kannada news
ವಿದ್ಯಾರ್ಥಿಗಳ ಮೇಲೆ ಲಾಠಿಚಾರ್ಜ್ ಅಕ್ಷಮ್ಯ, ಪ್ರಧಾನಿ ಕ್ಷಮೆ ಯಾಚಿಸಬೇಕು: ರಾಹುಲ್ ಗಾಂಧಿ
ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಹಾಗೂ ಕಾಕ್ರೋಚ್ ಜನತಾ ಪಾರ್ಟಿ ಮುಖಂಡರು , ಕಾರ್ಯಕರ್ತರ ಮೇಲೆ ಪೊಲೀಸರು ನಡೆಸಿದ ಅಮಾನವೀಯ ಲಾಠಿಚಾರ್ಜ್ ಮತ್ತು ಅಶ್ರುವಾಯು ಪ್ರಯೋಗ ಅತ್ಯಂತ ಖಂಡನೀಯ ಎಂದ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಹೇಳಿದ್ದು, ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಯುವಕರ ಕ್ಷಮೆ ಯಾಚಿಸಬೇಕು ಎಂದು ಆಗ್ರಹಿಸಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನದ ಆರಂಭಿಕ ದಿನದಂದು ನೀಟ್ ಹಾಗೂ ಇನ್ನಿತರ ಸ್ಪರ್ಧಾತ್ಮಕ ಪರೀಕ್ಷಾ ಪ್ರಶ್ನೆಪತ್ರಿಕೆಗಳ
ಐಸಿಸ್‌ಗೆ ಹಣಕಾಸು ನೆರವು, ಯುವಕರ ಪೂರೈಕೆ: ಬೆಂಗಳೂರಿನ ಎಂಟು ಕಡೆ ಇಡಿ ದಾಳಿ
ನಿಷೇಧಿತ ಭಯೋತ್ಪಾದಕ ಸಂಘಟನೆ ಐಸಿಸ್‌ಗೆ ಹಣಕಾಸು ನೆರವು ಹಾಗೂ ಯುವಕರನ್ನು ಅಕ್ರಮವಾಗಿ ವಿದೇಶಕ್ಕೆ ಕಳುಹಿಸಿರುವ ಪ್ರಕರಣ ಸಂಬಂಧ ಇಡಿ ಅಧಿಕಾರಿಗಳು ಬೆಂಗಳೂರಿನ ಎಂಟು ಸ್ಥಳಗಳಲ್ಲಿ ದಾಳಿ ನಡೆಸಿದ್ದಾರೆ. ಯುವಕರನ್ನು ಉಗ್ರವಾದಕ್ಕೆ ಒಳಪಡಿಸುವ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ ಇಡಿ
ಪಾವಗಡ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿ: ಸಿಎಂ
ಪಾವಗಡದ 2400 ಮೆಗಾವ್ಯಾಟ್ ವಿದ್ಯುತ್ ಉತ್ಪಾದನಾ ಘಟಕ ದೇಶಕ್ಕೆ ಮಾದರಿಯಾಗಿದೆ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಹೇಳಿದ್ದಾರೆ. ಬೆಂಗಳೂರಿನಲ್ಲಿ ಕರ್ನಾಟಕ ವಿದ್ಯುತ್ ನಿಗಮ ನಿಯಮಿತದ 57 ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ನೆರೆದ ನಿಗಮದ ಎಲ್ಲರಿಗೂ 57 ನೇ ಸಂಸ್ಥಾಪನಾ
ಹಿಂಸಾಚಾರಕ್ಕೆ ತಗ್ಗದೆ ಸಿಜೆಪಿ ನೇತೃತ್ವದಲ್ಲಿ ಮುಂದುವರಿದ ವಿದ್ಯಾರ್ಥಿ ಪ್ರತಿಭಟನೆ
ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್‌ನಲ್ಲಿ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದಲ್ಲಿ ನಡೆಯುತ್ತಿರುವ ವಿದ್ಯಾರ್ಥಿಗಳ ಪ್ರತಿಭಟನೆಯನ್ನು ಹತ್ತಿಕ್ಕಲು ಸರ್ಕಾರ ಹಿಂಸೆಯ ಪ್ರಯೋಗ ಮಾಡಿದರೂ ಮಂಗಳವಾರವೂ ಪ್ರತಿಭಟನೆ ಮುಂದುವರಿದಿದೆ. ಈ ಹಿನ್ನೆಲೆಯಲ್ಲಿ ರಾಷ್ಟ್ರ
ಜಮ್ಮು-ಕಾಶ್ಮೀರ ಅಸ್ತಿತ್ವಕ್ಕಾಗಿ ಫಾರೂಕ್ ಮತ್ತು ಒಮರ್ ಅಬ್ದುಲ್ಲಾ ಪ್ರತಿಭಟನೆ
ಜಮ್ಮು ಮತ್ತು ಕಾಶ್ಮೀರ ಪೀಪಲ್ಸ್ ಕಾನ್ಫರೆನ್ಸ್ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದ ಗೊಂದಲ ಮತ್ತು ಅಶ್ರುವಾಯು ದಾಳಿಯ ನಡುವೆಯೇ, ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ಹಲವಾರು ಶಾಸಕರು ಮತ್ತು ಸಚಿವರೊಂದಿಗೆ ದೆಹಲಿಯ ಜಂತರ್ ಮಂತರ್‌ಗೆ ತಲುಪಿ, ಜಮ್ಮು ಮತ್ತು ಕಾಶ್ಮೀರಕ್ಕೆ ರಾಜ್ಯತ್ವವನ್ನು ಮರುಸ್ಥಾಪಿಸುವಂತೆ ಒತ್ತಾಯಿಸಿ
ಅಕ್ರಮ ಮರಳು ಗಣಿಗಾರಿಕೆ: ತನಿಖಾ ವರದಿ ಸಲ್ಲಿಸಿದ ಲೋಕಾಯುಕ್ತ ಪೊಲೀಸರು
ಬಾಗಲಕೋಟೆಯಲ್ಲಿ ಅಕ್ರಮ ಮರಳು ಗಣಿಗಾರಿಕೆ ವಿರುದ್ಧ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ದಾಳಿ ನಡೆಸಿದ್ದ ಲೋಕಾಯುಕ್ತ ಪೊಲೀಸರು, ತನಿಖೆ ನಡೆಸಿ ರಾಜ್ಯ ಲೋಕಾಯುಕ್ತರಿಗೆ ವರದಿ ಸಲ್ಲಿಸಿದ್ದಾರೆ. ಗಣಿ ಮತ್ತು ಭೂವಿಜ್ಞಾನ ಇಲಾಖೆಯ ನಿರ್ದೇಶಕರು, ಬಾಗಲಕೋಟೆ ಜಿಲ್ಲೆಯ ಗಣಿ ಮತ್ತು ಭೂವಿಜ್ಞಾನ ಇಲಾಖೆಯ
ವಿದ್ಯಾರ್ಥಿ ಆಂದೋಲನ ದಮನ ಯತ್ನ: ಮೋದಿ ಸರ್ಕಾರಕ್ಕೆ ದುಬಾರಿಯಾಗಲಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ
ನೀಟ್ ಪರೀಕ್ಷೆ ಹಗರಣದ ಬಲಿಪಶು ವಿದ್ಯಾರ್ಥಿಗಳ ಶಾಂತಿಯುತ ಪ್ರತಿರೋಧದಿಂದ ನಡುಗಿಹೋಗಿರುವ ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಬಿಜೆಪಿ ಸರ್ಕಾರ ಹತಾಶೆಯಿಂದ ಲಾಠಿ-ದೊಣ್ಣೆಗಳ ಮೂಲಕ ಪ್ರತಿಭಟನೆಯನ್ನು ದಮನಿಸಲು ಹೊರಟಿರುವುದನ್ನು ನೋಡಿದರೆ ದೇಶದಲ್ಲಿ ಅಘೋಷಿತ ತುರ್ತುಪರಿಸ್ಥಿತಿ ಘೋಷಣೆಯಾದಂತಿದೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ
ದೆಹಲಿಯಲ್ಲಿ ಪ್ರತಿಭಟನಾ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸ್ ಕ್ರೌರ್ಯ: 134 ಮಂದಿ ಗಾಯ, 10 ವಿದ್ಯಾರ್ಥಿಗಳ ಸ್ಥಿತಿ ಗಂಭೀರ
ದೆಹಲಿಯಲ್ಲಿ ನೀಟ್ ಪರೀಕ್ಷೆಯಲ್ಲಿ ನಡೆದ ಅಕ್ರಮಗಳನ್ನು ಖಂಡಿಸಿ, ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸಿದ ಸಿಜೆಪಿ ಕಾರ್ಯಕರ್ತರು ಮತ್ತು ವಿದ್ಯಾರ್ಥಿಗಳ ಮೇಲೆ ಪೊಲೀಸರು ಗೂಂಡಾಗಿರಿ ನಡೆಸಿದ್ದು, ಲಾಠಿಚಾರ್ಜ್ ಮಾಡಿದ್ದಾರೆ. ಪೊಲೀಸರ ಕ್ರೌರ್ಯಕ್ಕೆ 134ಕ್ಕೂ ಹೆಚ್ಚು ವಿದ್ಯಾರ್ಥಿಗಳು ಗಂಭೀರವಾಗಿ
ವಿಜಯ್ ವಿರುದ್ಧ ಅವಹೇಳನ: ಡಿಎಂಕೆ ಶಾಸಕ ಅರೆಸ್ಟ್
ತಮಿಳುನಾಡಿನ ಮುಖ್ಯಮಂತ್ರಿ ಸಿ. ಜೋಸೆಫ್ ವಿಜಯ್ ಅವರ ವಿರುದ್ಧ ಅವಹೇಳನಕಾರಿ ಹಾಗೂ ಬೆದರಿಕೆ ಹೇಳಿಕೆ ನೀಡಿದ ಆರೋಪದಡಿ ವಿಲಾತ್ತಿಕುಳಂ ಡಿಎಂಕೆ ಶಾಸಕ ಜಿ.ವಿ. ಮಾರ್ಕಾಂಡೇಯನ್ ಅವರನ್ನು ತೂತುಕುಡಿ ಜಿಲ್ಲಾ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದಾರೆ. ಕೋವಿಲ್ ಪಟ್ಟಿಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ
ಮನೆ ಬಾಗಿಲಿಗೆ PRC ಆತಂಕಕಾರಿ ಬೆಳವಣಿಗೆ ಎಂದ ಆರ್ ಅಶೋಕ
ಮುಖ್ಯಮಂತ್ರಿ @DKShivakumar ‘ಮನೆ ಬಾಗಿಲಿಗೆ ಶಾಶ್ವತ ನಿವಾಸಿ ಪ್ರಮಾಣಪತ್ರ (PRC)’ ವಿತರಣೆಗೆ ಚಾಲನೆ ನೀಡಿರುವುದು ಅತ್ಯಂತ ಆತಂಕಕಾರಿ ಬೆಳವಣಿಗೆ. ಸರ್ಕಾರ ಇದನ್ನು ಆಡಳಿತ ಸುಧಾರಣೆ ಎಂದು ಬಿಂಬಿಸಲು ಪ್ರಯತ್ನಿಸುತ್ತಿದೆಯಾದರೂ, ಇದು ಮೂಲತಃ ಸಂವಿಧಾನಬಾಹಿರ ಮತ್ತು ಕಾನೂನುಬಾಹಿರ ಕ್ರಮ ಎಂಬುದನ್ನು ರಾಜ್ಯದ ಜನರು




