kannada news
ದೆಹಲಿ ಗಣರಾಜ್ಯೋತ್ಸವ 2026: “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ರಾಜ್ಯದ ಟ್ಯಾಬ್ಲೋ
2026ರ ಜನವರಿ 26 ರಂದು ನವದೆಹಲಿಯಲ್ಲಿ ನಡೆಯುವ ಗಣರಾಜ್ಯೋತ್ಸವದಲ್ಲಿ ರಾಜ್ಯದ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” (ಮಿಲ್ಲೆಟ್ ಟು ಮೈಕ್ರೋಚಿಪ್) ಎನ್ನುವ ಸ್ತಬ್ಧಚಿತ್ರ ಪ್ರದರ್ಶನಗೊಳ್ಳಲಿದೆ. ಕೃಷಿಯಿಂದ ಕೈಗಾರಿಕೆ ಹಾಗೂ ಆಧುನಿಕ ತಂತ್ರಜ್ಞಾನದ ಬಳಕೆಯಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ. ಈ ಹೆಗ್ಗಳಿಕೆಯನ್ನು ಸಂಕೇತಿಸುವಂತೆ ಕೆಂಪು ಕೋಟೆಯಲ್ಲಿ ನಡೆಯಲಿರುವ ಭಾರತ ಪರ್ವ ದಲ್ಲಿ “ಸಿರಿಧಾನ್ಯದಿಂದ ಮೈಕ್ರೋಚಿಪ್ ವರೆಗೆ” ಸ್ತಬ್ಧಚಿತ್ರ ಕಂಗೊಳಿಸಲಿದೆ. ಕರ್ನಾಟಕದ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಪ್ರತಿ ವರ್ಷ ವೈಶಿಷ್ಟ್ಯಪೂರ್ಣ ಸ್ತಬ್ಧಚಿತ್ರಗಳ ಮೂಲಕವೇ
ನಾಳೆಯಿಂದ ಜ.27ರವರೆಗೆ ಬ್ಯಾಂಕ್‌ಗಳಿಗೆ ರಜೆ
ಜನವರಿ 24 ಶನಿವಾರದಿಂದ 27 ಮಂಗಳವಾರದವರೆಗೆ ಸತತ 4 ದಿನ ಬ್ಯಾಂಕುಗಳಿಗೆ ರಜೆ ಇದೆ. ಜನವರಿ 26ರಂದು ಗಣರಾಜ್ಯೋತ್ಸವ ರಜೆ ಇರುತ್ತದೆ. 27ರಂದು ಬ್ಯಾಂಕ್ ನೌಕರರ ಮುಷ್ಕರ ನಿಗದಿಯಾಗಿದೆ. ಎಲ್ಲಾ ಶನಿವಾರ ಮತ್ತು ಭಾನುವಾರಗಳನ್ನು ವಾರದ ರಜೆಗಳನ್ನಾಗಿ ಮಾಡಬೇಕು ಎಂದು ಆಗ್ರಹಿಸಿ
ಶಿಕಾರಿಪುರದಲ್ಲಿ ಕರಡಿ ದಾಳಿ: ತೀವ್ರ ಗಾಯಗೊಂಡ ಕೃಷಿಕ
ಶಿಕಾರಿಪುರ ತಾಲೂಕಿನ ಹಾರೋಗೊಪ್ಪ ಗ್ರಾಮ ಸಮೀಪದ ಗಂಗವ್ವನ ಸರ ಮೀಸಲು ಅರಣ್ಯ ಪ್ರದೇಶದಲ್ಲಿ ಹಾರೋಗೊಪ್ಪ ಗ್ರಾಮದ ಕೃಷಿಕ ಸೋಮ್ಲನಾಯ್ಕ(60) ಮೇಲೆ ಕರಡಿ ದಾಳಿ ನಡೆಸಿದ ಪರಿಣಾಮ ತೀವ್ರವಾಗಿ ಗಾಯಗೊಂಡಿದ್ದಾರೆ. ರೈತ ಸೋಮ್ಲನಾಯ್ಕ ಜಮೀನಿನಲ್ಲಿ ಅಳವಡಿಸಿದ್ದ ಮೋಟರ್ ಆನ್ ಮಾಡಲು ಹೋಗಿದ್ದಾಗ ಕರಡಿ
ಬಳ್ಳಾರಿಯಿಂದ ಗುಜರಾತ್ ಗೆ ಅಕ್ರಮವಾಗಿ ಸಾಗಿಸುತ್ತಿದ್ದ 523 ಚೀಲ ಪಡಿತರ ಅಕ್ಕಿ ವಶ
ಬಳ್ಳಾರಿಯಿಂದ ಗುಜರಾತ್‌ಗೆ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 523 ಚೀಲ ಪಡಿತರ ಅಕ್ಕಿಯನ್ನು ಸಹಾಯಕ ಆಯುಕ್ತ ರಾಜೇಶ್ ಹೆಚ್. ಡಿ ತಂಡ ಎಸ್.ಎಲ್.ಎನ್ ಮಾಲ್ ಬಳಿ ಇರುವ ಪುಲ್ಲಯ್ಯ ಕಾಂಪೌಂಡನ ಒಳ ಆವರಣದಲ್ಲಿ ತಡೆ ಹಿಡಿದಿದೆ. ಅಕ್ರಮವಾಗಿ ಪಡಿತರ ಅಕ್ಕಿ ಸಾಗಣೆ ಮಾಡುತ್ತಿದ್ದ ಅಡ್ಡೆ
ಇಂದಿರಾನಗರದಲ್ಲಿ ‘ಒರಿಜಿನಲ್ ಮೈಲಾರಿ ಹೋಟೆಲ್-1938’ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಮೈಸೂರಿನ ಐತಿಹಾಸಿಕ ರುಚಿಯನ್ನು ಹೊತ್ತು ಬಂದಿರುವ ಪ್ರಸಿದ್ಧ ‘ಒರಿಜಿನಲ್ ವಿನಾಯಕ ಮೈಲಾರಿ-1938’ (Old Original Vinayaka Mylari) ಹೋಟೆಲ್‌ನ ಬೆಂಗಳೂರು ಶಾಖೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದರು. ಇಂದಿರಾನಗರದ 80 ಅಡಿ ರಸ್ತೆಯಲ್ಲಿ ನಡೆದ ಸಮಾರಂಭದಲ್ಲಿ ಹೋಟೆಲ್ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ
ಪಿಣರಾಯಿ ಎನ್‌ಡಿಎ ಸೇರಿದ್ರೆ ಮೋದಿಯಿಂದ ಕೇರಳಕ್ಕೆ ಬೃಹತ್ ಪ್ಯಾಕೇಜ್? ಕೇಂದ್ರದ ಅನುದಾನ ಭಿಕ್ಷೆಯಲ್ಲ, ಹಕ್ಕು ಎಂದ ಸಿಪಿಎಂ
ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟಕ್ಕೆ ಸೇರಬೇಕು. ಇದರಿಂದ ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಅನುದಾನ ಬರಲು ಸಾಧ್ಯ. ವಿಜಯನ್ ಎನ್‌ಡಿಎ ಸೇರಿದರೆ ಮುಂದಿನ ವಿಧಾನಸಭಾ ಚುನಾವಣೆ ಯಲ್ಲಿ ಗೆದ್ದು ಮತ್ತೆ ಮುಖ್ಯಮಂತ್ರಿಯಾಗಬಹುದು ಎಂದು ಕೇಂದ್ರ ಸಾಮಾಜಿಕ ನ್ಯಾಯ
ಪತ್ನಿಗೆ ಗುಂಡಿಕ್ಕಿ ಕೊಂದು ಪೊಲೀಸರ ಸಮ್ಮುಖ ಸುಸೈಡ್ ಮಾಡಿಕೊಂಡ ಪತಿ
ಅಹಮದಾಬಾದ್‌ನ ವಸ್ತ್ರಾಪುರ ಪ್ರದೇಶದಲ್ಲಿ ನಡೆದಿದೆ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಶಕ್ತಿಸಿಂಹ ಗೋಹಿಲ್ ಅವರ ಸೋದರಳಿಯ ಯಶ್‌ರಾಜ್ ಸಿಂಗ್ ಗೋಹಿಲ್ ಅವರು ಪತ್ನಿ ರಾಜೇಶ್ವರಿಗೆ ಗುಂಡಿಟ್ಟು ಹತ್ಯೆ ಮಾಡಿದ್ದು, ನಂತರ ಪೊಲೀಸರ ಎದುರೇ ಗುಂಡು ಹಾರಿಸಿಕೊಂಡು ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ರಾತ್ರಿ ಯಶ್‌ರಾಜ್
ಬೈಲಹೊಂಗಲದಲ್ಲಿ ಮಕ್ಕಳಾಗಿಲ್ಲವೆಂದು ಹೆಂಡತಿಯ ಕಿರಿಕಿರಿ: ಕೊಲೆಗೈದು ಹೃದಯಾಘಾತ ಕತೆ ಕಟ್ಟಿದ ಗಂಡ
ಬೆಳಗಾವಿಯ ಬೈಲಹೊಂಗಲ ತಾಲೂಕಿನ ನೇಗಿನಹಾಳ ಗ್ರಾಮದಲ್ಲಿ ಮದುವೆ ಆಗಿ ಮೂರು ವರ್ಷ ಕಳೆದರೂ ಮಕ್ಕಳಾಗಿಲ್ಲವೆಂದು ಕಾಟ ಕೊಡುತ್ತಿದ್ದ ಹೆಂಡತಿಯನ್ನು ಗಂಡನೇ ಉಸಿರುಗಟ್ಟಿಸಿ ಕೊಲೆ ಮಾಡಿರುವ ಘಟನೆ ನಡೆದಿದೆ. ಪತ್ನಿ ರಾಜೇಶ್ವರಿ (21) ಕೊಲೆಯಾಗಿದ್ದು, ಪತಿ ಫಕೀರಪ್ಪ ಗಿಲಕ್ಕನವರ ಕೊಲೆ ಆರೋಪಿ. ಪತ್ನಿಯನ್ನು
ನೇಮಕಾತಿಯಲ್ಲಿ 5 ವರ್ಷ ವಯೋಮಿತಿ ಸಡಿಲಿಕೆ, ಅಲೆಮಾರಿ ಸಮುದಾಯಕ್ಕೆ ಮನೆ: ರಾಜ್ಯ ಸಚಿವ ಸಂಪುಟ ತೀರ್ಮಾನ
ಬೆಂಗಳೂರು: 2027, ಡಿಸೆಂಬರ್ 31ರವರೆಗೆ ನಡೆಯುವ ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ ಮಾಡಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಈ ಮೂಲಕ ಸಿವಿಲ್ ಸೇವಾ ಹುದ್ದೆಗಳ ನೇಮಕಾತಿ ಗೊಂದಲಕ್ಕೆ ತೆರೆ ಎಳೆಯಲಾಗಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಗುರುವಾರ
ಪುಸ್ತಕದ ರಟ್ಟಿನಲ್ಲಿ ಬಚ್ಚಿಟ್ಟಿದ್ದ 38.60 ಕೋಟಿ ಮೌಲ್ಯದ ಕೊಕೇನ್ ವಶ
ಬೆಂಗಳೂರು: ಬ್ರೆಜಿಲ್‌ನ ಸಾವೊ ಪಾಲೊದಿಂದ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿ 38.60 ಕೋಟಿ ಮೌಲ್ಯದ ಕೊಕೇನ್ ವಶಪಡಿಸಿಕೊಂಡಿದ್ದಾರೆ. ಆದರೆ ಆರೋಪಿಯ ಗುರುತನ್ನು ಬಹಿರಂಗಪಡಿಸಿಲ್ಲ. ಜನವರಿ 21 ರಂದು ವಿಮಾನ ನಿಲ್ದಾಣದ ಟರ್ಮಿನಲ್ 2 ನಲ್ಲಿ




