kannada news
ಕರಾವಳಿ, ಮಲೆನಾಡುಗಳಲ್ಲಿ ಮುಂದಿನ ಮೂರು ದಿನ ಬಿರುಗಾಳಿ ಮಳೆ, ಭೂಕುಸಿತ ಸಾಧ್ಯತೆ
ರಾಜ್ಯದ ಹಲವು ಜಿಲ್ಲೆಗಳಲ್ಲಿ ನಿರಂತರ ಭಾರಿ ಮಳೆಯಾಗುತ್ತಿದ್ದು, ಕರಾವಳಿ ಮತ್ತು ಮಲೆನಾಡುಗಳಲ್ಲಿ ಇನ್ನು ಮೂರು ದಿನ ೬೦ ಕಿಮೀ ವೇಗದಲ್ಲಿ ಬಿರುಗಾಳಿ ಸಹಿತ ವಿಪರೀತ ಮಳೆ ಸುರಿಯಲಿದೆ. ಮಲೆನಾಡು ಹಾಗೂ ಕರಾವಳಿಯನ್ನು ಸಂಪರ್ಕಿಸುವ ಪ್ರಮುಖ ಘಟ್ಟ ರಸ್ತೆಗಳಲ್ಲಿ ಜುಲೈ 11ರವರೆಗೆ ಭೂಕುಸಿತ ಸಂಭವಿಸುವ ಆತಂಕವಿದೆ.ಸಾರ್ವಜನಿಕರು ತುರ್ತು ಕೆಲಸಗಳಿಲ್ಲದೆ ಘಟ್ಟ ರಸ್ತೆಗಳಲ್ಲಿ ಪ್ರಯಾಣಿಸುವುದನ್ನು ಆರು ದಿನ ಮುಂದೂಡುವುದು ಉತ್ತಮ ಎಂದು ಹವಾಮಾನ ಇಲಾಖೆ ಹೇಳಿದೆ. ಸಾರ್ವಜನಿಕರು ಕಡ್ಡಾಯವಾಗಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು
ಕೌಟುಂಬಿಕ ಕಲಹ: ರಾಜಿ ಮಾಡಿಸಲು ಬಂದಿದ್ದ ಮಾವ, ಪತ್ನಿಯ ಕೊಲೆ
ಹೆಂಡತಿಯ ಮೇಲೆ ಅನುಮಾನ ವ್ಯಕ್ತಪಡಿಸಿ ನಿತ್ಯ ಜಗಳವಾಡುತ್ತಿದ್ದ ಪತಿಯೊಬ್ಬ, ರಾಜಿ ಪಂಚಾಯಿತಿ ಮಾಡಲು ಬಂದಿದ್ದ ಮಾವನೊಂದಿಗೆ ತನ್ನ ಪತ್ನಿಯನ್ನು ಕೂಡ ಚಾಕುವಿನಿಂದ ಇರಿದು ಬರ್ಬರವಾಗಿ ಹತ್ಯೆ ಮಾಡಿದ ಘಟನೆ ಬಳ್ಳಾರಿ ನಗರದ ಗುಗ್ಗರಹಟ್ಟಿಯಲ್ಲಿ ನಡೆದಿದೆ. ನಾಗಲಕ್ಷ್ಮೀ (24) ಹಾಗೂ ತಂದೆ ಶ್ರೀನಿವಾಸ
ಅಕ್ರಮ ಸಂಬಂಧಕ್ಕೆ ಅಡ್ಡಿ: ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಲೆಗೈದ ಪತ್ನಿ
ಅಕ್ರಮ ಸಂಬಂಧಕ್ಕೆ ಅಡ್ಡಿಯಾಗುತ್ತಿದ್ದಾನೆಂದು ನರ್ಸ್‌ವೊಬ್ಬಳು ಟಾಯ್ಲೆಟ್ ಕ್ಲೀನರ್ ಇಂಜೆಕ್ಟ್ ಮಾಡಿ ಗಂಡನ ಕೊಲೆ ಮಾಡಿರುವ ಘಟನೆ ತೆಲಂಗಾಣದ ನಿಜಾಮಾಬಾದ್ ಜಿಲ್ಲೆಯ ನ್ಯಾಲ್ಕಲ್ ಗ್ರಾಮದಲ್ಲಿ ನಡೆದಿದೆ. ಪ್ರಶಾಂತ್ (35) ಹತ್ಯೆಯಾದ ಪತಿ. ಪ್ರಶಾಂತ್ ಇತ್ತೀಚೆಗಷ್ಟೇ ಗಲ್ಫ್‌ನಿಂದ ಊರಿಗೆ ಮರಳಿದ್ದರು. ಪತ್ನಿ ಸಂಧ್ಯಾ ಮತ್ತು
ವಯನಾಡಿನಲ್ಲಿ ಭೂಕುಸಿತ: ಕಾರ್ಮಿಕರಿಬ್ಬರ ಸಾವು, 30 ಮಂದಿ ನಾಪತ್ತೆ
ಕೇರಳದ ವಯನಾಡಿನ ಮೆಪ್ಪಾಡಿ ಪ್ರದೇಶದಲ್ಲಿ ಸುರಂಗ ರಸ್ತೆ ನಿರ್ಮಾಣ ಕಾಮಗಾರಿ ನಡೆಯುತ್ತಿರುವ ಜಾಗದಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದು, 30 ಮಂದಿ ನಾಪತ್ತೆಯಾಗಿದ್ದಾರೆ. ಇವರಲ್ಲಿ 18 ಮಂದಿ ಭೂಕುಸಿತಕ್ಕೆ ಸಿಲುಕಿರುವ ಸಾಧ್ಯತೆ ಇದೆ. ರಾಜ್ಯ ಸರ್ಕಾರ ತುರ್ತು ರಕ್ಷಣಾ ಕಾರ್ಯಾಚರಣೆಗೆ
ಚುರುಕುಗೊಂಡ ಮುಂಗಾರು ಮಳೆ: ಕೆಆರ್‌ಎಸ್‌ಗೆ ದಾಖಲೆಯ ಒಳಹರಿವು
ಕಾವೇರಿ ಜಲಾನಯನ ಪ್ರದೇಶ ಹಾಗೂ ಕೊಡಗು ಜಿಲ್ಲೆಯಲ್ಲಿ ಮುಂಗಾರು ಮಳೆ ತೀವ್ರಗೊಂಡ ಹಿನ್ನೆಲೆ ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿರುವ ಕೃಷ್ಣರಾಜಸಾಗರ ಜಲಾಶಯಕ್ಕೆ ಭಾರಿ ಪ್ರಮಾಣದ ಒಳಹರಿವು ದಾಖಲಾಗಿದೆ. ಕಳೆದ ಕೆಲವು ದಿನಗಳಿಂದ ಕಾವೇರಿ ಉಗಮ ಸ್ಥಾನವಾದ ತಲಕಾವೇರಿ, ಭಾಗಮಂಡಲ ಮತ್ತು ಮಲೆನಾಡು ಭಾಗದಲ್ಲಿ
ಬರ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರಿದರೆ ಕಠಿಣ ಕ್ರಮ, ನೆಪ ಕೇಳಲು ನಾನು ಸಿದ್ಧನಿಲ್ಲ: ಸಿಎಂ ವಾರ್ನ್
ರಾಜ್ಯವನ್ನು ಕಾಡುತ್ತಿರುವ ಬರಗಾಲ ಪರಿಸ್ಥಿತಿ ನಿರ್ವಹಣೆಯಲ್ಲಿ ನಿರ್ಲಕ್ಷ್ಯ ತೋರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಕಲ್ಬುರ್ಗಿ ವಿಭಾಗ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಪ್ರಾಸ್ತಾವಿಕ ಭಾಷಣ ಮಾಡಿದ ಸಿಎಂ ಅವರು, ಜನಪರ
ಪರಿಸ್ಥಿತಿ ಅವಲೋಕಿಸಿ ಬರಗಾಲ ಪೀಡಿತ ಪ್ರದೇಶ ಘೋಷಣೆ: ಸಿಎಂ ಡಿಕೆ ಶಿವಕುಮಾರ್
ಬರಗಾಲ ಪೀಡಿತ ಪ್ರದೇಶ ಎಂದು ಘೋಷಣೆ ಮಾಡಲು ಕಾನೂನು ಚೌಕಟ್ಟಿದೆ. ರಾಜ್ಯದ ಎಲ್ಲಾ ಭಾಗಗಳ ಪರಿಸ್ಥಿತಿ ಪರಿಶೀಲಿಸಿ ನಂತರ ಘೋಷಣೆ ಮಾಡಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದರು. ಕಲಬುರಗಿ ಸರ್ಕಾರಿ ಅತಿಥಿ ಗೃಹದ ಆವರಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಬರಗಾಲಕ್ಕೆ
ಎಸ್ಟಿ ಸಮುದಾಯದ ತಳವಾರ, ನಾಯ್ಕಡ್ ವಿದ್ಯಾರ್ಥಿಗಳಿಗೆ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ: ಸಿಎಂಗೆ ಮನವಿ
ಎಸ್‌ಟಿ ಸಮುದಾಯಕ್ಕೆ ಸೇರಿದ ತಳವಾರ, ನಾಯ್ಕಡ್ ವರ್ಗದ ವಿದ್ಯಾರ್ಥಿಗಳಿಗೆ ಕಳೆದ ಎರಡು ವರ್ಷಗಳಿಂದ ಜಾತಿ ಪ್ರಮಾಣ ಪತ್ರ ನೀಡುತ್ತಿಲ್ಲ, ಇದರಿಂದ ಸಮಾಜದ ಯುವಕರಿಗೆ ಉದ್ಯೋಗ, ಶಿಕ್ಷಣಕ್ಕೆ ತೊಂದರೆ ಆಗುತ್ತಿದೆ. ಕೂಡಲೇ ಸಮಸ್ಯೆ ಬಗೆಹರಿಸಬೇಕು ಎಂದು ಕಲಬುರಗಿಯಲ್ಲಿ ನವ ಕರ್ನಾಟಕ ರೈತ ಸಂಘದ
ಕಿತ್ತೂರು ಕಸದ ತಿಪ್ಪೆಯಲ್ಲಿ ಹಸುಗೂಸು ಪತ್ತೆ
ತಾಯಿ ಹಸುಗೂಸನ್ನು ಕಸದ ತಿಪ್ಪೆಗೆ ಎಸೆದು ಪರಾರಿಯಾಗಿರುವ ಘಟನೆ ಬೆಳಗಾವಿಯ ರಾಮದುರ್ಗ ತಾಲೂಕಿನ ಕಿತ್ತೂರು ಗ್ರಾಮದಲ್ಲಿ ನಡೆದಿದೆ. ಕಿತ್ತೂರು-ನರಗುಂದ ರಸ್ತೆಯ ಬಸವಣಕಟ್ಟಿ ಸೇತುವೆಯ ಕೆಳಭಾಗದಲ್ಲಿ ಅನಾಥವಾಗಿ ಬಿದ್ದಿದ್ದ ಗಂಡು ಮಗುವಿನ ಅಳುವಿನ ಧ್ವನಿ ಕೇಳಿ, ಕುರಿಗಾಹಿಯೊಬ್ಬರು ಸ್ಥಳಕ್ಕೆ ಬಂದು ಮಗುವನ್ನು ರಕ್ಷಿಸಿದ್ದಾರೆ.
ಸ್ಯಾಂಕಿ ಕೆರೆಗೆ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ
ಬೆಂಗಳೂರಿನ ಸ್ಯಾಂಕಿ ಕೆರೆಗೆ ಹಾರಿ 20 ವರ್ಷದ ವಿದ್ಯಾರ್ಥಿನಿ ತೇಜು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಶವ ಇಂದು ಬೆಳಗಿನ ಜಾವ ಸ್ಯಾಂಕಿ ಕೆರೆಯಲ್ಲಿ ಪತ್ತೆಯಾಗಿದೆ. ಸದಾಶಿವನಗರ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಚಿಕ್ಕಬಾಣಾವರ ಸಮೀಪದ ಕಾಲೇಜಿನಲ್ಲಿ ಪದವಿ ಅಧ್ಯಯನ ಮಾಡುತ್ತಿದ್ದ ತೇಜು




