kannada news
ಸತತ ಏರಿಕೆ ಕಂಡಿದ್ದ ಚಿನ್ನ, ಬೆಳ್ಳಿ ದರ ದಿಢೀರ್ ಕುಸಿತ!
ಸತತ ಐದು ದಿನಗಳಿಂದ ಏರಿಕೆ ಕಂಡು ಸಾರ್ವಕಾಲಿಕ ದಾಖಲೆ ಮಟ್ಟಕ್ಕೆ ಏರಿರುವ ಚಿನ್ನ- ಬೆಳ್ಳಿ ದರ ಶುಕ್ರವಾರ ದಿಢೀರ್ ಕುಸಿತ ದಾಖಲಿಸಿದೆ. ಇದರಿಂದ ಗ್ರಾಹಕರು ನೆಮ್ಮದಿಯ ನಿಟ್ಟುಸಿರುಬಿಡುವಂತಾಗಿದೆ. ಬೆಳ್ಳಿ ಬೆಲೆಯಲ್ಲಿ ಬರೋಬ್ಬರಿ 4,027 ರೂ. ಇಳಿಕೆ ಕಂಡಿದೆ. ಇದರಿಂದ ಕೆಜಿಗೆ ಬೆಳ್ಳಿ ದರ 2,87,550 ರೂ. ಆಗಿದೆ. 10 ಗ್ರಾಂ ಚಿನ್ನದ ಬೆಲೆಯಲ್ಲಿ ಕುಸಿತ ಕಂಡಿದ್ದು, 1,42,601 ರೂ. ಇಳಿಕೆಯಾಗಿದೆ. ಎಂಸಿಎಕ್ಸ್ ಪ್ರಕಾರ, ಮಾರ್ಚ್ ವಿತರಣೆಯ ಬೆಳ್ಳಿ ಬೆಲೆಯಲ್ಲಿ 4,027
ಸುತ್ತೂರು ಜಾತ್ರೆಯ ಸಾಮೂಹಿಕ ವಿವಾಹ: ದಾಂಪತ್ಯಕ್ಕೆ ಕಾಲಿಟ್ಟ 135 ಜೋಡಿ
ಮೈಸೂರಿನ ಸುತ್ತೂರು ಜಾತ್ರಾ ಮಹೋತ್ಸವದ 2ನೇ ದಿನ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ 135 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ವಿವಿಧ ಮಠಾಧಿಪತಿಗಳ ದಿವ್ಯ ಸಾನ್ನಿಧ್ಯದಲ್ಲಿ ಶುಕ್ರವಾರ ಸಾಮೂಹಿಕ ವಿವಾಹ ನಡೆಯಿತು. 135 ಜೋಡಿಗಳ ಪೈಕಿ 84 ಪರಿಶಿಷ್ಟ ಜಾತಿ, 15
ಪತ್ನಿಯ ಕೊಲೆ ಆರೋಪದಡಿ ಧಾರವಾಡ ಜೈಲಿನಲ್ಲಿದ್ದ ಕೈದಿ ಆತ್ಮಹತ್ಯೆ
ಪತ್ನಿಯ ಕೊಲೆ ಆರೋಪದಡಿ 14 ವರ್ಷಗಳ ಶಿಕ್ಷೆಗೆ ಒಳಗಾಗಿ ಧಾರವಾಡ ಜೈಲಿನಲ್ಲಿದ್ದ ಕೈದಿಯೊಬ್ಬರು ಕಾರಾಗೃಹದ ಆವರಣದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಜೈಲಿನ ಆವರಣದಲ್ಲಿ ಆತ್ಮಹತ್ಯೆ ಮಾಡಿಕೊಂಡ ಕೈದಿಯನ್ನು ಗದಗ ಜಿಲ್ಲೆಯ ಲಕ್ಷ್ಮೇಶ್ವರ ತಾಲೂಕಿನ ಬಸಾಪುರದ ಈಶ್ವರಪ್ಪ ಪೂಜಾರ್ ಎಂದು ಗುರುತಿಸಲಾಗಿದೆ.
ಮುಂಬೈ ಮಹಾನಗರ ಪಾಲಿಕೆ: ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಆರೋಪಿ ಗೆಲುವು
ಮುಂಬೈ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಜಲ್ನಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಗೆದ್ದಿದ್ದಾರೆ. 2017ರ ಸೆಪ್ಟೆಂಬರ್ 5ರಂದು ಬೆಂಗಳೂರಿನ ಅವರ ಮನೆಯ ಹೊರಗೆ ಗೌರಿ ಲಂಕೇಶ್ ಅವರ ಹತ್ಯೆ
ಮದುವೆಗೆ ಐದು ದಿನ ಬಾಕಿ: ಮಂಡ್ಯದಲ್ಲಿ ಆಸ್ತಿಗಾಗಿ ತಮ್ಮನ ಕೊಲೆಗೈದ ಅಣ್ಣ
ಮಂಡ್ಯ ತಾಲೂಕಿನ ಮಾಯಪ್ಪನಹಳ್ಳಿಯಲ್ಲಿ ಆಸ್ತಿಗಾಗಿ ಅಣ್ಣನೊಬ್ಬ ಸದ್ಯದಲ್ಲೇ ಮದುವೆಯಾಗಲಿದ್ದ ತಮ್ಮನನ್ನು ಇರಿದು ಕೊಂದಿರುವ ಘಟನೆ ನಡೆದಿದೆ. ಯೋಗೇಶ್ (30) ಅಣ್ಣ ಮತ್ತು ಆತನ ಮಕ್ಕಳಿಂದ ಕೊಲೆಯಾದವರು. ಯೋಗೇಶ್‌ಗೆ ಇದೇ ತಿಂಗಳು 21 ರಂದು ಮದುವೆ ನಿಶ್ಚಯವಾಗಿತ್ತು. ಮನೆಯಲ್ಲಿ ಮದುವೆಯ ಸಂಭ್ರಮವಿತ್ತು. ಸಂಬಂಧಿಕರಿಗೆಲ್ಲ
ತುಮಕೂರಿನಲ್ಲಿ ಬಾಲಕಿ ಎದುರೇ ತಂದೆಯ ಕೊಲೆಗೈದಿದ್ದ ಕಳ್ಳರು ಅರೆಸ್ಟ್
ತುಮಕೂರಿನಲ್ಲಿ ಮಗಳ ಜೊತೆ ಮನೆ ಮುಂದೆ ಕುಳಿತಿದ್ದ ಮಂಜುನಾಥ್ ಎಂಬ ವ್ಯಕ್ತಿಯನ್ನು ಅಪರಿಚಿತ ಮುಸುಕುಧಾರಿಗಳು ಕೊಲೆಗೈದು ಪರಾರಿಯಾಗಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ನಾಲ್ವರು ಆರೋಪಿಗಳನ್ನು 48 ಗಂಟೆಗಳಲ್ಲಿ ಬಂಧಿಸಿದ್ದಾರೆ. ತಮಿಳುನಾಡಿನ ಸತೀಶ, ಕೇಶವನ್, ಕವಿತೇಶ್ವರನ್ ಹಾಗೂ ಅರುಣ್ ಬಂಧಿತ ಆರೋಪಿಗಳಾಗಿದ್ದು, ಬೆಂಗಳೂರಿನ
ಪಿಎನ್‌ಬಿ ವಂಚನೆ ಪ್ರಕರಣದಲ್ಲಿ ಮೆಹುಲ್ ಚೋಕ್ಸಿ ಮಗನೂ ಭಾಗಿ ಎಂದ ಇಡಿ
ಪಂಜಾಬ್ ನ್ಯಾಷನಲ್ ಬ್ಯಾಂಕ್ (ಪಿಎನ್‌ಬಿ) ವಂಚನೆ ಪ್ರಕರಣದಲ್ಲಿ ದೇಶದಿಂದ ಪಲಾಯನ ಮಾಡಿರುವ ವಜ್ರ ವ್ಯಾಪಾರಿ ಮೆಹುಲ್ ಚೋಕ್ಸಿ ವಿರುದ್ಧದ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯವು (ಇಡಿ) ಚೋಕ್ಸಿ ಮಗ ರೋಹನ್ ಚೋಕ್ಸಿ ಕೂಡ ಅಕ್ರಮ ಹಣ ವರ್ಗಾವಣೆಯಲ್ಲಿ ಸಕ್ರಿಯ ಭಾಗಿ ಎಂದು
ಮುಖ್ಯಮಂತ್ರಿ ಸ್ಥಾನ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ: ಡಿಕೆ ಶಿವಕುಮಾರ್
“ಮುಖ್ಯಮಂತ್ರಿ ಸ್ಥಾನದ ವಿಚಾರ ನನ್ನ, ಸಿಎಂ ಹಾಗೂ ಹೈಕಮಾಂಡ್ ನಡುವಣ ವಿಚಾರ. ಇದು ಸಾರ್ವಜನಿಕವಾಗಿ ಚರ್ಚೆ ಮಾಡುವ ವಿಷಯವಲ್ಲ” ಎಂದು ಡಿಸಿಎಂ ಡಿಕೆ ಶಿವಕುಮಾರ್ ಸ್ಪಷ್ಟಪಡಿಸಿದ್ದದಾರೆ. ದೆಹಲಿಯಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ರಾಹುಲ್ ಗಾಂಧಿ ಅವರ ಜೊತೆ ಸಿಎಂ
ಬೆಂಗಳೂರು ಉಪನಗರ ರೈಲು ಯೋಜನೆ ತ್ವರಿತಗೊಳಿಸಲು ಪ್ರಧಾನಿ ಸೂಚನೆ
ಬೆಂಗಳೂರು ಉಪನಗರ ರೈಲ್ವೆ ಯೋಜನೆ ಕಾಮಗಾರಿ ವಿಳಂಬ ಗತಿಯಲ್ಲಿ ಸಾಗುತ್ತಿದ್ದು, ತ್ವರಿತಗೊಳಿಸುವಂತೆ ಪ್ರಧಾನಿ ನರೇಂದ್ರ ಮೋದಿ ಸೂಚಿಸಿದ್ದಾರೆ. ಇತ್ತೀಚೆಗೆ ನಡೆಸಿದ ಪ್ರಗತಿ ಸಭೆಯಲ್ಲಿ ಪ್ರತಿಪಕ್ಷಗಳ ಆಡಳಿತವಿರುವ ರಾಜ್ಯಗಳಾದ ಕರ್ನಾಟಕ ಮತ್ತು ತೆಲಂಗಾಣದಲ್ಲಿ ಎರಡು ಮೆಗಾ ಯೋಜನೆಗಳನ್ನು ಪರಿಶೀಲಿಸಿದ ಬಳಿಕ ಈ ಸೂಚನೆ
ಚೀನಾ ಯುದ್ಧ ವೇಳೆ ದೇಶಕ್ಕೆ 600 ಕೆಜಿ ಚಿನ್ನ, 3 ವಿಮಾನ, 90 ಎಕರೆ ಭೂಮಿ ನೀಡಿದ್ದ ರಾಣಿ ಕಾಮಸುಂದರಿ ದೇವಿ ಇನ್ನಿಲ್ಲ
1962ರಲ್ಲಿ ಭಾರತ- ಚೀನಾ ಯುದ್ಧ ನಡೆಯುವ ವೇಳೆ ದೇಶದ ರಕ್ಷಣೆಗಾಗಿ 600 ಕೆಜಿ ಚಿನ್ನ ಹಾಗೂ ಮೂರು ಖಾಸಗಿ ವಿಮಾನವನ್ನು ದಾನವಾಗಿ ನೀಡಿದ್ದ ದರ್ಭಾಂಗ ರಾಜಮನೆತನದ ಕೊನೆಯ ರಾಣಿ ಕಾಮಸುಂದರಿ ದೇವಿ( 96) ನಿಧನರಾಗಿದ್ದಾರೆ. ಮಹಾರಾಜ ದಿ. ಕಾಮೇಶ್ವರ ಸಿಂಗ್ ಅವರ




