kannada politics
ರಾಜ್ಯ ರಾಜಕೀಯಕ್ಕೆ ಮರಳುವ ಬಗ್ಗೆ ತೀರ್ಮಾನ ಮಾಡುತ್ತೇನೆ: ಹೆಚ್.ಡಿ. ಕುಮಾರಸ್ವಾಮಿ
“ರಾಜ್ಯ ರಾಜಕೀಯದಿಂದ ದೂರ ಸರಿಯುವುದಿಲ್ಲ. ನಾನು ರಾಜಕಾರಣದಲ್ಲಿ ಇದ್ದೇನೆ. ರಾಜ್ಯ ರಾಜಕೀಯಕ್ಕೆ ಯಾವಾಗ ಬರಬೇಕು ಎಂದು ಜನತೆಯ ಆಶಯದ ಮೇರೆಗೆ ತೀರ್ಮಾನ ಮಾಡುತ್ತೇನೆ ಎಂದು ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಬೆಂಗಳೂರಿನ ತಮ್ಮ ನಿವಾಸದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ನಾವು ಎನ್‌ಡಿಎ ಮೈತ್ರಿಯಲ್ಲಿದ್ದೇವೆ. ಈ ಮೈತ್ರಿಯಲ್ಲಿ ಯಾವುದೇ ಗೊಂದಲಕ್ಕೆ ಅವಕಾಶ ಕೊಡಬಾರದು. ನಮ್ಮ ಉದ್ದೇಶ ರಾಜ್ಯದಲ್ಲಿ ಉತ್ತಮ ಸರ್ಕಾರ ತರಬೇಕು


