Karawara
ಇನ್ನೆರಡು ತಿಂಗಳಲ್ಲಿ ಕಾರವಾರದಲ್ಲಿ 450 ಹಾಸಿಗೆಯ ಆಸ್ಪತ್ರೆ
ಕಾರವಾರದಲ್ಲಿ 450 ಹಾಸಿಗೆ ಸಾಮರ್ಥ್ಯದ ಆಸ್ಪತ್ರೆಯನ್ನು ಇನ್ನೆರಡು ತಿಂಗಳಲ್ಲಿ ಉದ್ಘಾಟಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ವಿಧಾನಸಭೆಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ಬಿಜೆಪಿ ಶಾಸಕ ದಿನಕರ್ ಶೆಟ್ಟಿ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಕಾರವಾರದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಸೌಲಭ್ಯ ಕಲ್ಪಿಸಲಾಗುತ್ತದೆ. ಕ್ಯಾನ್ಸರ್ ಚಿಕಿತ್ಸೆಗೆ ಅವಕಾಶ ನೀಡಲಾಗಿದೆ. ಖಾಲಿ ಹುದ್ದೆ ಭರ್ತಿಗೆ ಕ್ರಮ ಕೈಗೊಳ್ಳಲಾಗಿತ್ತು. ಆದರೆ, ಇಬ್ಬರು ವೈದ್ಯರು ಮಾತ್ರ ಅರ್ಜಿ ಹಾಕಿದ್ದರು ಎಂದರು. ತಾಲೂಕು