kannada news
ಸದಾಶಿವನಗರ ನಿವಾಸಕ್ಕೆ ಬರಬೇಡಿ, ಗೃಹಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ: ಸಿಎಂ
ಇನ್ನು ಮುಂದೆ ಸಾರ್ವಜನಿಕರು, ಶಾಸಕರು, ಪಕ್ಷದ ಮುಖಂಡರು, ಕಾರ್ಯಕರ್ತರು ಸೇರಿದಂತೆ ಎಲ್ಲರನ್ನೂ ಮುಖ್ಯಮಂತ್ರಿಗಳ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ಭೇಟಿ ಮಾಡುವುದಾಗಿ ಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ. ಅನಿವಾರ್ಯ ಕಾರಣಗಳಿಂದ ಇನ್ನು ಮುಂದೆ ಸದಾಶಿವನಗರ ನಿವಾಸದಲ್ಲಿ ಯಾರನ್ನೂ ಭೇಟಿ ಮಾಡುವುದಿಲ್ಲ, ಯಾರೂ ಇಲ್ಲಿಗೆ ಬರುವ ತೊಂದರೆ ತೆಗೆದುಕೊಳ್ಳಬೇಡಿ ಹಾಗೂ ಅನ್ಯಥಾ ಭಾವಿಸಬೇಡಿ ಎಂದು ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಈವರೆಗೆ ಸಾರ್ವಜನಿಕರು ಅವರ ಸದಾಶಿವ ನಗರದ ಮನೆ ಬಳಿ ಹೋಗಿ ಅಹವಾಲು ಸಲ್ಲಿಸುತ್ತಿದ್ದರು,
NEET ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳ ಬಂಧನ
ಬಿಹಾರದ ಪರೀಕ್ಷಾ ಕೇಂದ್ರಗಳಲ್ಲಿ ಜೂ 21ರಂದು ನಡೆದ ನೀಟ್-ಯುಜಿ ಮರುಪರೀಕ್ಷೆ ಬರೆಯಲು ಬಂದಿದ್ದ ಒಂಬತ್ತು ನಕಲಿ ಅಭ್ಯರ್ಥಿಗಳು ಹಾಗೂ ಅವರೊಂದಿಗಿದ್ದ 30 ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಲಖಿಸರಾಯ್ ಜಿಲ್ಲಾಡಳಿತ ಮತ್ತು ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿದ್ದು, ಪರೀಕ್ಷಾ ಕೇಂದ್ರಗಳ ಮೇಲೆ
ಬೆಂಗಳೂರಿನಲ್ಲಿ ಉದ್ಯಮಿಗೆ 2.66 ಕೋಟಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಅರೆಸ್ಟ್
ದುರಾಸೆಯ ಬೆನ್ನು ಹತ್ತಿ ಉದ್ಯಮಿಯೊಬ್ಬರಿಗೆ ಕೋಟ್ಯಂತರ ರೂಪಾಯಿ ವಂಚಿಸಿದ ಬ್ಯಾಂಕ್ ಮ್ಯಾನೇಜರ್ ಸೇರಿ ಮೂವರು ಆರೋಪಿಗಳನ್ನು ಬೆಂಗಳೂರಿನ ಬಾಗಲಗುಂಟೆ ಪೊಲೀಸರು ಬಂಧಿಸಿದ್ದಾರೆ. ಬಾಗಲಗುಂಟೆ ಶಾಖೆಯ ಆ್ಯಕ್ಸಿಸ್ ಬ್ಯಾಂಕ್ ಮ್ಯಾನೇಜರ್ ವಿನೋದ್ ಕುಮಾರ್, ಅರುಣ್ ಕುಮಾರ್ ಮತ್ತು ಕಿರಣ್ ಬಂಧಿತ ಆರೋಪಿಗಳು. 30
ಬಿಎಂಟಿಸಿ, ಕೆಎಸ್ಸಾರ್ಟಿಸಿ ಟಿಕೆಟ್ ದರ 44%, 33% ಹೆಚ್ಚಳ?
ಆರ್ಥಿಕ ನಷ್ಟ ಹಾಗೂ ಡೀಸೆಲ್ ದರ ಏರಿಕೆಯಿಂದ ಸಂಕಷ್ಟಕ್ಕೆ ಒಳಗಾಗಿರುವ ಬಿಎಂಟಿಸಿ ಸೇರಿದಂತೆ ನಾಲ್ಕು ಸಾರಿಗೆ ನಿಗಮಗಳು ಮತ್ತು ಕೆಎಸ್ಸಾರ್ಟಿಸಿ ಬಸ್ ಟಿಕೆಟ್ ದರವನ್ನು ಹೆಚ್ಚಿಸಲು ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರಿಗೆ ಪ್ರಸ್ತಾವನೆ ಸಲ್ಲಿಸಿವೆ. ಬಿಎಂಟಿಸಿ ಟಿಕೆಟ್ ದರದಲ್ಲಿ 44%, ಕೆಎಸ್ಸಾರ್ಟಿಸಿ
ಟ್ರಂಪ್ ದಾಳಿ ಬೆದರಿಕೆ: ಜಾಗರೂಕರಾಗಿರಿ ಎಂದು ಇರಾನ್ ತಿರುಗೇಟು
ಸ್ವಿಟ್ಜರ್‌ಲ್ಯಾಂಡ್‌ನಲ್ಲಿ ಅಮೆರಿಕ-ಇರಾನ್ ಯುದ್ಧ ನಿಲ್ಲಿಸುವ ಕುರಿತು ಶಾಂತಿ ಮಾತುಕತೆ ಆರಂಭಗೊಂಡಿದ್ದು, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಇರಾನ್ ನಾಯಕರ ನಡುವಿನ ವಾಗ್ದಾಳಿ ಮುಂದುವರಿದಿದೆ. ಇರಾನ್ ಮೇಲೆ ಮತ್ತೊಮ್ಮೆ ಭೀಕರ ದಾಳಿ ನಡೆಸುವುದಾಗಿ ಟ್ರಂಪ್ ಬೆದರಿಕೆ ಹಾಕಿದ್ದು, ನಮ್ಮ ಸಶಸ್ತ್ರ ಪಡೆಗಳು
ಪ್ರಜಾಸೇವೆ ಇಲಾಖೆ ಅಸ್ತಿತ್ವಕ್ಕೆ, ರಾಜ್ಯದ ವಿದ್ಯಾರ್ಥಿಗಳಿಗೆ ದೆಹಲಿಯಲ್ಲಿ ಕರ್ನಾಟಕ ಭವನ: ಸಿಎಂ
ಸಾರ್ವಜನಿಕರ ಕುಂದುಕೊರತೆಗಳು, ಸಾರ್ವಜನಿಕ ಹೋರಾಟಗಳ ಅಹವಾಲುಗಳನ್ನು ಆಲಿಸಲು “ಪ್ರಜಾಸೇವೆ ಇಲಾಖೆ” ಯನ್ನು ಹೊಸದಾಗಿ ಪ್ರಾರಂಭ ಮಾಡಲಾಗುತ್ತಿದೆ. ಪ್ರತ್ಯೇಕ ಸಚಿವರಿಗೆ ಇದರ ಜವಾಬ್ದಾರಿ ವಹಿಸಲಾಗುವುದು ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ನಡೆದ ಸಚಿವ ಸಂಪುಟ ಸಭೆಯ ನಂತರ ಶಿವಕುಮಾರ್ ಮಾಧ್ಯಮಗೋಷ್ಠಿಯಲ್ಲಿ
ನೀಟ್ ಮರುಪರೀಕ್ಷೆ: ನಾಗ್ಪುರ ನಿವಾಸಿಗೆ ಅಬುಧಾಬಿ ಕೇಂದ್ರ ನಿಯೋಜಿಸಿ ಎಡವಟ್ಟು
ನಾಗ್ಪುರ ನಗರದ ನಿವಾಸಿ, ನೀಟ್ ಅಭ್ಯರ್ಥಿ ಅಬ್ದುಲ್ಲಾ ಮೊಹಮ್ಮದ್ ತಾಲಿಬ್ ಎಂಬಾತನಿಗೆ ರಾಷ್ಟ್ರೀಯ ಪರೀಕ್ಷಾ ಪ್ರಾಧಿಕಾರವು ನೀಟ್-ಯುಜಿ ಮರುಪರೀಕ್ಷೆಯ ಹಾಲ್ ಟಿಕೆಟ್ ನೀಡಿದ್ದು, ಅಬುಧಾಬಿ ಇಂಡಿಯನ್ ಸ್ಕೂಲ್ ಅನ್ನು ಪರೀಕ್ಷಾಕೇಂದ್ರವಾಗಿ ನಿಯೋಜಿಸಿದೆ. ಜೂನ್ 14 ರಂದು ನೀಡಿರುವ ಪ್ರವೇಶ ಪತ್ರದಲ್ಲಿ ಅಬುಧಾಬಿ
ಲೆಬನಾನ್‌ನಲ್ಲಿ ಮುಂದುವರಿದ ಇಸ್ರೇಲ್ ದಾಳಿ: ಐವರು ಬಲಿ
ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲ್ ಡ್ರೋನ್ ಮತ್ತು ವಾಯು ದಾಳಿ ಮುಂದುವರಿಸಿದ್ದು, ಕನಿಷ್ಠ ಐವರು ಪ್ರಾಣ ಕಳೆದುಕೊಂಡಿದ್ದಾರೆ. ಹೀಗಾಗಿ ಮಧ್ಯಪ್ರಾಚ್ಯದಲ್ಲಿ ಪರಿಸ್ಥಿತಿ ಮತ್ತಷ್ಟು ಉಲ್ಬಣಗೊಂಡಿದೆ. ಶನಿವಾರ ಬೆಳಗಿನ ಜಾವದವರೆಗೆ ಇಸ್ರೇಲ್ ಯುದ್ಧ ವಿಮಾನಗಳು ಮತ್ತು ಡ್ರೋನ್‌ಗಳು ಲೆಬನಾನ್‌ನ ನಬತಿಯೇಹ್ ವಸತಿ ಕಟ್ಟಡಗಳ ಮೇಲೆ
ಗಿಫ್ಟ್ ಆಮಿಷವೊಡ್ಡಿ ನಿವೃತ್ತ ಯೋಧನಿಗೆ 2.82 ಲಕ್ಷ ರೂಪಾಯಿ ವಂಚನೆ
ನಿವೃತ್ತ ಯೋಧರೊಬ್ಬರಿಗೆ ಹುಟ್ಟುಹಬ್ಬದ ಶುಭಾಶಯ ಕೋರಿ ಕರೆ ಮಾಡಿದ್ದ ದುಷ್ಕರ್ಮಿಗಳು ಉಡುಗೊರೆ ಕಳುಹಿಸುವುದಾಗಿ ನಂಬಿಸಿ 2.82 ಲಕ್ಷ ರೂಪಾಯಿ ವಂಚಿಸಿರುವ ಘಟನೆ ಮಧುಗಿರಿ ತಾಲೂಕಿನ ಮಿಡಿಗೇಶಿ ಗ್ರಾಮದಲ್ಲಿ ನಡೆದಿದೆ. ಜೂನ್ 20ರಂದು ನಿವೃತ್ತ ಯೋಧ ಶಿವಕುಮಾರ್ ಅವರ ಹುಟ್ಟುಹಬ್ಬದಂದು ಬೆಳಗ್ಗೆ ವಂಚಕರು
“ಅಡ್ಡಕಸುಬಿ ಕಾಂಗ್ರೆಸ್ ಸರ್ಕಾರದಲ್ಲಿ ಆಡಳಿತ ಸಂಪೂರ್ಣ ಮುಳುಗಿ ಹೋಗಿದೆ”
ವಿರೋಧ ಪಕ್ಷದ ಶಾಸಕರಿಗೆ ಆಮಿಷ ಒಡ್ಡಿ, ಅಡ್ಡಮತದಾನ ಮಾಡಿಸುವ ರಾಜಕೀಯ ಸರ್ಕಸ್‌ನಲ್ಲಿ ದಿನಪೂರ್ತಿ ಮುಳುಗಿರುವ ಮುಖ್ಯಮಂತ್ರಿ @DKShivakumar ಅವರೇ, ನಿಮ್ಮ ಈ ಅಡ್ಡಕಸುಬಿ ಆಡಳಿತದಿಂದಾಗಿ ರಾಜ್ಯದ ಶಾಲಾ ಮಕ್ಕಳ ಭವಿಷ್ಯ ಡೋಲಾಯಮಾನವಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್ ಅಶೋಕ ಕಿಡಿ ಕಾರಿದ್ದಾರೆ.




