Menu

ತಂತ್ರಜ್ಞಾನದ ಓಟದಲ್ಲಿ ಓದುವ ಸಂಸ್ಕೃತಿ ಹೋಗಿ ನೋಡುವ ಸಂಸ್ಕೃತಿ ಹೆಚ್ಚಾಗಿದೆ

ಭಾಷೆ ಬಳಸುವುದರಿಂದ ಬೆಳೆಯುತ್ತದೆ. ಆದರೆ, ಈಗ ತಂತ್ರಜ್ಞಾನದ ಓಟದಲ್ಲಿ ನಮ್ಮಲ್ಲಿ ಓದುವ ಸಂಸ್ಕೃತಿ ಕ್ಷೀಣಿಸುತ್ತಾ ಕೇವಲ ನೋಡುವ ಸಂಸ್ಕೃತಿ ಬೆಳೆಯುತ್ತಿರುವುದು ಬೇಸರದ ಸಂಗತಿ ಎಂದು ಮುಖ್ಯಮಂತ್ರಿಗಳ ಮಾಧ್ಯಮ‌ ಸಲಹೆಗಾರ ಕೆವಿ ಪ್ರಭಾಕರ್ ಅಭಿಪ್ರಾಯಪಟ್ಟರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳ ಮತ್ತು ಕೆ.ಎಂ.ಎಫ್ ಕಲಾವೇದಿಕೆ ಆಯೋಜಿಸಿದ್ದ ಕನ್ನಡ ರಾಜ್ಯೋತ್ಸವ ಉದ್ಘಾಟಿಸಿ ಮಾತನಾಡಿದರು.  ಸರ್ವ ಜನಾಂಗದ ಶಾಂತಿಯ ತೋಟ ಎನ್ನುವುದೇ ಕನ್ನಡ ಮಣ್ಣಿನ ಮೌಲ್ಯ. ಕರ್ನಾಟಕ ರಾಜ್ಯ ಉದಯದ ನಿಜವಾದ ಆಶಯ