kannada news
ಪತ್ನಿ, ಮಗನ ಗುಂಡಿಕ್ಕಿ ಕೊಂದು ಮೈಸೂರಿನ ಉದ್ಯಮಿ ಆತ್ಮಹತ್ಯೆ
ನ್ಯೂಯಾರ್ಕ್: ಪತ್ನಿ ಹಾಗೂ ಮಗನನ್ನು ಗುಂಡಿಕ್ಕಿ ಕೊಂದ ನಂತರ ಮೈಸೂರಿನ ಉದ್ಯಮಿ ಅಮೆರಿಕದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೈಸೂರಿನ ವಿಜಯನಗರದಲ್ಲಿರುವ ರೊಬೊಟೆಕ್ ಕಂಪನಿಯಾದ ಹೋಲೋವರ್ಲ್ಡ್ ಸಿಇಒ 57 ವರ್ಷದ ಹರ್ಷವರ್ಧನ ಕಿಕ್ಕೇರಿ, 44 ವರ್ಷದ ಪತ್ನಿ ಹಾಗೂ ಕಂಪನಿ ಸಹ ಸಂಸ್ಥಾಪಕಿ ಶ್ವೇತಾ ಪನ್ಯಾಮ್ ಮತ್ತು 14 ವರ್ಷದ ಪುತ್ರ ಶವ ಕಿಂಗ್ ಕೌಂಟಿ ಶೆರಿಫ್ ನಗರದ ಮನೆಯಲ್ಲಿ ಪತ್ತೆಯಾಗಿದೆ. ಕಳೆದ ಗುರುವಾರ ಮೂವರ ಶವ ಪತ್ತೆಯಾಗಿದ್ದು, ಮನೆಯ ಹೊರಗೆ ಆಟವಾಡುತ್ತಿದ್ದ
ಜನರ ಸಮಸ್ಯೆ ನಿವಾರಣೆಯಲ್ಲಿ ನಿರ್ಲಕ್ಷ್ಯ ಸಲ್ಲದು: ಪಾಲಿಕೆ ಆಯುಕ್ತರಿಗೆ ಭೈರತಿ ಸುರೇಶ್ ಸೂಚನೆ
ಬೆಂಗಳೂರು: ಸಾರ್ವಜನಿಕರ ಕುಂದುಕೊರತೆಗಳನ್ನು ನಿವಾರಿಸುವ ನಿಟ್ಟಿನಲ್ಲಿ ನಿರ್ಲಕ್ಷ್ಯ ವಹಿಸಬಾರದು ಎಂದು ನಗರಾಭಿವೃದ್ಧಿ ಮತ್ತು ಯೋಜನಾ ಖಾತೆ ಸಚಿವ ಬಿ.ಎಸ್.ಸುರೇಶ, ಮಹಾನಗರಪಾಲಿಕೆಗಳ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಂಗಳವಾರ ಎಲ್ಲಾ ಮಹಾನಗರ ಪಾಲಿಕೆ ಆಯುಕ್ತರೊಂದಿಗೆ ವಿಡಿಯೋ ಸಂವಾದ ನಡೆಸಿದ ಅವರು, ಪಾಲಿಕೆಗಳ ವ್ಯಾಪ್ತಿಯಲ್ಲಿನ
ಉಗ್ರರ ವಿರುದ್ಧದ ಕಾರ್ಯಾಚರಣೆಗೆ ಪ್ರಧಾನಿ ಮೋದಿ ಸೇನೆಗೆ ಗ್ರೀನ್ ಸಿಗ್ನಲ್!
ಪಹಲ್ಗಾವ್ ನಲ್ಲಿ ಉಗ್ರರು ನಡೆದ ಮಾರಣಾಂತಿಕ ದಾಳಿಗೆ ಪ್ರತಿಯಾಗಿ ನಡೆಸುವ ಕಾರ್ಯಾಚರಣೆ ನಡೆಸಲು ಭಾರತೀಯ ಸೇನೆಗೆ ಪ್ರಧಾನಿ ನರೇಂದ್ರ ಮೋದಿ ಪೂರ್ಣ ಅಧಿಕಾರ ನೀಡಿದ್ದಾರೆ. ಜಮ್ಮು ಕಾಶ್ಮೀರದ ಪಹಲ್ಗಾವ್ ನಲ್ಲಿ 26 ಪ್ರವಾಸಿಗರನ್ನು ಉಗ್ರರು ಹತ್ಯೆಗೈದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ
ಆಡಳಿತಾಧಿಕಾರಿಗಳ ಹುದ್ದೆ ಖಾಲಿ ಇಲ್ಲದಂತೆ ಭರ್ತಿ: ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿಯನ್ನು ಒಂದು ರೂಪಾಯಿ ಲಂಚವಿಲ್ಲದೇ, ಮಧ್ಯವರ್ತಿಗಳ ಹಾವಳಿಯಿಲ್ಲದೇ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಕಂದಾಯ ಇಲಾಖೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ 1000 ಗ್ರಾಮ ಆಡಳಿತಾಧಿಕಾರಿಗಳಿಗೆ ನೇಮಕಾತಿ ಆದೇಶ ವಿತರಣೆ, ಅಭಿಶಿಕ್ಷಣ ತರಬೇತಿ ಮತ್ತು 4000 ಕ್ರೋಮ್ ಬುಕ್
ತಿರುಪತಿ ಬಳಿ ಅಪಘಾತ: ಬೆಂಗಳೂರಿನ ಐವರು ಸಾವು
ತಿರುಪತಿ:ವೇಗವಾಗಿ ಹೋಗುತ್ತಿದ್ದ ಲಾರಿಗೆ ಕಾರು ಡಿಕ್ಕಿಯಾಗಿ ಬೆಂಗಳೂರು ಮೂಲದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ದುರ್ಘಟನೆ ತಿರುಪತಿ ಜಿಲ್ಲೆಯ ಪಾಕಾಲ ಮಂಡಲಂ ತೋಟಪಲ್ಲಿ ಬಳಿಯ ಹೆದ್ದಾರಿಯಲ್ಲಿ ಸೋಮವಾರ ಅಪಘಾತ ನಡೆದಿದೆ. ಇನ್ನು ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.ಎರ್ಟಿಕಾ ಕಾರಿನಲ್ಲಿ ತಿರುಪತಿಯಿಂದ
ಪಹಲ್ಗಾಮ್ ದಾಳಿ ಖಂಡಿಸಿ ಕಾಶ್ಮೀರ ವಿಧಾನಸಭೆ ನಿರ್ಣಯ ಅಂಗೀಕಾರ
ಜಮ್ಮು: ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಜಮ್ಮು ಮತ್ತು ಕಾಶ್ಮೀರ ವಿಧಾನಸಭೆಯು ಸೋಮವಾರ ನಿರ್ಣಯ ಅಂಗೀಕರಿಸಿದೆ. ದಾಳಿ ಹಿನ್ನೆಲೆಯಲ್ಲಿ ಕರೆದಿದ್ದ ಒಂದು ದಿನದ ವಿಶೇಷ ಅಧಿವೇಶನದಲ್ಲಿ ವೇಳೆ ಸರ್ವಪಕ್ಷಗಳು ಉಗ್ರರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದವು. ಕೋಮು ಸಾಮರಸ್ಯವನ್ನು ಕದಡುವ ಮತ್ತು ಪ್ರಗತಿಗೆ
ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ: ಮಲ್ಲಿಕಾರ್ಜುನ ಖರ್ಗೆ ಖಡಕ್ ಎಚ್ಚರಿಕೆ
ದಲಿತರು ತಿರುಗಿಬಿದ್ದರೆ ಯಾರೂ ತಡೆಯಲು ಸಾಧ್ಯವಿಲ್ಲ. ನಾನಾ ಕಾರಣಗಳಿಗೆ ಅವರು ಸುಮ್ಮನಿದ್ದಾರೆ ಎಂದು ಬಾಬಾ ಸಾಹೇಬ್ ಅಂಬೇಡ್ಕರ್ ವಿರುದ್ಧ ಮಾತನಾಡುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬೆಂಗಳೂರಿನಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾನು ದೆಹಲಿಯಲ್ಲಿ
ಕಾವೇರಿ ಆರತಿಗೆ ನೀಲನಕ್ಷೆ ವಾರದಲ್ಲಿ ರೆಡಿ: ಡಿಸಿಎಂ ಡಿಕೆ ಶಿವಕುಮಾರ್
ಮಂಡ್ಯ: “ನಾಡಿನ ವಿವಿಧ ಸಂಸ್ಕೃತಿ ಒಳಗೊಂಡಂತೆ ಕಾವೇರಿ ಆರತಿ ಕಾರ್ಯಕ್ರಮಕ್ಕೆ ಸಮಿತಿಯು ನೀಲನಕ್ಷೆ ರೂಪಿಸುತ್ತಿದ್ದು, ವಾರದಲ್ಲಿ ಸಿದ್ಧವಾಗಲಿದೆ. ದಸರಾಗೆ ಕಾರ್ಯಕ್ರಮ ನಡೆಸುವ ಉದ್ದೇಶವಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಮಂಡ್ಯ ಜಿಲ್ಲೆ ಕೆಆರ್ ಎಸ್ ನಲ್ಲಿ “ಕಾವೇರಿ ಆರತಿ”
ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆ ಶಿವಕುಮಾರ್
ಚಾಮರಾಜನಗರ: “ನಂಜುಂಡಪ್ಪ ವರದಿಯಲ್ಲಿ ಜಾಮರಾಜನಗರ ಜಿಲ್ಲೆಗೆ ಅತ್ಯಂತ ಹಿಂದುಳಿದ ಜಿಲ್ಲೆ ಎಂಬ ಹಣೆಪಟ್ಟಿ ಸಿಕ್ಕಿತ್ತು. ಈ ಹಣೆಪಟ್ಟಿಯನ್ನು ತೆಗೆಯಲು ನಮ್ಮ ಸರ್ಕಾರ ಬದ್ಧವಾಗಿದ್ದು, ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ನಮ್ಮ ಸರ್ಕಾರ ಕೈಗೊಂಡಿರುವ ತೀರ್ಮಾನ, ಯೋಜನೆಗಳು ಇದಕ್ಕೆ ನೆರವಾಗಲಿದೆ” ಎಂದು
ಕಲ್ಪನೆಗೂ ಮೀರಿದ ಶಿಕ್ಷೆ ಕೊಡುವ ಸಮಯ ಬಂದಿದೆ: ಪ್ರಧಾನಿ ಮೋದಿ ಗುಡುಗು
ಪಹಲ್ಗಾಮ್‌ನಲ್ಲಿ ದಾಳಿ ಮಾಡಿದವರು ಮತ್ತು ದಾಳಿಗೆ ಸಂಚು ರೂಪಿಸಿದವರಿಗೆ ಕಲ್ಪನೆಗೂ ಮೀರಿದ ರೀತಿಯಲ್ಲಿ ಶಿಕ್ಷೆ ಸಿಗಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಮೋದಿ ಗುಡುಗಿದ್ದಾರೆ. ಬಿಹಾರದ ಮಧುಬನಿಯಲ್ಲಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಮತ್ತು ದೀನ್ ದಯಾಳ್ ಉಪಾಧ್ಯಾಯ ಅಂತ್ಯೋದಯ ಯೋಜನೆ–ರಾಷ್ಟ್ರೀಯ




