Kannanda news
ಆಗಸ್ಟ್ 21 ರಿಂದ 23 ರವರೆಗೆ ಲೋಕ್ ಅದಾಲತ್: ಸಿಎಸ್ ಶಾಲಿನಿ ರಜನೀಶ್
ಸರ್ವೋಚ್ಛ ನ್ಯಾಯಾಲಯವು ಮುಂಬರುವ 2026ರ ಆಗಸ್ಟ್ 21 ರಿಂದ ಆಗಸ್ಟ್ 23 ರವರೆಗೆ ಹಮ್ಮಿಕೊಂಡಿರುವ ‘ಸಮಾಧಾನ್ ಸಮಾರೋಹ್’ (ಲೋಕ್ ಅದಾಲತ್) ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ರಾಜ್ಯದ ಎಲ್ಲಾ ಇಲಾಖೆಗಳಿಗೆ ಮಹತ್ವದ ನಿರ್ದೇಶನ ನೀಡಿದ್ದಾರೆ. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ (ಕೆಎಸ್ಎಲ್ಎಸ್ಎ) ಸದಸ್ಯ ಕಾರ್ಯದರ್ಶಿಗಳು ಸಲ್ಲಿಸಿರುವ ಮನವಿಯ ಹಿನ್ನೆಲೆಯಲ್ಲಿ, ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಇಲಾಖೆಗಳಿಗೆ ಸೂಚಿಸಿರುತ್ತಾರೆ. ಎಲ್ಲಾ ಇಲಾಖೆಯ ಮುಖ್ಯಸ್ಥರು, ತಮ್ಮ ಇಲಾಖೆಗಳಲ್ಲಿ
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಆದ್ಯತೆ: ಕೆವಿ ಪ್ರಭಾಕರ್
ಸ್ಥಳೀಯ ಪತ್ರಿಕೆಗಳು ಮುಖ್ಯಮಂತ್ರಿಗಳ ಮೊದಲ ಆದ್ಯತೆಯಾಗಿದೆ. ಸ್ಥಳೀಯ ಮತ್ತು ಸಣ್ಣ ಪತ್ರಿಕೆಗಳಿಗೆ ಜಾಹಿರಾತಿನಲ್ಲಿ ತೊಂದರೆ ಆಗಬಾರದು ಎನ್ನುವ ನಿಲುವು ಮುಖ್ಯಮಂತ್ರಿಗಳದ್ದೂ ಆಗಿದೆ, ನನ್ನದೂ ಆಗಿದೆ ಎಂದು ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆವಿ ಪ್ರಭಾಕರ್ ಹೇಳಿದ್ದಾರೆ. ಮಾಧ್ಯಮ ಸಲಹೆಗಾರ ಹೊಣೆಗಾರಿಕೆ ಹೂವಿನ ಹಾದಿ
ರಾಜ್ಯದ ನಾಗರಿಕರ ಮತದಾನ ಹಕ್ಕು ರಕ್ಷಣೆಗೆ ಸರ್ವಪ್ರಯತ್ನ: ಸಚಿವ ಹೆಚ್.ಕೆ.ಪಾಟೀಲ್
ರಾಷ್ಟ್ರದ ನಾಗರಿಕನಾಗಿರುವ ರಾಜ್ಯದ ಯಾವುದೇ ಪ್ರಜೆಗೆ ತನ್ನ ಮತದಾನದ ಹಕ್ಕನ್ನು ಅನಾವಶ್ಯಕವಾಗಿ ಕಸಿದುಕೊಳ್ಳುವಂತಹ ಪ್ರಕ್ರಿಯೆ ನಡೆದರೆ, ಅಂತಹ ಪ್ರಕ್ರಿಯೆಯಿಂದ ನಾಗರೀಕನ ಮತದಾನದ ಹಕ್ಕನ್ನು ಕಾಪಾಡಲು ಸರ್ವಪ್ರಯತ್ನಗಳನ್ನು ಮಾಡಲು ಚಿಂತನೆ ನಡೆಸಲಾಗುವುದು ಎಂದು ಕಾನೂನು ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ.ಪಾಟೀಲ್ ಹೇಳಿದ್ದಾರೆ. ಕರ್ನಾಟಕ
ರಾಜಣ್ಣ ಯಾಕೆ ಸಿಎಂ ಬದಲಾವಣೆ ಮಾಡಲು ಮುಂದಾಗಿದ್ದಾರೆ: ಡಿಕೆ ಶಿವಕುಮಾರ್
ರಾಜಣ್ಣ ಅವರು ಸಿಎಂ ಬದಲಾವಣೆ ಮಾಡಲು ಯಾಕೆ ಹೊರಟಿದ್ದಾರೆ, ಸಿಎಂ ಮುಂದುವರಿಯಲಿ ಎಂದು ಹೇಳುವುದರಲ್ಲಿ ತಪ್ಪೇನಿಲ್ಲ. ಪರಮೇಶ್ವರ್ ಅವರನ್ನು ಸಿಎಂ ಮಾಡಬೇಕು ಎನ್ನುವುದಾದರೆ ಸಿಎಂ ಅಧಿಕಾರದಿಂದ ಇಳಿಯಬೇಕು ಎಂಬುದು ಅವರ ಮಾತಿನ ಅರ್ಥವೇ, ಸಿಎಂ ಬದಲಾಗಬೇಕು ಎಂದು ನಾನು ಎಂದಾದರೂ ಹೇಳಿದ್ದೀನಾ,
ಲಿಫ್ಟ್ ಸ್ಥಗಿತ: ಏಳು ವರ್ಷದ ಬಾಲಕ ಸಾವು
ಪುಣೆಯ ಸಿಂಹಗಡ್ ರಸ್ತೆ ಪ್ರದೇಶದ ನಿಂಬಾಜಿನಗರದ ರಿದ್ಧಿ ಸಿದ್ಧಿ ಅಪಾರ್ಟ್ಮೆಂಟ್ ಕಟ್ಟಡದಲ್ಲಿ ಲಿಫ್ಟ್ ಒಳಗೆ ಸಿಲುಕಿ ಏಳು ವರ್ಷದ ಬಾಲಕ ಮೃತಪಟ್ಟ ದಾರುಣ ಘಟನೆ ನಡೆದಿದೆ. ಮೃತ ಬಾಲಕನನ್ನು ಶಿವಾಂಶ್ ಶೈಲೇಶ್ ಧೂತ್ ಎಂದು ಗುರುತಿಸಲಾಗಿದೆ. ಶಿವಾಂಶ್ ಎಂದಿನಂತೆ ರಾತ್ರಿ 10
ಗ್ಯಾರಂಟಿ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ರಾಜ್ಯದಲ್ಲೇ ಮೊದಲ ಸ್ಥಾನ: ಎಂಬಿ ಪಾಟೀಲ್
ಗ್ಯಾರಂಟಿ ಯೋಜನೆಗಳ ಸಮರ್ಪಕ ಅನುಷ್ಠಾನದಲ್ಲಿ ಬಬಲೇಶ್ವರ ಮತಕ್ಷೇತ್ರ ರಾಜ್ಯದಲ್ಲಿಯೇ ಮೊದಲ ಸ್ಥಾನದಲ್ಲಿದೆ ಎಂದು ಕೈಗಾರಿಕೆ, ಮೂಲಸೌಲಭ್ಯ ಅಭಿವೃದ್ಧಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ವಿಜಯಪುರದ ತಿಕೋಟಾ ತಾಲೂಕಿನ ಮಲಕನದೇವರಹಟ್ಟಿ ಗ್ರಾಮದಲ್ಲಿ ಲೋಕೋಪಯೋಗಿ ಇಲಾಖೆ ವತಿಯಿಂದ ರೂ.
ಪ್ರೀತಿ, ಸೆಕ್ಸ್, ಮದುವೆ ಭರವಸೆಯಿತ್ತು ಜಿಎಸ್ಟಿ-ಕಸ್ಟಮ್ಸ್ ಅಧಿಕಾರಿಗಳ ಬ್ಲ್ಯಾಕ್ಮೇಲ್ ಮಾಡುತ್ತಿದ್ದಾತ ಅರೆಸ್ಟ್
ಬೆಂಗಳೂರಿನಲ್ಲಿ ಜಿಎಸ್ಟಿ ಮತ್ತು ಕಸ್ಟಮ್ಸ್ ವಿಭಾಗದ ಮಹಿಳಾ ಅಧಿಕಾರಿಗಳನ್ನು ಗುರಿಯಾಗಿಸಿಕೊಂಡು ಪ್ರೀತಿ, ಮದುವೆ, ಸೆಕ್ಸ್ ಎಂದು ನಂಬಿಸಿ ಬಳಿಕ ಬ್ಲ್ಯಾಕ್ಮೇಲ್ ಕೃಪಲಾನಿ ಎಂಬಾತನನ್ನು ಪುಲಿಕೇಶಿನಗರ ಪೊಲೀಸರು ಬಂಧಿಸಿದ್ದಾರೆ. ಪ್ರೀತಿ ಮತ್ತು ಮದುವೆಯ ಹೆಸರಿನಲ್ಲಿ ನಂಬಿಸಿ ಮಹಿಳಾ ಅಧಿಕಾರಿಗಳೊಂದಿಗೆ ದೈಹಿಕ ಸಂಪರ್ಕ ಬೆಳೆಸಿ
ಭವಿಷ್ಯ ಪಕ್ಷದಲ್ಲಿದೆಯೇ ಹೊರತು ಮಾಧ್ಯಮಗಳ ಮುಂದೆ ಅಲ್ಲ, ಶಾಸಕರು ಅನವಶ್ಯ ಹೇಳಿಕೆ ನೀಡಿದರೆ ಶಿಸ್ತುಕ್ರಮ: ಡಿಕೆ ಶಿವಕುಮಾರ್
“ಪಕ್ಷದ ಶಾಸಕರು ಹೈಕಮಾಂಡ್ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ತಪ್ಪೇನಿಲ್ಲ. ಅನವಶ್ಯಕವಾಗಿ ಏನೇನೋ ಹೇಳಿಕೆ ನೀಡಿದರೆ ಶಿಸ್ತು ಕ್ರಮ ಜರುಗಿಸಲಾಗುವುದು” ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದರು. ಸದಾಶಿವನಗರದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದ
ಬಾಗಲಕೋಟೆಯಲ್ಲಿ ಕಾಂಗ್ರೆಸ್ನಿಂದ ರಾತ್ರಿ ಕೋಟ್ಯಾಂತರ ರೂ. ಹಂಚಿಕೆ: ಚರಂತಿಮಠ ಆರೋಪ
ಬಾಗಲಕೋಟೆ ಉಪಚುನಾವಣೆಗೆ ಮತದಾನ ನಡೆಯುತ್ತಿದ್ದು, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಕಾಂಗ್ರೆಸ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಕಾಂಗ್ರೆಸ್ನವರು ನಿನ್ನೆ ರಾತ್ರಿ ಲಕ್ಷಾಂತರ, ಕೋಟ್ಯಂತರ ರೂಪಾಯಿ ಹಣ ಹಂಚಿಕೆ ಮಾಡಿದ್ದಾರೆ ಎಂಬ ಮಾಹಿತಿ ಇದೆ. ಗೋಕಾಕ್, ಅರಬಾವಿ ಮತ್ತು ಬೆಳಗಾವಿ ಜಿಲ್ಲೆಗಳಿಂದ
ಕದನ ವಿರಾಮ ಮಧ್ಯೆ ಲೆಬನಾನ್ ಮೇಲೆ ಇಸ್ರೇಲ್ ದಾಳಿ: ಮತ್ತೆ ಹರ್ಮುಜ್ ಮುಚ್ಚಿದ ಇರಾನ್
ಅಮೆರಿಕ- ಇರಾನ್ ಕದನ ವಿರಾಮದ ಮಧ್ಯೆಯೇ ಇಸ್ರೇಲ್ ಲೆಬನಾನ್ ಮೇಲೆ ದಾಳಿಗಳನ್ನು ನಡೆಸಿದ್ದು 100 ಜನರು ಮೃತಪಟ್ಟಿದ್ದು, 700ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ. ಈ ದಾಳಿಯನ್ನು ಖಂಡಿಸಿರುವ ಇರಾನ್ ಹರ್ಮುಜ್ ಜಲಸಂಧಿಯನ್ನು ಮುಚ್ಚಿದೆ. ಲೆಬನಾನ್ ಮೇಲಿನ ದಾಳಿ ಮೂಲಕ ಇಸ್ರೇಲ್ ಕದನವಿರಾಮ




