Saturday, January 03, 2026
Menu

ವಿಶ್ವದ 20 ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತ 13 ನಗರಗಳು!

ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತ ವಿಶ್ವದ ಟಾಪ್ 5 ನಗರಗಳಲ್ಲಿ ಸ್ಥಾನ ಪಡೆದಿದ್ದು, ಸಮಾಧಾನಕರ ವಿಷಯ ಅಂದರೆ 3ರಿಂದ 5ನೇ ಸ್ಥಾನಕ್ಕೆ ಜಾರಿದೆ. ಮಂಗಳವಾರ ಪ್ರಕಟವಾದ ಸ್ವಿಸ್ ವಾಯು ಗುಣಮಟ್ಟದ ತಂತ್ರಜ್ಞಾನ ಕಂಪನಿ ಐಕ್ಯೂಏರ್ನ ವಿಶ್ವ ವಾಯು ಗುಣಮಟ್ಟ ವರದಿ 2024 ವರದಿ ಬಿಡುಗಡೆ ಮಾಡಿದ್ದು, ವಿಶ್ವದ 20 ಕಲುಷಿತ ನಗರಗಳ ಪಟ್ಟಿಯಲ್ಲಿ ಭಾರತದ 13 ನಗರಗಳು ಸ್ಥಾನ ಪಡೆದಿವೆ. ಅಸ್ಸಾಂನ ಬೈರ್ನಿಹತ್ ಭಾರತದ 13 ಕಲುಷಿತ ನಗರಗಳ ಪಟ್ಟಿಯಲ್ಲಿ

ಐಪಿಎಸ್ ಅಧಿಕಾರಿ ರನ್ಯಾ ರಾವ್ ತಂದೆ ವಿರುದ್ಧ ತನಿಖೆಗೆ ರಾಜ್ಯ ಸರ್ಕಾರ ಆದೇಶ

ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ ಮಲತಂದೆ ಹಾಗೂ ಐಪಿಎಸ್ ಅಧಿಕಾರಿ ರಾಮಚಂದ್ರ ರಾವ್ ಪಾತ್ರ ಹಾಗೂ ಪೊಲೀಸರ ಪ್ರೊಟೊಕಾಲ್ ಉಲ್ಲಂಘನೆ ಕುರಿತು ರಾಜ್ಯ ಸರ್ಕಾರ ಹೊಸದಾಗಿ ತನಿಖೆಗೆ ಆದೇಶಿಸಿದೆ. ಐಎಎಸ್ ಅಧಿಕಾರಿ ಗೌರವ್ ಗುಪ್ತ ನೇತೃತ್ವದಲ್ಲಿ ತನಿಖೆ

ರಾಜ್ಯಸಭೆಯಲ್ಲಿ ದಾವಣಗೆರೆ-ಶೃಂಗೇರಿ-ಬೇಲೂರು ಸಂಪರ್ಕಕ್ಕೆ ಹೆಚ್.ಡಿ.ದೇವೇಗೌಡರ ಮನವಿ

ನವದೆಹಲಿ: ಭಾರತೀಯ ರೈಲ್ವೆ ಕ್ಷೇತ್ರದ ಅಭಿವೃದ್ಧಿಗಾಗಿ ರೇಲ್ವೆ ತಿದ್ದುಪಡಿ ಮಸೂದೆ 2024 ಅನ್ನು ಬೆಂಬಲಿಸಿದ ಜೆಡಿಎಸ್‌ ರಾಷ್ಟ್ರೀಯ ಅಧ್ಯಕ್ಷರು, ಮಾಜಿ ಪ್ರಧಾನಮಂತ್ರಿಗಳಾದ ಹೆಚ್.ಡಿ.ದೇವೇಗೌಡರು; ಕಳೆದ ಹತ್ತು ವರ್ಷಗಳ ಅವಧಿಯಲಿ ನರೇಂದ್ರ ಮೋದಿ ಅವರ ಸರಕಾರ ರೇಲ್ವೆ ವಲಯದಲ್ಲಿ ಕ್ರಾಂತಿಕಾರಕ ಅಭಿವೃದ್ಧಿಯನ್ನು ಮಾಡಿದೆ

ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ

ಮರಳು ಮಾಫಿಯಾದ ದುಷ್ಕರ್ಮಿಗಳಿಂದ ಪೊಲೀಸ್ ಕಾನ್ಸ್ ಟೇಬಲ್ ಮೇಲೆ ಹಲ್ಲೆ ನಡೆದ ಆಘಾತಕಾರಿ ಘಟನೆ ರಾಯಚೂರು ಜಿಲ್ಲೆಯಲ್ಲಿ ನಡೆದಿದೆ. ರಾಯಚೂರು ಜಿಲ್ಲೆ ಮಾನ್ವಿ ತಾಲೂಕು ಚೀಕಲಪರ್ವಿ ಗ್ರಾಮದ ಬಳಿ ನಡೆದ ಘಟನೆಯಲ್ಲಿ ಮಾನ್ವಿ ಪೊಲೀಸ್ಠಾಣೆಯ ಕಾನ್ಸ್ ಟೇಬಲ್ ಹೆಚ್. ಲಕ್ಷ್ಮಣ ಗಾಯಗೊಂಡಿದ್ದಾರೆ.

ಹಣಕ್ಕಾಗಿ ತಂದೆಯನ್ನೇ ಕೊಂದ ಮಗ; ಮೊಮ್ಮಗನ ಕೃತ್ಯ ಬಾಯಿಬಿಟ್ಟ ಅಜ್ಜಿ

ಹಣಕ್ಕಾಗಿ ಹೆತ್ತ ತಂದೆಯನ್ನೇ ಮಗ ಬರ್ಬರವಾಗಿ ಕೊಲೆ ಮಾಡಿ ಮುಚ್ಚಿ ಹಾಕಲು ಯತ್ನಿಸಿದ ಘಟನೆ ಯಾದಗಿರಿಯಲ್ಲಿ ನಡೆದಿದೆ. ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕಿರದಳ್ಳಿ ತಾಂಡಾದಲ್ಲಿ ಮಾರ್ಚ್ 8ರಂದು ನಡೆದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಿರದಳ್ಳಿ ತಾಂಡದ ನಿವಾಸಿ ಚೆನ್ನಾರೆಡ್ಡಿ ರಾಠೋಡ

ನ್ಯಾಯಾಲಯದಲ್ಲಿ ಕಣ್ಣೀರಿಟ್ಟ ರನ್ಯಾ ರಾವ್: 14 ದಿನ ನ್ಯಾಯಾಂಗ ಬಂಧನ

ಚಿನ್ನ ಕಳ್ಳ ಸಾಗಣೆ ಪ್ರಕರಣದಲ್ಲಿ ಸಿಕ್ಕಿಬಿದ್ದಿರುವ ನಟಿ ರನ್ಯಾ ರಾವ್ಗೆ ಅರ್ಥಿಕ ಅಪರಾಧಗಳ ವಿಶೇಷ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿದೆ. ಮೂರು ದಿನಗಳ ಪೊಲೀಸ್ ಕಸ್ಟಡಿ ಅವಧಿ ಪೂರ್ಣಗೊಂಡ ಹಿನ್ನೆಲೆಯಲ್ಲಿ ಸೋಮವಾರ ಮತ್ತೆ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಮಾರ್ಚ್

ನಾನು, ಕೊಹ್ಲಿ ನಿವೃತ್ತಿ ಆಗುತ್ತಿಲ್ಲ: ರೋಹಿತ್ ಶರ್ಮ ಸ್ಪಷ್ಟನೆ

ಚಾಂಪಿಯನ್ಸ್ ಟ್ರೋಫಿ ಗೆದ್ದು ಇತಿಹಾಸ ಬರೆದ ಬೆನ್ನಲ್ಲೇ ಭಾರತ ತಂಡದ ನಾಯಕ ರೋಹಿತ್ ಶರ್ಮ ನಿವೃತ್ತಿ ವದಂತಿಗಳಿಗೆ ತೆರೆ ಎಳೆದಿದ್ದಾರೆ. ಎಕ್ಸ್ ನಲ್ಲಿ ಸೋಮವಾರ ಪೋಸ್ಟ್ ಮಾಡಿರುವ ರೋಹಿತ್ ಶರ್ಮ, ನಾನು ಮತ್ತು ವಿರಾಟ್ ಕೊಹ್ಲಿ ಏಕದಿನ ಕ್ರಿಕೆಟ್ ಗೆ ನಿವೃತ್ತಿ

ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಉದ್ಯಮಿ ಪುತ್ರ ಅರೆಸ್ಟ್

ನಟಿ ರನ್ಯಾ ರಾವ್ ಚಿನ್ನ ಕಳ್ಳಸಾಗಾಣೆ ಪ್ರಕರಣದಲ್ಲಿ ಡಿಆರ್ ಐ ಅಧಿಕಾರಿಗಳು ಬೆಂಗಳೂರಿನಲ್ಲಿ ಉದ್ಯಮಿ ಪುತ್ರನನ್ನು ಬಂಧಿಸಿದ್ದಾರೆ. ರನ್ಯಾ ರಾವ್ ಪ್ರಕರಣದ ತನಿಖೆ ನಡೆಸುತ್ತಿರುವ ಅಧಿಕಾರಿಗಳು ಸೋಮವಾರ ಬೆಳಿಗ್ಗೆಯಿಂದ ಬೆಂಗಳೂರಿನ ಪಂಚತಾರಾ ಹೋಟೆಲ್ ನ ಮಾಲೀಕನ ತಮ್ಮ ಹಾಗೂ ಉದ್ಯಮಿ ಅವರ

ವಿಧಾನಸಭೆಯಲ್ಲೂ ಪ್ರತಿಧ್ವನಿಸಿದ ನಟಿ ರನ್ಯಾ ಸ್ಮಗ್ಲಿಂಗ್ ಪ್ರಕರಣ

ಚಿನ್ನ ಕಳ್ಳಸಾಗಾಣೆ ವೇಳೆ ಸಿಕ್ಕಿಬಿದ್ದ ನಟಿ ರನ್ಯಾ ರಾವ್ ಪ್ರಕರಣ ವಿಧಾನಸಭೆಯಲ್ಲೂ ಪ್ರಸ್ತಾಪವಾಗಿದ್ದು, ಕುತೂಹಲದ ಚರ್ಚೆಗೆ ಕಾರಣವಾಯಿತು. ಸೋಮವಾರ ಬಜೆಟ್ ಅಧಿವೇಶನ ಆರಂಭವಾಗುತ್ತಿದ್ದಂತೆ ಬಿಜೆಪಿ ಸದಸ್ಯ ಸುನೀಲ್ ಕುಮಾರ್ ರನ್ಯಾ ಪ್ರಕರಣವನ್ನು ಪ್ರಸ್ತಾಪಿಸಿದ್ದು, ಈ ಪ್ರಕರಣದ ಹಿಂದೆ ದೊಡ್ಡ ಹವಾಲಾ, ಮಾಫಿಯಾ

ನಟಿ ಶಬಾನಾ ಆಜ್ಮಿಗೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಪ್ರಶಸ್ತಿ ಪ್ರದಾನ

ಬೆಂಗಳೂರಿನಲ್ಲಿ‌ ಆಯೋಜಿಸಿದ್ದ 16ನೇ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಅಂಗವಾಗಿ ಕೊಡಮಾಡುವ ಜೀವಮಾನ ಸಾಧನೆ ಪ್ರಶಸ್ತಿಯನ್ನು ಭಾರತೀಯ ಚಿತ್ರರಂಗದ ಮೇರು ನಟಿ, ಬಹುಭಾಷಾ ಕಲಾವಿದೆ ಶಬಾನಾ ಆಜ್ಮಿ ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕಾವೇರಿ ನಿವಾಸದಲ್ಲಿ ನೀಡಿ ಗೌರವಿಸಿದರು. ಪ್ರಶಸ್ತಿ ಮತ್ತು 10 ಲಕ್ಷದ ಚೆಕ್