Tuesday, September 16, 2025
Menu

ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್

ಕಾರ್ಯಕ್ರಮವೊಂದರಲ್ಲಿ ಕನ್ನಡಿಗರು ಕನ್ನಡ ಹಾಡು ಹಾಡುವಂತೆ ಒತ್ತಾಯಿಸಿ ಕನ್ನಡಾಭಿಮಾನವನ್ನು ಮೆರೆದಾಗ ಅದನ್ನು ಪಹಲ್ಗಾಮ್ ದಾಳಿಗೆ ಹೋಲಿಸಿದ ಸೋನು ನಿಗಮ್ ವಿರುದ್ಧ ಬೆಂಗಳೂರಿನಲ್ಲಿ ಎಫ್‌ಐಆರ್ ದಾಖಲಾಗಿದೆ. ಅವಲಹಳ್ಳಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ಕರ್ನಾಟಕ ರಕ್ಷಣಾ ವೇದಿಕೆ) ಬೆಂಗಳೂರು ನಗರ ಘಟಕದ ಅಧ್ಯಕ್ಷ ಧರ್ಮರಾಜ್ ನೀಡಿದ ದೂರಿನ ಆಧಾರದಲ್ಲಿ ಎಫ್‌ಐಆರ್ ದಾಖಲಾಗಿದೆ. ಖಾಸಗಿ ಕಾಲೇಜೊಂದರ ಕಾರ್ಯಕ್ರಮದಲ್ಲಿ ಕನ್ನಡ ಹಾಡು ಹೇಳುವಂತೆ ವಿದ್ಯಾರ್ಥಿ ಕೇಳಿದ್ದಕ್ಕೆ, ಇದಕ್ಕೆ ಪಹಲ್ಗಾಮ್‌ನಲ್ಲಿ ಅಟ್ಯಾಕ್ ಆಗಿದ್ದು ಎಂದು ಸೋನು

ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ

ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು‌. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ