Thursday, October 01, 2026
Menu

ರಾಜ್ಯದ ಆರೋಗ್ಯ ಇಲಾಖೆಯೇ ಐಸಿಯುನಲ್ಲಿ: ಆರ್‌ ಅಶೋಕ

ಗ್ಯಾರಂಟಿಗಳ ಹೆಸರಲ್ಲಿ ಖಜಾನೆ ಖಾಲಿ ಮಾಡಿ, ಈಗ ಆರೋಗ್ಯ ಇಲಾಖೆಯನ್ನೇ ಐಸಿಯು ಅಲ್ಲಿ ಇರಿಸುವ ಪರಿಸ್ಥಿತಿ ತಂದಿರುವುದೇ ಕಾಂಗ್ರೆಸ್ ಸರ್ಕಾರದ ನಿಜವಾದ ಸಾಧನೆ. ಜೀವ ಉಳಿಸಬೇಕಾದ ಇಲಾಖೆಯಲ್ಲೇ ಬರೋಬ್ಬರಿ 35,196 ಹುದ್ದೆಗಳು ಖಾಲಿ ಇವೆ ಎಂದು ಪ್ರತಿಪಕ್ಷ ನಾಯಕ ಆರ್‌ ಅಶೋಕ ಟೀಕಿಸಿದ್ದಾರೆ. ಸರ್ಕಾರಿ ಆಸ್ಪತ್ರೆಗಳು ಕೇವಲ ಹೆಸರಿಗಷ್ಟೇ ಉಳಿದಿದ್ದು, ಸಮಸ್ಯೆಗಳ ಆಗರಗಳಾಗಿವೆ. ರಾತ್ರಿ ವೇಳೆ ತುರ್ತು ಚಿಕಿತ್ಸೆಗೆ ಬರುವ ರೋಗಿಗಳನ್ನು ನೋಡಿಕೊಳ್ಳುವವರೇ ಇಲ್ಲದಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಕನಿಷ್ಠ ಪ್ಯಾರಾಸಿಟಮಾಲ್

ಕುರುಬರಹಳ್ಳಿ ಶೆಡ್‌ನಲ್ಲಿ 2.98 ಕೋಟಿ ನಗದು ಪತ್ತೆ

ಬೆಂಗಳೂರಿನ ಕುರುಬರಹಳ್ಳಿಯ ಕೈಗಾರಿಕಾ ಶೆಡ್‌ವೊಂದರಲ್ಲಿ ದಾಖಲೆಗಳಿಲ್ಲದ ಕೋಟ್ಯಂತರ ರೂಪಾಯಿ ನಗದು ಪತ್ತೆಯಾಗಿರುವ ವಿಚಾರ ತಡವಾಗಿ ಬೆಳಕಿಗೆ ಬಂದಿದೆ. ಈ ನಗದು ಮೊತ್ತ 2.98 ಕೋಟಿ ರೂ. ಆಗಿದ್ದು, ಮಹಾಲಕ್ಷ್ಮಿ ಲೇಔಟ್ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ತಾವರೆಕೆರೆ ನಿವಾಸಿಯೊಬ್ಬರು ಈ ಮೊತ್ತವನ್ನು

ತುಮಕೂರು ಕ್ರೀಡಾ ನಗರಿಯಾಗಿ ಅಭಿವೃದ್ಧಿ: ಡಿಸಿಎಂ ಡಾ. ಜಿ ಪರಮೇಶ್ವರ

ಶೈಕ್ಷಣಿಕ ನಗರಿಯಾಗಿರುವ ತುಮಕೂರು ಜಿಲ್ಲೆಯನ್ನು ರಾಜ್ಯದ ಪ್ರಮುಖ ಕ್ರೀಡಾ ನಗರಿಯಾಗಿ ಅಭಿವೃದ್ಧಿಪಡಿಸುವ ನಿಟ್ಟಿನಲ್ಲಿ ಸರ್ಕಾರ ವಿವಿಧ ಕ್ರೀಡಾ ಮೂಲಸೌಕರ್ಯಗಳನ್ನು ನಿರ್ಮಿಸುತ್ತಿದ್ದು, ಕ್ರೀಡಾಪಟುಗಳಿಗೆ ಅಗತ್ಯ ಸೌಲಭ್ಯಗಳನ್ನು ಒದಗಿಸುವ ಮೂಲಕ ಕ್ರೀಡೆಗೆ ಹೆಚ್ಚಿನ ಉತ್ತೇಜನ ನೀಡಲಾಗುವುದು ಎಂದು ಉಪಮುಖ್ಯಮಂತ್ರಿಗಳಾದ ಡಾ. ಜಿ ಪರಮೇಶ್ವರ ಹೇಳಿದರು.

ಗದಗದಲ್ಲಿ ಮಹಿಳೆಯರ ಕೂಡಿ ಹಾಕಿ ಥಳಿಸಿದ ಮೀಟರ್‌ ಬಡ್ಡಿಕೋರರು: ದೂರು ದಾಖಲಿಸಲು ನಿರಾಕರಿಸಿದ ಪೊಲೀಸ್‌

ಗದಗ ನರಗುಂದ ತಾಲೂಕಿನ ಶಿರೋಳ ಗ್ರಾಮದಲ್ಲಿ ವಾರದ ಬಡ್ಡಿ ಹಣ ನೀಡದಿದ್ದಕ್ಕೆ ಇಬ್ಬರು ಮಹಿಳೆಯರನ್ನು ಮನೆಯೊಂದರಲ್ಲಿ ಕೂಡಿ ಹಾಕಿ ಮೀಟರ್‌ ಬಡ್ಡಿ ದಂಧಕೋರರು ಹಿಗ್ಗಾಮುಗ್ಗಾ ಥಳಿಸಿರುವ ಆರೋಪ ಕೇಳಿಬಂದಿದೆ. ದಂಧೆಕೋರರಿಂದ ತಪ್ಪಿಸಿಕೊಂಡು ಬಂದಿರುವ ಮಹಿಳೆಯರು ಗದಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ

ಹರ್ಮುಜ್‌ನಲ್ಲಿ ಮತ್ತೆ ಭುಗಿಲೆದ್ದ ಅಮೆರಿಕ-ಇರಾನ್‌ ಸಂಘರ್ಷ

ದೀರ್ಘಕಾಲದ ಸಂಘರ್ಷವನ್ನು ಕೊನೆಗಾಣಿಸುವ ನಿಟ್ಟಿನಲ್ಲಿ ಅಮೆರಿಕ ಮತ್ತು ಇರಾನ್ ಇತ್ತೀಚೆಗೆ ಶಾಂತಿ ಒಪ್ಪಂದಕ್ಕೆ ಸಹಿ ಹಾಕಿದ್ದು, ಕೆಲವೇ ದಿನ ಕಳೆಯುವಷ್ಟರಲ್ಲಿ ಉಭಯ ದೇಶಗಳ ಮಧ್ಯೆ ಸಂಘರ್ಷ ಭುಗಿಲೆದ್ದಿದೆ. ಮಧ್ಯಪ್ರಾಚ್ಯದ ಹರ್ಮುಜ್ ಜಲಸಂಧಿಯಲ್ಲಿ ಪರಸ್ಪರ ಸೇನಾ ದಾಳಿಗಳು ಆರಂಭಗೊಂಡಿದ್ದು, ಜಾಗತಿಕ ಆತಂಕ ಸೃಷ್ಟಿಯಾಗಿದೆ.

ಬಂಡೀಪುರ, ನಾಗರಹೊಳೆ ಸಫಾರಿ ಪೂರ್ಣ ಪ್ರಮಾಣದಲ್ಲಿ ಆರಂಭ

ತಜ್ಞರು ಮತ್ತು ಅಧಿಕಾರಿಗಳ ತಾಂತ್ರಿಕ ಸಮಿತಿಯ ವರದಿ ಶಿಫಾರಸ್ಸಿನ ಅನ್ವಯ ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಗಳಲ್ಲಿ ಪೂರ್ಣ ಪ್ರಮಾಣದಲ್ಲಿ ಜಂಗಲ್ ಸಫಾರಿ (ಉದ್ಯಾನ ಪ್ರವಾಸ) ಪುನರಾರಂಭಿಸಲು ರಾಜ್ಯ ಸರ್ಕಾರವು ನಿರ್ಧರಿಸಿದೆ. ಈ ಬಗ್ಗೆ ತಾಂತ್ರಿಕ ಸಮಿತಿಯ ವರದಿಯನ್ನು ಅಂಗೀಕರಿಸಲಾಗಿದ್ದು,

ಅಯೋಧ್ಯೆ ಮಂದಿರದ ಹಣ ಅಕ್ರಮ: ಟ್ರಸ್ಟ್‌ ಕಾರ್ಯದರ್ಶಿ, ಸದಸ್ಯ ರಾಜೀನಾಮೆ

ಅಯೋಧ್ಯೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ದೇಣಿಗೆ ಮತ್ತು ಕಾಣಿಕೆ ಹಣದಲ್ಲಿ ನಡೆದಿರುವ ಅಕ್ರಮ ಹಗರಣದ ಹಿನ್ನೆಲೆಯಲ್ಲಿ ರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ

ಅಡ್ಡ ಮತದಾನದ ಹಿಂದೆ ನಾನಿಲ್ಲ, ಡಿಕೆ ಶಿವಕುಮಾರ್‌ ಜತೆ ವ್ಯಾವಹಾರಿಕ ಸಂಬಂಧ ಇಲ್ಲ: ವಿಜಯೇಂದ್ರ

ವಿಧಾನ ಪರಿಷತ್ ಚುನಾವಣೆಯಲ್ಲಿ ಅಡ್ಡ ಮತದಾನ ಪ್ರಕರಣದಿಂದ ರಾಜ್ಯದ ಬಿಜೆಪಿ ಕಾರ್ಯಕರ್ತರಲ್ಲಿ ಅಸಮಾಧಾನ ಉಂಟಾಗಿರುವುದು ಸಹಜ. ಆದರೆ ಅದರ ಹಿಂದೆ ತಾನು ಇಲ್ಲ ಹಾಗೂ ಪಕ್ಷಕ್ಕೆ ದ್ರೋಹ ಮಾಡುವ ಪ್ರಶ್ನೆಯೇ ಉದ್ಭವಿಸುವುದಿಲ್ಲ. ಡಿಕೆ ಶಿವಕುಮಾರ್ ಜತೆ ನನಗೆ ಯಾವುದೇ ವ್ಯಾವಹಾರಿಕ  ಅಥವಾ

ಜೂನ್ 28ಕ್ಕೆ ಬೆಂಗಳೂರಿನಲ್ಲಿ ಜೀ ತೆಲುಗು ‘ಸ ರಿ ಗ ಮ ಪ’ ಆಡಿಷನ್ಸ್

‘ಜೀ ತೆಲುಗು’  ಸಿಂಗಿಂಗ್ ರಿಯಾಲಿಟಿ ಶೋ ‘ಸ ರಿ ಗ ಮ ಪ’ದ ಹೊಸ ಸೀಸನ್‌ನೊಂದಿಗೆ ಪ್ರೇಕ್ಷಕರನ್ನು ರಂಜಿಸಲು ಸಜ್ಜಾಗಿದೆ. ಬೆಂಗಳೂರಿನಲ್ಲಿ ಆಡಿಷನ್‌ಗಳು  2026ರ  ಜೂನ್ 28 ಭಾನುವಾರದಂದು ಬೆಳಿಗ್ಗೆ 10:00 ರಿಂದ ಮಧ್ಯಾಹ್ನ 3:00 ಗಂಟೆಯವರೆಗೆ ನಡೆಯಲಿದೆ. ಭಾರತೀಯ ಚಿತ್ರರಂಗಕ್ಕೆ

ಡಿಜಿಟಲ್ ಕ್ರಿಪ್ಟೋ ಕರೆನ್ಸಿ ಹೆಸರಲ್ಲಿ 17 ಲಕ್ಷ ರೂ. ವಂಚನೆ, 12 ಮಂದಿ ಅರೆಸ್ಟ್‌

ಡಿಜಿಟಲ್ ಕ್ರಿಪ್ಟೋ ಕರೆನ್ಸಿಗೆ ಭಾರತೀಯ ರೂಪಾಯಿಯನ್ನು ಪರಿವರ್ತಿಸಿ ವಿದೇಶದಿಂದ ಕಡಿಮೆ ಬೆಲೆಗೆ ವಸ್ತುನ್ನು ಖರೀದಿಸಿ ಕೊಡುವುದಾಗಿ ನಂಬಿಸಿ 17.64 ಲಕ್ಷ ರೂಪಾಯಿ ದೋಚಿದ ಪ್ರಕರಣವನ್ನು ಸಂಜಯನಗರ ಪೊಲೀಸರು ಬಹಿರಂಗಪಡಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಶ್ಮೀರ ಯುವಕರು ಸೇರಿದಂತೆ 12 ಆರೋಪಿಗಳನ್ನು ಬಂಧಿಸಿದ್ದಾರೆ.