Menu

ಜನಪ್ರತಿನಿಧಿಗಳು ಎಲ್ಲಿದ್ದೀರಿ, ನಾನು ಬೆಳಗಾವಿ, ಬಾಳೇಕುಂದ್ರಿಗೆ ಬಂದೇ ಬರುತ್ತೇನೆ: ಕರವೇ ಅಧ್ಯಕ್ಷ ನಾರಾಯಣ ಗೌಡ

ನಾನು ಬೆಳಗಾವಿಗೆ ಬಂದೇ ಬರುತ್ತೇನೆ. ಬಾಳೇಕುಂದ್ರಿಗೂ ಬಂದೇ ಬರುತ್ತೇನೆ. ಬಾಳೇಕುಂದ್ರಿ ಕರ್ನಾಟಕದ ಹೆಮ್ಮೆಯ ಇಂಜಿನಿಯರ್, ನೀರಾವರಿ ತಜ್ಞ ಶಿವಪ್ಪ ಗುರುಬಸಪ್ಪ ಬಾಳೇಕುಂದ್ರಿಯವರ ಊರು‌. ಕೃಷ್ಣಾ, ಮಲಪ್ರಭ, ಘಟಪ್ರಭ ವ್ಯಾಪ್ತಿಯ ನೀರಾವರಿ ಯೋಜನೆಗಳ ರೂವಾರಿಯವರು. ಇಂಥ ಶ್ರೇಷ್ಠ ವ್ಯಕ್ತಿಗೆ ಜನ್ಮ ನೀಡಿದ ಅಪ್ಪಟ ಕನ್ನಡದ ಊರು ಬಾಳೇಕುಂದ್ರಿಗೆ ಬರಲು ನನಗೆ ಯಾವ ಹಿಂಜರಿಕೆ ಇರಲು ಸಾಧ್ಯ? ಕರ್ನಾಟಕದ ಮೂಲೆಮೂಲೆಯ ಯಾವ ಹಳ್ಳಿಗಾ ದರೂ ನಾನು ಹೋಗುತ್ತೇನೆ.‌ ಅದು ನನ್ನ ಹಕ್ಕು, ಹೋಗಬೇಕಾದಾಗ