Menu

ಹೊಂಗಸಂದ್ರದಲ್ಲಿ ಮನೆ ಬಿಟ್ಟು ಹೋದ ಮಗಳು: ಕಿರುಕುಳ ನೀಡುತ್ತಿದ್ದ ಪತಿಯ ಕೊಲೆಗೈದ ಪತ್ನಿ

ಬೆಂಗಳೂರಿನ ಬೊಮ್ಮನಹಳ್ಳಿಯ ಹೊಂಗಸಂದ್ರದಲ್ಲಿ ಕಿರುಕುಳ ನೀಡುತ್ತಿದ್ದ ಪತಿಯನ್ನೇ ಪತ್ನಿ ಕೊಲೆ ಮಾಡಿರುವ ಘಟನೆಯೊಂದು ನಡೆದಿದೆ. ಪತ್ನಿಗೆ ಪ್ರತಿದಿನ ಕಿರುಕುಳ ನೀಡುತ್ತಿದ್ದ ಮುರುಗೇಶ್ (50) ಎಂಬವರನ್ನು ಪತ್ನಿ ಲಕ್ಷ್ಮೀ ಕೊಲೆ ಮಾಡಿದ್ದು, ಪೊಲೀಸರು ಆಕೆಯನ್ನು ಬಂಧಿಸಿದ್ದಾರೆ. ಈ ದಂಪತಿ ಇಬ್ಬರು ಹೆಣ್ಣು ಮಕ್ಕಳಿದ್ದು, ಮೊದಲನೇ ಮಗಳಿಗೆ ಮದುವೆಯಾಗಿತ್ತು. ಎರಡನೇ ಮಗಳು ಮನೆ ಬಿಟ್ಟು ಹೋಗಿದ್ದಳು. ಈ ಕಾರಣಕ್ಕೆ ರಾತ್ರಿ ಲಕ್ಷ್ಮೀ ಜೊತೆ ಮುರುಗೇಶ್ ಜಗಳ ಮಾಡಿದ್ದಾರೆ. ಇದರಿಂದ ಕೋಪಗೊಂಡು ಲಕ್ಷ್ಮೀ ತನ್ನ

ಕೆಐಎನಲ್ಲಿ ವಿದೇಶಿ ಮಹಿಳೆಗೆ ಲೈಂಗಿಕ ಕಿರುಕುಳವಿತ್ತ ನಿಲ್ದಾಣ ಸಿಬ್ಬಂದಿ ಅರೆಸ್ಟ್‌

ಬೆಂಗಳೂರು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿದೇಶಿ ಮಹಿಳೆಗೆ ವಿಮಾನಯಾನ ಸಂಸ್ಥೆಯ ಗ್ರೌಂಡ್-ಹ್ಯಾಂಡ್ಲಿಂಗ್ ಸಿಬ್ಬಂದಿ ಲೈಂಗಿಕ ಕಿರುಕುಳ ನೀಡಿದ್ದು, ಪೊಲೀಸರು ಆತನನ್ನು ಬಂಧಿಸಿದ್ದಾರೆ.  ಮೊಹಮ್ಮದ್ ಅಫ್ಘಾನ್ ಅಹ್ಮದ್ ಬಂಧಿತ. ಮಾನ ನಿಲ್ದಾಣದ ಸಿಬ್ಬಂದಿಯೊಬ್ಬ ತಪಾಸಣೆಯ ನೆಪದಲ್ಲಿ ಅನುಚಿತ ಸ್ಪರ್ಶಿಸಿ ತಬ್ಬಿಕೊಂಡು ಲೈಂಗಿಕ

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಯುವಕನಿಗೆ 20 ವರ್ಷ ಜೈಲು

ಶಿವಮೊಗ್ಗದಲ್ಲಿ ಬಾಲಕಿ  ಮೇಲೆ 21 ವರ್ಷದ ಯುವಕ 2022ರಲ್ಲಿ ಲೈಂಗಿಕ ದೌರ್ಜನ್ಯ ಎಸಗಿದ್ದ ಪ್ರಕರಣಕ್ಕೆ ಸಂಬಂಧಿಸಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ (ತ್ವರಿತ) ನ್ಯಾಯಾಲಯ ತಪ್ಪಿತಸ್ಥನಿಗೆ 20 ವರ್ಷ ಕಠಿಣ ಕಾರಾಗೃಹ ಶಿಕ್ಷೆ, 50 ಸಾವಿರ ರೂ.

ಬೆಂಗಳೂರಿನಲ್ಲಿ ಬಂಡವಾಳ ಹೂಡಿಕೆ ಮಾಡಿ: ದಾವೋಸ್ ವಿಶ್ವ ಆರ್ಥಿಕ ಸಮ್ಮೇಳನದಲ್ಲಿ ಉದ್ಯಮಿಗಳಿಗೆ ಡಿಸಿಎಂ ಆಹ್ವಾನ

ದಾವೋಸ್: ಬೆಂಗಳೂರು ಭವಿಷ್ಯದ ನಗರ. ಇಲ್ಲಿನ ಹವಾಗುಣ, ಸಂಸ್ಕೃತಿ, ಮಾನವ ಸಂಪನ್ಮೂಲ ಅತ್ಯುತ್ತಮವಾಗಿದೆ. ವಿಶ್ವದ ಅನೇಕ ಕಂಪನಿಗಳು ಇಲ್ಲಿ ಕೆಲಸ ಮಾಡಿ ಬೆಳೆಯುತ್ತಿವೆ. ನೀವೆಲ್ಲರೂ ಬೆಂಗಳೂರಿಗೆ ಬನ್ನಿ ಎಂದು ಡಿಸಿಎಂ ಡಿಕೆ ಶಿವಕುಮಾರ್ ಅವರು ವಿಶ್ವದ ಉದ್ಯಮಿಗಳಿಗೆ ಆಹ್ವಾನ ನೀಡಿದರು. ದಾವೋಸ್

ಜಂಟಿ ಅಧಿವೇಶನದಲ್ಲಿ ಭಾಷಣ ಮಾಡಲು ರಾಜ್ಯಪಾಲ ಗೆಹ್ಲೋಟ್ ತಿರಸ್ಕಾರ

ಬೆಂಗಳೂರು: ಜಂಟಿ ಅಧಿವೇಶನ ಉದ್ದೇಶಿಸಿ ಮಾತನಾಡಲು ರಾಜ್ಯಪಾಲರು ತಿರಸ್ಕರಿಸಿದ್ದಾರೆ. ಈ ಮೂಲಕ ನಾಳೆಯಿಂದ ಜನವರಿ 31ರವರೆಗೆ ರಾಜ್ಯ ಸರ್ಕಾರ ಕರೆದಿರುವ ವಿಶೇಷ ಅಧಿವೇಶನಕ್ಕೆ ಆರಂಭದಲ್ಲೇ ವಿಘ್ನ ಉಂಟಾಗಿದೆ. ಮನರೇಗಾ ಯೋಜನೆ ರದ್ದುಗೊಳಿಸಿ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಜಿ ರಾಮ್ ಜಿ ಯೋಜನೆ

ಸಂಸದ ಬಿವೈ ರಾಘವೇಂದ್ರ ಕಾರಿಗೆ ಡಿಕ್ಕಿ ಹೊಡೆದ ಮೊತ್ತೊಂದು ಕಾರು

ಶಿವಮೊಗ್ಗ  ಸಂಸದ ಬಿವೈ ರಾಘವೇಂದ್ರ ಅವರ ಕಾರಿಗೆ ಮತ್ತೊಂದು ಕಾರು ಹಿಂಬದಿಯಿಂದ ಬಂದು ಡಿಕ್ಕಿ ಹೊಡೆದಿದೆ. ಶಿಕಾರಿಪುರದಿಂದ ಶಿವಮೊಗ್ಗಕ್ಕೆ ಬರುತ್ತಿದ್ದ ವೇಳೆ ಈ ಅಪಘಾತ ನಡೆದಿದೆ. ಕುಂಚೇನಹಳ್ಳಿ ಗ್ರಾಮದ ಸಮೀಪ ಸಂಸದರ ಕಾರು ಚಲಿಸುತ್ತಿದ್ದಾಗ ಹಿಂದಿನಿಂದ ಬಂದ ಬೊಲೇರೊ ಕಾರು ನಿಯಂತ್ರಣ

ತರೀಕೆರೆಯಲ್ಲಿ ಮದುವೆಗೆ ಮೊದಲೇ ತಾಯಿಯಾದ ಮೊಮ್ಮಗಳು: ಹುಟ್ಟಿದ ಕೂಡಲೇ ಮಗು ಸಾಯಿಸಿದ ಅಜ್ಜಿ

ಚಿಕ್ಕಮಗಳೂರು ತರೀಕೆರೆ ತಾಲೂಕಿನ ಬಾವಿಕೆರೆ ಗ್ರಾಮದಲ್ಲಿ ಮದುವೆಗೆ ಮೊದಲೇ ಮೊಮ್ಮಗಳಿಗೆ ಹುಟ್ಟಿದ ಗಂಡು ಮಗುವನ್ನು ಜನಿಸಿದ ಒಂದೇ ನಿಮಿಷಕ್ಕೆ ಅಜ್ಜಿ ಕತ್ತು ಹಿಚುಕಿ ಸಾಯಿಸಿರುವ ಘಟನೆ ಬಹಿರಂಗಗೊಂಡಿದೆ. ಮದುವೆಯಾಗದ ಮೊಮ್ಮಗಳು ಮಗುವಿಗೆ ಜನ್ಮ ನೀಡಿರುವುದು ಹೊರಗೆ ತಿಳಿದರೆ ಕುಟುಂಬದ ಮರ್ಯಾದೆ ಹೋಗುವುದೆಂಬ ಭಯಕ್ಕೆ

ದೇವರ ಅಪಹಾಸ್ಯ: ‘ಕಾಮಿಡಿ ಕಿಲಾಡಿಗಳು’ ಶೋಗೆ ಹೈಕೋರ್ಟ್‌ ಎಚ್ಚರಿಕೆ

ಖಾಸಗಿ ವಾಹಿನಿಯ ‘ಕಾಮಿಡಿ ಕಿಲಾಡಿಗಳು’ ಕಾರ್ಯಕ್ರಮದಲ್ಲಿ ಹಿಂದೂ ದೇವತೆಗಳನ್ನು ಅವಹೇಳನಕಾರಿಯಾಗಿ ಚಿತ್ರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಕರ್ನಾಟಕ ಹೈಕೋರ್ಟ್ ಚಾನೆಲ್ ಮತ್ತು ನಿರ್ದೇಶಕರ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದೆ.  ಅಭಿವ್ಯಕ್ತಿ ಸ್ವಾತಂತ್ರ್ಯ ಎಂಬುದು ಎಲ್ಲವನ್ನೂ ಅಪಹಾಸ್ಯ ಮಾಡುವ ಪರವಾನಗಿ ಅಲ್ಲ ಎಂದು ಕೋರ್ಟ್‌ ಎಚ್ಚರಿಕೆ

ಸಾರ್ವಜನಿಕ ಶೌಚಾಲಯದೊಳಗೆ ನಾಯಿ ಮರಿಯ ರೇಪ್‌: ಕಾಮುಕ ಅರೆಸ್ಟ್‌

ಎರಡೂವರೆ ತಿಂಗಳ ನಾಯಿ ಮರಿಯ ಮೇಲೆ ಕಾಮುಕನೊಬ್ಬ ಲೈಂಗಿಕ ದೌರ್ಜನ್ಯ ಎಸಗಿರುವ ವೀಡಿಯೊ ವೈರಲ್‌ ಆಗಿದ್ದು, ಸಾರ್ವಜನಿಕರಿಂದ ತೀವ್ರ ಆಕ್ರೋಶ ವ್ಯಕ್ತವಾಗಿದೆ.  ಮುಂಬೈನ ಮಲಾಡ್‌ ಬಳಿ ಸಾರ್ವಜನಿಕ ಶೌಚಾಲಯದಲ್ಲಿ ಈ ಹೇಯ ಕೃತ್ಯ ನಡೆದಿದೆ. ಆರೋಪಿ ನಾಯಿ ಮರಿಯನ್ನು ಬಲವಂತವಾಗಿ ಶೌಚಾಲಯದೊಳಗೆ

ಬೆಂಗಳೂರಲ್ಲಿ UPSC ಪ್ರಾದೇಶಿಕ ಕಚೇರಿಗಾಗಿ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ

ಕೇಂದ್ರ ಸಾರ್ವಜನಿಕ ಸೇವಾ ಆಯೋಗದ ಪ್ರಾದೇಶಿಕ ಕಚೇರಿಯನ್ನು ಬೆಂಗಳೂರಿನಲ್ಲಿ ಸ್ಥಾಪಿಸುವಂತೆ ಕೇಂದ್ರಕ್ಕೆ ರಾಜ್ಯ ಸರ್ಕಾರ ಮನವಿ ಮಾಡಿದೆ. ಮುಖ್ಯ ಕಾರ್ಯದರ್ಶಿ ಡಾ.ಶಾಲಿನಿ ರಜನೀಶ್ ಅವರು ಈ ಸಂಬಂಧ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದಾರೆ. ಬೆಂಗಳೂರಿನಲ್ಲಿ ಯುಪಿಎಸ್‌ಸಿ ಪ್ರಾದೇಶಿಕ ಕಚೇರಿಯನ್ನು ಸ್ಥಾಪಿಸುವುದು ವಿಕೇಂದ್ರೀಕರಣ,