karnataka bansh
ಮಾ.22ರಂದು ಕರ್ನಾಟಕ ಬಂದ್: ವಾಟಾಳ್ ನಾಗರಾಜ್ ಘೋಷಣೆ
ಗಡಿ ಭಾಗದಲ್ಲಿ ಮರಾಠಿ ಭಾಷಿಗರ ಪುಂಡಾಟಿಕೆ ಖಂಡಿಸಿ ಕನ್ನಡಿಗರ ಸ್ವಾಭಿಮಾನಕ್ಕಾಗಿ ಮಾರ್ಚ್ 22ರಂದು ಕರ್ನಾಟಕ ಬಂದ್ ನಡೆಸಲಾಗುವುದು ಎಂದು ಕನ್ನಡ ಪರ ಸಂಘಟನೆಗಳು ಕರೆ ನೀಡಿವೆ. ಬೆಂಗಳೂರಿನಲ್ಲಿ ಶುಕ್ರವಾರ ನಡೆದ ಕನ್ನಡ ಪರ ಸಂಘಟನೆಗಳ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್, ಕನ್ನಡಿಗರ ಸ್ವಾಭಿಮಾನಕ್ಕಾಗಿ, ಕನ್ನಡಿಗರ ರಕ್ಷಣೆಗಾಗಿ ಹಾಗೂ ಕರ್ನಾಟಕದಲ್ಲಿ ಕನ್ನಡಿಗರ ವಿರುದ್ಧ ದೌರ್ಜನ್ಯ ಖಂಡಿಸಿ ಕರ್ನಾಟಕ ಬಂದ್ ನಡೆಸಲು ತೀರ್ಮಾನಿಸಲಾಗಿದೆ ಎಂದರು. ಬೆಳಗಾವಿಯಲ್ಲಿ