kannada news
ವಿಕಲಚೇತನರಿಗೆ ಸಾಧನ-ಸಲಕರಣೆ ವಿತರಿಸಿದ ಕಾರ್ಮಿಕ ಸಚಿವ ಸಂತೋಷ್ ಲಾಡ್
ಧಾರವಾಡ :* ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ವತಿಯಿಂದ ವಿಕಲಚೇತನರಿಗೆ ನೀಡಲಾಗುವ ವಿವಿಧ ಸಾಧನ ಸಲಕರಣೆಗಳನ್ನು ಆರ್.ಎನ್.ಶೆಟ್ಟಿ ಜಿಲ್ಲಾ ಕ್ರೀಡಾಂಗಣದ ಮುಂಭಾಗದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್ ಎಸ್.ಲಾಡ್ ಅವರು 77ನೇ ಗಣರಾಜ್ಯೋತ್ಸವದ ಸಂಭ್ರಮದಲ್ಲಿ ವಿತರಿಸಿದರು. ಧಾರವಾಡ ಕಲಕೇರಿಯ ಅಕ್ಕಮಹಾದೇವಿ ಅಂಗಡಿ ಅವರಿಗೆ ಬ್ಯಾಟರಿ ಚಾಲಿತ ವ್ಹಿಲ್‍ಚೇರ್, ಕರಡಿಗುಡ್ಡ ಗ್ರಾಮದವರಾದ ಉಜೇಫ ಶೌಕತಲಿ ನಾಯ್ಕರ ಅವರಿಗೆ ಎಮ್.ಆರ್. ಕಿಟ್, ಮಲ್ಲವ್ವ ಚನಮಲ್ಲಪ್ಪ ಕುರಗುಂದ ಅವರಿಗೆ ಕ್ರಚ್ಚಸ್, ಮಡಿಕಿಕೇರಿಯ
ಮನರೇಗಾ ಉಳಿಸಲು ರಾಜಭವನ ಚಲೋ: ಡಿಕೆ ಶಿವಕುಮಾರ್
ಮನರೇಗಾ ಉಳಿಸುವ ಸಲುವಾಗಿ ಮಂಗಳವಾರ ರಾಜಭವನ ಚಲೋ ನಡೆಸಲಾಗುವುದು. ಪ್ರತಿ ತಾಲ್ಲೂಕಿನಲ್ಲೂ ಕನಿಷ್ಠ ಐದು ಕಿಲೋಮೀಟರ್ ಪಾದಯಾತ್ರೆ ನಡೆಸಲಾಗುವುದು. ಪ್ರತಿ ಪಂಚಾಯತಿ ಮಟ್ಟದಲ್ಲೂ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.
ವರದಕ್ಷಿಣೆ ಕಿರುಕುಳ ಆರೋಪಿಗಳಿಗೆ ಐದು ವರ್ಷ ಜೈಲು, ದಂಡ
ವರದಕ್ಷಿಣೆ ಕಿರುಕುಳ ಆರೋಪದಡಿ ಬಂಧಿತರಾಗಿದ್ದ ತಾಯಿ ಮತ್ತು ಮಗನಿಗೆ ಶಿವಮೊಗ್ಗ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಧೀಶ ಯಶವಂತ ಕುಮಾರ್ ಆರೋಪಿಗಳ ವಿರುದ್ಧ ಆರೋಪ ದೃಢಪಟ್ಟ ಹಿನ್ನೆಲೆಯಲ್ಲಿ
ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ, ಸಂವಿಧಾನವೇ ನಮ್ಮ ಧರ್ಮ: ಡಿಕೆ ಶಿವಕುಮಾರ್
ಗಣರಾಜ್ಯೋತ್ಸವ ಭಾರತದ ಸ್ವಾಭಿಮಾನದ ದಿನ. ಜನವರಿ 26 ಸಂವಿಧಾನವನ್ನು ಅನುಷ್ಠಾನಕ್ಕೆ ತಂದ ದಿನ. ಭಾರತದ ಒಕ್ಕೂಟ ವ್ಯವಸ್ಥೆ ಜಾರಿಯಾದ ದಿನ. ದೇಶದ ಹಾಗೂ ನಾಡಿನ ಸಮಸ್ತ ಜನತೆಗೆ 77ನೇ ವರ್ಷದ ಗಣರಾಜ್ಯೋತ್ಸವದ ಶುಭಾಶಯಗಳು ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕೆಪಿಸಿಸಿ ಕಚೇರಿಯಲ್ಲಿ
ಸಮಾನತೆ ಖಾತರಿಗೆ ಭ್ರಾತೃತ್ವ ಉದ್ದೀಪನ ಸಂವಿಧಾನದ ಆಶಯ: ಗಣರಾಜ್ಯೋತ್ಸವ ಸಂದೇಶದಲ್ಲಿ ಸಿಎಂ
ಕರ್ನಾಟಕದ ಸಮಸ್ತ ಜನಕೋಟಿಗೆ 77ನೇ ಗಣರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳೊಂದಿಗೆ ಸಿಎಂ ಸಂದೇಶ ನೀಡಿದ್ದಾರೆ. ಭಾರತದ ಎಲ್ಲ ನಾಗರಿಕರಿಗೆ ಎಲ್ಲ ಕ್ಷೇತ್ರ, ವಿಚಾರಗಳಲ್ಲೂ ಸಮಾನತೆಯನ್ನು ಖಾತರಿಪಡಿಸಲು ಎಲ್ಲರ ನಡುವೆ ಭ್ರಾತೃತ್ವವನ್ನು ಉದ್ದೀಪನಗೊಳಿಸುವುದೇ ಸಂವಿಧಾನದ ಆಶಯವಾಗಿದೆ ಎಂದು ಹೇಳಿದ್ದಾರೆ. ಸಂವಿಧಾನದ ಮಹತ್ವ ಮತ್ತು ಪ್ರಜಾಪ್ರಭುತ್ವವನ್ನು
ಕುಮಾರಸ್ವಾಮಿ ಬಿಡದಿ ಟೌನ್ ಶಿಪ್ ಯೋಜನೆ ಚರ್ಚೆಗೆ ಬರಲಿ: ಡಿಕೆ ಶಿವಕುಮಾರ್
ಬಿಡದಿ ಟೌನ್ ಶಿಪ್ ಯೋಜನೆ ಬಗ್ಗೆ ಕುಮಾರಸ್ವಾಮಿ ಜತೆ ಚರ್ಚೆಗೆ ಸಿದ್ಧನಿದ್ದೇನೆ. ಈ ವಿಚಾರವನ್ನು ಎಲ್ಲಾ ಮಾಧ್ಯಮಗಳು ಕುಮಾರಸ್ವಾಮಿ ಅವರಿಗೆ ತಿಳಿಸಿ. ಅವರು ಮುಖ್ಯಮಂತ್ರಿಯಾಗಿ ದ್ದಾಲೇ ಅವರ ಸವಾಲನ್ನು ಸ್ವೀಕಾರ ಮಾಡಿದ್ದೇನೆ. ಈಗಲೂ ಬಹಳ ನಮ್ರತೆಯಿಂದ ಸವಾಲು ಸ್ವೀಕಾರ ಮಾಡುತ್ತೇನೆ, ಚರ್ಚೆಗೆ
ಮಂಡ್ಯದ ಅಂಕೇಗೌಡ, ಬೆಂಗಳೂರಿನ ಸುಶೀಲಮ್ಮ ಸೇರಿ 45 ಜನರಿಗೆ ಪದ್ಮ ಪ್ರಶಸ್ತಿ
2026ನೇ ಸಾಲಿನ ಪದ್ಮ ಪ್ರಶಸ್ತಿಗಳನ್ನು ಘೋಷಿಸಲಾಗಿದೆ. ಕರ್ನಾಟಕದ ಜ್ಞಾನದಾಸೋಹಿ ಮಂಡ್ಯದ ಅಂಕೇಗೌಡ (ಸಾಹಿತ್ಯ ಮತ್ತು ಶಿಕ್ಷಣ) , ಸಮಾಜ ಸೇವಕಿ ಬೆಂಗಳೂರಿನ ಸುಮಂಗಲಿ ಸೇವಾ ಆಶ್ರಮದ ಸಂಸ್ಥಾಪಕಿ ಡಾ. ಎಸ್.ಜಿ. ಸುಶೀಲಮ್ಮ ಸೇರಿದಂತೆ 45 ಜನರಿಗೆ ಪ್ರತಿಷ್ಠಿತ ಪದ್ಮ ಪುರಸ್ಕಾರಗಳನ್ನು ಪ್ರಕಟಿಸಲಾಗಿದೆ.
ದಾವೂಸ್ ನಲ್ಲಿ 45ಕ್ಕೂ ಹೆಚ್ಚು ಕಂಪನಿಗಳ ಜತೆ ಹೂಡಿಕೆ ಚರ್ಚೆ, ರಾಜ್ಯದ ನಗರಗಳಲ್ಲಿ ಸಂಚಾರಿ ಗ್ರಿಡ್: ಡಿಕೆ ಶಿವಕುಮಾರ್
ಮುಂದಿನ 25 ವರ್ಷಗಳಲ್ಲಿ ಆಗಲಿರುವ ಪ್ರಗತಿಯನ್ನು ಗಮನದಲ್ಲಿಟ್ಟುಕೊಂಡು ರಾಜ್ಯದ ಎಲ್ಲಾ ನಗರಗಳಲ್ಲೂ ಸಂಚಾರಿ ಗ್ರಿಡ್ ರೂಪಿಸಲು ಚಿಂತನೆ ನಡೆಸಲಾಗಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದರು. ದಾವೋಸ್ ವಿಶ್ವ ಆರ್ಥಿಕ ವೇದಿಕೆ ಕಾರ್ಯಕ್ರಮದಲ್ಲಿ ಭಾಗವಹಿಸಿ ವಾಪಸಾದ ಬಳಿಕ ವಿಧಾನಸೌಧದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದರು.
ಕನಕಪುರ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆ ಶವ ಪತ್ತೆ
ಕನಕಪುರ ತಾಲೂಕಿನ ಬೆಟ್ಟೆಗೌಡನಪಾಳ್ಯದ ಸ್ವಿಮ್ಮಿಂಗ್ ಪೂಲ್‌ನಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿದೆ. ಪ್ರತಿಭಾ (29) ಮೃತ ಮಹಿಳೆ ಎಂದು ಗುರುತಿಸಲಾಗಿದೆ. ಇದು ಆಕಸ್ಮಿಕ ಸಾವೇ, ಕೊಲೆಯೇ ಅಥವಾ ಆತ್ಮಹತ್ಯೆಯೇ ಎಂಬ ಅನುಮಾನ ಗಳು ವ್ಯಕ್ತವಾಗಿವೆ. ಹೊರ ವಲಯದಲ್ಲಿರುವ ತೋಟದ ಮನೆಯಲ್ಲಿ ಪ್ರತಿಮಾ ವಾಸವಾಗಿದ್ದರು.
ಬಾಯ್‌ಫ್ರೆಂಡ್‌ಗೆ ಕಳಿಸಿದ ಪೋಟೊ ವೈರಲ್: ಯುವತಿ ಒಂದು ಲಕ್ಷ ರೂ. ನೀಡಿದರೂ ಮತ್ತೆ ಹಣಕ್ಕೆ ಬೇಡಿಕೆ
ಬಾಯ್‌ಫ್ರೆಂಡ್‌ಗೆ ಕಳಿಸಿದ ಖಾಸಗಿ ಫೋಟೋಗಳು ವೈರಲ್ ಆಗಿದ್ದು, ಇದನ್ನು ಮುಂದಿಟ್ಟು ಹಣ ನೀಡುವಂತೆ ಬೆದರಿಕೆ ಕರೆಗಳು ಬರುತ್ತಿವೆ ಎಂದು ಯುವತಿ ಕೇಂದ್ರ ವಿಭಾಗ ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಬೆಂಗಳೂರಿನ ಪ್ರತಿಷ್ಠಿತ ಖಾಸಗಿ ಕಾಲೇಜಿನ 19 ವರ್ಷದ ವಿದ್ಯಾರ್ಥಿನಿ




