kannada news
ಹೆಚ್ ಎಂಟಿಗೆ ಮರುಜೀವ: ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ
ಮಂಡ್ಯ: ಪ್ರತಿಷ್ಠಿತ ಹೆಚ್ ಎಂಟಿ ಕಾರ್ಖಾನೆಗೆ ಮರುಜೀವ ನೀಡಲು ಸಮಗ್ರ ಯೋಜನಾ ವರದಿ (DPR) ತಯಾರು ಮಾಡಲಾಗುತ್ತಿದೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಹಾಗೂ ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದರು. ಮಂಡ್ಯದಲ್ಲಿ ಮಾಧ್ಯಮಗಳ ಜತೆ ಮಾತನಾಡುವ ಮಹತ್ವದ ಈ ಅಂಶವನ್ನು ತಿಳಿಸಿದ ಸಚಿವರು, ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದಲ್ಲಿ ಹೆಚ್ ಎಂಟಿ ಹಾಗೂ ಭದ್ರಾವತಿಯ ಸರ್ ಎಂ. ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು (VISL)
ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ: 40 ನಾಗರಿಕರು ಬಲಿ
ಆಫ್ಘಾನಿಸ್ತಾನದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದ್ದರಿಂದ 40ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ. ಪಾಕಿಸ್ತಾನ ಮತ್ತು ಆಫ್ಘಾನಿಸ್ತಾನ ಗಡಿಯಲ್ಲಿರುವ ಕಂದಹಾರ್ ಪ್ರಾಂತ್ಯದ ಮೇಲೆ ಪಾಕಿಸ್ತಾನ ವಾಯುದಾಳಿ ನಡೆಸಿದೆ. ಕಂದಹಾರ್ ನ ಬಲೂಕ್ ಜಿಲ್ಲೆಯ ಪ್ರದೇಶಗಳ ಮೇಲೆ ಬುಧವಾರ ಬೆಳಿಗ್ಗೆ ಪಾಕಿಸ್ತಾನ ಹಗುರ ಯುದ್ಧ
ಶಾಸಕ ವೀರೇಂದ್ರ ಪಪ್ಪಿ ಬಿಡುಗಡೆ: ಪತ್ನಿ ಅರ್ಜಿ ಹೈಕೋರ್ಟ್ ವಜಾ
ಬೆಂಗಳೂರು: ಆನ್ಲೈನ್, ಆಫ್ಲೈನ್ ಅಕ್ರಮ ಬೆಟ್ಟಿಂಗ್ ಆರೋಪ ಪ್ರಕರಣ ಸಂಬಂಧ ಕಾನೂನುಬಾಹಿರವಾಗಿ ಬಂಧಿಸಿರುವ ಚಿತ್ರದುರ್ಗದ ಶಾಸಕ ಕೆ.ಸಿ.ವೀರೇಂದ್ರ ಬಿಡುಗಡೆಗೆ ಆದೇಶಿಸಬೇಕು ಎಂದು ಕೋರಿ ಅವರ ಪತ್ನಿ ಡಿ.ಆರ್.ಚೈತ್ರಾ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಕೆ.ಸಿ.ವೀರೇಂದ್ರ ಅವರನ್ನು ಪಿಎಂಎಲ್ ಕಾಯ್ದೆಯಡಿ ಜಾರಿ ನಿರ್ದೇಶನಾಲಯವು
ಆರೆಸ್ಸೆಸ್ ನಿಷೇಧ ಶಿಫಾರಸು ಮಾಡಿದ್ದರಲ್ಲಿ ತಪ್ಪೇನಿದೆ: ಸಿಎಂ ಸಿದ್ದರಾಮಯ್ಯ
ಮೈಸೂರು: ಬೆದರಿಕೆ ಕರೆಗಳು ಬರುತ್ತಿರುವುದಾಗಿ ಪ್ರಿಯಾಂಕ ಖರ್ಗೆಯವರು ಖುದ್ದು ತಿಳಿಸಿದ್ದು, ಸರ್ಕಾರಿ ಸ್ಥಳಗಳಲ್ಲಿ ಆರ್. ಎಸ್.ಎಸ್ ಚಟುವಟಿಕೆಗಳನ್ನು ಕೈಗೊಳ್ಳಬಾರದು. ತಮಿಳುನಾಡು ಮಾದರಿಯಲ್ಲಿ ಇಲ್ಲಿಯೂ ನಿಷೇಧ ಮಾಡಬೇಕು ಎಂದು ಹೇಳಿದ್ದಾರೆ. ಅದರಲ್ಲಿ ತಪ್ಪೇನಿದೆ. ಇಂಥಾ ಬೆದರಿಕೆಗಳಿಗೆ ಹೆದರುವುದಿಲ್ಲ ಎಂದು ಮುಖ್ಯಮಂತ್ರಿಗಳು ತಿರುಗೇಟು ನೀಡಿದರು.
ಮಾವನ ಕೊಂದು ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಅಳಿಯ!
ಯಡ್ರಾಮಿ: ಮಾವನಿಗೆ ಹಣ ನೀಡುವದಾಗಿ ನಂಬಿಸಿ ಮಾವನನ್ನು ಮನೆಗೆ ಕರೆಸಿ ಕೊಲೆ ಮಾಡಿ ಉಪ್ಪಿನ ಚಿಲದಲ್ಲಿ ಮುಚ್ಚಿಟ್ಟ ಘಟನೆ ಯಡ್ರಾಮಿ ಠಾಣೆಯ ಕಣಮೇಶ್ವರ ಗ್ರಾಮದಲ್ಲಿ ನಡೆದಿದೆ. ಕೊಟ್ಟ ಸಾಲ ವಾಪಸ್ ಕೊಡು ಎಂದ ಮಾವನನ್ನೇ ಕೊಲೆ ಮಾಡಿ ಮನೆಯ ಅಡುಗೆ ಕೋಣೆಯಲ್ಲಿರುವ
ದಾವಣಗೆರೆ: 150 ಕೋಟಿ ಕನ್ನ ಹಾಕಿದ ಸೈಬರ್ ವಂಚಕ ಅರೆಸ್ಟ್
ಸಿಸಿಟಿವಿ ಕೆಲಸ ಮಾಡಿಕೊಂಡು ದೇಶದ ನಾನಾ ಬ್ಯಾಂಕ್ ಖಾತೆಗಳಿಂದ 150 ಕೋಟಿ ರೂ. ದೋಚಿದ್ದ ಸೈಬರ್ ವಂಚಕನನ್ನು ದಾವಣೆಗೆರೆ ಸೈಬರ್ ಠಾಣೆ ಪೊಲೀಸರು ಬಂಧಿಸಿದ್ದು, ಇನ್ನಿಬ್ಬರು ತಲೆಮರೆಸಿಕೊಂಡಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ಟೌನ್ ಶಾಂತಿನಗರ ನಿವಾಸಿ ಸೈಯದ್ ಅರ್ಫಾತ್ (28) ಎಂಬಾತನನ್ನು
ನಿಷೇಧಿತ ಪಿಎಫ್ ಐ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ್ದ ಧರ್ಮಗುರು ಅರೆಸ್ಟ್
ನಿಷೇಧಿತ ಪಿಎಫ್‌ಐ ಸಂಘಟನೆ ಸಕ್ರಿಯಗೊಳಿಸಲು ಪ್ರಚೋದನೆ ನೀಡುತ್ತಿದ ಮುಸ್ಲಿಂ ಧರ್ಮಗುರುವನ್ನು ಮಂಗಳೂರಿನಲ್ಲಿ ಬಂಧಿಸಲಾಗಿದೆ. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಕಡಬ ನಿವಾಸಿ ಸೈಯ್ಯದ್ ಇಬ್ರಾಹಿಂ ತಂಙಳ್ ಬಂಧಿತ ಆರೋಪಿ. ಭೂಗತರಾಗಿರುವ ಪಿಎಫ್‌ಐ ಸದಸ್ಯರನ್ನು ಸಂಪರ್ಕಿಸಿದ್ದ ಸೈಯ್ಯದ್ ಇಬ್ರಾಹಿಂ ತಂಙಳ್ ಸಲ್ಮಾನ್ ಸಲಾಂ
ಮಂಗಳೂರಿನಲ್ಲಿ ಮಲಯಾಳಂ ನಟ ಜಯಕೃಷ್ಣನ್ ಅರೆಸ್ಟ್!
ಕ್ಯಾಬ್ ಚಾಲಕನಿಗೆ ಟೆರರಿಸ್ಟ್ ಎಂದು ನಿಂದಿಸಿದ ಮಲಯಾಳಂ ಖ್ಯಾತ ನಟ ಜಯಕೃಷ್ಣನ್ ಸೇರಿದಂತೆ ಮೂವರನ್ನು ಮಂಗಳೂರಿನಲ್ಲಿ ಪೊಲೀಸರು ಬಂಧಿಸಿದ್ದಾರೆ. ಸೆ.9ರಂದು ಮಂಗಳೂರಿಗೆ ಭೇಟಿ ನೀಡಿದ್ದ ಜಯಕೃಷ್ಣನ್, ಸಂತೋಷ್ ಅಬ್ರಾಹಂ, ವಿಮಲ್ ಅವರನ್ನು ಊರ್ವ ಪೊಲೀಸರು ಬಂಧಿಸಿದ್ದಾರೆ. ಜಯಕೃಷ್ಣನ್ ಹಾಗೂ ಸ್ನೇಹಿತರು ಮಂಗಳೂರಿಗೆ
ಸುಳ್ಳು ಸುದ್ದಿ ಹರಡಿದ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡ ಡಿಕೆ ಶಿವಕುಮಾರ್
ಬೆಂಗಳೂರು: “ಸಿಎಂ ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ, ಕೆಲವು ಮಾಧ್ಯಮಗಳು ಸುದ್ದಿ ತಿರುಚಿ ವಿವಾದ ಸೃಷ್ಟಿಸುತ್ತಿರುವ ಬಗ್ಗೆ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳನ್ನು ತರಾಟೆಗೆ ತೆಗೆದುಕೊಂಡರು. ಲಾಲ್ ಬಾಗ್ ಉದ್ಯಾನದಲ್ಲಿ ಶನಿವಾರ ಬೆಂಗಳೂರು ನಡಿಗೆ ಕಾರ್ಯಕ್ರಮದ ಅಂಗವಾಗಿ ಸಾರ್ವಜನಿಕರೊಂದಿಗೆ
ಐಪಿಎಸ್ ಅಧಿಕಾರಿ ಆತ್ಮಹತ್ಯೆ: ಹರಿಯಾಣದ ಇಬ್ಬರು ಪೊಲೀಸ್ ಮುಖ್ಯಸ್ಥರ ವಿರುದ್ಧ ಎಫ್ ಐಆರ್!
ಐಪಿಎಸ್ ಅಧಿಕಾರಿ ಪೂರನ್ ಕುಮಾರ್ ಗುಂಡಿಕ್ಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಪ್ರಕರಣದಲ್ಲಿ ಹರಿಯಾಣ ಪೊಲೀಸ್ ಮುಖ್ಯಸ್ಥ ಶತ್ರುಜೀತ್ ಸಿಂಗ್ ಕಪೂರ್, ರೋಹ್ಟಕ್ ಪೊಲೀಸ್ ಆಯುಕ್ತ ನರೇಂದ್ರ ಬಿಜರಾನಿಯಾ ಸೇರಿದಂತೆ ಹಲವು ಪೊಲೀಸ್ ಅಧಿಕಾರಿಗಳ ವಿರುದ್ಧ ಎಫ್ ಐಆರ್ ದಾಖಲಾಗಿದೆ. ಪರಿಶಿಷ್ಟ ಜಾತಿಗೆ ಸೇರಿದ




