Menu

ಏ.4ರಿಂದ 14ರವರೆಗೆ ಬೆಂಗಳೂರು ಕರಗ ಮಹೋತ್ಸವ

ಬೆಂಗಳೂರಿನ ಐತಿಹಾಸಿಕ ಕರಗ ಮಹೋತ್ಸವ ಏ.4ರಿಂದ ಏ.14ರವರೆಗೆ ನಡೆಯಲಿದೆ. ಏಪ್ರಿಲ್ 12ರ ಚೈತ್ರ ಪೌರ್ಣಮಿಯಂದು ಕರಗ ಶಕ್ತ್ಯೋತ್ಸವ ನಡೆಯಲಿದ್ದು, ಎ.ಜ್ಞಾನೇಂದ್ರ ಕರಗ ಹೊರಲಿದ್ದಾರೆ. ಸತತ 14 ವರ್ಷಗಳಿಂದ ಬೆಂಗಳೂರು ಕರಗ ಹೊರುತ್ತಿರುವ ಎ.ಜ್ಞಾನೇಂದ್ರ, ಈ ವರ್ಷ 15ನೇ ಬಾರಿಗೆ ಕರಗ ಹೊರಲಿದ್ದಾರೆ. ಕರಗದಲ್ಲಿ 20 ಲಕ್ಷ ಜನ ಭಾಗಿಯಾಗುವ ನಿರೀಕ್ಷೆಯಿದೆ. ಏ.4ರಂದು ರಥೋತ್ಸವ ಹಾಗೂ ಧ್ವಜಾರೋಹಣ ನಡೆಯಲಿದೆ. ಏ.5ರಿಂದ ಏ.8ರ ತನಕ ಪ್ರತಿದಿನ ವಿಶೇಷ ಪೂಜೆ ಮತ್ತು ಮಹಾಮಂಗಳಾರತಿ ನಡೆಯಲಿದೆ.