Menu

ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ: ಡಿಕೆ ಶಿವಕುಮಾರ್

“ಕಾಂಗ್ರೆಸ್ಸಿಗರ ಹೆಗಲ ಮೇಲೆ ರಾಷ್ಟ್ರಧ್ವಜ, ಎದೆಯ ಒಳಗೆ ರಾಷ್ಟ್ರಭಕ್ತಿ ಇದೆ. ಸುವರ್ಣಸೌಧದಲ್ಲಿ ಬೃಹತ್ ತ್ರಿವರ್ಣ ಧ್ವಜ ಪ್ರದರ್ಶನ ಮುಂದಿನ ಪೀಳಿಗೆಗೆ ದೇಶ ಭಕ್ತಿಯ ಸಂದೇಶ ರವಾನಿಸುವ ಕೆಲಸವಾಗಿದೆ” ಎಂದು ಡಿಸಿಎಂ ಡಿಕೆ ಶಿವಕುಮಾರ್  ಶ್ಲಾಘಿಸಿದರು. ಬೆಳಗಾವಿ ಸುವರ್ಣಸೌಧದ ಭವ್ಯ ಮೆಟ್ಟಿಲುಗಳ ಮೇಲೆ ಬೃಹತ್ ರಾಷ್ಟ್ರಧ್ವಜ ಅನಾವರಣ ಕಾರ್ಯಕ್ರಮದಲ್ಲಿ ಡಿಸಿಎಂವಕುಮಾರ್ ಮಾತನಾಡಿದರು. ರಾಜ್ಯದ ಜನರ ಪರವಾಗಿ ಸ್ಪೀಕರ್ ಹಾಗೂ ಅವರ ತಂಡಕ್ಕೆ ಅಭಿನಂದನೆ ತಿಳಿಸುತ್ತೇನೆ. ಇದು ಎಲ್ಲರಿಗೂ ಮಾದರಿಯಾಗುವ ಅತ್ಯುತ್ತಮ ಕೆಲಸ.

ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ: ಮುಖ್ಯಮಂತ್ರಿ

ಕನ್ನಡ ಭಾಷೆ ರಾಜ್ಯದ ಅಸ್ಮಿತೆಯ ತಳಹದಿಯಾಗಿದ್ದರೆ, ಅರೆಭಾಷೆಯಂತಹ ಪ್ರಾದೇಶಿಕ ಭಾಷೆಗಳು ಕನ್ನಡವನ್ನು ಶ್ರೀಮಂತಗೊಳಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಕರ್ನಾಟಕ ಅರೆ ಭಾಷೆ ಸಂಸ್ಕೃತಿ ಮತ್ತು ಸಾಹಿತ್ಯ ಅಕಾಡೆಮಿ ಮಡಿಕೇರಿ ಇವರ ವತಿಯಿಂದ ರವೀಂದ್ರ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರಿಯಾಯಿತಿ

ಕನ್ನಡ ರಾಜ್ಯೋತ್ಸವದ ಅಂಗವಾಗಿ 2025ರ ನವೆಂಬರ್‌‌‌ ತಿಂಗಳು ಪೂರ್ತಿ ಕನ್ನಡ ಪುಸ್ತಕ ಪ್ರಾಧಿಕಾರದ ಎಲ್ಲಾ ಪುಸ್ತಕಗಳನ್ನು ಶೇಖಡಾ 50ರ ರಿಯಾಯಿತಿ ದರಗಳಲ್ಲಿ ಮಾರಾಟ ಮಾಡಲಾಗುವುದು. ಪುಸ್ತಕ ಪ್ರಿಯರು ಈ ಅವಕಾಶ ಬಳಸಿಕೊಳ್ಳಲು ಕೋರಿದೆ. ಬೆಂಗಳೂರಿನ ಕನ್ನಡ ಭವನದ ಸಿರಿಗನ್ನಡ ಪುಸ್ತಕ ಮಳಿಗೆಯಲ್ಲಿ

ಗ್ರಾಮ ನಾಮಗಳ ಮೇಲೆ ಬೆಳಕು ಚೆಲ್ಲುವ ದೇಜಗೌ ಕೃತಿ “ವಿಲೇಜ್ ನೇಮ್ಸ್ ಆಫ್‌ ಮೈಸೂರ್ ಡಿಸ್ಟ್ರಿಕ್ಟ್”

ದೇಜಗೌ ಎಂದು ಕರೆಯಲ್ಪಡುವ ಪ್ರೊ.ಡಿ.ಜವರೇಗೌಡ ಅವರು ಕನ್ನಡ ಸಾಹಿತ್ಯ ಕ್ಷೇತ್ರದಲ್ಲಿ ಪ್ರಮುಖ ವಿದ್ವಾಂಸರು. ಅವರು ಸ್ಥಳನಾಮಗಳ ಅಧ್ಯಯನದಲ್ಲಿ ತೀವ್ರ ಆಸಕ್ತಿ ಹೊಂದಿದ್ದು, ಈ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆಗಳನ್ನು ನೀಡಿದ್ದಾರೆ. ವ್ಯಾಪಕವಾದ ಕ್ಷೇತ್ರ ಕಾರ್ಯದ ಕೊರತೆಯಿಂದಾಗಿ ಅಧ್ಯಯನದ ಮಿತಿಗಳನ್ನು ಲೇಖಕರು ಒಪ್ಪಿಕೊಂಡರೂ ಪುಸ್ತಕದಲ್ಲಿ

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಪೋಸ್ಟ್‌

ಬೆಳಗಾವಿ ಪೊಲೀಸರನ್ನು ನಾಯಿಗೆ ಹೋಲಿಸಿ ಎಂಇಎಸ್ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡುವ ಮೂಲಕ ಉದ್ಧಟತನ ತೋರಿದೆ. ಮಹಾರಾಷ್ಟ್ರದಲ್ಲಿ ಎಂಇಎಸ್ ಮುಖಂಡ ಶುಭಂ ಶಳಕೆ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಎಂಇಎಸ್‌ ಹೀಗೆ ಪ್ರತಿಕ್ರಿಯಿಸಿದೆ. ಕನ್ನಡ ಪರ ಹೋರಾಟಗಾರರು ಹಾಗೂ ಕರ್ನಾಟಕ ಅಪಹಾಸ್ಯ ಮಾಡಿದ್ದ

ಬೆಳಗಾವಿ ಕಂಡಕ್ಟರ್ ವಿರುದ್ಧ ಪೋಕ್ಸೋ ಕೇಸ್ ವಾಪಸ್‌

ಬೆಳಗಾವಿಯಲ್ಲಿ ಕೆಎಸ್ಸಾರ್ಟಿಸಿ ಕಂಡಕ್ಟರ್ ಕನ್ನಡದಲ್ಲಿ ಹೇಳಿ ಎಂದ ಕಾರಣ ಮುಂದಿಟ್ಟುಕೊಂಡು ಹಲ್ಲೆ ನಡೆಸಿ ಬಳಿಕ ಪೋಕ್ಸೋ ಕೇಸ್ ದಾಖಲಿಸಿದ್ದ ದೂರುದಾರೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಪೋಕ್ಸೋ ಕೇಸ್ ದಾಖಲು ಮಾಡಿದ್ದ ಸಂತ್ರಸ್ತೆಯ ತಾಯಿ ಈ ಕುರಿತು ವೀಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದಾರೆ.

ಮಹಾರಾಷ್ಟ್ರ, ಕರ್ನಾಟಕ ನಡುವೆ ಸಾರಿಗೆ ಬಸ್​ ಸ್ಥಗಿತ

ಕನ್ನಡ ಮಾತನಾಡಿ ಎಂದು ಹೇಳಿದ್ದಕ್ಕೆ ಮರಾಠಿಗರು ಕಂಡಕ್ಟರ್ ಮೇಲೆ ಹಲ್ಲೆ ನಡೆಸಿರುವ ಪ್ರಕರಣ ತೀವ್ರ ಸ್ವರೂಪ ಪಡೆದುಕೊಂಡಿದೆ. ಕಂಡಕ್ಟರ್​ ಮೇಲೆ ಮರಾಠಿಗರು ಬೇರೆ ಆರೋಪಗಳನ್ನು ಮಾಡಿದ ಹಿನ್ನೆಲೆ ಕಂಡಕ್ಟರ್​ ವಿರುದ್ಧ ಫೋಕ್ಸೊ ಪ್ರಕರಣ ದಾಖಲಾಗಿದೆ. ಇದರಿಂದ ಬೆಳಗಾವಿಯಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು,

ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ

ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು‌. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ

ಸರ್ವಜನಾಂಗದ ಶಾಂತಿ ತೋಟದಲ್ಲಿನ ಅರಳಿದ ಭಾಷೆಗಳು

ಒಂದು ಕಾಲದಲ್ಲಿ ನಮ್ಮ ನಾಡಿನಲ್ಲಿ ಸಂಸ್ಕೃತ, ಪ್ರಾಕೃತದಂತಹ ಭಾಷೆಗಳೆ ಹೆಚ್ಚಾಗಿ ಪ್ರಚಲಿತವಾಗಿತ್ತು.  ದಿನ ಕಳೆದಂತೆ  ಅನ್ಯಭಾಷೆಗಳ ಪ್ರಭಾವ ಕನ್ನಡದ ಮೇಲಾಗಿರುವುದಕ್ಕೆ ಸಾಕಷ್ಟು ಸಾಕ್ಷಿಗಳಿವೆ. ಜೊತೆಗೆ ಕನ್ನಡದ ಪ್ರಭಾವವು ಅನ್ಯ ಭಾಷೆಗಳ ಮೇಲಾಗಿದೆ. ಈ ಬದಲಾವಣೆ ಆಗುತ್ತಿದ್ದಂತೆ ಕನ್ನಡೇತರ ಭಾಷೆಯ ಸಾಹಿತ್ಯವು ನಮ್ಮಲ್ಲಿ

ಖೋಖೋ ವಿಶ್ವಕಪ್ ವಿಜೇತ ತಂಡದ ಗೌತಮ್, ಚೈತ್ರಾ ಗೌರವಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ

ನವದೆಹಲಿ: 2025ರ ಪುರುಷರ ಹಾಗೂ ಮಹಿಳಾ ಖೋ-ಖೋ ವಿಶ್ವಕಪ್‌ನಲ್ಲಿ ಅತ್ಯುತ್ತಮ ಆಟವಾಡಿ ಭಾರತ ತಂಡವು ವಿಶ್ವ ಚಾಂಪಿಯನ್ ಆಗಿ ಹೊರಹೊಮ್ಮುವಲ್ಲಿ ಪ್ರಮುಖ ಪಾತ್ರ ವಹಿಸಿದ ಕರ್ನಾಟಕದ ಎಂ.ಕೆ.ಗೌತಮ್ ಹಾಗೂ ಚೈತ್ರಾ ಅವರನ್ನು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ