Thursday, October 01, 2026
Menu

ರಾಜ್ಯಸಭೆಯಲ್ಲಿ ಎನ್‌ಡಿಎ ಸಂಖ್ಯಾ ಬಲ ಇನ್ನಷ್ಟು ಹೆಚ್ಚಳ

ಜಾರ್ಖಂಡ್ ರಾಜ್ಯಸಭಾ ಚುನಾವಣೆಯಲ್ಲಿ ಎನ್‌ಡಿಎ ಬೆಂಬಲಿತ ಪಕ್ಷೇತರ ಅಭ್ಯರ್ಥಿ ಪರಿಮಳ್ ನತ್ಲಾನಿ ಅವರ ಗೆಲುವಿನೊಂದಿಗೆ, ಮೇಲ್ಮನೆಯಲ್ಲಿ ಆಡಳಿತಾರೂಢ ರಾಷ್ಟ್ರೀಯ ಪ್ರಜಾಸತ್ತಾತ್ಮಕ ಒಕ್ಕೂಟ (ಎನ್‌ಡಿಎ)  ಸಂಖ್ಯಾಬಲವನ್ನು ಮತ್ತಷ್ಟು ಹೆಚ್ಚಿಸಿಕೊಂಡಿದೆ. ಪ್ರಮುಖ ಸಾಂವಿಧಾನಿಕ ತಿದ್ದುಪಡಿಗಳನ್ನು ಅಂಗೀಕರಿಸಲು ಅಗತ್ಯವಿರುವ ಮೂರನೇ ಎರಡರಷ್ಟು ಬಹುಮತದ ಗಡಿಗೆ ಎನ್‌ಡಿಎ ಅತ್ಯಂತ ಸಮೀಪದಲ್ಲಿದೆ. ಜಾರ್ಖಂಡ್‌ನ ಈ ಗೆಲುವಿನ ಬಳಿಕ ರಾಜ್ಯಸಭೆಯಲ್ಲಿ ಎನ್‌ಡಿಎ ಮೈತ್ರಿಕೂಟದ ಒಟ್ಟು ಸಂಖ್ಯೆ 153ಕ್ಕೆ ಏರಿಕೆಯಾಗಿದೆ. ಜಾರ್ಖಂಡ್‌ನ ಆಡಳಿತಾರೂಢ ’ಇಂಡಿಯಾ’ ಮೈತ್ರಿಕೂಟದಲ್ಲಿ ನಡೆದಿದೆ ಎನ್ನಲಾದ ಕ್ರಾಸ್

ವಿಧಾನ ಪರಿಷತ್​​ ನ ಏಳು ಸ್ಥಾನಗಳಲ್ಲಿ ಐದು ಕಾಂಗ್ರೆಸ್​​ ಪಾಲು

ಭಾರಿ ಕುತೂಹಲ ಮೂಡಿಸಿದ್ದ ವಿಧಾನಸಭೆಯಿಂದ ವಿಧಾನ ಪರಿಷತ್​​ ನ ಏಳು ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್​​ನ ಐವರು ಮತ್ತು ಬಿಜೆಪಿಯ ಎರಡು ಅಭ್ಯರ್ಥಿಗಳು ಜಯಗಳಿಸಿದ್ದಾರೆ. ಜೆಡಿಎಸ್​​ನಿಂದ ಸ್ಪರ್ಧಿಸಿದ್ದ ಏಕೈಕ ಅಭ್ಯರ್ಥಿ ಪರಾಭವಗೊಂಡಿದ್ದು, ಬಿಜೆಪಿ ಮತ್ತು ಜೆಡಿಎಸ್​​ನಿಂದ ಅಡ್ಡ ಮತದಾನ( ಕ್ರಾಸ್​​ ವೋಟಿಂಗ್​​)

ನೆಲಮಂಗಲದಲ್ಲಿ ಆಟವಾಡುತ್ತಿದ್ದ ಮಗು ಮಹಡಿಯಿಂದ ಬಿದ್ದು ಸಾವು

ಆಟವಾಡುತ್ತಿದ್ದ ಮಗು ಮೊದಲನೇ ಮಹಡಿಯಿಂದ ಬಿದ್ದು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದಗುಡ್ಡದಹಳ್ಳಿ ಗ್ರಾಮದಲ್ಲಿ ನಡೆದಿದೆ.  ಟಿ.ದಾಸರಹಳ್ಳಿ ನಿವಾಸಿ ನವೀನ್ ಕುಮಾರ್ ಹಾಗೂ ಕಾವ್ಯ ದಂಪತಿಯ ಎರಡು ವರ್ಷದ ಮಗು ದೀಕ್ಷಿತ್ (2) ಮೃತಪಟ್ಟಿದೆ. ಆಟವಾಡುವಾಗ ಮೆಟ್ಟಿಲ ಮೇಲಿಂದ ಮಗು

ಅತ್ಯಾಚಾರ, ಚಿತ್ರಹಿಂಸೆ ನೀಡಿ ಮಹಿಳೆಯ ಆಸ್ತಿ ಕಬಳಿಸಿದ ಸ್ವಯಂಘೋಷಿತ ಗುರು ಅರೆಸ್ಟ್‌

ಅನಾರೋಗ್ಯ ಮತ್ತು ಕೌಟುಂಬಿಕ ಸಮಸ್ಯೆಗಳನ್ನು ಪರಿಹರಿಸುವುದಾಗಿ ನಂಬಿಸಿದ ಸ್ವಯಂಘೋಷಿತ ಗುರುವೊಬ್ಬನನ್ನು  ಮಹಿಳೆಯ ಮೇಲೆ ೧೫ ವರ್ಷ ಲೈಂಗಿಕ ದೌರ್ಜನ್ಯ ಜೊತೆಗೆ ಮೂತ್ರ ಕುಡಿಸಿ ವಿದ್ಯುತ್‌ ಶಾಕ್‌ ನೀಡಿರುವ ಆರೋಪದಡಿ  ಏಳು ಮಂದಿ ಸಹಚರರೊಂದಿಗೆ ಪುಣೆ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಪ್ರಮುಖ ಆರೋಪಿಯನ್ನು

ಮೇಕೆದಾಟು ದಕ್ಷಿಣ ಭಾರತದ ಹೃದಯ, ತಮಿಳುನಾಡು ಜೊತೆ ಚರ್ಚೆಗೆ ಸಿದ್ಧ: ಸಿಎಂ

“ಮೇಕೆದಾಟು ಯೋಜನೆ ದಕ್ಷಿಣ ಭಾರತದ ಹೃದಯದಂತ ಯೋಜನೆ. ಈ ಯೋಜನೆಯಲ್ಲಿ ಕರ್ನಾಟಕ ಹಾಗೂ ತಮಿಳುನಾಡಿನ ಹಿತ ಅಡಗಿದೆ” ಎಂದು ಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ವಿಧಾನಸೌಧದಲ್ಲಿ ವಿಧಾನ ಪರಿಷತ್ ಚುನಾವಣೆ ಮತದಾನದ ಬಳಿಕ ಶಿವಕುಮಾರ್  ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. ತಮಿಳುನಾಡು ಸರ್ಕಾರ

ಪತ್ನಿಯ ಕಿರುಕುಳ ಆರೋಪ: ಹುಬ್ಬಳ್ಳಿಯಲ್ಲಿ ಪತಿ ಸುಸೈಡ್‌

ಪತ್ನಿಯಿಂದ ಕಿರುಕುಳವೆಂದು ಆರೋಪಿಸಿ ಡೆತ್ ನೋಟ್ ಬರೆದಿಟ್ಟು ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಬೆಂಗೇರಿ ಹರಿಜನ ಕಾಲೋನಿಯಲ್ಲಿ ನಡೆದಿದೆ. ಸಂತೋಷ್ ಅಳ್ಳೂರು (39) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಕೌಟುಂಬಿಕ ಕಲಹದ ಹಿನ್ನೆಲೆ ಸಂತೋಷ್ ಪತ್ನಿ ಪೊಲೀಸ್ ಠಾಣೆಗೆ ಹೋಗಿದ್ದರು, ಆಕೆಯ

ಪರಿಷತ್‌ ಚುನಾವಣೆ: ಕಾಂಗ್ರೆಸ್‌ಗೆ ಮತ ಚಲಾಯಿಸಿದೆ ಎಂದ ಶಾಸಕ ಎಸ್‌.ಟಿ ಸೋಮಶೇಖರ್‌

ವಿಧಾನ ಪರಿಷತ್‌ನ ಏಳು ಸ್ಥಾನಗಳಿಗೆ ಚುನಾವಣೆಯ ಮತದಾನದಲ್ಲಿ ಯಶವಂತಪುರ ಕ್ಷೇತ್ರದ ಬಿಜೆಪಿ ಉಚ್ಚಾಟಿತ ಶಾಸಕ ಎಸ್.ಟಿ. ಸೋಮಶೇಖರ್ ಮೈತ್ರಿಕೂಟವನ್ನು ಪರಿಗಣಿಸದೆ ಕಾಂಗ್ರೆಸ್ ಪರ ಮತ ಚಲಾಯಿಸಿದ್ದಾರೆ. ಮಾಧ್ಯಮವೊಂದರ ಜೊತೆ ಮಾತನಾಡಿದ ಎಸ್.ಟಿ. ಸೋಮಶೇಖರ್, ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿರುವುದನ್ನು ಬಹಿರಂಗವಾಗಿ ಒಪ್ಪಿಕೊಂಡಿದ್ದಾರೆ.

ವ್ಯಕ್ತಿಯ ಕೊಲೆಗೈದು ಬೈಕ್‌ನಲ್ಲಿ ಶವ ಸಾಗಿಸುವಾಗ ಸಾರ್ವಜನಿಕರಿಗೆ ಸಿಕ್ಕಿ ಬಿದ್ದ ಸ್ನೇಹಿತ

ಮಂಡ್ಯ ಜಿಲ್ಲೆಯ ಮಳವಳ್ಳಿಯಲ್ಲಿ ಸ್ನೇಹಿತರು ಚಾಕುವಿನಿಂದ ಇರಿದು ವ್ಯಕ್ತಿಯ ಕೊಲೆ ಮಾಡಿ ಶವವನ್ನು ಬೈಕ್‌ನಲ್ಲಿ ಕೂರಿಸಿಕೊಂಡು ಸಾಗಿಸುವ ವೇಳೆ ಸಾರ್ವಜನಿಕರಿಗೆ ಸಿಕ್ಕಿಬಿದ್ದಿರುವ ಘಟನೆ ನಡೆದಿದೆ. ಭೀಮನಹಳ್ಳಿ ಗ್ರಾಮದ ಮಹೇಶ್ (34) ಕೊಲೆಯಾದ ವ್ಯಕ್ತಿ. ಸ್ನೇಹಿತನ ಪತ್ನಿಗೆ ಮೆಸೇಜ್ ಮಾಡುತ್ತಿದ್ದ ಆರೋಪದ ಮೇಲೆ

ಅರ್ಹತೆಗನುಸಾರ ಕಂದಾಯ ಅಧಿಕಾರಿಗಳಿಗೆ ಬಡ್ತಿ: ಸಚಿವ ಪರಮೇಶ್ವರ

ಗ್ರೇಡ್-2 ತಹಶೀಲ್ದಾರ್‌ ಹುದ್ದೆಯಿಂದ ಗ್ರೇಡ್-1 ಹುದ್ದೆಗೆ ಬಡ್ತಿ ನೀಡಬೇಕೆಂಬ ಬಹುಕಾಲದ ಬೇಡಿಕೆ ಕಳೆದ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಸರ್ಕಾರವು ಇದನ್ನು ಆದ್ಯತೆಯ ಮೇರೆಗೆ ಪರಿಗಣಿಸಿ, ಅರ್ಹತೆಗೆ ಅನುಸಾರವಾಗಿ ಬಡ್ತಿ ನೀಡಲಾಗಿದೆ ಎಂದು ಕಂದಾಯ ಸಚಿವ ಜಿ. ಪರಮೇಶ್ವರ್‌ ಪತ್ರಿಕಾ ಹೇಳಿಕೆಯಲ್ಲಿ 

ಅಟ್ರಾಸಿಟಿ ಕೇಸ್‌ನಲ್ಲಿ ಲಂಚಕ್ಕೆ ಬೇಡಿಕೆಯಿಟ್ಟ ಅಧಿಕಾರಿಗಳ ವಿರುದ್ಧ ಎಫ್‌ಐಆರ್‌

ನಟ ದ್ವಾರಕೀಶ್ ಸೊಸೆ ದಾಖಲಿಸಿದ್ದ ಅಟ್ರಾಸಿಟಿ ಪ್ರಕರಣದಲ್ಲಿ ಆರೋಪಿಗಳ ಹೆಸರು ಕೈಬಿಡಲು ತಲಾ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟ ಆರೋಪದಡಿ ಇಬ್ಬರು ಅಧಿಕಾರಿಗಳ ವಿರುದ್ಧ ಎಫ್‌ಐಆರ್‌ ದಾಖಲಾಗಿದೆ. ಪ್ರಕರಣದಿಂದ ಕೈಬಿಡಲು ಪ್ರತಿ ಆರೋಪಿಯಿಂದ 50 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ