Karnataka Budget 2025
ನೀವು ಹೊಗಳೋ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಬಿಜೆಪಿಗೆ ಸಿದ್ದರಾಮಯ್ಯ ಪ್ರಶ್ನೆ
ನೀವು ಮೋದಿ ಮೋದಿ ಅಂತ ಹೊಗಳ್ತಿರಲ್ಲ, ನಿಮ್ಮ ಮೋದಿ ಎಷ್ಟು ಸಾಲ ಮಾಡಿದ್ದಾರೆ ಗೊತ್ತಾ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಪಕ್ಷ ಬಿಜೆಪಿ ಸದಸ್ಯರನ್ನು ಪ್ರಶ್ನಿಸಿದರು. ವಿಧಾನಸಭೆಯಲ್ಲಿ ಬಜೆಟ್ ಮೇಲೆ ಗುರುವಾರ ನಡೆದ ಚರ್ಚೆಯಲ್ಲಿ ಬಜೆಟ್ ಸಾಲದ ಕುರಿತು ಪ್ರಶ್ನಿಸಿದ ಬಿಜೆಪಿ ಸದಸ್ಯರಿಗೆ ಸಿದ್ದರಾಮಯ್ಯ ತಿರುಗೇಟು ನೀಡಿದರು. ಸಿದ್ದರಾಮಯ್ಯ ಅತೀ ಹೆಚ್ಚು ಸಾಲ ಮಾಡಿದ ಮುಖ್ಯಮಂತ್ರಿ. ಯಾವುದೇ ಶಾಶ್ವತ ಯೋಜನೆ ಪ್ರಕಟಿಸದೇ ತಾತ್ಕಾಲಿಕವಾಗಿ ಹಂಚಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ್ ಆರೋಪಿಸಿದರು.
ಬಿಜೆಪಿಯವರು ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ: ಡಿ.ಕೆ. ಶಿವಕುಮಾರ್
“ಸಿಎಂ ಸಿದ್ದರಾಮಯ್ಯ ಅವರು ದೇಶಕ್ಕೆ ಮಾದರಿ ಬಜೆಟ್ ಮಂಡನೆ ಮಾಡಿದ್ದು, ಬಿಜೆಪಿಯವರು ಇದರ ಬಗ್ಗೆ ಸುಳ್ಳು ಹೇಳದೆ ಇನ್ನೇನು ಮಾಡಲು ಸಾಧ್ಯ?” ಎಂದು ಡಿಸಿಎಂ ಶಿವಕುಮಾರ್ ತಿರುಗೇಟು ನೀಡಿದ್ದಾರೆ. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಪ್ರತಿಕ್ರಿಯೆ ನೀಡಿದರು. ಬಿಜೆಪಿಯವರು
“ಹಲಾಲ್ ಬಜೆಟ್” ಬಿಜೆಪಿಯವರ ಕೊಳಕು ಮನಸ್ಥಿತಿ, ದಿವಾಳಿ ಪದದ ಅರ್ಥವೇ ಗೊತ್ತಿಲ್ಲದವರು ಎಂದ ಸಿಎಂ
ಅಲ್ಪಸಂಖ್ಯಾತರು, ಪ.ಜಾ, ಪ.ವರ್ಗ, ಹಿಂ.ವರ್ಗಗಳಿಗೆ ಹೆಚ್ಚಿನ ಅನುದಾನ ನೀಡಲಾಗಿದೆ. ಬೌದ್ಧರು, ಜೈನ್, ಕ್ರಿಶ್ಚಿಯನ್ ಸೇರಿದಂತೆ ಅಲ್ಪಸಂಖ್ಯಾತರ ಎಲ್ಲ ಸಮುದಾಯದವರಿಗೆ 4 ಸಾವಿರ ಕೋಟಿ ಕೊಟ್ಟರೂ , ಇದನ್ನು ಹಲಾಲ್ ಬಜೆಟ್ ಎಂದು ಟೀಕಿಸುತ್ತಾರೆ. ಇದು ಬಿಜೆಪಿಯವರ ಕೊಳಕು ಮನಸ್ಥಿತಿಯನ್ನು ಬಿಂಬಿಸುತ್ತದೆ ಎಂದು
ಸಿದ್ದರಾಮಯ್ಯನವರ ಸ್ವೀಟ್ 16 ಬಜೆಟ್: ಈಶ್ವರ ಖಂಡ್ರೆ
ಬೆಂಗಳೂರು, ಮಾ.7: ಹಣಕಾಸು ಸಚಿವರೂ ಆದ ಸಿದ್ದರಾಮಯ್ಯ ಅವರಿಂದು ಮಂಡಿಸಿರುವ 2025-26ನೇ ಸಾಲಿನ ಆಯವ್ಯಯ ರಾಜ್ಯದ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾದ ಆಶಾದಾಯಕ ಬಜೆಟ್ ಆಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಖಾತೆ ಸಚಿವ ಈಶ್ವರ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ಬಗ್ಗೆ
ಪ್ರಗತಿಶೀಲ ಬಜೆಟ್: ಸಚಿವ ಎನ್.ಎಸ್ ಭೋಸರಾಜು
ಬೆಂಗಳೂರು: ವೃಷಭಾವತಿ ವ್ಯಾಲಿ, ಹೆಚ್. ಎನ್ ವ್ಯಾಲಿ 2 ನೇ ಹಂತದ ಯೋಜನೆ, ಕೆರೆಗಳ ಆಧುನೀಕರಣ, ಅಣೆಕಟ್ಟು ಮತ್ತು ಪಿಕಪ್, ಏತ ನೀರಾವರಿ ಯೋಜನೆ, ನಿಷ್ಕ್ರೀಯ ಯೋಜನೆಗಳ ಪುನರುಜ್ಜೀವನಕ್ಕೆ ಆದ್ಯತೆ ನೀಡಿ, ರಾಜ್ಯದ ಅಂತರ್ಜಲ ಹೆಚ್ಚಳಕ್ಕೆ 2000 ಕೋಟಿ ರೂಪಾಯಿಗಳ ಅನುದಾನದ
ಅಭಿವೃದ್ಧಿಯ ಯೋಜನೆಗಳೇ ಇಲ್ಲದ ಬಜೆಟ್: ಪ್ರತಿಪಕ್ಷ ನಾಯಕ ಆರ್.ಅಶೋಕ
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಜನ ವಿರೋಧಿ ಹಾಗೂ ಮುಸ್ಲಿಮರ ಬಜೆಟ್ ಮಂಡಿಸಿದೆ. ಜೊತೆಗೆ ಕರ್ನಾಟಕದ ಇತಿಹಾಸದಲ್ಲೇ ಮೊದಲ ಬಾರಿಗೆ ದಾಖಲೆಯಂತೆ 1.16 ಲಕ್ಷ ಕೋಟಿ ರೂ. ಸಾಲ ಮಾಡಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬಜೆಟ್ ಮಂಡನೆ ಬಳಿಕ
Karantaka budget 2025: ಸವದತ್ತಿ ಯಲ್ಲಮ್ಮ ದೇವಸ್ಥಾನ, ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟಿ!
ಪ್ರಸಿದ್ಧ ಪುಣ್ಯಕ್ಷೇತ್ರ ಸವದತ್ತಿ ಯಲ್ಲಮ್ಮ ದೇವಸ್ಥಾನ ಹಾಗೂ ದೇವಿಕಾರಾಣಿ ಎಸ್ಟೇಟ್ ಅಭಿವೃದ್ಧಿಗೆ 398 ಕೋಟ ರೂ. ಮೀಸಲಿಡುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಬುಧವಾರ ಮಂಡಿಸಿದ ೨೦೨೫-೨೬ನೇ ಸಾಲಿನ ಬಜೆಟ್ ನಲ್ಲಿ ಉತ್ತರ ಕರ್ನಾಟಕದ ಸವದತ್ತಿ ಯಲ್ಲಮ್ಮ ದೇವಸ್ಥಾನದ ಅಭಿವೃದ್ಧಿಗೆ ೧೯೯ ಕೋಟಿ
3.30 ಗಂಟೆ ಬಜೆಟ್ ಮಂಡಿಸಿ ತಮ್ಮದೇ ದಾಖಲೆ ಬರೆದ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಬುಧವಾರ 16ನೇ ಬಾರಿ ಬಜೆಟ್ ಮಂಡಿಸುವ ಮೂಲಕ ಇತಿಹಾಸ ಬರೆದರೆ, ಅತ್ಯಂತ ದೀರ್ಘಾವಧಿಯ ಬಜೆಟ್ ಮಂಡಿಸಿ ಮತ್ತೊಂದು ದಾಖಲೆ ಬರೆದಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಬಜೆಟ್ ಮಂಡಿಸಿದರು. ಈ ಬಾರಿ 3 ಗಂಟೆ 30 ನಿಮಿಷಗಳ
Karnataka budget 2025 ಬೆಂಗಳೂರಿಗೆ 7000 ಕೋಟಿ, ಸುರಂಗ ಮಾರ್ಗಕ್ಕೆ 19,000 ಕೋಟಿ!
ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಗಳೂರು ಅಭಿವೃದ್ದಿಗೆ ಹಲವಾರು ಯೋಜನೆಗಳನ್ನು ಘೋಷಿಸುವ ಮೂಲಕ ಬಂಪರ್ ಘೋಷಣೆಗಳನ್ನು ಮಾಡಿದ್ದಾರೆ. ಹಣಕಾಸು ಸಚಿವರೂ ಆಗಿರುವ ಸಿದ್ದರಾಮಯ್ಯ ಬುಧವಾರ ಮಂಡಿಸಿದ 2025-26ನೇ ಸಾಲಿನಲ್ಲಿ ರಾಜಧಾನಿ ಬೆಂಗಳೂರಿನ ಮೂಲಭೂತ ಸೌಕರ್ಯ ಅಭಿವೃದ್ಧಿಗೆ ಕಳೆದ ಸಾಲಿಗಿಂತ ಈ ಬಾರಿ 2000 ಕೋಟಿ
Karnataka Budget 2025: ಪಶು ಸಂಗೋಪನೆ ಮತ್ತು ಮೀನುಗಾರಿಕೆಗೆ ಏನೇನು ಯೋಜನೆಗಳು
ಈ ಬಾರಿ ರಾಜ್ಯ ಬಜೆಟ್‌ನಲ್ಲಿ ಕೃಷಿ ವಲಯದ ಘಟಕಗಳಾಗಿರುವ ಪಶು ಸಂಗೋಪನೆ ಮತ್ತು ಮೀನುಗಾರಿಕೆ ಅಭಿವೃದ್ಧಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಯೋಜನೆಗಳನ್ನು ಘೋಷಿಸಿದ್ದಾರೆ. ಜಾನುವಾರುಗಳ ಆಕಸ್ಮಿಕ ಸಾವಿನ ಸಂದರ್ಭದಲ್ಲಿ ರೈತರು ಅನುಭವಿಸುತ್ತಿರುವ ಸಂಕಷ್ಟ ನಿವಾರಣೆಗೆ “ಅನುಗ್ರಹ” ಯೋಜನೆಯನ್ನು ಜಾರಿಗೆ ತರಲಾಗಿದೆ. ಇದರಡಿ ಹಸು, ಎಮ್ಮೆ