kannada news
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳಿಗೆ ಭೂಸ್ವಾಧೀನ: ಡಿಕೆ ಶಿವಕುಮಾರ್
ಅನುದಾನ ಲಭ್ಯತೆ ಅನುಸಾರ ಯಗಚಿ ಎಡದಂಡೆ ನಾಲೆಗಳ ಭೂಸ್ವಾಧೀನ ಪ್ರಕ್ರಿಯೆಯನ್ನು ಹಂತ ಹಂತವಾಗಿ ಮಾಡಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸಭೆ ಗಮನ ಸೆಳೆವ ಸೂಚನೆ ವೇಳೆ ಬಿಜೆಪಿ ಶಾಸಕರಾದ ಸಿಮೆಂಟ್ ಮಂಜು ಅವರು ಯಗಚಿ ಜಲಾಶಯದ ಎಡದಂಡೆ ನಾಲೆಗಳ ಲ್ಯಾಟರಲ್, ಮೈನರ್ ಗಳು ಹಾಗೂ ಮೊಸಳೆ ಶಾಖಾ ನಾಲೆಯ ಭೂಸ್ವಾಧೀನ ಕೈಗೊಳ್ಳದಿರುವ ಬಗ್ಗೆ ಪ್ರಸ್ತಾಪ ಮಾಡಿದಾಗ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಉತ್ತರ ನೀಡಿದರು. ಬೇಲೂರು, ಹಾಸನ,
ನಾನು ಸಿಎಂ ಪರ, ಅವರು ನನ್ನ ಪರ, ಅವರ ಕಷ್ಟಕಾಲದಲ್ಲಿ ನಾನು ನಿಂತಿದ್ದೇನೆ, ನನ್ನ ಕಷ್ಟ ಕಾಲದಲ್ಲಿ ಅವರೂ ಜತೆ ನಿಲ್ಲಲಿದ್ದಾರೆ: ಡಿಸಿಎಂ
ಸಿಎಂ ಸಿದ್ದರಾಮಯ್ಯ ಸೇರಿದಂತೆ 139 ಶಾಸಕರೂ ನನ್ನ ಬಲ. ಸಿದ್ದರಾಮಯ್ಯ 100 % ನನ್ನ ಜತೆಗಿದ್ದಾರೆ. ಇದರಲ್ಲಿ ಬೇರೆ ಪ್ರಶ್ನೆಯೇ ಇಲ್ಲ. ರಾಜಕೀಯದಲ್ಲಿ ಎಲ್ಲವೂ ಸಾಧ್ಯ. ರಾಜಕೀಯ ಎಂಬುದು ಸಾಧ್ಯತೆಗಳ ಕಲೆ. One man with Courage makes a majority
ಅಕ್ರಮ ಬಾಂಗ್ಲಾ ದೇಶಿಗಳಿಗೆ ಮನೆ ನೀಡುವುದಿಲ್ಲ, ರಾಜ್ಯದಿಂದ ಹೊರಗೆ ಕಳಿಸಲಾಗುವುದು: ಸಿಎಂ
ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ದೇಶೀಯವರಿಗೆ ಮನೆಗಳನ್ನು ನೀಡುವುದಿಲ್ಲ ಹಾಗೂ ಅವರನ್ನು ರಾಜ್ಯದಿಂದ ಹೊರಗೆ ಕಳಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲೆ ವಿಧಾನಸಭೆಯಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಸಿಎಂ ಈ ವಿಚಾರ ಸ್ಪಷ್ಟಪಡಿಸಿದ್ದಾರೆ. ಪದ್ಮಶ್ರೀ ವಿಜೇತ ಮಾಜಿ
ಬೆಂಗಳೂರಿನಲ್ಲಿ ಯುವಕನ ಅಡ್ಡಗಟ್ಟಿ ಬೈಕ್ ಸಮೇತ ಹಣ ದರೋಡೆ
ಬನ್ನೇರುಘಟ್ಟ ಪೊಲೀಸ್ ಠಾಣಾ ವ್ಯಾಪ್ತಿಯ ಸಕಲವಾರ ರಸ್ತೆಯಲ್ಲಿ ಯುವಕನನ್ನು ಅಡ್ಡಗಟ್ಟಿ ಬೈಕ್ ಸಂಏತ ಹಣ ದರೋಡೆ ಮಾಡಿರುವ ಘಟನೆ ನಡೆದಿದೆ. ಭಾನುವಾರ ಸಂಜೆ ಲಾಂಗ್‌ನಿಂದ ಹಲ್ಲೆ ನಡೆಸಿ ಯುವಕನ ಬೈಕ್ ಜೊತೆ 31 ಲಕ್ಷದ 38 ಸಾವಿರ ರೂ. ದರೋಡೆ ಮಾಡಲಾಗಿದೆ.
ಟಿಬೆಟ್ ಬೌದ್ಧ ಧರ್ಮಗುರು ದಲೈ ಲಾಮಾಗೆ ಗ್ರ್ಯಾಮಿ ಪ್ರಶಸ್ತಿ
ಜಾಗತಿಕ ಶಾಂತಿ ದೂತ ಎಂದು ಹೆಸರಾಗಿರುವ ಟಿಬೆಟ್‌ನ ಬೌದ್ಧ ಧರ್ಮಗುರು ದಲೈ ಲಾಮಾ ಅವರು 90ನೇ ವಯಸ್ಸಿನಲ್ಲಿ ಜಗತ್ತಿನ ಅತ್ಯಂತ ಪ್ರತಿಷ್ಠಿತ ಸಂಗೀತ ಪ್ರಶಸ್ತಿಗಳಲ್ಲಿ ಒಂದಾದ ಗ್ರ್ಯಾಮಿ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಅಮೆರಿಕದ ಕ್ಯಾಲಿಫೋರ್ನಿಯಾದಲ್ಲಿ ‘ದಿ ರೆಕಾರ್ಡಿಂಗ್ ಅಕಾಡೆಮಿ’ ಆಯೋಜಿಸಿದ್ದ 68ನೇ ಗ್ರ್ಯಾಮಿ
ಸಿ.ಜೆ. ರಾಯ್ ಆತ್ಮಹತ್ಯೆ: ಪಿಣರಾಯಿ ವಿಜಯನ್ ನ್ಯಾಯಾಂಗ ತನಿಖೆಗೆ ಆಗ್ರಹ
ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣದ ನ್ಯಾಯಾಂಗ ತನಿಖೆಗೆ ಆಗ್ರಹಿಸಿ ಹಣಕಾಸು ಸಚಿವೆ ನಿರ್ಮಲಾ ಸೀತಾ ರಾಮನ್‌ಗೆ ಪತ್ರ ಬರೆದಿದ್ದಾರೆ. ಈ ಘಟನೆ ದೇಶದ ತೆರಿಗೆ ಆಡಳಿತದ ಮೇಲೆ ಕಪ್ಪು ಚುಕ್ಕೆಯಾಗಿದ್ದು,
ನಾವು ರಾಜ್ಯಪಾಲರ ವಿರುದ್ಧ ಇಲ್ಲ, ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ನಾವು ರಾಜ್ಯಪಾಲರ ವಿರುದ್ಧ ಇಲ್ಲ. ಕೇಂದ್ರ ಸರ್ಕಾರದ ವಿರುದ್ಧ ಇದ್ದೇವೆ.ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ “ಜೈ ಸಂವಿಧಾನ” ಎನ್ನುವುದನ್ನೂ ಉಲ್ಲೇಖಿಸದೆ, ಓದದೆ ಹೋದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ರಾಮನಗರ ಮಣ್ಣನ್ನು ಬಿಟ್ಟು ನಾನು ಎಲ್ಲಿಗೂ ಹೋಗುವುದಿಲ್ಲ: ನಿಖಿಲ್ ಕುಮಾರಸ್ವಾಮಿ
ರಾಮನಗರ ನಮ್ಮ ತಂದೆಯ ಕರ್ಮಭೂಮಿ ಮತ್ತು ನಮ್ಮ ತಾತನಿಗೆ ರಾಜಕೀಯ ಮರುಜನ್ಮ ನೀಡಿದ ಪುಣ್ಯಭೂಮಿ, ಹಾಗಾಗಿ ಆ ಮಣ್ಣನ್ನು ಬಿಟ್ಟು ಎಲ್ಲಿಗೂ ಹೋಗುವುದಿಲ್ಲ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ರಾಮನಗರ
ಪೆನ್ನಾರ್ ನದಿ ನೀರು ವಿವಾದ: ನ್ಯಾಯಮಂಡಳಿ ರಚನೆಗೆ ಸುಪ್ರೀಂ ಆದೇಶ
ಕರ್ನಾಟಕ ಹಾಗೂ ತಮಿಳುನಾಡು ನಡುವೆ ಪೆನ್ನಾರ್ ನದಿ ನೀರು ಹಂಚಿಕೆ ವಿವಾದ ಬಗೆಹರಿಸಲು ನ್ಯಾಯಮಂಡಳಿ ರಚಿಸುವಂತೆ ಸುಪ್ರೀಂ ಕೋರ್ಟ್ ಆದೇಶ ಪ್ರಕಟಿಸಿದೆ. ತಮಿಳುನಾಡು ಸರ್ಕಾರ ಸಲ್ಲಿಸಿದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿಗಳಾದ ವಿಕ್ರಮ್‌ನಾಥ್ ಹಾಗೂ ಎನ್.ವಿ.ಅಂಜಾರಿಯಾ ಅವರನ್ನೊಳಗೊಂಡ ಸುಪ್ರೀಂಕೋರ್ಟ್‌ನ ಪೀಠವು ವಿವಾದ
ಕನಕಪುರದಲ್ಲಿ ಅಡುಗೆ ಅನಿಲ ಸೋರಿಕೆ: ಗಾಯಗೊಂಡಿದ್ದ ಕುಟುಂಬದ ಸಾವು
ಕನಕಪುರ ಟೌನ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅನಿಲ ಸೋರಿಕೆಯಾಗಿ ಸಂಭವಿಸಿದ್ದ ಅಗ್ನಿ ಆಕಸ್ಮಿಕದಲ್ಲಿ ಗಾಯಗೊಂಡಿದ್ದ ಒಂದೇ ಕುಟುಂಬದ ಮೂವರು ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ. ತಂದೆ ಸಿದ್ದರಾಜು (55), ತಾಯಿ ಚಂದ್ರಮ್ಮ (50), ಮಗ ಪ್ರಶಾಂತ್ (22) ಮೃತಪಟ್ಟವರು ಎಂದು ಗುರುತಿಸಲಾಗಿದೆ. ಕನಕಪುರ




