Menu

ಬಜೆಟ್‌ ಮಂಡನೆಯಿಂದ ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ: ಡಿ.ಕೆ.ಶಿವಕುಮಾರ್

“ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16 ನೇ ಬಾರಿ ಬಜೆಟ್ ಮಂಡಿಸುತ್ತಿದ್ದಾರೆ ಎಂದು ಬಿಜೆಪಿಯವರು ಹೊಟ್ಟೆ ಉರಿದುಕೊಂಡು ಸಾಯುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಪ್ರತಿಪಕ್ಷಗಳ ಟೀಕೆಗಳಿಗೆ ಖಡಕ್ ಉತ್ತರ ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿ, ಬಜೆಟ್ ಬಗ್ಗೆ ಬಿಜೆಪಿಯವರ ಟೀಕೆಯ ಬಗ್ಗೆ ಕೇಳಿದಾಗ, “ಕಾಂಗ್ರೆಸ್ ಸರ್ಕಾರ ಕೊಟ್ಟ ಮಾತನ್ನುಉಳಿಸಿಕೊಂಡಿದೆ, ಉತ್ತಮವಾದ ಬಜೆಟ್ ನೀಡುತ್ತಿದ್ದಾರಲ್ಲ ಎನ್ನುವ ಹೊಟ್ಟೆಯುರಿ. ನೆನ್ನೆ ವಿರೋಧ ಪಕ್ಷಗಳ ಶಾಸಕರು ಕೇವಲ ಫೋಟೋಗಾಗಿ ಮಾತ್ರ ಬಂದಿದ್ದರು. ಏನನ್ನೂ