Menu

ಕುರಿ ಸಾಕಣೆದಾರರ ಮೇಲೆ ಹಲ್ಲೆ ತಡೆಗೆ ವಿಶೇಷ ಕಾನೂನು ಚಿಂತನೆ

ಕುರಿ ಸಾಕಣೆದಾರರ  ಮೇಲೆ ಹಲ್ಲೆ, ದೌರ್ಜನ್ಯ ನಡೆಸುವವರನ್ನು ಕಠಿಣ ಶಿಕ್ಷಗೆ ಗುರಿಪಡಿಸಲು ವಿಶೇಷ ಕಾನೂನು ತರಲು ಚಿಂತನೆ ನಡೆಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಪರಿಷತ್ ಗೆ ತಿಳಿಸಿದ್ದಾರೆ. ಪ್ರಶ್ನೋತ್ತರ ವೇಳೆಯಲ್ಲಿ ‌ಬಿಜೆಪಿ ಸದಸ್ಯ ಚಿದಾನಂದ್ ಎಂ.ಗೌಡ ಪ್ರಶ್ನೆಗೆ ಪಶುಸಂಗೋಪನೆ ಸಚಿವರ ಪರವಾಗಿ ಉತ್ತರ ನೀಡಿದ ಸಚಿವರು,  ಕುರಿಗಾಹಿಗಳ ಮೇಲೆ ಹಲ್ಲೆ ನಡೆದರೆ,ಆತ್ಯಾಚಾರದಂತೆ ಶಿಕ್ಷಿಸುವ ಕಾನೂನು ಮಾಡುವ ಚಿಂತನೆ ಸರ್ಕಾರದ ಹಂತದಲ್ಲಿದೆ. ಮುಂದಿನ ದಿನಗಳಲ್ಲಿ ಕಾನೂನು ಜಾರಿಗೆ ತರಲಾಗುವುದು ಎಂದರು.

ಪ್ರಜಾಪ್ರಭುತ್ವದ ವ್ಯವಸ್ಥೆಯಲ್ಲಿ ಕರಿಮಣಿ ಮಾಲೀಕ ಯಾರು ಎನ್ನುವುದು ಕೀಳು ಅಭಿರುಚಿಯ ಪ್ರಯೋಗ

ಅಧಿಕಾರಕ್ಕಾಗಿ ಅಧಿಕಾರ ಮಾಡುವುದಲ್ಲ. ಜನರ ಕಲ್ಯಾಣಕ್ಕೆ ಅಧಿಕಾರ ಬಳಕೆಯಾಗಬೇಕು ಎನ್ನುವ ಕಾಳಜಿಯ ಕೆಲಸವನ್ನು ಸರ್ಕಾರ ಮಾಡುತ್ತಿದೆ. ಇವೆಲ್ಲವೂ ವಾಸ್ತವ ಕಾರ್ಯಕ್ರಮಗಳಾಗಿರುವುದರಿಂದ ರಾಜ್ಯಪಾಲರು ಶ್ಲಾಘಿಸಿದ್ದಾರೆ. ಸದನದ ಚರ್ಚೆಗಳು ಬಸವಣ್ಣ ಹೇಳಿದಂತೆ ನುಡಿದರೆ ಮುತ್ತಿನ ಹಾರದಂತಿರಬೇಕು, ನುಡಿದರೆ ಲಿಂಗ ಮೆಚ್ಚಿ ಅಹುದಹುದೆನ್ನುವಂತಿರಬೇಕು. ಸದನದಲ್ಲಿ ಮಾತನಾಡಿದರೆ

‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ ಅಂಗೀಕಾರ

ಆಡಳಿತ ವೀಕೆಂದ್ರಿಕರಣ ದೃಷ್ಟಿಯಿಂದ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಸಂಖ್ಯೆಯನ್ನು ಹೆಚ್ಚು ಮಾಡುವ ಉದ್ದೇಶದ ‘ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ 2024’ವನ್ನು ವಿಧಾನಸಭೆಯಲ್ಲಿ ಪ್ರತಿಪಕ್ಷಗಳ ಸಭಾತ್ಯಾಗದ ನಡುವೆ ಅಂಗೀಕರಿಸಲಾಗಿದೆ. ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ ಕೆ ಶಿವಕುಮಾರ್,  20