Wednesday, September 30, 2026
Menu

15 ದಿನದಲ್ಲಿ ಬರ ಪರಿಸ್ಥಿತಿ ವರದಿ ಸಿದ್ಧಪಡಿಸಿ: ಅಧಿಕಾರಿಗಳಿಗೆ ಮುಖ್ಯಮಂತ್ರಿ ನಿರ್ದೇಶನ

ರಾಜ್ಯದಲ್ಲಿ ಮಳೆ ಕೊರತೆ, ಬರ ಪರಿಸ್ಥಿತಿ ಕುರಿತು ಮುಂದಿನ 15 ದಿನಗಳಲ್ಲಿ ಕೇಂದ್ರಕ್ಕೆ ಸಲ್ಲಿಸಲು ಸಮರ್ಪಕ ವರದಿ ಸಿದ್ಧಪಡಿಸಿ. ಸ್ಥಳ ಪರಿಶೀಲನೆ ಮಾಡಿ ವರದಿ ರೂಪಿಸಬೇಕು, ಕಚೇರಿಯಲ್ಲಿ ಕೂತು ತಯಾರಿಸಬಾರದು ಎಂದು ಸಿಎಂ ಡಿಕೆ ಶಿವಕುಮಾರ್‌ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ವಿಧಾನಸೌಧದಲ್ಲಿ ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆ ಹಾಗೂ ವಿಶೇಷ ಸಚಿವ ಸಂಪುಟ ಸಭೆಯ ನಿರ್ಣಯಗಳಿಗೆ ಸಂಬಂಧಿಸಿದಂತೆ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದರು. ನಮ್ಮ ವರದಿ ಬಳಿಕ

15 ಸಾವಿರ ಶಾಲಾ ಶಿಕ್ಷಕರ ನೇಮಕ: ಸಿಎಂ ಡಿಕೆ ಶಿವಕುಮಾರ್

15 ಸಾವಿರ ಶಾಲಾ ಶಿಕ್ಷಕರ ನೇಮಕಾತಿಗೆ ಸಚಿವ ಸಂಪುಟ ಸಭೆಯಲ್ಲಿ ಘಟನೋತ್ತರ ಅನುಮೋದನೆ ನೀಡಲಾಯಿತು ಎಂದು ಸಿಎಂ ಡಿಕೆ ಶಿವಕುಮಾರ್  ಹೇಳಿದ್ದಾರೆ.  ಬರ ಪರಿಸ್ಥಿತಿ ಕುರಿತ ಜಿಲ್ಲಾಧಿಕಾರಿ ಹಾಗೂ ಸಿಇಒ ಸಭೆಯ ಹಾಗೂ ವಿಶೇಷ ಸಚಿವ ಸಂಪುಟಸಭೆಯ ನಂತರ ವಿಧಾನಸೌಧದ ಸಮ್ಮೇಳನ

ನಾಳೆ ಹರದನಹಳ್ಳಿಯ ಮಾವಿನಕೆರೆಯಲ್ಲಿ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅಂತ್ಯಕ್ರಿಯೆ

ಪದ್ಮನಾಭ ನಗರದ ನಿವಾಸದಲ್ಲಿ ಸಾರ್ವಜನಿಕರ ದರ್ಶನಕ್ಕೆ ಇಡಲಾಗಿರುವ ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಅವರ ಪಾರ್ಥಿವ ಶರೀರವನ್ನು ಇಂದು ಭಾನುವಾರ ಮಧ್ಯಾಹ್ನದ ನಂತರ ಸ್ವಗ್ರಾಮ ಹಾಸನದ ಹರದನಳ್ಳಿಗೆ ಕೊಂಡೊಯ್ದು  ಸಾರ್ವಜನಿಕರ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗುತ್ತದೆ ಎಂದು ಕುಟುಂಬ ತಿಳಿಸಿದೆ.

ಪ್ರಧಾನಿ ಮಡದಿಯಾಗಿದ್ದಾಗಲೂ ಹಮ್ಮು ಬಿಮ್ಮು ಇಲ್ಲದೆ ಎಲ್ಲರನ್ನೂ ಅಕ್ಕರೆಯಿಂದ ಕಾಣುತ್ತಿದ್ದ ಚನ್ನಮ್ಮ: ಮಾಜಿ ಸಿಎಂ ಸಿದ್ದರಾಮಯ್ಯ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಜಿ ಪ್ರಧಾನಿಹೆಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿನೀಡಿ, ದೇವೇಗೌಡರ ಪತ್ನಿ ಚನ್ನಮ್ಮನವರ ಪಾರ್ಥಿವ ಶರೀರದ ದರ್ಶನ ಪಡೆದು, ಅಂತಿಮ ನಮನ ಸಲ್ಲಿಸಿ ಬಳಿಕ ಅವರ ಕುಟುಂಬದವರಿಗೆ ಸಾಂತ್ವನ ಹೇಳಿದರು. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಪತ್ನಿ ಚೆನ್ನಮ್ಮನವರ ನಿಧನದಿಂದ ದುಃಖಿತನಾಗಿದ್ದೇನೆ.

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮ ಮಾತೃ ಸ್ವರೂಪಿಣಿ: ಸಿಎಂ ಡಿಕೆ ಶಿವಕುಮಾರ್‌ ಸಂತಾಪ

ಮಾಜಿ ಪ್ರಧಾನಿ ದೇವೇಗೌಡರ ಪತ್ನಿ ಚನ್ನಮ್ಮನ್ನವರ ಪಾರ್ಥಿವ ಶರೀರಕ್ಕೆ ಪದ್ಮನಾಭನಗರ ನಿವಾಸದಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಪತ್ನಿ ಉಷಾ  ಜತೆ ಶನಿವಾರ ರಾತ್ರಿ ಅಂತಿಮ ನಮನ ಸಲ್ಲಿಸಿದರು. ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಮಾಜಿ ಸಚಿವ ರೇವಣ್ಣ ಸೇರಿದಂತೆ

ಸಮುದ್ರದ ಮಡಿಲಲ್ಲಿ ಪ್ಲಾಸ್ಟಿಕ್ ವಿಷ: ಬಾರ್ನಕಲ್ಸ್‌ ಎಚ್ಚರಿಕೆ

ನಮ್ಮ ಕಣ್ಣಿಗೆ ಕಾಣದ ಅದೆಷ್ಟೋ ಅಪಾಯಗಳು ಸಾಗರದ ಆಳದಲ್ಲಿ ಅಡಗಿವೆ. ಕಡಲತೀರದ ಸೌಂದರ್ಯವನ್ನು ಸವಿಯುವ  ನಮಗೆ ಅಲ್ಲಿನ ಪುಟ್ಟ ಜೀವಿಗಳು ನೀಡುತ್ತಿರುವ ಭೀಕರ ಎಚ್ಚರಿಕೆ ಸದ್ದು ಮಾಡುತ್ತಿದೆ. ಅತಿ ಸ್ವಚ್ಛವೆಂದು ಹೆಸರಾದ ಗುಜರಾತ್‌ನ ಶಿವ್ರಾಜ್‌ಪುರ ಕಡಲತೀರದಲ್ಲಿ ಪತ್ತೆಯಾದ ಮೈಕ್ರೋಪ್ಲಾಸ್ಟಿಕ್ 39  ಪ್ರಮಾಣದ 

ಸ್ವಾತಂತ್ರ್ಯದಿನಾಚರಣೆ: ಕೆಂಪು ಕೋಟೆಗೆ ಒಂದು ತಿಂಗಳು ಪ್ರವಾಸಿಗರಿಗೆ ನಿರ್ಬಂಧ

ಸ್ವಾತಂತ್ರ್ಯ ದಿನಾಚರಣೆಯ ಸಂಭ್ರಮಕ್ಕೆ ಐತಿಹಾಸಿಕ ಕೆಂಪು ಕೋಟೆಯಲ್ಲಿ ಸಿದ್ಧತೆಗಳು ಬಿರುಸಾಗಿವೆ. ಭದ್ರತೆ ಮತ್ತು ಆಡಳಿತಾತ್ಮಕ ಕಾರಣಗಳಿಂದಾಗಿ ಜುಲೈ 15 ರಿಂದ ಆಗಸ್ಟ್ 15, 2026 ರವರೆಗೆ ಕೆಂಪು ಕೋಟೆಯನ್ನು ಸಾರ್ವಜನಿಕ ಪ್ರವೇಶಕ್ಕೆ ಸಂಪೂರ್ಣವಾಗಿ ಮುಚ್ಚಲಾಗಿದೆ ಎಂದು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ

ಧಾರವಾಡ ಪಿಜಿಯಲ್ಲಿ ವಿದ್ಯಾರ್ಥಿ ಆತ್ಮಹತ್ಯೆ

ಯಾದಗಿರಿಯ  ವಿದ್ಯಾರ್ಥಿ ಧಾರವಾಡದ  ಪಿಜಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.  ಪೊಲೀಸ್ ಕಾನ್ಸೆಬಲ್ ಹುದ್ದೆಯ ತಯಾರಿಗೆ ಬಂದಿದ್ದ 19 ವರ್ಷದ  ಮಹೇಶ ರಾಥೋಡ ವಿದ್ಯಾರ್ಥಿ ಜಯನಗರದ ಪಿ ಜಿಯ ರೂಮ್ ನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಯಾವ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದು

PMO ಹೆಸರಲ್ಲಿ 4 ಕೋಟಿ ವಂಚನೆ: ನಕಲಿ ಅಧಿಕಾರಿಯ ಜಾಮೀನು ಅರ್ಜಿ ವಜಾ

ಪ್ರಧಾನ ಮಂತ್ರಿ ಕಾರ್ಯಾಲಯದ ಹಿರಿಯ ಅಧಿಕಾರಿ ಎಂದು ಹೇಳಿಕೊಂಡು  ಕೋಟ್ಯಂತರ ರೂಪಾಯಿ ದೋಚಿ ಬಂಧಿತರಾಗಿರುವ  ವಿಜಯ್ ಗುಪ್ತಾ,  ಜಾಮಿನಿಗಾಗಿ ಸಲ್ಲಿಸಿದ್ದ ಈತನ ಅರ್ಜಿಯನ್ನು ದೆಹಲಿಯ ಪಟಿಯಾಲ ಹೌಸ್  ನ್ಯಾಯಾಲಯವು ವಜಾಗೊಳಿಸಿದೆ. ಜಮ್ಮು ಮೂಲದ 'ಯಂಗ್ ಬೈಟ್ಸ್' ಎಂಬ ಸಂಸ್ಥೆಯ ಮಾಲೀಕ ವಿಜಯ್

ಡಿಎಲ್ಎಫ್ ಗೆ ಟೆಂಡರ್ ಕೊಟ್ಟ ಕುಮಾರಸ್ವಾಮಿ ಪಡೆದ ಕಿಕ್ ಬ್ಯಾಕ್ ಎಷ್ಟು: ಶಾಸಕ ಬಾಲಕೃಷ್ಣ

ಕುಮಾರಸ್ವಾಮಿ ಬಿಡದಿ ಯೋಜನೆಯನ್ನು ಪಿಪಿಪಿ ಮಾದರಿಯಲ್ಲಿ ಡಿಎಲ್ಎಫ್ ನವರಿಗೆ ನೀಡಿದರು. ಇದನ್ನು ನೀಡುವಾಗ ಅವರು ಎಷ್ಟು ಕಿಕ್ ಬ್ಯಾಕ್ ಪಡೆದಿದ್ದರು ಎಂದು  ಅವರೇ ಹೇಳಬೇಕು. ಕುಮಾರಸ್ವಾಮಿ ಈ ಯೋಜನೆ ಮಾಡುವಾಗ ಡಿಸಿಎಂ ಆಗಿದ್ದು ಯಡಿಯೂರಪ್ಪನವರು. ಕನಿಷ್ಠ ಸೌಜನ್ಯಕ್ಕಾದರೂ ಯಡಿಯೂರಪ್ಪನವರನ್ನು ಪಕ್ಕದಲ್ಲಿ ಕೂರಿಸಿಕೊಂಡು