kannada news
ಕಾವೇರಿ ಪಾಲಾದ ಬೆಂಗಳೂರಿನ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು!
ಮಂಡ್ಯ: ಕಾವೇರಿ ನದಿಯಲ್ಲಿ ಈಜಲು ಹೋದ ಇಬ್ಬರು ಬಿಬಿಎಂ ವಿದ್ಯಾರ್ಥಿಗಳು ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ಘಟನೆ ಶ್ರೀರಂಗಪಟ್ಟಣದ ಬಲಮುರಿಯಲ್ಲಿ ಸಂಭವಿಸಿದೆ. ಬೆಂಗಳೂರಿನ ಕೆ.ಆರ್.ಪುರಂ ನಿವಾಸಿಗಳಾದ ವಿಲಿಯಂ ಸ್ಯಾಮ್ (21), ವೆಂಕಟೇಶ್ (21) ಮೃತ ದುರ್ದೈವಿಗಳು. ಇಬ್ಬರು ಅಂತಿಮ ವರ್ಷದ ಬಿಬಿಎಂ ವ್ಯಾಸಂಗ ಮಾಡುತ್ತಿದ್ದರು. ಬೆಂಗಳೂರಿನಿಂದ 7 ಮಂದಿ ಪ್ರವಾಸಕ್ಕೆಂದು ಶ್ರೀರಂಗಪಟ್ಟಣಕ್ಕೆ ಬಂದಿದ್ದರು. ಎಡಮುರಿ ಬಳಿ ಈಜಲು ಹೋಗಿದ್ದಾಗ ಆಯತಪ್ಪಿ ಬಿದ್ದ ಪರಿಣಾಮ ಈಜು ಬಾರದೆ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ. ಜೊತೆಯಲ್ಲಿದ್ದ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಅಂತಿಮ ಅಧಿಸೂಚನೆ ಪ್ರಕಟ: ಬಿಬಿಎಂಪಿ ಯುಗಾಂತ್ಯ
ಗ್ರೇಟರ್ ಬೆಂಗಳೂರು ಪ್ರಾಧಿಕಾರ (Greater Bengaluru Authority ) ಜಾರಿ ಮಾಡಿ ರಾಜ್ಯ ಸರ್ಕಾರ ಮಂಗಳವಾರ ಅಂತಿಮ ಅಧಿಸೂಚನೆ ಹೊರಡಿಸಿದೆ. ಜೆಬಿಎ ನಾಳೆಯಿಂದ ಅಧಿಕೃತವಾಗಿ ಕಾರ್ಯ ನಿರ್ವಹಣೆ ಆರಂಭವಾಗಲಿದ್ದು, ಬಿಬಿಎಂಪಿ ಯುಗಾಂತ್ಯಗೊಂಡಿದೆ. ಪೂರ್ವ ಪಾಲಿಕೆ, ಪಶ್ಚಿಮ ಪಾಲಿಕೆ, ಉತ್ತರ ಪಾಲಿಕೆ ಹಾಗೂ
ಅಬಕಾರಿ ಇಲಾಖೆ ಇತಿಹಾಸದಲ್ಲೆ ಹಲವು ಸುಧಾರಣಾ ಕ್ರಮ: ಸಚಿವ ಆರ್.ಬಿ. ತಿಮ್ಮಾಪೂರ
ಬೆಂಗಳೂರು: ಅಬಕಾರಿ ಇಲಾಖೆಯ ಇತಿಹಾಸದಲ್ಲೇ ಮೊದಲ ಬಾರಿಗೆ ಸಾಕಷ್ಟು ಸುಧಾರಣಾ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ಹೇಳಿದರು. ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಅಬಕಾರಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಟಿ ನಡೆಸಿದರು. ಮೊದಲೆರಡು ತ್ರೈಮಾಸಿಕದಲ್ಲಿ
ಪ್ರತ್ಯೇಕ ಮೀಸಲಾತಿಗೆ ಆಗ್ರಹಿಸಿ ಅಲೆಮಾರಿಗಳಿಂದ ನಾಳೆ ಬೃಹತ್ ಪ್ರತಿಭಟನೆ
ಬೆಂಗಳೂರು: ಕರ್ನಾಟಕದ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾಒಕ್ಕೂಟದಿಂದ 49 ಅಸ್ಪಶ್ಯ ಅಲೆಮಾರಿ ಸಮುದಾಯಗಳು ಮತ್ತು 10 ಸೂಕ್ಷ್ಮ ಪರಿಶಿಷ್ಟ ಜಾತಿಗಳ ಮಹಾಒಕ್ಕೂಟದಿಂದ ಶೇ ಒಂದರಷ್ಟು ಮೀಸಲಾತಿ ಕಲ್ಪಿಸುವಂತೆ ಸ್ವಾತಂತ್ರ್ಯ ಉದ್ಯಾನವನದಲ್ಲಿ ‘ಬೆಂಗಳೂರು ಚಲೋ’ ಪ್ರತಿಭಟನಾ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಒಕ್ಕೂಟದ
ಮುದ್ರಾಂಕ ಶುಲ್ಕ ಕರ್ನಾಟಕದಲ್ಲೇ ಕಡಿಮೆ: ಆಯುಕ್ತ ಮುಲೈ ಮುಗಿಲನ್ ಸಮರ್ಥನೆ
ಬೆಂಗಳೂರು: ಆಗಸ್ಟ್ 31ರಿಂದ ಜಾರಿಗೊಳಿಸುತ್ತಿರುವ ಸ್ಥಿರಾಸ್ತಿ ಮೇಲಿನ ವ್ಯವಹಾರಗಳ ದಸ್ತಾವೇಜುಗಳಿಗೆ ವಿಧಿಸುತ್ತಿರುವ ನೋಂದಣಿ ಮತ್ತು ಮುದ್ರಾಂಕ ಪರಿಷ್ಕೃತ ಶುಲ್ಕ ನೆರೆಹೊರೆಯ ರಾಜ್ಯಗಳಿಗೆ ಹೋಲಿಸಿದರೆ ಕಡಿಮೆ ಇದೆ ಎಂದು ನೋಂದಣಿ ಮತ್ತು ಮುದ್ರಾಂಕ ಶುಲ್ಕ ಆಯುಕ್ತ ಮುಲೈ ಮುಗಿಲನ್ ಸಮರ್ಥಿಸಿಕೊಂಡಿದ್ದಾರೆ. ಆಗಸ್ಟ್ 31ರಿಂದ
ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ: ಆಗಸ್ಟ್ 30ರವರೆಗೆ ಭಾರೀ ಮಳೆ
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಹಿನ್ನೆಲೆಯಲ್ಲಿ ಆಗಸ್ಟ್ 30ರವರೆಗೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಆಗಸ್ಟ್ 30ರವರೆಗೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಒಳನಾಡು ಜಿಲ್ಲೆಗಳಲ್ಲಿ
ದೇವರಿಗೆ ಧರ್ಮವಿಲ್ಲ, ಪ್ರಾರ್ಥನೆ ಯಾರೊಬ್ಬರ ಸ್ವತ್ತಲ್ಲ: ಡಿಸಿಎಂ ಡಿಕೆ ಶಿವಕುಮಾರ್
ಬೆಂಗಳೂರು: ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು
ಉಗ್ರರ ವಿರುದ್ಧ ಜಾಗತಿಕ ಪ್ರಚಾರಕ್ಕೆ ಶಶಿ ತರೂರ್ ನೇತೃತ್ವದ 7 ಸಂಸದ ನಿಯೋಗ ರಚನೆ: ಕಾಂಗ್ರೆಸ್ ಆಕ್ಷೇಪ
ನವದೆಹಲಿ: ಆಪರೇಷನ್ ಸಿಂಧೂರ ಯಶಸ್ವಿ ಕಾರ್ಯಾಚರಣೆಯನ್ನು ಜಾಗತಿಕ ಮಟ್ಟದಲ್ಲಿ ಪ್ರಚಾರ ಮಾಡಿ ಉಗ್ರರ ವಿರುದ್ಧ ಹೋರಾಟ ಬಣ್ಣಿಸಲು ಕೇಂದ್ರ ಸರ್ಕಾರ 7 ಸಂಸದರ ನಿಯೋಗ ರಚಿಸಿದ್ದು, ಕಾಂಗ್ರೆಸ್ ನ ಸಂಸದ ಶಶಿ ತರೂರ್ ಗೆ ಪ್ರಮುಖ ಜವಾಬ್ದಾರಿ ವಹಿಸಿ ಅಚ್ಚರಿ ಮೂಡಿಸಿದೆ.
ದಕ್ಷಿಣ ಕನ್ನಡ ಜಿಲ್ಲೆ ಸದ್ಯದಲ್ಲೇ ಪೋಡಿಮುಕ್ತ ಜಿಲ್ಲೆ ಆಗಲಿದೆ: ಸಿಎಂ ಸಿದ್ದರಾಮಯ್ಯ
ಮಂಗಳೂರು: ನಾನೇ ಗುದ್ದಲಿಪೂಜೆ ಮಾಡಿದ ಪ್ರಜಾಸೌಧದ ಕಟ್ಟಡವನ್ನು ನಾನೇ ಉದ್ಘಾಟಿಸಿದ್ದೇನೆ. ಮಾಜಿ ಸಚಿವ ರಮಾನಾಥ ರೈ ಅವರ ಕಾಳಜಿಯಿಂದ ಪ್ರಜಾಸೌಧ ಕಟ್ಟಡಕ್ಕೆ ನಾನೇ ಗುದ್ದಲಿಪೂಜೆ ಮಾಡಿದ್ದೆ. ಈಗ ನಾನೇ ಉದ್ಘಾಟಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು. ಕಂದಾಯ ಇಲಾಖೆ, ನಗರಾಭಿವೃದ್ಧಿ ಇಲಾಖೆ
ಭಾರತ ‘ಎ’ ತಂಡ ಪ್ರಕಟ; ಕರ್ನಾಟಕದ ಕರುಣ್ ನಾಯರ್ ಗೆ ಸ್ಥಾನ
ಇಂಗ್ಲೆಂಡ್ ಪ್ರವಾಸಕ್ಕೆ ಭಾರತ ಎ ತಂಡವನ್ನು ಪ್ರಕಟಿಸಲಾಗಿದ್ದು, ಕರ್ನಾಟಕದ ಮಧ್ಯಮ ಕ್ರಮಾಂಕದ ಬ್ಯಾಟ್ಸ್ ಮನ್ ಕರುಣ್ ನಾಯರ್ ಸ್ಥಾನ ಪಡೆದಿದ್ದಾರೆ. ಬಿಸಿಸಿಐ ಆಯ್ಕೆ ಸಮಿತಿ ಶನಿವಾರ ಭಾರತ ಎ ತಂಡವನ್ನು ಪ್ರಕಟಿಸಿದ್ದು, ಅಭಿಮನ್ಯು ಈಶ್ವರನ್ ತಂಡವನ್ನು ಮುನ್ನಡೆಸಲಿದ್ದಾರೆ. ತಂಡದಲ್ಲಿ ಇಶಾನ್ ಕಿಶನ್




