Thursday, January 01, 2026
Menu

ಸೈಟ್ ತೋರಿಸುವುದಾಗಿ ನಂಬಿಸಿ ಮಾಲೀಕನಿಗೆ ಚಾಕು ಇರಿದು ಚಿನ್ನ ದೋಚಿದ ನೌಕರ!

ಬೆಂಗಳೂರು: ಚಿನ್ನದಾಸೆಗೆ ಮಾಲೀಕನಿಗೆ ನಡುರಸ್ತೆಯಲ್ಲಿ ಚಾಕುವಿನಿಂದ ಇರಿದ ಕೆಲಸಗಾರ ಚಿನ್ನದ ಸರ​ ದೋಚಿಕೊಂಡು ಪರಾರಿಯಾಗಿರುವ ಘಟನೆ ಬೆಂಗಳೂರು ಹೊರವಲಯದ ಕುಂಬಳಗೋಡು ಪೊಲೀಸ್​ ಠಾಣೆ ವ್ಯಾಪ್ತಿಯ ಸೂಲಿಕೆರೆ ಬಳಿ ನಡೆದಿದೆ. ಕಡಿಮೆ ಬೆಲೆಗೆ ನಿವೇಶನಗಳು ಮಾರಾಟಕ್ಕಿದ್ದು, ಅವುಗಳನ್ನು ತೋರಿಸುವುದಾಗಿ ಕಾರ್ಖಾನೆ ಮಾಲೀಕನನ್ನು ನಂಬಿಸಿ ಕರೆದುಕೊಂಡು ಹೋಗಿದ್ದ ಆರೋಪಿ ಈ ಕೃತ್ಯ ಎಸೆಗಿದ್ದಾನೆ. ಗಣೇಶ ಮೂರ್ತಿ ತಯಾರಿಸುವ ಕಾರ್ಖಾನೆ ಮಾಲೀಕ ಅಮರ್ ನಾರಾಯಣಸ್ವಾಮಿ ಗಾಯಗೊಂಡವರು. ಜಯಂತ್ (23) ಹಲ್ಲೆ ನಡೆಸಿ ಪರಾರಿಯಾದ ಆರೋಪಿ.

ಬೆಂಗಳೂರು ಹಾಸ್ಟೇಲ್ ಗಳಿಗೆ ಲೋಕಾಯುಕ್ತ ದಿಢೀರ್ ಭೇಟಿ: ಅವ್ಯವಸ್ಥೆ ಕಂಡು ಗರಂ

ಸಾಲು ಸಾಲು ದೂರು ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿರುವ ಹಾಸ್ಟೆಲ್‌ಗಳಿಗೆ ಲೋಕಾಯುಕ್ತ ಮತ್ತು ಉಪಲೋಕಾಯುಕ್ತರು ಗುರುವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನಗರದ ಎಂಜಿ ರಸ್ತೆಯಲ್ಲಿರುವ ಸರ್ಕಾರಿ ವಿಜ್ಞಾನ ಕಾಲೇಜು ಬಾಲಕರ ಹಾಸ್ಟೆಲ್‌ಗೆ ಲೋಕಾಯುಕ್ತ ನ್ಯಾಯಮೂರ್ತಿ ಬಿ.ಎಸ್. ಪಾಟೀಲ್ ಅವರು ಅನಿರೀಕ್ಷಿತ ಭೇಟಿ

32 ಕಾರುಗಳ ಸರಣಿ ಸ್ಫೋಟಕ್ಕೆ ಸಂಚು ರೂಪಿಸಿದ್ದ ಉಗ್ರರು: ವರದಿ

ನವದೆಹಲಿ: ಕೆಂಪುಕೋಟೆಯಲ್ಲಿ ಕಾರು ಸ್ಫೋಟ ಪ್ರಕರಣದ ಉಗ್ರರು 32 ಕಾರುಗಳನ್ನು ಸ್ಫೋಟಗೊಳಿಸಲು ಸಂಚು ರೂಪಿಸಿದ್ದರು ಎಂಬ ಆಘಾತಕಾರಿ ವಿಷಯ ಬೆಳಕಿಗೆ ಬಂದಿದೆ. ಡಿಸೆಂಬರ್ 6ರಂದು ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸೇಡು ತೀರಿಸಿಕೊಳ್ಳಲು 16ನೇ ವರ್ಷಾಚರಣೆ ದಿನ ಸರಣಿ ಕಾರು ಸ್ಫೋಟ

ಮೈಸೂರಿನಲ್ಲಿ ಮತ್ತೊಂದು ಹುಲಿ ಹೆಜ್ಜೆ ಗುರುತು ನೋಡಿ ಬೆಚ್ಚಿದ ಜನ!

ನರಭಕ್ಷಕ ಹುಲಿಯನ್ನು ಇತ್ತೀಚೆಗಷ್ಟೇ ಬಂಧಿಸಿದ ಬೆನ್ನಲ್ಲೇ ಮತ್ತೊಂದು ಹುಲಿ ಮೈಸೂರಿನ ನಾಗರಹೊಳೆ ಕಾಡಂಚಿನ ಗ್ರಾಮಗಳಲ್ಲಿ ಪ್ರತ್ಯಕ್ಷಗೊಂಡು ಜನತೆಯನ್ನು ಆತಂಕಕ್ಕೀಡು ಮಾಡಿದೆ. ಹನಗೋಡು ಹೋಬಳಿಯ ವ್ಯಾಪ್ತಿಯ ಕಾಡಂಚಿನ ಗ್ರಾಮಗಳಾದ ಹಿಂಡಗುಡ್ಲು, ಹನಗೋಡು, ಶೆಟ್ಟಹಳ್ಳಿ, ಕಚುವಿನಹಳ್ಳಿ, ದಾಸನಪುರ, ಕಲ್ಲೂರಪ್ಪನಬೆಟ್ಟ, ಕೊಳುವಿಗೆ, ನೇಗತ್ತೂರು, ಬಿ ಆರ್

ಆಸ್ತಿಗಾಗಿ ತಾಯಿಯನ್ನೇ ಕೊಂದು ಹೃದಯಾಘಾತದ ಕತೆ ಕಟ್ಟಿದ ಸಾಕು ಮಗಳು!

ಆಸ್ತಿ ಮೇಲಿನ ಆಸೆಗಾಗಿ ಸ್ವಂತ ಮಗಳಂತೆ ಪಾಲನೆ ಪೋಷಣೆ ಮಾಡಿದ್ದ ಸಾಕು ತಾಯಿಯನ್ನೇ ಕೊಲೆಗೈದಿದ್ದ ಪಾಪಿ ಸಾಕು ಮಗಳನ್ನು ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪೊಲೀಸರು ಬಂಧಿಸಿದ್ದಾರೆ. ಎನ್‌ ಆ‌ರ್ ಪುರ ತಾಲೂಕಿನ ಬಂಡಿಮಠ ಗ್ರಾಮದ ಕುಸುಮ (62) ಅವರನ್ನು ಕೊಲೆಗೈದ 35

ಕುರುಬರ ಸಂಘದ ಹಾಸ್ಟೆಲ್ ಕಟ್ಟಡ 18 ತಿಂಗಳಲ್ಲಿ ಉದ್ಘಾಟನೆ: ಸಚಿವ ಬೈರತಿ ಸುರೇಶ್

ಬೆಂಗಳೂರು: ಬೆಂಗಳೂರಿನ ಗಾಂಧಿನಗರದಲ್ಲಿ ರಾಜ್ಯ ಕುರುಬರ ಸಂಘದ ಹಾಸ್ಟೆಲ್ ನಿರ್ಮಾಣ ಕಾಮಗಾರಿ ಮುಂದಿನ 18 ತಿಂಗಳೊಳಗೆ ಪೂರ್ಣವಾಗಲಿದೆ  ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬುಧವಾರ ಕಟ್ಟಡ ನಿರ್ಮಾಣ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು,

ಕೆಂಪುಕೋಟೆಯಲ್ಲಿ ಮೃತಪಟ್ಟವರ 8 ಶವಗಳ ಗುರುತು ಪತ್ತೆ

ದೆಹಲಿಯ ಕೆಂಪುಕೋಟೆ ಬಳಿ ಸೋಮವಾರ ರಾತ್ರಿ ಕಾರು ಸ್ಫೋಟಗೊಂಡ ಪ್ರಕರಣದಲ್ಲಿ ಮೃತಪಟ್ಟವರ 8 ಶವದ ಗುರುತು ಪತ್ತೆ ಹಚ್ಚಲಾಗಿದೆ. ಮೆಟ್ರೋ ನಿಲ್ದಾಣದ ಸಮೀಪ ಸೋಮವಾರ ಸಂಜೆ ನಡೆದ ಭಾರಿ ಕಾರು ಸ್ಫೋಟದಲ್ಲಿ ಮೃತಪಟ್ಟವರ ದೇಹಗಳು ಛಿದ್ರವಿದ್ರಗೊಂಡಿದ್ದರಿಂದ ಗುರುತು ಪತ್ತೆಹಚ್ಚುವುದು ಕಷ್ಟವಾಗಿತ್ತು. ಸ್ಫೋಟದಲ್ಲಿ

ಕಾರು ಸ್ಪೋಟ ತನಿಖೆ ಎನ್​ಐಎ ಹೆಗಲಿಗೆ

ನವದೆಹಲಿ: ಕೆಂಪು ಕೋಟೆ ಮೆಟ್ರೋ ನಿಲ್ದಾಣದ ಬಳಿ ಸೋಮವಾರ ಸಂಜೆ ನಡೆದ ಕಾರು ಸ್ಫೋಟದ ತನಿಖೆಯ ಹೊಣೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್​ಐಎ)ಗೆ ವಹಿಸಲಾಗಿದೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ನಿವಾಸದಲ್ಲಿ ಮಂಗಳವಾರ ನಡೆದ ಉನ್ನತ ಮಟ್ಟದ ಭದ್ರತಾ ಪರಿಶೀಲನಾ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಉಗ್ರರು ಮೊಬೈಲ್ ಬಳಸಿದ ಪ್ರಕರಣ ಎನ್ಐಎ ತನಿಖೆಗೆ: ಆರ್.ಅಶೋಕ ಆಗ್ರಹ

ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಭಯೋತ್ಪಾದಕ ಮೊಬೈಲ್‌ ಬಳಸಿದ ಪ್ರಕರಣವನ್ನು ಎನ್‌ಐಎ ತನಿಖೆಗೆ ನೀಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನವದೆಹಲಿಯಲ್ಲಿ ನಡೆದ ಘಟನೆ ಭಯೋತ್ಪಾದನಾ ಕೃತ್ಯ ಎಂಬ ಅನುಮಾನವಿದೆ. ಇದೇ ಸಮಯದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ

ದೆಹಲಿಯಲ್ಲಿ ಸ್ಫೋಟಗೊಂಡ ಕಾರಿನ ಮಾಲೀಕ ಅರೆಸ್ಟ್: 1000 ಸಿಸಿಟಿವಿಗಳ ಪರಿಶೀಲನೆ

ದೆಹಲಿಯ ಕೆಂಪು ಕೋಟೆ ಬಳಿ ಸ್ಫೋಟಗೊಂಡ ಕಾರಿನ ಮಾಲೀಕನನ್ನು ದೆಹಲಿ ಪೊಲೀಸರು ಬಂಧಿಸಿದ್ದಾರೆ. ದೆಹಲಿಯ ಕೆಂಪುಕೋಟೆ ಬಳಿ ಸಂಭವಿಸಿದ ಕಾರು ಸ್ಫೋಟದಲ್ಲಿ ಮೃತಪಟ್ಟವರ ಸಂಖ್ಯೆ 12ಕ್ಕೆ ಏರಿಕೆಯಾಗಿದ್ದು, 35ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಸೋಮವಾರ ರಾತ್ರಿ ನಡೆದ ಈ ಘಟನೆಯಿಂದ ದೇಶವೇ