kannada news
ಸೇನಾ ಕಾರ್ಯಾಚರಣೆ ಬೆದರಿಕೆ ಬಳಿಕ ಮಾತುಕತೆಗೆ ಇರಾನ್ ಮನವಿ: ಟ್ರಂಪ್
ಇರಾನ್‌ನಲ್ಲಿ ಎರಡು ವಾರಗಳಿಂದ ನಡೆಯುತ್ತಿರುವ ಪ್ರತಿಭಟನೆಯು ತೀವ್ರ ಹಿಂಸಾರೂಪಕ್ಕೆ ತಿರುಗಿದೆ. ಪ್ರತಿಭಟನಾಕಾರರ ವಿರುದ್ಧ ದಾಳಿ ಮಾಡಿದರೆ ಸೇನಾ ಕಾರ್ಯಾಚರಣೆ ಮೂಲಕ ಮಧ್ಯಪ್ರವೇಶಿಸುವುದಾಗಿ ಬೆದರಿಕೆ ಹಾಕಿದ ಬಳಿಕ ಇರಾನ್ ಮಾತುಕತೆಗೆ ಮನವಿ ಮಾಡಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಇರಾನ್‌ನಲ್ಲಿ ಹಣದುಬ್ಬರ, ಜೀವನ ವೆಚ್ಚ ಏರಿಕೆ ವಿರೋಧಿಸಿ ನಡೆಯುತ್ತಿರುವ ನಾಗರಿಕರ ಪ್ರತಿಭಟನೆಯು ತೀವ್ರಗೊಂಡು ಹತ್ಯಾಕಾಂಡವಾಗಿ ಬದಲಾಗುತ್ತಿದೆ ಎಂದು ಮಾನವಹಕ್ಕು ಸಂಘಟನೆಗಳು ಎಚ್ಚರಿಸಿವೆ. ಪ್ರತಿಭಟನೆ ದಮನಿಸಲು ಸರ್ಕಾರ ಇಂಟರ್ನೆಟ್ ಸೇವೆ
ಪ್ರತಿದಿನ ಶಾಲೆಗೆ ಹೋಗಿ ಸರಿಯಾಗಿ ಓದು ಎಂದು ಬುದ್ಧಿ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆ
ತುಮಕೂರಿನ ಚಿಕ್ಕನಾಯಕನಹಳ್ಳಿ ತಾಲೂಕಿನ ಕೆಂಕೆರೆ ಹೋಬಳಿಯಲ್ಲಿ “ಶಾಲೆ ತಪ್ಪಿಸಬೇಡ, ಪ್ರತಿದಿನ ಶಾಲೆಗೆ ಹೋಗು ಹೋಗಿ ಸರಿಯಾಗಿ ಓದು” ಎಂದು ತಂದೆ ಬುದ್ಧಿಮಾತು ಹೇಳಿದ್ದಕ್ಕೆ ನೊಂದುಕೊಂಡ ಎಂಟನೇ ತರಗತಿಯ ವಿದ್ಯಾರ್ಥಿ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ. ಚೆನ್ನಕಾಟಯ್ಯನ ಗುಡ್ಲು ನಿವಾಸಿ
ಜಿಬಿಎ ನಗರಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ನಡೆಸಲು ಸುಪ್ರೀಂ ಸೂಚನೆ
ಗ್ರೇಟರ್ ಬೆಂಗಳೂರು ಅಥಾರಿಟಿ ವ್ಯಾಪ್ತಿಯೊಳಗಿನ ಐದು ನಗರ ಪಾಲಿಕೆಗಳಿಗೆ ಜೂನ್ 30ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿಗಳ ಪೀಠ ರಾಜ್ಯ ಸರ್ಕಾರ ಹಾಗೂ ಚುನಾವಣಾ ಆಯೋಗಕ್ಕೆ ನಿರ್ದೇಶನ ನೀಡಿದೆ. ಹಲವು ವರ್ಷಗಳಿಂದ ಬಿಬಿಎಂಪಿ ಚುನಾವಣೆ ಮುಂದೂಡಿಕೆಯಾಗುತ್ತಲೇ ಇದೆ. ಬಿಬಿಎಂಪಿ
16 ಉಪಗ್ರಹ ಹೊತ್ತು ಹೊರಟಿದ್ದ PSLV-C62ನಲ್ಲಿ ತಾಂತ್ರಿಕ ದೋಷ, ಪಥ ಬದಲು: ಇಸ್ರೊ
ಆಂಧ್ರಪ್ರದೇಶದ ಶ್ರೀಹರಿಕೋಟ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ 16 ಉಪಗ್ರಹಗಳನ್ನು ಹೊತ್ತು ಹೊರಟಿದ್ದ PSLV-C62 ರಾಕೆಟ್ನಲ್ಲಿ ತಾಂತ್ರಿಕ ದೋಷ ಕಂಡುಬಂದಿದ್ದು, ಪಥ ಬದಲಾಯಿಸಿದೆ ಎಂದು ಇಸ್ರೊ ಮಾಹಿತಿ ನೀಡಿದೆ. ಡಿಆರ್‌ಡಿಒ ನಿರ್ಮಿತ ಅನ್ವೇಷ ಹೆಸರಿನ ಭೂ ವೀಕ್ಷಣಾ ಉಪಗ್ರಹ (EOS-N) ಮತ್ತು
ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ಪವಿತ್ರಾಗೌಡಗೆ ವಾರಕ್ಕೊಮ್ಮೆ ಮನೆಯೂಟ
ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣ ಸಂಬಂಧ ಜೈಲುವಾಸಿಯಾಗಿರುವ ಪವಿತ್ರಾ ಗೌಡಗೆ ವಾರಕ್ಕೊಮ್ಕೆ ಮನೆಯೂಟ ನೀಡುವಂತೆ ಕೋಟ್ ಅವಕಾಶ ನೀಡಿದೆ. ಪ್ರಕರಣದ ಆರೋಪಿ ಪವಿತ್ರಾ ಗೌಡಗೆ ಮನೆಯೂಟ ನೀಡಬೇಕೆಂಬ ಅರ್ಜಿಯನ್ನು ಪರಿಶೀಲಿಸಿದ ನ್ಯಾಯಾಲಯವು ವಾರಕ್ಕೊಮ್ಮೆ ಮನೆಯೂಟ ನೀಡುವಂತೆ ಸೂಚಿಸಿದೆ. ಆರೋಗ್ಯದಲ್ಲಿ ವ್ಯತ್ಯಾಸವಾದರೆ ವೈದ್ಯರ
“ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ, ಹೇರಲು ಬಂದರೆ ಒದ್ದು ಓಡಿಸ್ತೇನೆ” ರಾಜ್ ಠಾಕ್ರೆ ಎಚ್ಚರಿಕೆ
ಉತ್ತರ ಪ್ರದೇಶ ಮತ್ತು ಬಿಹಾರದಿಂದ ಬಂದವರು ಸ್ಪಷ್ಟವಾಗಿ ಅರ್ಥಮಾಡಿಕೊಳ್ಳಿ. ಹಿಂದಿ ನಿಮ್ಮ ಭಾಷೆ, ನಮ್ಮದಲ್ಲ. ನನಗೆ ಆ ಭಾಷೆಯ ಬಗ್ಗೆ ದ್ವೇಷವಿಲ್ಲ. ಆದರೆ ನೀವು ಅದನ್ನು ನಮ್ಮ ಮೇಲೆ ಬಲವಂತವಾಗಿ ಹೇರಲು ಬಂದರೆ ನಾನು ಒದ್ದು ಓಡಿಸುತ್ತೇನೆ ಎಂದು ಮಹಾರಾಷ್ಟ್ರ ನವನಿರ್ಮಾಣ
ತುಮಕೂರಿನಲ್ಲಿ ಪಿರಿಯಡ್ಸ್ ಹೊಟ್ಟೆ ನೋವು ತಾಳಲಾಗದೆ ಯುವತಿ ಸುಸೈಡ್
ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ಯುವತಿಯೊಬ್ಬಳು ಋತುಸ್ರಾವದ ವೇಳೆ ಬಾಧಿಸುವ ಹೊಟ್ಟೆನೋವು ತಾಳಿಕೊಳ್ಳಲಾಗದೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. 19 ವರ್ಷದ ಕೀರ್ತನಾ ಆತ್ಮಹತ್ಯೆ ಮಾಡಿಕೊಂಡ ಯುವತಿ. ಕಲಬುರಗಿ ಜಿಲ್ಲೆಯ ಕಲಗಿ ತಾಲೂಕಿನ ಸಾಲಹಳ್ಳಿ ನಿವಾಸಿ ಕೀರ್ತನಾ ತುಮಕೂರಿನ ಬ್ಯಾತ ಗ್ರಾಮದಲ್ಲಿ
ಕಿಡಿಗೇಡಿಗಳ ಓಡಿಸಿದ ಗೃಹರಕ್ಷಕಿ ಸರಿಯಾದ ಬಟ್ಟೆ ಹಾಕೆಂದು ಹೇಳಿದ್ದಕ್ಕೆ ಯುವತಿಯಿಂದ ಹಲ್ಲೆ
ಬೆಂಗಳೂರಿನ ರಸ್ತೆಯಲ್ಲಿ ಯುವತಿಯ ಉಡುಪಿನ ಬಗ್ಗೆ ಅಶ್ಲೀಲವಾಗಿ ಮಾತನಾಡುತ್ತಿದ್ದ ಕಿಡಿಗೇಡಿಗಳನ್ನು ಅಲ್ಲಿಂದ ತೆರಳುವಂತೆ ಮಾಡಿ, ಯುವತಿಗೆ ಸಾರ್ವಜನಿಕ ಸ್ಥಳದಲ್ಲಿ ಸರಿಯಾದ ಬಟ್ಟೆ ಹಾಕಿಕೊಳ್ಳುವಂತೆ ಸಲಹೆ ನೀಡಿದ ಗೃಹರಕ್ಷಕ ದಳದ ಲಕ್ಷ್ಮೀ ನರಸಮ್ಮ ಮೇಲೆ ಯುವತಿ ಹಲ್ಲೆ ಮಾಡಿದ್ದು, ಪೊಲೀಸರು ಬಂಧಿಸಿದ್ದಾರೆ. ಈ
‘ವೆನೆಜುವೆಲಾದ ಹಂಗಾಮಿ ಅಧ್ಯಕ್ಷ’ ತಾನೆಂದು ಹೇಳಿಕೊಂಡ ಟ್ರಂಪ್
ವೆನೆಜುವೆಲಾ ಅಧ್ಯಕ್ಷ ನಿಕೋಲಸ್ ಮಡುರೊ ಅವರನ್ನು ಅಮೆರಿಕದ ಪಡೆಗಳು ಬಂಧಿಸಿದ ಬಳಿಕ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ತನ್ನನ್ನು ತಾನು ವೆನೆಜುವೆಲಾದ ಹಂಗಾಮಿ ಅಧ್ಯಕ್ಷ ಎಂದು ಹೇಳಿಕೊಂಡಿದ್ದಾರೆ. ಸಾಮಾಜಿಕ ಜಾಲತಾಣ ‘ಟ್ರುತ್ ಸೋಷಿಯಲ್’ನಲ್ಲಿ ಹೀಗೆಂದು ಟ್ರಂಪ್ ಅಧಿಕೃತ ಪೋಸ್ಟ್ ಹಂಚಿಕೊಂಡಿದ್ದಾರೆ. ಟ್ರಂಪ್
ಮನೆಗೆ ನುಗ್ಗಿ ಸೆಕ್ಸ್‌ಗೆ ಪೀಡಿಸಿದ ಪಿಯುಸಿ ಹುಡುಗ: ನಿರಾಕರಿಸಿದ ಮಹಿಳಾ ಟೆಕ್ಕಿಯ ಕೊಂದು ಬೆಂಕಿ ಹಚ್ಚಿ ಪರಾರಿ
ಇತ್ತೀಚೆಗೆ ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ನಡೆದ ಮಹಿಳಾ ಟೆಕ್ಕಿ ಶರ್ಮಿಳಾ ಸಾವು ಪ್ರಕರಣವನ್ನು ಪೊಲೀಸರು ಬೇಧಿಸಿದ್ದು, ಪಕ್ಕದ ಮನೆಯ ಪಿಯುಸಿ ವಿದ್ಯಾರ್ಥಿ ಆಕೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಲು ಯತ್ನಿಸಿ, ಹಲ್ಲೆ ಮಾಡಿ ಬೆಂಕಿ ಹಚ್ಚಿ ಪರಾರಿಯಾಗಿರುವುದು ಪತ್ತೆಯಾಗಿದೆ. ಆರೋಪಿ ವಿರಾಜಪೇಟೆ




