Thursday, October 01, 2026
Menu

ಕಳ್ಳನೋಟು ದಂಧೆ: ತುಮಕೂರಿನಲ್ಲಿ ಆರು ಆರೋಪಿಗಳ ಬಂಧನ

ತುಮಕೂರಿನ ಚಿಕ್ಕನಾಯಕನಹಳ್ಳಿ ಪೊಲೀಸರು ರಾಜ್ಯವ್ಯಾಪಿ ಕಾರ್ಯನಿರ್ವಹಿಸುತ್ತಿದ್ದ ಖೋಟಾ ನೋಟಿನ ಜಾಲವನ್ನು ಭೇದಿಸಿ, ಆರು ಆರೋಪಿಗಳನ್ನು ಬಂಧಿಸಿದ್ದಾರೆ. ಒಂದು 500 ರೂಪಾಯಿ ಮುಖಬೆಲೆಯ ನಕಲಿ ನೋಟಿನ ಸುಳಿವು ಆಧರಿಸಿ ಕಾರ್ಯಾಚರಣೆ ನಡೆಸಿದ ಪೊಲೀಸರು ಬೆಂಗಳೂರು ಮತ್ತು ಮೈಸೂರು ಸೇರಿದಂತೆ ರಾಜ್ಯದ ನಾನಾ ಕಡೆ ಮುದ್ರಣ, ಮಾರಾಟ ಮತ್ತು ಚಲಾವಣೆಯ ಜಾಲವನ್ನು ಪತ್ತೆ ಹಚ್ಚಿದ್ದಾರೆ. ಹುಳಿಯಾರಿನ ಅಂಗಡಿಯೊಂದರಲ್ಲಿ ಇಬ್ಬರು ಸಿಗರೇಟ್ ಖರೀದಿಸಿ 500 ರೂಪಾಯಿಯ ನಕಲಿ ನೋಟು ನೀಡಿ ಪರಾರಿಯಾಗಿದ್ದರು. ಅಂಗಡಿ ಮಾಲೀಕ

ಕುಡಿಯುವ ನೀರು: ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ 1 ಕೋಟಿ ರೂ.

ಮಳೆ ಕೊರತೆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕುಡಿಯುವ ನೀರಿಗೆ ಸಮಸ್ಯೆ ಆಗದಂತೆ  ಗ್ರಾಮೀಣ ಭಾಗದ ಪ್ರತಿ ವಿಧಾನಸಭಾ ಕ್ಷೇತ್ರಗಳಿಗೆ ಕೋಟಿ ರೂ. ಅನುದಾನ ನೀಡಲು ತೀರ್ಮಾನಿಸಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್  ಹೇಳಿದ್ದಾರೆ. ಬೆಳಗಾವಿಯ ಸುವರ್ಣಸೌಧದಲ್ಲಿ ಬೆಳಗಾವಿ ವಿಭಾಗದ ಪ್ರಗತಿ ಪರಿಶೀಲನಾ

ಅನ್ನ ಭಾಗ್ಯ ಅಕ್ಕಿಯನ್ನು ಅಯೋಧ್ಯೆಯ ಮಂತ್ರಾಕ್ಷತೆಯೆಂದು ಹಂಚಿದ ಬಿಜೆಪಿ: ಸಿಎಂ ಡಿಕೆ ಶಿವಕುಮಾರ್‌

ರಾಮ ನಮ್ಮ ಬಳಿ ಇಲ್ಲವೇ? ಎಲ್ಲಾ ಧರ್ಮದವರು ನಮ್ಮಲ್ಲಿದ್ದಾರೆ. ನಾವು ಎಲ್ಲಾ ಧರ್ಮದವರನ್ನು ಒಗ್ಗೂಡಿಸಿಕೊಂಡು ಹೋಗುತ್ತಿದ್ದೇವೆ. ಬಿಜೆಪಿಯವರು ಮನೆ ಮನೆಗೆ ಮಂತ್ರಾಕ್ಷತೆ ಹಂಚಿದರು. ಈ ಅಕ್ಷತೆ ಅಯೋಧ್ಯೆಯ ರಾಮಮಂದಿರದಿಂದ ಬಂದಿದ್ದು ಎಂದು ಹೇಳಿದರು. ಅದರ ಬಗ್ಗೆ ಕೂಲಂಕುಶವಾಗಿ ವಿಚಾರಿಸಿದಾಗ. ನಾವು ಕೊಟ್ಟಂತಹ

ಶಿಕ್ಷಕಿ ಬೈದಿದ್ದಕ್ಕೆ ಡೆತ್‌ ನೋಟ್‌ ಬರೆದಿಟ್ಟು ಬಾಲಕಿ ಆತ್ಮಹತ್ಯೆ

ಶಿಕ್ಷಕಿ ಬೈದಿದ್ದಕ್ಕೆ ನೊಂದ ಆನೇಕಲ್‌ನ ಮರಸೂರು ಸರ್ಕಾರಿ ಶಾಲೆಯ ೮ನೇ ತರಗತಿ ವಿದ್ಯಾರ್ಥಿನಿ ಮಧುಶ್ರೀ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆತ್ಮಹತ್ಯೆಗೂ ಮೊದಲು ಬಾಲಕಿ ಡೆತ್‌ನೋಟ್‌ ಬರೆದಿಟ್ಟಿದ್ದು, ಸೂರ್ಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಶಾಲೆಯಲ್ಲಿ ನಡೆದ ಘಟನೆ ತನಗೆ ಬಹಳ

ಲೋಕಾಯುಕ್ತ ವಿರುದ್ಧ ಅವಹೇಳನಕಾರಿ ಕಾಮೆಂಟ್‌: ಆರೋಪಿ ವೈದ್ಯರಿಬ್ಬರ ವಿರುದ್ಧ ಪ್ರಕರಣ

ಲೋಕಾಯುಕ್ತ ಸಂಸ್ಥೆ ಹಾಗೂ ಉಪ ಲೋಕಾಯುಕ್ತರ ಕುರಿತು ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಕಾಮೆಂಟ್‌ಗಳನ್ನು ಮಾಡಿದ್ದ ಆರೋಪದಡಿ ಇಬ್ಬರು ವೈದ್ಯರ ವಿರುದ್ಧ ಲೋಕಾಯುಕ್ತ ಪೊಲೀಸರು ಪ್ರತ್ಯೇಕ ಪ್ರಕರಣ ದಾಖಲಿಸಿದ್ದಾರೆ. ವಿಜಯಪುರ ಆದರ್ಶ ನಗರ ನಿವಾಸಿ ಡಾ. ಅಮಿತ್ ಪುಂಡಲೀಕ್ ಕಾಳೆ ಹಾಗೂ ಬೀದರ್

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದ ಭಾವನ ಕೊಲೆ ಮಾಡಿಸಿದ ನಾದಿನಿ

ಅಕ್ರಮ ಸಂಬಂಧಕ್ಕೆ ಅಡ್ಡಿಯಾಗಿದ್ದಾನೆಂದು ಭಾವನನ್ನು ನಾದಿನಿಯೇ ಕೊಲೆ ಮಾಡಿಸಿರುವ ಪ್ರಕರಣವನ್ನು ಚಿತ್ರದುರ್ಗ ಗ್ರಾಮಾಂತರ ಠಾಣೆ ಪೊಲೀಸರು ಬಯಲಿಗೆಳೆದಿದ್ದಾರೆ.  ಪ್ರಕರಣದಲ್ಲಿ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದ್ದು, ಒಬ್ಬ ಆರೋಪಿಗಾಗಿ ಪೊಲೀಸರು ಶೋಧ ಕಾರ್ಯ ತೀವ್ರಗೊಳಿಸಿದ್ದಾರೆ. ಚಳ್ಳಕೆರೆ ತಾಲೂಕಿನ ಚೌಳೂರು ಗ್ರಾಮದ ನಿವಾಸಿ ಶಿವಮೂರ್ತಿ (49)

ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ಸಹಿಸಲ್ಲ: ಅಧಿಕಾರಿಗಳಿಗೆ ಸಿಎಂ ಎಚ್ಚರಿಕೆ

ಸುಖಾ ಸುಮ್ಮನೆ ಜನರನ್ನು ಕಚೇರಿಯಿಂದ ಕಚೇರಿಗೆ ಅಲೆದಾಡಿಸುವುದನ್ನು ನಾನು ಸಹಿಸುವುದಿಲ್ಲ. ನಿಮ್ಮ ಹಂತದಲ್ಲೇ ಕೆಲಸ ಸರಾಗವಾಗಿ ಆದರೆ ಸಣ್ಣ ಪುಟ್ಟ ಕೆಲಸಗಳಿಗೂ ಜನತೆ ಕಚೇರಿಗೆ ಅಲೆದಾಡುವುದು ತಪ್ಪುತ್ತದೆ.  ಜಿಲ್ಲಾ ಮಟ್ಟದ ಅಧಿಕಾರಿಗಳ ಬಳಿ  ಅಧೀನ ಅಧಿಕಾರಿಗಳ ಮಾಹಿತಿ ಅಂಗೈ ತುದಿಯಲ್ಲಿ ಇರಬೇಕು. ಯಾವ

ಹಾಸನ ಚನ್ನಕೇಶವನ ಹುಂಡಿ ಎಣಿಕೆ: ಹಣ ಕದ್ದ ವೀಡಿಯೊಗ್ರಾಫರ್‌

ಹಾಸನದಲ್ಲಿ ಚನ್ನಕೇಶವ ದೇವಾಲಯದ ಹುಂಡಿ‌ ಎಣಿಕೆ ವೇಳೆ ಹಣ ಕಳವು ಮಾಡಿರುವ ಆರೋಪದಡಿ ಪೊಲೀಸರು ವಿಡಿಯೋಗ್ರಾಫರ್ ನೀಲಕಂಠ ಎಂಬಾತನನ್ನು ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಹುಂಡಿಕ ಎಣಿಕೆ ವೇಳೆ ವಿಡಿಯೋಗ್ರಾಫರ್ ಹಣ ಕದ್ದ ಆರೋಪವಿದ್ದು, ಇದರ ಹಿಂದೆ ಅಧಿಕಾರಿಗಳ ಪಾತ್ರ ಇದೆಯಾ

ಅಮೆರಿಕದಿಂದ ಮತ್ತೊಮ್ಮೆ ದಾಳಿ: ಮಧ್ಯಪ್ರಾಚ್ಯ ಉದ್ವಿಗ್ನ

ಮಧ್ಯಪ್ರಾಚ್ಯದಲ್ಲಿ ಯುದ್ಧದ ಭೀತಿ ತೀವ್ರಗೊಂಡಿದೆ. ಇರಾನ್‌ನ ಮೂರು ಪ್ರಮುಖ ಪ್ರದೇಶಗಳ ಮೇಲೆ ದಾಳಿ ನಡೆಸಿದ್ದ ಅಮೆರಿಕ, ಮತ್ತೊಮ್ಮೆ ವಾಯುದಾಳಿ ನಡೆಸಿರುವುದರಿಂದ ಪರಿಸ್ಥಿತಿ ಬಿಗಡಾಯಿಸಿದೆ. ಬುಶೆಹರ್‌ನಲ್ಲಿರುವ ಪರಮಾಣು ವಿದ್ಯುತ್ ಸ್ಥಾವರ ಪ್ರದೇಶ ಹಾಗೂ ಇರಾನ್‌ನ ಚಬಹಾರ್ ಪ್ರದೇಶಗಳನ್ನು ಗುರಿಯಾಗಿಸಿಕೊಂಡು ಅಮೆರಿಕ ದಾಳಿ ನಡೆಸಿದ

ಯಲ್ಲಾಪುರದಲ್ಲಿ ಲಾರಿ-ಕ್ರೂಸರ್‌ ಡಿಕ್ಕಿ: ಆರು ಮಂದಿ ಸಾವು

ಲಾರಿ ಮತ್ತು ಕ್ರೂಸರ್‌ ಡಿಕ್ಕಿಯಾಗಿ ಆರು ಮಂದಿ ಸ್ಥಳದಲ್ಲೇ ಮೃತಪಟ್ಟ ಘಟನೆ ಉತ್ತರ ಕನ್ನಡದ ಯಲ್ಲಾಪುರ ತಾಲೂಕಿನ ಆರತಿಬೈಲಿನಲ್ಲಿ ನಡೆದಿದೆ. ಕ್ರೂಸರ್ ಧಾರವಾಡದಿಂದ ಅಂಕೋಲಾ ಕಡೆ ತೆರಳುತ್ತಿದ್ದು, ಲಾರಿ ಯಲ್ಲಾಪುರದಿಂದ ಅಂಕೋಲಾ ಕಡೆ ಸಂಚರಿಸುತ್ತಿದ್ದಾಗ ಈ ದುರಂತ ಸಂಭವಿಸಿದೆ. ಕ್ರೂಸರ್‌ನಲ್ಲಿ ಇದ್ದ