kannada news
ಕೇರಳದಲ್ಲಿ ಅಧಿಕಾರ ನಿರೀಕ್ಷಿತ , ತಮಿಳುನಾಡಲ್ಲಿ ಅಚ್ಚರಿ ಫಲಿತಾಂಶ: ಡಿಕೆ ಶಿವಕುಮಾರ್
“ಕರ್ನಾಟಕದಲ್ಲಿ ಗ್ಯಾರಂಟಿ ಯೋಜನೆಗಳು ನಮ್ಮ ಕೈ ಹಿಡಿದಿವೆ. ಜನರ ಕಷ್ಟಕ್ಕೆ ನಮ್ಮ ಸರ್ಕಾರ ಸ್ಪಂದಿಸಿದೆ. ಹೀಗಾಗಿ ಕರ್ನಾಟಕ ಉಪಚುನಾವಣೆಗಳಲ್ಲಿ ಉತ್ತಮ ಫಲಿತಾಂಶ ಬಂದಿದೆ. ಬೇರೆ ರಾಜ್ಯಗಳ ಪೈಕಿ ಕೇರಳದಲ್ಲಿ ಅಧಿಕಾರಕ್ಕೆ ಬರುತ್ತೇವೆ ಎನ್ನುವ ವಿಶ್ವಾಸವಿತ್ತು” ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ರಾಜ್ಯದ ಉಪಚುನಾವಣೆ, ಪಂಚ ರಾಜ್ಯಗಳ ಚುನಾವಣಾ ಫಲಿತಾಂಶದ ಕುರಿತು ಮಾಧ್ಯಮಗಳ ಜೊತೆ ಶಿವಕುಮಾರ್ ಮಾತನಾಡಿದರು. ದಾವಣಗೆರೆ ದಕ್ಷಿಣದಲ್ಲಿ ಗೆಲುವಿನ ಅಂತರ 25-30 ಸಾವಿರಕ್ಕಿಂತ ಕಡಿಮೆ ಆಗಿರುವ ಬಗ್ಗೆ ಕೇಳಿದಾಗ,
ಪಂಚರಾಜ್ಯ ಚುನಾವಣೆ ಫಲಿತಾಂಶ: ಕೇರಳದಲ್ಲಿ ಯುಡಿಎಫ್, ಬಂಗಾಳದಲ್ಲಿ ಬಿಜೆಪಿ, ತಮಿಳ್ನಾಡಲ್ಲಿ ಟಿವಿಕೆ ಜಯಭೇರಿ
ಪಶ್ಚಿಮ ಬಂಗಾಳ, ಕೇರಳ, ತಮಿಳ್ನಾಡು, ಅಸ್ಸಾಂ, ಪುದುಚೇರಿಗಳಲ್ಲಿ ನಡೆದ ವಿಧಾನಸಭೆ ಚುನಾವಣೆಗಳ ಫಲಿತಾಂಶ ಪ್ರಕಟವಾಗಿದೆ. ಕೇರಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಮತ ಎಣಿಕೆ ಪ್ರಕ್ರಿಯೆಯಲ್ಲಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ (ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್) ಅತಿ ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ. 140 ಸದಸ್ಯರ ಬಲವನ್ನು
ಬಾಗಲಕೋಟೆ ಉಪಚುನಾವಣೆ: ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು
ಹೆಚ್.ವೈ. ಮೇಟಿ ನಿಧನದಿಂದ ತೆರವಾಗಿದ್ದ ಬಾಗಲಕೋಟೆ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್‌ನ ಉಮೇಶ್ ಮೇಟಿ ಗೆಲುವು ಸಾಧಿಸಿದ್ದಾರೆ. ಈ ಕ್ಷೇತ್ರವನ್ನು ಮರಳಿ ಕಾಂಗ್ರೆಸ್ ತೆಕ್ಕೆಗೆ ಪಡೆದುಕೊಂಡಿದೆ. ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಸೋಲು ಕಂಡಿದ್ದಾರೆ. ಮೇಟಿ ನಿಧನದ ಹಿನ್ನೆಲೆ ಅವರ ಕುಟುಂಬಕ್ಕೇ
ಕೆಸಿ ರೆಡ್ಡಿ ಸಮರ್ಥ, ಪ್ರಾಮಾಣಿಕ ಆಡಳಿತಗಾರ: ಸಿಎಂ ಸಿದ್ದರಾಮಯ್ಯ
ಮಾಜಿ ಮುಖ್ಯಮಂತ್ರಿ ದಿವಂಗತ ಕೆ.ಸಿ ರೆಡ್ಡಿಯವರು ಒಬ್ಬ ಸಮರ್ಥ, ಪ್ರಾಮಾಣಿಕ ಆಡಳಿತಗಾರಾಗಿದ್ದು ಸಾರ್ವಜನಿಕ ಜೀವನದಲ್ಲಿ ಅತ್ಯಂತ ಪ್ರಾಮಾಣಿಕತೆಯಿಂದ ನಡೆದುಕೊಂಡವರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಮರಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಶ್ರೀ ದಿವಂಗತ ಕೆ.ಸಿ. ರೆಡ್ಡಿ ಯವರ ಜನ್ಮ ದಿನದ ಅಂಗವಾಗಿ ವಿಧಾನಸೌಧದ ಪಶ್ಚಿಮ
ಶಾಸಕ ಬೈರತಿ ಬಸವರಾಜ್ ಬೆಂಬಲಿಗರಿಂದ ಹಲ್ಲೆ, ಬೆದರಿಕೆ: ಎಎಪಿ ನಾಯಕಿ ದೂರು
ಕೆಆರ್ ಪುರಂ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರಿಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಬಿಕ್ಲು ಶಿವು ಕೊಲೆ ಪ್ರಕರಣದ ಆರೋಪಿಯಾಗಿ ಜೈಲು ಸೇರಿ ಜಾಮೀನಿನಲ್ಲಿ ಹೊರ ಬಂದಿರುವ ಅವರ ಬೆಂಬಲಿಗರು ತನ್ನ ಮೇಲೆ ಹಲ್ಲೆ ಮಾಡಿದ್ದಾರೆಂದು ಆಪ್ ನಾಯಕಿ ಸತ್ಯವಾಣಿ ದೂರು
ಮೇ 9 ರವರೆಗೆ ರಾಜ್ಯದ ಹಲವೆಡೆ ಮಳೆ
ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮೇ 9 ರವರೆಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಬಿರುಗಾಳಿ ಗುಡುಗು ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ ಹಾಗೂ ಉಡುಪಿ
ಶೃಂಗೇರಿ ವಿಧಾನಸಭೆ ಕ್ಷೇತ್ರ: ಬಿಜೆಪಿಯ ಡಿ.ಎನ್.ಜೀವರಾಜ್ ಗೆಲುವು
ಶೃಂಗೇರಿಯ ಅಂಚೆ ಮತಗಳ ಮರು ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಡಿ.ಎನ್.ಜೀವರಾಜ್ ಗೆಲುವು ಸಾಧಿಸಿದ್ದಾರೆ. ಚುನಾವಣಾ ಅಧಿಕಾರಿ ಗೌರವ ಕುಮಾರ್ ಶೆಟ್ಟಿ ಅಧಿಕೃತವಾಗಿ ಫಲಿತಾಂಶವನ್ನು ಪ್ರಕಟಿಸಿದ್ದಾರೆ. ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು
ಶೃಂಗೇರಿ ವಿಧಾನಸಭಾ ಕ್ಷೇತ್ರ ಚುನಾವಣಾ ಫಲಿತಾಂಶ ಕೂಡಲೇ ಪ್ರಕಟಿಸಿ: ಆರ್ ಅಶೋಕ
ಶೃಂಗೇರಿ ವಿಧಾನಸಭಾ ಕ್ಷೇತ್ರದ ಚುನಾವಣಾ ಫಲಿತಾಂಶವನ್ನು ಚುನಾವಣಾಧಿಕಾರಿ ಪ್ರಕಟಿಸದಂತೆ ಕಾಂಗ್ರೆಸ್ ಸರ್ಕಾರ ಒತ್ತಡ ಹೇರಿದೆ. ಚುನಾವಣಾಧಿಕಾರಿಗಳು ಕೂಡಲೇ ಫಲಿತಾಂಶ ಪ್ರಕಟಿಸಿ ಹೈಕೋರ್ಟ್ ಆದೇಶ ಪಾಲಿಸಬೇಕು ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಆಗ್ರಹಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಶೃಂಗೇರಿ ವಿಧಾನಸಭಾ ಕ್ಷೇತ್ರದಲ್ಲಿ
ಪೂಜೆ ನೆಪದಲ್ಲಿ ಮಹಿಳೆ ಮೇಲೆ ಅತ್ಯಾಚಾರಗೈದ ಜ್ಯೋತಿಷಿ
ಬೆಂಗಳೂರಿನಲ್ಲಿ ಪೂಜೆ, ಮಾಟ, ಮಂತ್ರ ನೆಪದಲ್ಲಿ ಜ್ಯೋತಿಷಿಯೊಬ್ಬ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾನೆ. ರಾಜಾಜಿನಗರದಲ್ಲಿ ಬ್ಯೂಟಿಷಿಯನ್ ಟ್ರೈನಿಂಗ್ ಸೆಂಟರ್ ನಡೆಸುತ್ತಿರುವ ಮಹಿಳೆಯುಇ ಜ್ಯೋತಿಷಿ ವಿರುದ್ಧ ಸಿ.ಕೆ ಅಚ್ಚುಕಟ್ಟು ಠಾಣೆಗೆ ದೂರು ನೀಡಿದ್ದಾರೆ. ಪೊಲೀಸರು ಪ್ರಕರಣ ದಾಖಲಿಸುತ್ತಿದ್ದಂತೆಯೇ ಜ್ಯೋತಿಷಿ ಮೋಹನ ಕುಮಾರು ಪರಾರಿಯಾಗಿದ್ದಾನೆ.
ಅಮೆರಿಕ ನಂಬಿಕೆಗೆ ಯೋಗ್ಯವಲ್ಲ: ಇರಾನ್
ಕದನ ವಿರಾಮ ಘೋಷಣೆಯಾಗಿದ್ದರೂ ಅಮೆರಿಕ ನಂಬಿಕೆಗೆ ಯೋಗ್ಯವಲ್ಲ ಎಂದು ಇರಾನ್ ಹೇಳಿದೆ. ಇರಾನ್ ಮತ್ತು ಅಮೆರಿಕ ನಡುವೆ ಉದ್ವಿಗ್ನತೆ ಹೆಚ್ಚಾಗಿದ್ದು, ಪರಿಸ್ಥಿತಿ ಮತ್ತೆ ಉಲ್ಬಣಗೊಳ್ಳಬಹುದು. ಅಮೆರಿಕ ಮತ್ತು ಇಸ್ರೇಲ್ ಜೊತೆ ಯುದ್ಧ ಮತ್ತೆ ಆರಂಭವಾಗಬಹುದು. ಅಮೆರಿಕ ಯಾವುದೇ ಒಪ್ಪಂದಗಳನ್ನು ಸರಿಯಾಗಿ ಪಾಲಿಸುತ್ತಿಲ್ಲ




