Karkala
2028 ರಲ್ಲಿ ಕಾಂಗ್ರೆಸ್ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ: ಡಿಸಿಎಂ
“ಕಾಂಗ್ರೆಸ್ ಪಕ್ಷದಲ್ಲಿ ನಾಯಕ ಪಟ್ಟವಿಲ್ಲ. ಪಕ್ಷಕ್ಕೆ ದುಡಿಯುವವರೆಲ್ಲರೂ ಕಾರ್ಯಕರ್ತರೇ. 2028 ರಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ. ಎಲ್ಲಾ ಮುಖಂಡರು, ಕಾರ್ಯಕರ್ತರು ಒಗ್ಗಟ್ಟಾಗಿ ದುಡಿಯಬೇಕು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ಕಾರ್ಕಳದಲ್ಲಿ ನಡೆದ ಕಾಂಗ್ರೆಸ್ ಕುಟುಂಬೋತ್ಸವ ಸಮಾವೇಶದಲ್ಲಿ ಮಾತನಾಡಿದರು. “ಬೂತ್ ಮಟ್ಟದಲ್ಲಿ ಯಾರು ಪಕ್ಷಕ್ಕೆ ಹೆಚ್ಚು ಮತಗಳನ್ನು ತಂದುಕೊಡುತ್ತಾರೆಯೋ ಅವರೇ ನಾಯಕರು. ಈ ವಾರ, ಈ ತಿಂಗಳು, ಈ ವರ್ಷ ಪಕ್ಷ ಸಂಘಟನೆಯ ವರ್ಷ. ಬೆಳಗಾವಿಯಲ್ಲಿ ನಡೆದ ಕಾರ್ಯಕಾರಿ ಸಮಿತಿಯಲ್ಲಿ