಿನ್ನದ ಗಣಿ ಸಿಬ್ಬಂದಿ ಹಾಗೂ ಕಾರ್ಮಿಕ ಸಂಘದವರು  ಬೇಡಿಕೆಗಳ ಕುರಿತು ಮನವಿ ಸಲ್ಲಿಸಿದರು. ಮೆಡಿಕಲ್ ಅನ್‌ಫಿಟ್

ಮೂಡಿಗೆರೆಯಲ್ಲಿ ನಿಂತಿದ್ದ ಲಾರಿಗೆ ಕಾರು ಡಿಕ್ಕಿ: ಮೂವರು ಯುವಕರ ಸಾವು

ಚಿಕ್ಕಮಗಳೂರಿನ ಮೂಡಿಗೆರೆ ತಾಲೂಕಿನ ಕೊಟ್ಟಿಗೆಹಾರ ಬಳಿ ರಸ್ತೆ ಬದಿ ನಿಲ್ಲಿಸಲಾಗಿದ್ದ ಲಾರಿಗೆ ಕಾರು ಡಿಕ್ಕಿ ಹೊಡೆದು ಕಾರಿನಲ್ಲಿದ್ದ ಐವರಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗುರುಕಿರಣ್ (28), ಮೋಹನ್ (30), ಜ್ಞಾನೇಶ್ (28) ಮೃತಪಟ್ಟ ಯುವಕರು,

ಬೆಂಗಳೂರಿನಲ್ಲಿ ಅಕ್ರಮ ಬಾಂಗ್ಲಾ ವಲಸಿಗರ ಪತ್ತೆ ಕಾರ್ಯಾಚರಣೆ

ಬೆಂಗಳೂರಿನ ವೈಟ್‌ಫೀಲ್ಡ್ ವಿಭಾಗದ ಆರು ಪೊಲೀಸ್ ಠಾಣೆಗಳ ವ್ಯಾಪ್ತಿಯಲ್ಲಿ ಏಕಕಾಲದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾದೇಶಿಗಳ ಪತ್ತೆ ಕಾರ್ಯಾಚರಣೆ ನಡೆಸಲಾಗಿದ್ದು, 30 ಸ್ಥಳಗಳಲ್ಲಿ ಪೊಲೀಸರು  ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ವರ್ತೂರು ಸೇರಿದಂತೆ ವಿವಿಧ ಪ್ರದೇಶಗಳಲ್ಲಿರುವ ಶೆಡ್‌ಗಳು ಹಾಗೂ ಕಾರ್ಮಿಕರು ವಾಸಿಸುವ ಪ್ರದೇಶಗಳಲ್ಲಿ

ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಹಾಸ್ಟೆಲ್‌ನಲ್ಲಿ ಸುಸೈಡ್‌

ಬೆಂಗಳೂರು ನಗರದ ಹಾಸ್ಟೆಲ್‌ವೊಂದರಲ್ಲಿ ಬಿಟೆಕ್‌ ವಿದ್ಯಾರ್ಥಿ ಡೆತ್‌ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚಿಕ್ಕಬಳ್ಳಾಪುರದ ರಕ್ಷನ್ (19) ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಆ.6 ರಂದು ಹಾಸ್ಟೆಲ್‌ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ನಾನು ಒಳ್ಳೆ ಮಗನಾಗಲಿಲ್ಲ ಎಂದು ಡೆತ್‌ನೋಟ್ ಬರೆದಿಟ್ಟಿದ್ದಾನೆ.  ರಕ್ಷನ್ ಮೃತದೇಹವನ್ನು ಪೊಲೀಸರು ಪೋಷಕರಿಗೆ

ಮೀಸಲಾತಿ ಭಿಕ್ಷೆಯಲ್ಲ, ಅದು ಶೋಷಿತರ ಹಕ್ಕು: ಸಾಮಾಜಿಕ ನ್ಯಾಯ ದಿನಾಚರಣೆಯಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ

ಸಮಾಜದಲ್ಲಿ ಅಸಮಾನತೆ, ಜಾತಿ ವ್ಯವಸ್ಥೆ ಇರುವವರೆಗೆ ಸಮ ಸಮಾಜ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಪ್ರತಿಯೊಬ್ಬರಿಗೂ ಕೂಡ ಸಾಮಾಜಿಕ, ಆರ್ಥಿಕ ಮತ್ತು ರಾಜಕೀಯ ನ್ಯಾಯ ಸಿಗಲೇಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ  ಪ್ರತಿಪಾದಿಸಿದರು. ಇಂದು ಅವರು ಲೋಹಿಯಾ ಸಮತಾ ವಿದ್ಯಾಲಯ, ಕರ್ನಾಟಕ ರಾಜ್ಯ

ಹೆಸರಘಟ್ಟದಲ್ಲಿ ಭಾರತದ ಮೊದಲ ಕ್ವಾಂಟಮ್ ಸಿಟಿ: ಸಿಎಂ ಡಿಕೆ ಶಿವಕುಮಾರ್

ಕರ್ನಾಟಕ ಕ್ವಾಂಟಮ್ ಮಿಷನ್ ಬೆಂಬಲದೊಂದಿಗೆ ಬೆಂಗಳೂರು ಈಗಾಗಲೇ ನವೋದ್ಯಮ ಮತ್ತು ಜಾಗತಿಕ ತಂತ್ರಜ್ಞಾನ ಕಂಪನಿಗಳ ಬೆಳವಣಿಗೆಗೆ ಪೂರಕ ಪರಿಸರ ವ್ಯವಸ್ಥೆಯನ್ನು ಹೊಂದಿದ್ದು, ಹೆಸರಘಟ್ಟದಲ್ಲಿ ಭಾರತದ ಮೊದಲ ‘ಕ್ವಾಂಟಮ್ ಸಿಟಿ’ ನಿರ್ಮಾಣ ಮಾಡಲಾಗುತ್ತಿದೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನ ಸೈನ್ಸ್

ವಿಧಾನ ಪರಿಷತ್‌ ಸಭಾಪತಿಯಿಂದ ಬಲವಂತದ ರಾಜೀನಾಮೆ ಪಡೆದ ಗೂಂಡಾ ಸರ್ಕಾರ: ಆರ್‌ ಅಶೋಕ

ವಿಧಾನಪರಿಷತ್‌ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿ ಅವರ ಕಚೇರಿಗೆ ಕಾಂಗ್ರೆಸ್‌ ನಾಯಕರು ನುಗ್ಗಿ ಬಲವಂತವಾಗಿ ರಾಜೀನಾಮೆ ಪಡೆದಿರುವುದು ಇಡೀ ಸದನಕ್ಕೆ ಆಗಿರುವ ಅಪಮಾನವಾಗಿದೆ. ಇದು ಗೂಂಡಾಗಿರಿ ಮಾಡುವ ಸರ್ಕಾರ ಎಂದು ಈ ಘಟನೆಯಿಂದ ಸಾಬೀತಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಹೇಳಿದರು.

ಡಿಜಿಟಲ್ ಅರೆಸ್ಟ್ ಪಿಡುಗಿಗೆ ಆರ್‌ಬಿಐ ಸರ್ಜರಿ

ಈಗ ಎಲ್ಲ ಕಡೆ ಡಿಜಿಟಲರ್ ಅರೆಸ್ಟ್ ದೂರುಗಳು ಕೇಳಿಬರುತ್ತಿದೆ. ಇದಕ್ಕೆ ಸೂಕ್ತ ಕಾನೂನು ಅಗತ್ಯ. ದೇಶಾದ್ಯಂತ ಡಿಜಿಟಲ್ ಅರೆಸ್ಟ್ ಮೂಲಕ ಸಾವಿರಾರು ಜನ ಹಣ ಕಳೆದುಕೊಳ್ಳುತ್ತಿದ್ದು ಒಂದು ತಿಂಗಳಲ್ಲಿ ಆರ್‌ಬಿಐ ಮಾರ್ಗದರ್ಶಿ ಸೂತ್ರಗಳನ್ನು ರೂಪಿಸಿ ಎಲ್ಲ ಬ್ಯಾಂಕ್‌ಗಳು ಮತ್ತು ನ್ಯಾಯಾಂಗ ಹಾಗೂ