Menu

ಬೆಂಗಳೂರು ರಸ್ತೆ ಮಧ್ಯೆ ಬಟ್ಟೆ ಎಳೆದಾಡಿ ಗೆಳತಿಗೆ ಲೈಂಗಿಕ ಕಿರುಕುಳ

ಬೆಂಗಳೂರಿನ ಉಲ್ಲಾಳ ಮುಖ್ಯರಸ್ತೆಯ ಜ್ಞಾನಜ್ಯೋತಿನಗರದ ರಸ್ತೆ ನಡುವೆಯೇ ಯುವಕನೊಬ್ಬ ಗೆಳತಿಯ ಬಟ್ಟೆ ಎಳೆದಾಡಿ ಲೈಂಗಿಕ ಕಿರುಕುಳ ನೀಡಿದ್ದು, ದೃಶ್ಯ ಸಿಸಿಟಿವಿಯಲ್ಲಿ ದಾಖಲಾಗಿದೆ. ಸಂತ್ರಸ್ತೆ ನೀಡಿದ ದೂರಿನ ಅನ್ವಯ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. 2024ರಲ್ಲಿ ಇನ್‌ಸ್ಟಾಗ್ರಾಂನಲ್ಲಿ ಯುವತಿಗೆ ನವೀನ್ ಎಂಬಾತ ಪರಿಚಯವಾಗಿ ಇಬ್ಬರ ನಡುವೆ ಸ್ನೇಹ ಇತ್ತು. ಆಗಾಗ ಆಕೆ ಮತ್ತು ನವೀನ್ ನಾಗರಭಾವಿ ಬಳಿ ಭೇಟಿ ಆಗುತ್ತಿದ್ದರು. ಕಳೆದ ತಿಂಗಳಿನಿಂದ ತನ್ನನ್ನು ಪ್ರೀತಿಸುವಂತೆ ಯುವತಿಗೆ ನವೀನ್ ಪೀಡಿಸುತ್ತಿದ್ದನು ಎನ್ನಲಾಗಿದೆ. ಡಿಸೆಂಬರ್

ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲ: ಡಿಕೆ ಶಿವಕುಮಾರ್‌ ಕಳವಳ

“ಮನಮೋಹನ್ ಸಿಂಗ್ ಅವರು ಅನೇಕ ಅಧ್ಯಯನ ನಡೆಸಿ ನರೇಗಾ ಯೋಜನೆ ಜಾರಿಗೆ ತಂದಿದ್ದರು. ಮೋದಿ ಸರ್ಕಾರದ ನಿರ್ಧಾರದಿಂದ ಭವಿಷ್ಯದಲ್ಲಿ ನರೇಗಾ ಯೋಜನೆ ವಿಫಲವಾಗಲಿದೆ.  ಮೋದಿ ಸರ್ಕಾರ ಇಂತಹ ನಿರ್ಧಾರ ಕೈಗೊಳ್ಳುತ್ತದೆ ಎಂದು ಭಾವಿಸಿರಲಿಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಕಳವಳ ವ್ಯಕ್ತಪಡಿಸಿದ್ದಾರೆ.

ಆನ್‌ಲೈನ್‌ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿ: ಯುವತಿಯರಿಬ್ಬರು ಸೇರಿ ಐವರ ಬಂಧನ

ಆನ್‌ಲೈನ್‌ನಲ್ಲಿ ವೇಶ್ಯಾವಾಟಿಕೆ ಸುಲಿಗೆ ಬಲೆಗೆ ಟೆಕ್ಕಿಯೊಬ್ಬ ಸಿಲುಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಆರ್‌ಆರ್ ನಗರ ಪೊಲೀಸರು ಕಾರ್ಯಾಚರಣೆ ನಡೆಸಿ, ಮೋಹದ ಬಲೆಗೆ ಬೀಳಿಸಿ ಸುಲಿಗೆ ಮಾಡುತ್ತಿದ್ದ ಗ್ಯಾಂಗ್‌ನ ಇಬ್ಬರು ಯುವತಿಯರು ಸೇರಿ ಐವರನ್ನು ಬಂಧಿಸಿದ್ದಾರೆ. ʼಬಂಧಿತರನ್ನು ಸುಮಲತಾ ಅಲಿಯಾಸ್ ಅಂಜಲಿ, ಹರ್ಷಿಣಿ

ಬಳ್ಳಾರಿಯಲ್ಲಿ ಕಿರು ಸೇತುವೆಗೆ ಕಾರು ಡಿಕ್ಕಿ: ದೇವಸ್ಥಾನದಿಂದ ವಾಪಸಾಗುತ್ತಿದ್ದ ಮೂವರ ಸಾವು

ಬಳ್ಳಾರಿಯಲ್ಲಿ ರಸ್ತೆ ಬದಿಯ ಕಿರು ಸೇತುವೆಗೆ ಕಾರು ಡಿಕ್ಕಿಯಾಗಿ ಮೂವರು ಸ್ಥಳದಲ್ಲಿಯೇ ಮೃತಪಟ್ಟಿದ್ದು, ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಸಿರುಗುಪ್ಪ ತಾಲೂಕಿನ ನಿಟ್ಟೂರು ಗ್ರಾಮದ ಒಂದೇ ಕುಟುಂಬದ ಐವರು ಕಾರಿನಲ್ಲಿ ತಮಿಳುನಾಡಿನ ದೇವಸ್ಥಾನಕ್ಕೆ ತೆರಳಿ ವಾಪಸ್‌ ಬರುವಾಗ ಈ ಅಪಘಾತ

ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್‌: ಬೆಂಗಳೂರಿನಲ್ಲಿ ಪತ್ನಿಗೆ ಗುಂಡಿಕ್ಕಿ ಕೊಂದ ಪತಿ

ಬೆಂಗಳೂರಿನ ಬಸವೇಶ್ವರ ನಗರದ ವೆಸ್ಟ್ ಇನ್ ಹೋಟೆಲ್ ಬಳಿ ಗಂಡನೊಬ್ಬ ಹೆಂಡತಿಗೆ ಗುಂಡಿಕ್ಕಿ ಕೊಲೆ ಮಾಡಿದ್ದಾನೆ. ಗುಂಡೇಟು ತಗುಲಿದ ಪತ್ನಿ ಭುವನೇಶ್ವರಿಯನ್ನು ಪತಿ ಬಾಲಮುರುಘನ್ ಆಸ್ಪತ್ರೆಗೆ ದಾಖಲಿಸಿದರೂ ಫಲಕಾರಿಯಾಗದೆ ಅಸು ನೀಗಿದ್ದಾರೆ. ಪತಿ ಪತ್ನಿ ನಡುವೆ ಕೋರ್ಟ್‌ನಲ್ಲಿ ಡಿವೋರ್ಸ್‌ ಕೇಸ್ ನಡೆಯುತ್ತಿತ್ತು,

5 ಹುಲಿಗಳ ಸೆರೆ ಕಾರ್ಯಾಚರಣೆಗೆ ಸಚಿವ ಈಶ್ವರ ಖಂಡ್ರೆ ಸೂಚನೆ

ಬೆಂಗಳೂರು: ಚಾಮರಾನಗರದ ನಂಜೆದೇವಪುರದಲ್ಲಿ ಕಾಣಿಸಿಕೊಂಡಿರುವ 5 ಹುಲಿಗಳನ್ನು ಸುರಕ್ಷಿತವಾಗಿ ರಕ್ಷಿಸಿ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರಿಸಲು ಮೊದಲಿಗೆ ಬೋನುಗಳನ್ನು ಅಳವಡಿಸಲು ಮತ್ತು ಅಗತ್ಯ ಬಿದ್ದರೆ ಅರವಳಿಕೆ ನೀಡಿ ಸೆರೆ ಹಿಡಿಯಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ

ಮಗು ಅತ್ತರೆ ಯಾರು ಸಮಾಧಾನ ಪಡಿಸಬೇಕು: ಕೆಎನ್ ರಾಜಣ್ಣ ಪತ್ರಕ್ಕೆ ಡಿಕೆ ಸುರೇಶ್ ಪ್ರತಿಕ್ರಿಯೆ

ಬೆಂಗಳೂರು: ಮಗು ಅತ್ತರೆ ಯಾರು ಸಮಾಧಾನ ಮಾಡಬೇಕು? ತಂದೆ – ತಾಯಿ, ಪೋಷಕರು ಸಮಾಧಾನ ಮಾಡಬೇಕು. ಇಲ್ಲಿ ಕೂಡ ಏನೇ ಸಮಸ್ಯೆ ಇದ್ರೂ ಹೈಕಮಾಂಡ್ ಗಮನಿಸುತ್ತದೆ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರ ಪತ್ರದ ಬಗ್ಗೆ ಮಾಜಿ ಸಂಸದ ಡಿ.ಕೆ.

ಬಿಜೆಪಿ ಶಾಸಕ ಬೈರತಿ ಬಸವರಾಜು ಜಾಮೀನು ಅರ್ಜಿ ವಜಾ: ಬಂಧನ ಭೀತಿ

ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಆರೋಪಿಗಳಲ್ಲಿ ಒಬ್ಬರಾಗಿರುವ ಬಿಜೆಪಿ ಶಾಸಕ ಬೈರತಿ ಬಸವರಾಜ್ ಅವರ ಜಾಮೀನು ಅರ್ಜಿ ವಜಾಗೊಂಡಿದ್ದು, ಯಾವುದೇ ಕ್ಷಣದಲ್ಲಿ ಬಂಧನಕ್ಕೆ ಒಳಗಾಗುವ ಸಾಧ್ಯತೆ ಇದೆ. ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ 8 ಆರೋಪಿಗಳ ಪೈಕಿ ಒಬ್ಬರಾಗಿ ಬೆಂಗಳೂರಿನ ಕೆಆರ್

ರೈತರಿಗೆ ವೃತ್ತಿ ಆಧಾರಿತ ಮೀಸಲಾತಿ ಅಗತ್ಯ: ಬಸವರಾಜ ಬೊಮ್ಮಾಯಿ

ಕಲಬುರ್ಗಿ: ರೈತರಿಗೆ ವೃತ್ತಿ ಆಧಾರಿತ ಮೀಸಲಾತಿಯನ್ನು ತರುವ ವ್ಯವಸ್ಥೆ ಕೇಂದ್ರ ಮತ್ತು ರಾಜ್ಯ ಸರ್ಕಾರದಲ್ಲಿ ಆಗಬೇಕು. ಆಗ ಮಾತ್ರ ರೈತರ ಮಕ್ಕಳಿಗೆ ಉದ್ಯೋಗ ಸಿಗುತ್ತದೆ. ಇಲ್ಲದಿದ್ದರೆ ರೈತರ ಸಂಖ್ಯೆ ಕಡಿಮೆ ಆಗುತ್ತದೆ. ದೇಶದಲ್ಲಿ ರೈತ ಕೇಂದ್ರಿತ ಯೋಜನೆಗಳು ಬೇಕಿವೆ. ರೈತ ಬಲಿಷ್ಠವಾಗಿದ್ದರೆ

ಕುತೂಹಲಕ್ಕಾಗಿ ಚಿರತೆ ಬೋನಿನೊಳಗೆ ಹೋಗಿದ್ದ ರೈತ ಮೂರು ಗಂಟೆ ಲಾಕ್‌

ಚಾಮರಾಜನಗರ ತಾಲೂಕಿನ ಗಂಗವಾಡಿ ಗ್ರಾಮದಲ್ಲಿ ರೈತರೊಬ್ಬರು ಕುತೂಹಲದಿಂದ ಚಿರತೆ ಸೆರೆಗೆ ಇಟ್ಟಿದ್ದ ಬೋನಿನೊಳಗೆ ಹೋಗಿದ್ದು, ಮೂರು ಗಂಟೆ ಅದರೊಳಗೆ ಲಾಕ್‌ ಆಗಿದ್ದಾರೆ. ಗ್ರಾಮದ ಕಿಟ್ಟಿ ಎಂಬವರು ಯಾರೂ ಇಲ್ಲದ ವೇಳೆ ಕುತೂಹಲದಿಂದ ಬೋನಿನೊಳಗೆ ಹೋಗಿ ಸಿಕ್ಕಿಹಾಕಿಕೊಂಡು ಮೂರು ಗಂಟೆ ಅದರೊಳಗೆ ಪರದಾಡಿದ್ದಾರೆ.