kannada news
ಏಳು ಜಿಲ್ಲೆಗಳ 500 ಕೆರೆ ಪುನಶ್ಚೇತನಕ್ಕೆ 150 ಕೋಟಿ ರೂ.: ಈಶ್ವರ ಖಂಡ್ರೆ
ರಾಜ್ಯದ 7 ಜಿಲ್ಲೆಗಳ 500 ಕೆರೆಗಳ ಪುನಶ್ಚೇತನಕ್ಕೆ ವಿಶ್ವಬ್ಯಾಂಕ್ ನೆರವಿನ ಯೋಜನೆಯಡಿ 150 ಕೋಟಿ ರೂ. ಸಮಗ್ರ ಯೋಜನಾ ವರದಿ ಸಿದ್ಧವಾಗಿದ್ದು, ಸಮರೋಪಾದಿಯಲ್ಲಿ ಕೆರೆ ಅಭಿವೃದ್ಧಿ ಮಾಡುವಂತೆ ಸಂಬಂಧಿತ ಸಿಇಒಗಳಿಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಎಲ್ಲ ಜಿಲ್ಲೆಗಳ ಪಂಚಾಯತಿ ಮುಖ್ಯಕಾರ್ಯನಿರ್ವಹಣಾಧಿಕಾರಿಗಳೊಂದಿಗೆ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆ ಕುರಿತಂತೆ ವಿಡಿಯೋ ಕಾನ್ಫರೆನ್ಸ್ ನಡೆಸಿದ
ವಂದೇ ಮಾತರಂ: ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಲು ಕೇಂದ್ರಕ್ಕೆ ಸುಪ್ರೀಂ ಸೂಚನೆ
ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ವಂದೇ ಮಾತರಂನ ಎಲ್ಲ ಆರು ಚರಣ ಹಾಡುವುದನ್ನು ಕಡ್ಡಾಯಗೊಳಿಸಿದ ಕೇಂದ್ರದ ನಿರ್ದೇಶನ ಮತ್ತು ಸಂಬಂಧಿಸಿದ ದಂಡನಾತ್ಮಕ ಕ್ರಮಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್, ಎರಡು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ
ನಂಜನಗೂಡಿನಲ್ಲಿ ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸಾವು
ರಸ್ತೆ ದಾಟುತ್ತಿದ್ದಾಗ ಕಾರು ಡಿಕ್ಕಿಯಾಗಿ ವಿದ್ಯಾರ್ಥಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ನಂಜನಗೂಡಿನ ಜೆಎಸ್ಸೆಸ್ ಪಾಲಿಟೆಕ್ನಿಕ್ ಕಾಲೇಜು ಮುಂಭಾಗದಲ್ಲಿ ನಡೆದಿದೆ. 19 ವರ್ಷದ ಪ್ರಿತೇಶ್ ಜೈನ್ ಮೃತಪಟ್ಟ ವಿದ್ಯಾರ್ಥಿ. ಕಾಲೇಜಿನಲ್ಲಿ ಕೋರ್ಸ್ ಪೂರ್ಣಗೊಳಿಸಿ ಉದ್ಯೋಗಕ್ಕೂ ಆಯ್ಕೆಯಾಗಿದ್ದ ಆತ ನೇಮಕಾತಿ ಪ್ರಮಾಣಪತ್ರ ಪಡೆಯಲು ಬಂದಿದ್ದ
ಕೆಪಿಎಸ್ ಸಿ ಮುಚ್ಚುವ ಬಗ್ಗೆ ಚಿಂತನೆ: ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಕೆಪಿಎಸ್ ಸಿಯಲ್ಲಿ ಹಗರಣಗಳು ಹೆಚ್ಚಿವೆ. ಇದನ್ನು ಕಾನೂನು ಚೌಕಟ್ಟಿನಲ್ಲಿ ಮುಚ್ಚುವ ಬಗ್ಗೆ ತಜ್ಞರ ಜೊತೆ ಚರ್ಚೆ ಮಾಡುತ್ತಿದ್ದೇನೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಿಯೋನಿಕ್ಸ್‌ನ 50ನೇ ಸಂಸ್ಥಾಪನಾ ದಿನಾಚರಣೆ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಕೆಪಿಎಸ್ ಸಿಯಲ್ಲಿ ಖದೀಮರು ಸೇರಿಕೊಂಡಿದ್ದಾರೆ.
ಬಿಯಾಂಡ್ ಬೆಂಗಳೂರು ಮೂಲಕ ಹುಬ್ಬಳ್ಳಿ, ಶಿವಮೊಗ್ಗ, ಕಲಬುರ್ಗಿ, ಮಂಗಳೂರಿನಲ್ಲಿ ಐಟಿ ಕ್ಷೇತ್ರಕ್ಕೆ ಉತ್ತೇಜನ
ಬೆಂಗಳೂರಿನ ಜತೆಗೆ ಹುಬ್ಬಳ್ಳಿ, ಶಿವಮೊಗ್ಗ, ಕಲಬುರ್ಗಿ, ಮಂಗಳೂರಿನಲ್ಲಿ ಮಾಹಿತಿ ತಂತ್ರಜ್ಞಾನಕ್ಕೆ ಉತ್ತೇಜನ ನೀಡಲು ತೀರ್ಮಾನಿಸಿದ್ದು, ಬಿಯಾಂಡ್ ಬೆಂಗಳೂರು ಪರಿಕಲ್ಪನೆಯಲ್ಲಿ ಬೇರೆ ಜಿಲ್ಲೆಗಳಲ್ಲಿ ಉದ್ಯಮಗಳ ಪ್ರಗತಿಗೆ ಮುಂದಾಗಿದ್ದೇವೆ. ಎಐ ತಂತ್ರಜ್ಞಾನ ಬಂದಿದ್ದು, ಎಲ್ಲರಿಗೂ ಇದು ಲಭ್ಯವಾಗುತ್ತಿದೆ. ಕಿಯೋನಿಕ್ಸ್ ಅವರು ಗ್ರಾಮೀಣ ಭಾಗದ ಶಾಲೆಗಳು
ರಾಜ್ಯದ ಹಲವೆಡೆ ಭ್ರಷ್ಟರ ವಿರುದ್ಧ ಲೋಕಾಯುಕ್ತ ದಾಳಿ
ರಾಜ್ಯದಲ್ಲಿ ಆದಾಯ ಮೀರಿ ಅಕ್ರಮ ಆಸ್ತಿ ಗಳಿಸಿರುವ ಅಧಿಕಾರಿಗಳ ವಿರುದ್ಧ ಲೋಕಾಯುಕ್ತ ಕಾರ್ಯಾಚರಣೆ ಕೈಗೊಂಡಿದ್ದು, ಐದು ಜಿಲ್ಲೆಗಳಲ್ಲಿ ದಾಳಿ ನಡೆಸಿದೆ. ಕಲಬುರಗಿ, ಹುಬ್ಬಳ್ಳಿ, ಚಿಕ್ಕಬಳ್ಳಾಪುರ, ಬೀದರ್ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ಏಕಕಾಲಕ್ಕೆ ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು, ಕೋಟ್ಯಂತರ ರೂಪಾಯಿ ಮೌಲ್ಯದ
46 ಕೋಟಿ ರೂ. ವಂಚನೆ ಯತ್ನ: ನಟಿ ಅಂಬಿಕಾ ವಿರುದ್ಧ ಸೋದರಿ ದೂರು
ಚೆನ್ನೈನ ನಿವಾಸದಲ್ಲಿ ಸಹಿ ಮಾಡಿ ಇಟ್ಟಿದ್ದ ಖಾಲಿ ಚೆಕ್‌ಗಳನ್ನು ನನ್ನ ಗಮನಕ್ಕೆ ಬಾರದಂತೆ ತೆಗೆದುಕೊಂಡು ೪೬ ಕೋಟಿ ರೂ ಪಡೆಯುವ ಪ್ರಯತ್ನ ನಡೆಸಿರುವುದಾಗಿ ನಟಿ ಅಂಬಿಕಾ ವಿರುದ್ಧ ಸೋದರಿ ರಾಧಾ ದೂರು ದಾಖಲಿಸಿದ್ದಾರೆ. ಅಂಬಿಕಾ ಮತ್ತು ಸೋದರ ಮಲ್ಲಿಕಾರ್ಜುನ ಕುಂಜನ್ ನಾಯರ್
ದೇಶದ ಎಲ್ಲ ತಾಲೂಕುಗಳಲ್ಲಿ ಆರೋಗ್ಯ ಕೇಂದ್ರ: ಸದ್ಗುರು ಶ್ರೀ ಮಧುಸೂದನ ಸಾಯಿ
ದೇಶಾದ್ಯಂತ ಎಲ್ಲಾ 6,000 ತಾಲೂಕುಗಳಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರ ‘ಸಾಯಿ ಸ್ವಾಸ್ಥ್ಯ ಕೇಂದ್ರ’ವನ್ನು ಆರಂಭಿಸುವ ಉದ್ದೇಶ ಇದೆ ಎಂದು ಒನ್ ವರ್ಲ್ಡ್ ಒನ್ ಫ್ಯಾಮಿಲಿ ಮಿಷನ್ ಸಂಸ್ಥಾಪಕ ಸದ್ಗುರು ಶ್ರೀ ಮಧುಸೂದನ ಸಾಯಿ ಹೇಳಿದರು. ಮಂಡ್ಯ ನಗರದಲ್ಲಿ ನಡೆದ “ದಿವ್ಯ ಸಂಜೆ”
ಹುಬ್ಬಳ್ಳಿ–ಗದಗ ಬೈಪಾಸ್‌ನಲ್ಲಿ ಅಪಘಾತಕ್ಕೆ ದಂಪತಿ ಬಲಿ
ಹುಬ್ಬಳ್ಳಿ-ಗದಗ ಬೈಪಾಸ್ ರಸ್ತೆಯಲ್ಲಿ ತಡರಾತ್ರಿ ಕೊರಿಯರ್ ವಾಹನ ಬೈಕ್‌ಗೆ ಡಿಕ್ಕಿ ಹೊಡೆದು ದಂಪತಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಜಯರಾಜನಗರ ನಿವಾಸಿಗಳಾದ ರಜನಿ ತಿಕಲಾ ಹಾಗೂ ಸುಕುಮಾರ ತಿಕಲಾ ಮೃತಪಟ್ಟವರು ಎಂದು ಗುರುತಿಸಲಾಗಿದೆ. ರಜನಿ ತಿಕಲಾ ಹುಬ್ಬಳ್ಳಿಯ ಖಾಸಗಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ
ರಾಜ್ಯದ ರೈತರು, ಜನರ ರಕ್ಷಣೆಗೆ ಬದ್ಧ: ಮುಖ್ಯಮಂತ್ರಿ ಡಿಕೆ ಶಿವಕುಮಾರ್
ರಾಜ್ಯದ ರೈತರು, ಜನರ ರಕ್ಷಣೆ ನನಗೆ ಮುಖ್ಯ. ಅದಕ್ಕೆ ಬದ್ಧನಾಗಿದ್ದೇನೆ. ದೊರೆತಿರುವ ಈ ಅವಕಾಶವನ್ನು ಬಳಸಿಕೊಂಡು ಎಲ್ಲರನ್ನೂ ರಕ್ಷಣೆ ಮಾಡಬೇಕು. ಸಮಸ್ಯೆಗಳನ್ನು ಇಟ್ಟುಕೊಂಡು ರಾಜಕಾರಣ ಮಾಡುವ ಉದ್ದೇಶ ನನಗಿಲ್ಲ ಎಂದು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದರು. ಸೋಮವಾರದಿಂದ ಆರಂಭಗೊಂಡಿರುವ 3 ದಿನಗಳ




