kannada news
ಬಿತ್ತನೆ ಬೀಜ, ರಸಗೊಬ್ಬರ ಸಮರ್ಪಕ ಪೂರೈಕೆ ಖಾತರಿಗೆ ಸಿಎಂ ಸೂಚನೆ
ಬರ ಪರಿಸ್ಥಿತಿ ಎದುರಿಸಲು ತುರ್ತು ಕ್ರಮಗಳ ಪೂರ್ವಸಿದ್ಧತೆ , ರೈತರಿಗೆ ಅಗತ್ಯ ಮಾಹಿತಿ ಪೂರೈಕೆ, ಅತಿವೃಷ್ಟಿ, ಅನಾವೃಷ್ಟಿ ಎದುರಿಸಲು ಸರ್ವ ಸಿದ್ಧತೆ ಸೇರಿದಂತೆ ಎಲ್ಲ ಅಗತ್ಯ ನೆರವು ಒದಗಿಸಿ, ಕೃಷಿಗೆ ಅನುಕೂಲ ಕಲ್ಪಿಸುವಂತೆ ಸಿಎಂ ಡಿಕೆ ಶಿವಕುಮಾರ್ ಅಧಿಖಾರಿಗಳಿಗೆ ಕಟ್ಟು ನಿಟ್ಟಿನ ಸೂಚನೆ ನೀಡಿದ್ದಾರೆ. ವಿಧಾನಸೌಧದಲ್ಲಿ ನಡೆದ ಕೃಷಿ, ತೋಟಗಾರಿಕೆ, ರೇಷ್ಮೆ ಮೀನುಗಾರಿಕೆ ಇಲಾಖೆ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳಿಗೆ ಸಿಎಂ ನಿರ್ನಿದೇಶನ ನೀಡಿದರು. ಕ್ರಿಮಿನಾಶಕ ಮತ್ತಿತರ ಔಷಧ ಸಿಂಪರಣೆ ಸಲಕರಣೆಗಳ ನೆರವನ್ನು
ಲೇಖಕಿ, ಪ್ರಕಾಶಕಿ ಇಂದಿರಾ ಲಂಕೇಶ್ ನಿಧನ
ಹಿರಿಯ ಪತ್ರಕರ್ತಪಿ. ಲಂಕೇಶ್ ಅವರ ಪತ್ನಿ ಲೇಖಕಿ ಇಂದಿರಾ ಲಂಕೇಶ್ (84) ವಯೋಸಹಜ ಕಾಯಿಲೆಯಿಂದ ಬೆಂಗಳೂರಿನ ರಾಜಾಜಿನಗರದಲ್ಲಿರುವ ನಿವಾಸದಲ್ಲಿ ನಿಧನರಾಗಿದ್ದಾರೆ. ಮಗಳು ಕವಿತಾ ಲಂಕೇಶ್ (ಚಿತ್ರನಿರ್ದೇಶಕಿ), ಮಗ ಇಂದ್ರಜಿತ್ ಲಂಕೇಶ್ (ಚಿತ್ರನಿರ್ದೇಶಕ ಹಾಗೂ ಪತ್ರಕರ್ತ) ಸೇರಿದಂತೆ ಬಂಧು-ಮಿತ್ರರನ್ನು ಅಗಲಿದ್ದಾರೆ. ಇಂದಿರಾ ಲಂಕೇಶ್
ಪೂಜೆ ಮಾಡಿಸದಿದ್ದರೆ ಹತ್ತು ದಿನದಲ್ಲಿ ಸೋದರನ ಸಾವು: ಹೆದರಿಸಿ ಟೆಕ್ಕಿಗೆ ವಂಚನೆ
ಸಹೋದರನಿಗೆ ಗಂಡಾಂತರವಿದೆ, ಪೂಜೆ ಮಾಡಿಸದಿದ್ದರೆ 10 ದಿನದಲ್ಲಿ ಸಾಯುತ್ತಾನೆ ಎಂದು ಹೆದರಿಸಿ ವೈಟ್‌ಪೀಲ್ಡ್‌ನ ಟೆಕ್ಕಿಯೊಬ್ಬರಿಂದ ವಂಚಕರು ಏಳು ಲಕ್ಷ ರೂ. ಮೌಲ್ಯದ 35 ಗ್ರಾಂ ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಪ್ರಕರಣ ಸಂಬಂಧ ನವೀದಾ ಸುಲ್ತಾನ ಮತ್ತು ಪರ್ವೇಜ್ ಎಂಬವರನ್ನು ಪೊಲೀಸರು ಬಂಧಿಸಿ
ತ್ಯಾಗ, ಪ್ರಾಮಾಣಿಕತೆ, ಕರ್ತವ್ಯ ಪ್ರಜ್ಞೆಯೊಂದಿಗೆ ಪಕ್ಷದ ಕೆಲಸ ಮಾಡಿದ ಸೂರಜ್ ಹೆಗ್ಡೆ: ಸಿಎಂ ಡಿಕೆ ಶಿವಕುಮಾರ್ ಸ್ಮರಣೆ
ಪಕ್ಷ ನಿಷ್ಠೆ ಹಾಗೂ ತ್ಯಾಗ ಸೂರಜ್ ಅವರ ಸಾಧನೆ. ತಮ್ಮ ಸ್ನೇಹದ ಮೂಲಕ ಅವರು ನಮ್ಮೆಲ್ಲರ ಹೃದಯ ಗೆದ್ದವರು ಎಂದು ಸಿಎಂ ಡಿಕೆ ಶಿವಕುಮಾರ್ ಅವರು ದಿವಂಗತ ಸೂರಜ್ ಹೆಗ್ಡೆ ಅವರನ್ನು ಕೊಂಡಾಡಿದರು. ಎಐಸಿಸಿ ಕಾರ್ಯದರ್ಶಿ ಹಾಗೂ ಕರ್ನಾಟಕ ರಾಜ್ಯ ಗ್ಯಾರಂಟಿ
ಬಿಡದಿ ಯೋಜನೆ ಅಧಿಸೂಚನೆ ಹೊರಡಿಸಿದ್ದು ಕುಮಾರಸ್ವಾಮಿ, ಬಿಜೆಪಿ ಸರ್ಕಾರವಿದ್ದಾಗ ಸಾವಿರ ಎಕರೆ ಸ್ವಾಧೀನ
“ನಾನು ಯಾರ್ಯಾರೋ ಮಾತಿಗೆ ಉತ್ತರ ನೀಡಲು ಆಗುವುದಿಲ್ಲ. ಮಹಾರಾಷ್ಟ್ರದಲ್ಲಿ 90 ಸಾವಿರ ಎಕರೆ, ತೆಲಂಗಾಣದಲ್ಲಿ 40 ಸಾವಿರ ಎಕರೆಯಲ್ಲಿ ಟೌನ್ ಶಿಪ್ ಮಾಡುತ್ತಿದ್ದಾರೆ. ಬಿಡದಿಯದು ನನ್ನ ಯೋಜನೆಯಲ್ಲ. ಕುಮಾರಸ್ವಾಮಿ ಅವರು ಈ ಯೋಜನೆಗೆ ಅಧಿಸೂಚನೆ ಹೊರಡಿಸಿದ್ದರು. ಹಿಂದಿನ ಬಿಜೆಪಿ ಸರ್ಕಾರ ಈ
ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಸಾಗಿಸುತ್ತಿದ್ದ 13.14 ಕೋಟಿ ರೂ. ಮೌಲ್ಯದ ಗಾಂಜಾ ವಶ
ದೇವನಹಳ್ಳಿ ಬಳಿ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬ್ಯಾಂಕಾಕ್‌ನಿಂದ ಅಕ್ರಮವಾಗಿ ಬೆಂಗಳೂರಿಗೆ ಸಾಗಿಸುತ್ತಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾವನ್ನು ಜಪ್ತಿ ಮಾಡಿದ್ದಾರೆ. ಕಸ್ಟಮ್ಸ್ ಇಲಾಖೆಯ ತಪಾಸಣೆ ನಡೆಸುವಾಗ ಲಗೇಜ್ ಬ್ಯಾಗ್‌ನಲ್ಲಿ ಅಡಗಿಸಿಡಲಾಗಿದ್ದ ಒಟ್ಟು 38.34 ಕೆಜಿ ಗಾಂಜಾ
ಗ್ಯಾರಂಟಿ ಯೋಜನೆಗಳು ನಿರಂತರ, ಲೋಪಗಳನ್ನು ಸರಿಪಡಿಸಲಾಗುತ್ತಿದೆ: ಮಾಜಿ ಸಿಎಂ ಸಿದ್ದರಾಮಯ್ಯ
ಪಂಚ ಗ್ಯಾರಂಟಿ ಯೋಜನೆಗಳನ್ನು ಯಾವುದೇ ಕಾರಣಕ್ಕೆ ನಿಲ್ಲಿಸುವುದಿಲ್ಲ, ಮುಂದಿನ ಎರಡು ವರ್ಷಗಳ ಕಾಲ ಮಾತ್ರವಲ್ಲ, ಮುಂದಿನ ಚುನಾವಣೆಯಲ್ಲಿ ಮತ್ತೆ ನಾವು ಅಧಿಕಾರಕ್ಕೆ ಬರಲಿದ್ದೇವೆ, ಅದರ ನಂತರವೂ ಅದು ಮುಂದುವರಿಯಲಿದೆ. ಯೋಜನೆಗಳ ಅನುಷ್ಠಾನದಲ್ಲಿ ಕಂಡು ಬರುವ ದೋಷಗಳನ್ನು ಸರಿಪಡಿಸುವ ಕೆಲಸ ಪ್ರಾರಂಭದಿಂದಲೇ ನಡೆಯುತ್ತಾ
ಅಯೋಧ್ಯೆ ಮಂದಿರ ದೇಣಿಗೆಯಲ್ಲಿ ಅಕ್ರಮ: ಸುಪ್ರೀಂಗೆ ಅರ್ಜಿ ಸಲ್ಲಿಕೆ
ಅಯೋಧ್ಯೆಯ ಶ್ರೀರಾಮ ಜನ್ಮಭೂಮಿ ದೇವಸ್ಥಾನದ ದೇಣಿಗೆಗೆ ಸಂಬಂಧಿಸಿದಂತೆ ಕೇಳಿ ಬಂದಿರುವ ಅಕ್ರಮಗಳ ಆರೋಪ ಈಗ ಸುಪ್ರೀಂಕೋರ್ಟ್‌ಗೆ ತಲುಪಿದೆ. ದೇವಸ್ಥಾನದ ವಿಚಾರದಲ್ಲಿ ಸಾರ್ವಜನಿಕರ ವಿಶ್ವಾಸವನ್ನು ಕಾಪಾಡಲು ಈ ಬಗ್ಗೆ ಸ್ವತಂತ್ರ ತನಿಖೆ ನಡೆಸಬೇಕು ಎಂದು ಕೋರಿ ಸಲ್ಲಿಕೆಯಾಗಿರುವ ಅರ್ಜಿಯನ್ನು ಸುಪ್ರೀಂ ಕೋರ್ಟ್ ಪರಿಶೀಲಿಸಿದೆ.
ವಿಮಾನ ಪತನಗೊಂಡು 11 ಸ್ಕೈಡೈವರ್‌ಗಳು, ಪೈಲಟ್ ಸಾವು
ಅಮೆರಿಕದ ಮಿಸೌರಿ ರಾಜ್ಯದಲ್ಲಿ ಸ್ಕೈಡೈವಿಂಗ್ ಕಂಪೆನಿ ಗುತ್ತಿಗೆ ಪಡೆದುಕೊಂಡಿದ್ದ ವಿಮಾನ ಅಪಘಾತಗೊಂಡಿದ್ದು, ಹನ್ನೊಂದು ಸ್ಕೈಡೈವರ್‌ಗಳು ಮತ್ತು ಒಬ್ಬ ಪೈಲಟ್ ಮೃತಪಟ್ಟಿದ್ದಾರೆ. ಸ್ಕೈಡೈವಿಂಗ್ ಕಂಪನಿ ಗುತ್ತಿಗೆ ಪಡೆದಿದ್ದ ವಿಮಾನವು ಹಾರಾಟ ವಿಫಲವಾಗಿ ಎಡ ತಿರುವು ಪಡೆದು ಬಟ್ಲರ್ ಸ್ಮಾರಕ ವಿಮಾನ ನಿಲ್ದಾಣದಿಂದ 200
ದೇಗುಲದಿಂದ ವಾಪಸಾಗುತ್ತಿದ್ದಾಗ ವಾಹನ ತೆರೆದ ಬಾವಿಗೆ ಉರುಳಿ ಎಂಟು ಮಂದಿ ಸಾವು
ಮಹಾರಾಷ್ಟ್ರದ ಸೋಲಾಪುರ ಜಿಲ್ಲೆಯ ಮಲ್ಶಿರಾಸ್ ತಹಸಿಲ್‌ನಲ್ಲಿ ಪಿಕ್ ಅಪ್ ವಾಹನವೊಂದು ರಸ್ತೆ ಬದಿಯ ತೆರೆದ ಬಾವಿಗೆ ಬಿದ್ದು ಮಹಿಳೆಯರು ಮತ್ತು ಮಕ್ಕಳು ಸೇರಿ ಎಂಟು ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಅಪಘಾತದಲ್ಲಿ ಏಳು ಜನರು ಗಾಯಗೊಂಡಿರುವುದಾಗಿ ಪೊಲೀಸರು ಮಾಹಿತಿ ನೀಡಿದ್ದಾರೆ. ಪಂಢರಪುರ ಮೂಲದ




