Thursday, October 01, 2026
Menu

ಶಿವಮೊಗ್ಗ ಕೋರ್ಟ್‌ಗೆ ಮತ್ತೆ ಬಾಂಬ್‌ ಬೆದರಿಕೆ

ಶಿವಮೊಗ್ಗ ಜಿಲ್ಲಾ ನ್ಯಾಯಾಲಯ ಸಂಕೀರ್ಣಕ್ಕೆ ಈ ಮೇಲ್ ಮೂಲಕ  ಮತ್ತೆ ಬಾಂಬ್ ಬೆದರಿಕೆ ಕರೆ ಬಂದಿದ್ದು, ಜಿಲ್ಲಾ ಪೊಲೀಸ್ ಇಲಾಖೆಗೆ ತಲೆನೋವಾಗಿ ಪರಿಣಮಿಸಿದೆ. ಕಳೆದ ಗುರುವಾರ ಜಿಲ್ಲಾ ಮುಖ್ಯ ನ್ಯಾಯಾಧೀಶರಿಗೆ ತಮಿಳುನಾಡು ಮೂಲದ ವ್ಯಕ್ತಿಯಿಂದ ಶಿವಮೊಗ್ಗ ನ್ಯಾಯಾಲಯದಲ್ಲಿ ಬಾಂಬ್ ಇರಿಸಲಾಗಿದೆ ಎಂಬ ಇಮೇಲ್ ಕರೆ ಬಂದಿತ್ತು.  ಜಯನಗರ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಿ, ಜಿಲ್ಲಾ ಪೊಲೀಸ್‌ ಬಿಗಿಕ್ರಮ ಕೈಗೊಂಡಿತ್ತು. ಅದು ಹುಸಿ ಕರೆ ಎಂಬುದು ಗೊತ್ತಾಗಿತ್ತು. ಅದಾದ ಬಳಿಕ ಜೂನ್‌ 27ರ

ಅಂತಾರಾಷ್ಟ್ರೀಯ ಖ್ಯಾತಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ ನಿಧನ

ಅಂತಾರಾಷ್ಟ್ರೀಯ ಖ್ಯಾತಿಯ ಹಿರಿಯ ಚಿತ್ರಕಲಾವಿದ ಕೆ.ಟಿ. ಶಿವಪ್ರಸಾದ್ (79) ನಿಧನರಾಗಿದ್ದಾರೆ. ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಬೆಂಗಳೂರಿನ ನಾರಾಯಣ ಹೃದಯಾಲಯದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಜಿಲ್ಲೆಯ ಕಾರ್ಲೆ ಎಂಬ ಊರಿನವರಾದ ಶಿವಪ್ರಸಾದ್, ಉದ್ಯಮಿ ಎಲ್. ಟಿ. ಕಾರ್ಲೆ

ಆಸ್ಪತ್ರೆಯಲ್ಲಿ ಆಕ್ಸಿಜನ್‌ ಸಿಲಿಂಡರ್‌ ಸ್ಫೋಟ: ತಪ್ಪಿದ ಪ್ರಾಣಹಾನಿ

ದಾವಣಗೆರೆಯ ಚಿಗಟೇರಿ ಜಿಲ್ಲಾ ಸರ್ಕಾರಿ ಆಸ್ಪತ್ರೆಯ ಶಸ್ತ್ರಚಿಕಿತ್ಸಾ ಕೊಠಡಿಯಲ್ಲಿ  ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದ್ದು,  ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ​ಘಟನೆ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿರುವ ಜಿಲ್ಲಾಧಿಕಾರಿ ಡಾ. ಗಂಗಾಧರ ಸ್ವಾಮಿ ,”ಮುಂಜಾನೆ ಆಕ್ಸಿಜನ್ ಸಿಲಿಂಡರ್ ಸ್ಪೋಟಗೊಂಡಿದೆ. ಆ ಸಮಯದಲ್ಲಿ

SIR ಮೂಲಕ ಮತದಾನ ಹಕ್ಕು ಉಳಿಸಿಕೊಂಡು ಸರ್ಕಾರದ ಸೌಲಭ್ಯ ಪಡೆದುಕೊಳ್ಳಿ: ಸಿಎಂ ಸಲಹೆ

ತಮ್ಮ ಎನ್ಯುಮರೇಶನ್ ಫಾರಂ (ಗಣತಿ ನಮೂನೆ) ಭರ್ತಿ ಮಾಡುವ ಮೂಲಕ ಸಿಎಂ ಡಿಕೆ ಶಿವಕುಮಾರ್  ರಾಜ್ಯದಲ್ಲಿ ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ಪ್ರಕ್ರಿಯೆಗೆ ಚಾಲನೆ ನೀಡಿದರು. ಸದಾಶಿವನಗರ ನಿವಾಸದಲ್ಲಿ ಬೆಂಗಳೂರು ದಕ್ಷಿಣ ಜಿಲ್ಲೆಯ ಜಿಲ್ಲಾಧಿಕಾರಿಗಳು ಹಾಗೂ ಅಧಿಕಾರಿಗಳ ಸಮ್ಮುಖದಲ್ಲಿ ಶಿವಕುಮಾರ್

ಮೈಸೂರಿನಲ್ಲಿ ಗಂಡನ ಕತ್ತು ಹಿಸುಕಿ ಸಾಯಿಸಿದ ಶಿಕ್ಷಕಿ

ಮೈಸೂರಿನ ಕುವೆಂಪುನಗರ ಪ್ರದೇಶದಲ್ಲಿ ಭಾನುವಾರ ರಾತ್ರಿ ವ್ಯಕ್ತಿಯೊಬ್ಬರು ಅನುಮಾನಾಸ್ಪದವಾಗಿ ವ್ಯಕ್ತಿ ಮೃತಪಟ್ಟಿರುವ ಪ್ರಕರಣದ ತನಿಖೆಯಲ್ಲಿ ಶಿಕ್ಷಕಿಯಾಗಿರುವ ಪತ್ನಿಯೇ ಕತ್ತು ಹಿಸುಕಿ ಕೊಲೆ ಮಾಡಿರುವ ವಿಚಾರ ಬಯಲಾಗಿದೆ. 50 ವರ್ಷದ ನಿತ್ಯಾನಂದ ಕೊಲೆಯಾದ ವ್ಯಕ್ತಿ. ಶಿಕ್ಷಕಿ ಸುಶೀಲಾ ಕೊಲೆಗೈದ ಪತ್ನಿ. ನಿತ್ಯಾನಂದ ಕಾರು

ಭಾರೀ ಮಳೆ ಸಾಧ್ಯತೆ: ರಾಜ್ಯದ ಕರಾವಳಿಯಲ್ಲಿ ಕಡಲಿಗಿಳಿಯದಂತೆ ಎಚ್ಚರಿಕೆ

ಕರಾವಳಿ ಕರ್ನಾಟಕದಲ್ಲಿ ಮುಂದಿನ ಕೆಲವು ದಿನ ಭಾರೀ ಮಳೆಯಾಗಲಿದ್ದು, ಜೂನ್ 30ರಿಂದ ಜುಲೈ 6ರವರೆಗೆ ದಕ್ಷಿಣ ಕನ್ನಡ, ಉಡುಪಿ ಸೇರಿದಂತೆ ಕರಾವಳಿ ಜಿಲ್ಲೆಗಳಿಗೆ ಭಾರತೀಯ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಿಸಿದೆ. ಮಳೆಯೊಂದಿಗೆ ಬಿರುಗಾಳಿ ಬೀಸುವ ಸಾಧ್ಯತೆ ಇರುವುದರಿಂದ ಸಾರ್ವಜನಿಕರು ಎಚ್ಚರಿಕೆಯಿಂದ

ವಿವಾಹಿತೆಯೊಂದಿಗೆ ಪರಾರಿಯಾದ ಯುವಕನ ಮನೆಗೆ ದಾಳಿ, ಲೂಟಿ

ಬೆಳಗಾವಿ ತಾಲೂಕಿನ ಭರಮ್ಯಾನಟ್ಟಿ ಗ್ರಾಮದಲ್ಲಿ ವಿವಾಹಿತ ಮಹಿಳೆಯೊಂದಿಗೆ ಯುವಕನೊಬ್ಬ ಪರಾರಿಯಾಗಿದ್ದು, ಆಕ್ರೋಶಗೊಂಡ ಮಹಿಳೆಯ ಸಂಬಂಧಿಕರು ಯುವಕನ ಮನೆಯ ಮೇಲೆ ದಾಳಿ ನಡೆಸಿ ಧ್ವಂಸಗೊಳಿಸಿದ್ದಲ್ಲದೆ ಮನೆಯಲ್ಲಿದ್ದ ಚಿನ್ನಾಭರಣ, ನಗದು, ಕುರಿಗಳನ್ನು ಹೊತ್ತೊಯ್ದಿದ್ದಾರೆ. ಗ್ರಾಮದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣಗೊಂಡಿದ್ದು, ಯುವಕನ ಕುಟುಂಬವು ಬೆಳಗಾವಿ ನಗರ

ನನಗೆ ಸಚಿವ ಸ್ಥಾನ: ಹೈಕಮಾಂಡ್‌ಗೆ ಬಿಟ್ಟ ವಿಷಯವೆಂದ ಮಧುಬಂಗಾರಪ್ಪ

ನಾನು ಯಾವತ್ತೂ ಅಧಿಕಾರಕ್ಕೆ ಅಂಟಿಕೊಂಡವನಲ್ಲ, ನನಗೆ ಸಚಿವಸ್ಥಾನ ನೀಡುವುದು, ಬಿಡುವುದು ಕಾಂಗ್ರೆಸ್ ಹೈಕಮಾಂಡ್‌ಗೆ ಬಿಟ್ಟ ವಿಷಯ ಎಂದು ಮಾಜಿ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿವಮೊಗ್ಗದಲ್ಲಿ ಅವರು ಮಾಧ್ಯಮದವರೊಂದಿಗೆ ಮಾತನಾಡಿ, ನಾನು ಕೆಲಸ ಮಾಡಿದ ಶಿಕ್ಷಣ ಇಲಾಖೆಗೆ ಕೇಂದ್ರ ಸರ್ಕಾರದಿಂದ ಯಾವ

ಶಿವಮೊಗ್ಗ ನೀರಾವರಿ ಯೋಜನೆಗಳಿಗೆ ಅನುದಾನ: ರಾಮಲಿಂಗಾರೆಡ್ಡಿಗೆ ಬಿವೈರಾಘವೇಂದ್ರ ಮನವಿ

ಶಿವಮೊಗ್ಗ ಜಿಲ್ಲೆಯ ನೀರಾವರಿ ಯೋಜನೆಗಳಿಗೆ ಕಾಯಕಲ್ಪ ಒದಗಿಸಲು ಮತ್ತು ಬಾಕಿ ಬಿಲ್ ಪಾವತಿಗೆ ಅಗತ್ಯ ಅನುದಾನ ಬಿಡುಗಡೆ ಮಾಡುವಂತೆ ಕೋರಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಲಸಂಪನ್ಮೂಲ ಸಚಿವ ರಾಮಲಿಂಗಾರೆಡ್ಡಿ ಅವರಿಗೆ ಮನವಿ ಸಲ್ಲಿಸಿದರು. ಬೆಂಗಳೂರಿನಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾದ ಸಂಸದ

ಸಿಇಟಿಯಲ್ಲಿ ಕಡಿಮೆ ಅಂಕ: ಯುವಕ ಆತ್ಮಹತ್ಯೆ

ಸಿಇಟಿ ಪರೀಕ್ಷೆಯಲ್ಲಿ ಕಡಿಮೆ ಅಂಕ ಪಡೆದಿದ್ದಕ್ಕೆ ಮನನೊಂದು 20 ದಿನಗಳ ಹಿಂದೆ ಕಳೆನಾಶಕ ಸೇವಿಸಿದ್ದ ಯುವಕ ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ಜಿಲ್ಲೆಯ ಶಿಕಾರಿಪುರದಲ್ಲಿ‌ ನಡೆದಿದೆ. 18 ವರ್ಷದ ಜಯಂತ್‌ ಎಂಬ ವಿದ್ಯಾರ್ಥಿ ಮೃತಪಟ್ಟವ, ಶಿಕಾರಿಪುರ ಪಟ್ಟಣದ ವಿನಾಯಕನಗರ ವಾಸಿ ಖಾಸಗಿ