kannada news
ಡಿಕೆ ಶಿವಕುಮಾರ್ ಕರ್ನಾಟಕದ ಇತಿಹಾಸದಲ್ಲೇ ಪುಕ್ಕಲು ಮತ್ತು ಅಸಮರ್ಥ ಸಿಎಂ: ಆರ್ ಅಶೋಕ
ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಪೂರ್ಣ ಪ್ರಮಾಣದ ಸರ್ಕಾರ ನಡೆಸಲಾಗದ ನೀವು ರಾಜ್ಯದ ಜನತೆಗೆ ದ್ರೋಹ ಬಗೆಯುತ್ತಿದ್ದೀರಿ. ಡಿಕೆ ಶಿವಕುಮಾರ್ ಅವರೇ, ನಿಮ್ಮ ರಾಜಕೀಯ ಗೊಂದಲ ಹಾಗೂ ಪುಕ್ಕಲುತನಕ್ಕೆ ರಾಜ್ಯದ ಅನ್ನದಾತರನ್ನ ಬಲಿಕೊಡುವುದನ್ನು ನಿಲ್ಲಿಸಿ. ನಿಮ್ಮಂತಹ ಪುಕ್ಕಲು ಮುಖ್ಯಮಂತ್ರಿ ಇದ್ದರೆಷ್ಟು, ಬಿಟ್ಟರೆಷ್ಟು , ಮುಖ್ಯಮಂತ್ರಿಯಾಗಿ ತಿಂಗಳು ಕಳೆದರೂ ಸಂಪುಟ ವಿಸ್ತರಣೆ ಮಾಡಲು ನಿಮಗೇಕೆ ಇಷ್ಟೊಂದು ಭಯ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಟೀಕಿಸಿದ್ದಾರೆ. ಅತಿವೃಷ್ಟಿ-ಅನಾವೃಷ್ಟಿಯಿಂದ ಈರುಳ್ಳಿ ಬೆಳೆ ನಾಶವಾಗುತ್ತಿದೆ.
ಮತ್ತಷ್ಟು ಹೊಸ ಬೆಂಗಳೂರುಗಳ ನಿರ್ಮಾಣ: ಸಿಎಂ ಡಿಕೆ ಶಿವಕುಮಾರ್
ಬೆಂಗಳೂರಿನಾಚೆಗೆ ಮತ್ತಷ್ಟು ಬೆಂಗಳೂರುಗಳನ್ನು ನಿರ್ಮಿಸಲು ನಮ್ಮ ಸರ್ಕಾರ ಮುಂದಾಗಿದೆ. ಬೆಂಗಳೂರಿನಲ್ಲಿರುವ ಎಲ್ಲಾ ಸೌಕರ್ಯಗಳನ್ನು ರಾಜ್ಯದ ಎರಡು ಹಾಗೂ ಮೂರನೇ ಹಂತದ ನಗರಗಳಿಗೂ ಒದಗಿಸಲು ಬದ್ಧರಾಗಿದ್ದೇವೆ ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಮಾನ್ಯತಾ ಟೆಕ್ ಪಾರ್ಕ್ ನಲ್ಲಿ ನಡೆದ ಟಾರ್ಗೆಟ್ ಇಂಡಿಯಾ
ವಸತಿ ಶಾಲೆಯಲ್ಲಿ ದೈಹಿಕ ಶಿಕ್ಷಕರ ಹಲ್ಲೆಗೆ ವಿದ್ಯಾರ್ಥಿ ಬಲಿ: ಪೋಷಕರ ಆರೋಪ
ಬೆಂಗಳೂರು ನಗರ ಹೊರವಲಯದ ಕಾಡಯರಪ್ಪನಹಳ್ಳಿ ಬಳಿಯ ಖಾಸಗಿ ವಸತಿ ಶಾಲೆಯಲ್ಲಿ 12 ವರ್ಷದ ವಿದ್ಯಾರ್ಥಿ ಅನುಮಾನಾಸ್ಪದವಾಗಿ ಮೃತಪಟ್ಟಿರುವ ಘಟನೆ ನಡೆದಿದೆ. ಮಗನ ಸಾವಿಗೆ ಶಾಲೆಯ ದೈಹಿಕ ಶಿಕ್ಷಕರ ಹಲ್ಲೆ ಹಾಗೂ ಒತ್ತಡವೇ ಕಾರಣ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಯಲಹಂಕ ತಾಲೂಕಿನ ಸುಬೇದಾರ್
ಪುಣೆಯಲ್ಲಿ ಕಸದ ದಿಬ್ಬ ಕುಸಿದು 16 ಮಂದಿ ನಾಪತ್ತೆ
ಪುಣೆ ಜಿಲ್ಲೆಯ ಪಿಂಪ್ರಿ ಚಿಂಚ್‌ವಾಡ್‌ನಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮೂರು ಅಂತಸ್ತಿನ ಕಟ್ಟಡದ ಮೇಲೆ ಕಸದ ದಿಬ್ಬ ಕುಸಿದು ಕನಿಷ್ಠ 16 ಜನರು ಅವಶೇಷಗಳಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಪಿಂಪ್ರಿ ಚಿಂಚ್‌ವಾಡ್‌ನ ಮೋಶಿಯಲ್ಲಿ ಈ ದುರಂತ ನಡೆದಿದ್ದು, ಅಲ್ಲಿ
ಬೆಳ್ತಂಗಡಿಯಲ್ಲಿ ಬಿಎಲ್ಒಗೆ ಜಾತಿ ನಿಂದನೆ: ಕೇಸ್ ದಾಖಲು
ಎಸ್ಐಆರ್ಗೆ ಮತದಾರರ ಮನೆಗೆ ತೆರಳಿದ್ದ ಬಿಎಲ್ಒಗೆ ಜಾತಿ ನಿಂದನೆ ಮಾಡಿದ ಆರೋಪ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಶಿರ್ಲಾಲು ಗ್ರಾಮದಲ್ಲಿ ಕೇಳಿಬಂದಿದೆ. ಬಿಎಲ್ಒ ದಲಿತ ಎಂಬ ಕಾರಣಕ್ಕೆ ಹೊರಗೆ ನಿಲ್ಲಿಸಿ ಜಾತಿ ನಿಂದನೆ ಮಾಡಲಾಗಿದ್ದು, ಅಟ್ರಾಸಿಟಿ ಕೇಸ್ ದಾಖಲಾಗಿದೆ. ಎಸ್ಐಆರ್
ಬಹ್ರೇನ್- ಕುವೈತ್‌ಗಳಲ್ಲಿರುವ ಯುಎಸ್ ಸೇನಾ ನೆಲೆಗಳಿಗೆ ಇರಾನ್ ದಾಳಿ
ಅಮೆರಿಕವು ತನ್ನ ಮೇಲೆ ನಡೆಸಿದ ದಾಳಿಗೆ ಪ್ರತಿಯಾಗಿ ಇರಾನ್ ಬಹ್ರೇನ್ ಮತ್ತು ಕುವೈತ್‌ನಲ್ಲಿರುವ ಅಮೆರಿಕದ ಪ್ರಮುಖ ಮಿಲಿಟರಿ ನೆಲೆಗಳ ಮೇಲೆ 85 ಕ್ಕೂ ಹೆಚ್ಚು ಕ್ಷಿಪಣಿ ಮತ್ತು ಡ್ರೋನ್‌ಗಳ ಮೂಲಕ ದಾಳಿ ನಡೆಸಿದ್ದಾಗಿ ಇರಾನ್ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ ಹೇಳಿಕೊಂಡಿದೆ.
ಡಿಜಿಟಲ್ ಯುಗದಲ್ಲಿ ಯಾಕೆ ಹೆಚ್ಚುತ್ತಿದೆ ಬಂಜೆತನ
ಇಂದಿನ ಡಿಜಿಟಲ್ ಯುಗದಲ್ಲಿ ಸಾಫ್ಟ್ ವೇರ್ ಹಾಗೂ ಮಾಹಿತಿ ತಂತ್ರಜ್ಞಾನ (ಐಟಿ) ವಲಯದ ಉದ್ಯೋಗಿಗಳನ್ನು ಗಂಭೀರ ಆರೋಗ್ಯ ಸಮಸ್ಯೆ ಕಾಡತೊಡಗಿದೆ. ಕಂಪ್ಯೂಟರ್, ಲ್ಯಾಪ್ ಟಾಪ್ ಹಾಗೂ ಸ್ಮಾರ್ಟ್ ಫೋನ್ ಗಳ ಅತಿಬಳಕೆ ಐಟಿ ಉದ್ಯೋಗಿಗಳಲ್ಲಿ ಸಂತಾನಹೀನತೆ ಅಥವಾ ಬಂಜೆತನದ ಸಮಸ್ಯೆಯನ್ನು ತಂದೊಡ್ಡುತ್ತಿರುವುದು
83 ಅಡಿ ದಾಟಿದ ಕೆಆರ್‌ಎಸ್ ನೀರಿನ ಮಟ್ಟ
ಕೊಡಗಿನಲ್ಲಿ ಕೆಲವು ದಿನಗಳಿಂದ ಉತ್ತಮ ಮಳೆ ಸುರಿಯುತ್ತಿದ್ದು, ಒಳಹರಿವು ಹೆಚ್ಚಿ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರದಲ್ಲಿ ನೀರಿನ ಮಟ್ಟ 83 ಅಡಿ ದಾಟಿದೆ. ಇದು ಮೈಸೂರು, ಮಂಡ್ಯ ಹಾಗೂ ಸುತ್ತಮುತ್ತಲ ರೈತರು ಹಾಗೂ ಸಾರ್ವಜನಿಕರಲ್ಲಿ ಕೊಂಚ ನೆಮ್ಮದಿ ಮೂಡಿಸಿದೆ. ಕೆಆರ್‌ಎಸ್ ಜಲಾಶಯದ ಗರಿಷ್ಠ ನೀರಿನ
ಅಕ್ರಮ ಆಸ್ತಿ ಗಳಿಕೆ: ರಾಯಚೂರಿನಲ್ಲಿ ಲೋಕಾಯುಕ್ತ ದಾಳಿ
ಅಕ್ರಮ ಆಸ್ತಿ ಸಂಪಾದನೆ ಆರೋಪದಡಿ ಕೃಷ್ಣ ಭಾಗ್ಯ ಜಲ ನಿಗಮದ ಕಾರ್ಯನಿರ್ವಾಹಕ ಎಂಜಿನಿಯರ್ ಬಸನಗೌಡ ಅವರಿಗೆ ಸೇರಿದ ನಾನಾ ಆಸ್ತಿಗಳ ಮೇಲೆ ಕರ್ನಾಟಕ ಲೋಕಾಯುಕ್ತ ಏಕಕಾಲದಲ್ಲಿ ದಾಳಿ ನಡೆಸಿದೆ. ಚಿಕ್ಕಹೊನ್ನಕುಣಿ ಪ್ರದೇಶದಲ್ಲಿರುವ ಅವರ ಕಚೇರಿ, ನಿವಾಸ ಹಾಗೂ ಪತ್ನಿ ಮತ್ತು ಸಂಬಂಧಿಕರಿಗೆ
ನಗರಗಳತ್ತ ವಲಸೆ ತಪ್ಪಿಸಲು ಗುಣಮಟ್ಟದ ಶಿಕ್ಷಣ, ಉದ್ಯೋಗ ಸೃಷ್ಟಿ: ಸಿಎಂ ಡಿಕೆ ಶಿವಕುಮಾರ್
ನಗರಗಳತ್ತ ಜನರು ವಲಸೆ ಬರುವುದನ್ನು ತಪ್ಪಿಸಲು ನಮ್ಮ ಸರ್ಕಾರ ಎರಡು ಹಾಗೂ ಮೂರನೇ ಹಂತದ ನಗರಗಳಲ್ಲಿ ಉದ್ಯಮಗಳ ಸೃಷ್ಟಿಗೆ ಉತ್ತೇಜನ ನೀಡಲು ತೀರ್ಮಾನಿಸಿದೆ. ಜೊತೆಗೆ ಗ್ರಾಮೀಣ ಭಾಗಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಸಿಎಸ್ಆರ್ ಶಾಲೆಗಳ ನಿರ್ಮಾಣಕ್ಕೆ ಸರ್ಕಾರ ಹೆಚ್ಚಿನ ಒತ್ತು ನೀಡುತ್ತಿದೆ




